BigTv News
November 4, 2025
Breaking News
ಅಫಾಘಾತದಲ್ಲಿ ಹಲವು ಗಾಯಗೊಂಡಿದ್ದಾರೆ. ಈ ಪೈಕಿ ಪೋಷಕರು ಹಾಗೂ ಮೂರು ತಿಂಗಳ ಮಗು ಕೂಡ ಸೇರಿತ್ತು. ಪೋಷಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆದರೆ ಮಗುವಿನ ಮೇಲ್ನೋಟಕ್ಕೆ ಗಾಯವಿಲ್ಲ. ಆದರೆ ಮೂರು ತಿಂಗಳ ಹಸುಗೂಸು, ಹೀಗಾಗಿ ತಲೆ ಸ್ಕ್ಯಾನಿಂಗ್ ಸೇರಿದಂತೆ ಪರೀಕ್ಷೆಗಳು ಅನಿವಾರ್ಯವಾಗಿತ್ತು.ಯೋಗೇಶ್ ಆಚಾರ್ಯ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಬರೆದುಕೊಂಡಿದ್ದಾರೆ. ನಡೆದ ಘಟನೆಯನ್ನು ವಿವರಿಸಿದ್ದಾರೆ. ಮಂಗಳೂರಿನಿಂದ ಸುಳ್ಯ ಬರುತ್ತಿದ್ದ ನಾನು ಸಂಪ್ಯ ದಾಟಿ ಮುಂದೆ ಬರುತ್ತಿದ್ದಂತೆ ಭೀಕರ ಅಪಘಾತದ ಮಾಹಿತಿ …
Read More »
BigTv News
November 4, 2025
Breaking News
ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ತಿಳವಳಿಕೆ ತಾಯ್ತನದ ವಯಸ್ಸಿಗೂ ಮೊದಲೇ ಬಾಲ ಗರ್ಭಿಣಿಯರ ಸಂಖೆಯಲ್ಲಿ ಏರಿಕೆ ಕಂಡಿರುವುದು ಆತಂಕಕ್ಕೆ ಕಾರಣವಾಗಿದೆ.ರಾಜ್ಯದಲ್ಲಿ ದಾಖಲೆಯ ಪ್ರಮಾಣದಲ್ಲಿ 18 ವರ್ಷ ತುಂಬುವುದಕ್ಕಿಂತ ಮೊದಲು ಗರ್ಭಿಣಿಯರಾಗುತ್ತಿದ್ದು, ಬಾಲಕಿಯರು ಹಲವು ದೈಹಿಕ, ಮಾನಸಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಎಲ್ಲಾ ಇಲಾಖೆಗಳಿಗೂ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ. ಕಳೆದ 10 ತಿಂಗಳಲ್ಲೇ 10 ಸಾವಿರ …
Read More »
BigTv News
November 4, 2025
Breaking News
ಅಪೂರ್ವ ಭಟ್ ಚೇತರಿಕೆಗೆ ಇಡೀ ರಾಜ್ಯ ಪ್ರಾರ್ಥಿಸಿತ್ತು. ರಸ್ತೆ ಅಪಘಾತದಲ್ಲಿ ಗಾಯಗೊಂಡ ಅಪೂರ್ವ ಭಟ್ ಬರುವಿಕೆಗಾಗಿ ಮೂರು ವರ್ಷದ ಮಗಳು, ಪತಿ ಆಶಿಶ್ ಸಾರಡ್ಕ್ ಹಗಳಿರುಳು ಪ್ರಾರ್ಥಿಸಿದ್ದರು. ಆದರೆ ಬರೋಬ್ಬರ 130 ದಿನ ಕೋಮಾದಲ್ಲಿದ್ದ ಅಪೂರ್ವ ಭಟ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.ಇದರ ಬೆನ್ನಲ್ಲೇ ಇದೇ ಅಪಘಾತದಲ್ಲಿ ಗಾಯಗೊಂಡಿದ್ದ ಅಪೂರ್ವ ಭಟ್ ತಂದೆ ಈಶ್ವರ್ ಭಟ್ ನಿಧನರಾಗಿದ್ದಾರೆ. ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಈಶ್ವರ್ ಭಟ್‌ಗೆ ಚಿಕಿತ್ಸೆ ನೀಡಲಾಗುತ್ತಿತ್ತು.ಈಶ್ವರ ಭಟ್ (70) ಚಿಕಿತ್ಸೆ …
Read More »
admin
November 3, 2025
Breaking News, Crime
ರಕ್ಷಕನೇ ಭಕ್ಷಕ! ಸಾಮೂಹಿಕ ಅತ್ಯಾಚಾರ ಕೇಸ್‌ನಲ್ಲಿ 2 ಲಕ್ಷ ಲಂಚ ಪಡೆದ ಇನ್ಸೆಕ್ಟರ್ ಸಾಮೂಹಿಕ ಅತ್ಯಾಚಾರ ಪ್ರಕರಣದಿಂದ ಆರೋಪಿಯ ಹೆಸರನ್ನು ಕೈಬಿಡಲು 2 ಲಕ್ಷ ರೂ. ಲಂಚ ಪಡೆಯುವಾಗ ಇನ್ಸ್‌ಪೆಕ್ಟರ್ ಒಬ್ಬರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ.ನಿಶಾತ್‌ಗಂಜ್ ಹೊರಠಾಣೆಯ ಉಸ್ತುವಾರಿ ಅಧಿಕಾರಿಯಾಗಿದ್ದ ಇನ್ಸ್‌ಪೆಕ್ಟರ್ ಧನಂಜಯ್ ಸಿಂಗ್ ಎಂಬುವರು ಬರೋಬ್ಬರಿ ಎರಡು ಲಕ್ಷ ರೂಪಾಯಿ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಸಾಮೂಹಿಕ ಅತ್ಯಾಚಾರ ಪ್ರಕರಣದಿಂದ ಕೋಚಿಂಗ್ ಸೆಂಟರ್ …
Read More »
BigTv News
November 2, 2025
Breaking News
ತಾಲ್ಲೂಕಿನ ಮಾದನ ಹಿಪ್ಪರಗಿ ಗ್ರಾಮದಲ್ಲಿ ಮನೆ ಮುಂದೆ ಆಟ ಆಡುತ್ತಿದ್ದ ಮೂರು ವರ್ಷದ ಬಾಲಕಿ ಚರಂಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ. ಮಾದನ ಹಿಪ್ಪರಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶಿವಲಿಂಗಪ್ಪ ಇಂಗಳೆ ಅವರ ಮಗಳು ಶ್ರಾವಣಿ (3) ಮೃತಳು. ಮನೆ ಮುಂದೆ ಮಗು ಆಟವಾಡುತ್ತಿತ್ತು. ಮಗುವಿನ ಸಪ್ಪಳ ಕೇಳದಿದ್ದಾಗ ಹುಡುಕಾಡಿದ್ದು, ಮುಖ್ಯ ರಸ್ತೆಗೆ ನಿರ್ಮಿಸಿದ್ದ ಚರಂಡಿಯಲ್ಲಿ ಮಗುವಿನ ಶವ ಕಂಡುಬಂದಿದೆ.
Read More »
BigTv News
November 2, 2025
Breaking News
ಗ್ರಾಮದ ಸುಣ್ಣದಬೀದಿಯ ನಿವಾಸಿ ಜಮೃದ್ ಷರೀಫ್ ಅವರ ಪುತ್ರಿ ಅರ್ಬಿಯಾ ಬಾನು (25) ಅವರು ಶನಿವಾರ ಮಕ್ಕಳಾದ ಅನಂ ಫಾತಿಮಾ (2) ಮತ್ತು 8 ದಿನದ ಶಿಶುವನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡರು.ಚಾಕುವಿನಿಂದ ಮಕ್ಕಳ ಕತ್ತು ಕೊಯ್ದಿದ್ದು, ತಾವೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅರೇನಹಳ್ಳಿಯ ಸೈಯದ್ ಮುಸಾವೀರ್-ಅರ್ಬಿಯಾ ಬಾನು ದಂಪತಿಯ ಮೊದಲ ಮಗಳು ಅಂಗವಿಕಲೆಯಾಗಿದ್ದಳು. ಬೆಟ್ಟದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
November 2, 2025
Breaking News
ಮದುವೆ ಆಗು ಎಂದಿದ್ದಕ್ಕೆ ಮಹಿಳೆಗೆ ಎಂಟು ಬಾರಿ ಚಾಕು ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆ.ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೇಣುಕಾ ಮೃತ ಮಹಿಳೆಯಾಗಿದ್ದು, ಅ. 31ರ ರಾತ್ರಿ 9.30 ಕ್ಕೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಪ್ರಕರಣ ಸಂಬಂಧ ಆರೋಪಿ ಅಂಬೇಡ್ಕರ್ ಅಲಿಯಾಸ್ ಕುಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.ಕೂಡಲೇ ರೇಣುಕಾಳನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಆಕೆ ಮೃತಪಟ್ಟಿದ್ದಾಳೆ. ಈ ಬಗ್ಗೆ ಪ್ರಕರಣ …
Read More »
BigTv News
November 2, 2025
Breaking News
ಗ್ರಾಮದ ಮುಸ್ಲಿಂ ಬ್ಲಾಕ್ ನ ಜಮೃದ್ ಪಾಷಾ ಎಂಬವರ ಪುತ್ರಿ ಅರೇಬಿಯಾ (22) ತನ್ನ ರೂಮಿನ ಬಾಗಿಲನ್ನು ಹಾಕಿಕೊಂಡು ತನ್ನ ಹತ್ತು ದಿನದ ಹೆಣ್ಣು ಮಗು ಹಾಗೂ ಎರಡು ವರ್ಷದ ಅನಾಮ ಎಂಬ ಹೆಣ್ಣು ಮಗುವಿನ ಕತ್ತನ್ನು ಕೊಯ್ದು ಕೊಲೆ ಮಾಡಿ, ನಂತರ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ.ಸುದ್ದಿ ತಿಳಿದು ತಂದೆ ರೂಮಿನ ಬಾಗಿಲನ್ನು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಜಮೃದ್ ಪಾಷಾ ಪಿರಿಯಾಪಟ್ಟಣ ತಾಲೂಕಿನ ಅರೇಹಳ್ಳಿ …
Read More »
BigTv News
November 2, 2025
Breaking News
ರಾಜ್ಯೋತ್ಸವದ ಸಂಭ್ರಮದಲ್ಲಿರುವಾಗಲೇ ಗಡಿ ನಾಡು ಬೆಳಗಾವಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆ ನಡೆಯುವಾಗ ಐವರಿಗೆ ಚಾಕು ಇರಿಯಲಾಗಿದೆ. ಇವರನ್ನು ಸ್ಥಳೀಯ ಬಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.ಬೆಳಗಾವಿಯ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ಘಟನೆ ನಡೆದಿದೆ. ರಾಜ್ಯೋತ್ಸವ ಅಂಗವಾಗಿ ರೂಪಕಗಳ ಮೆರವಣಿಗೆ ನಡೆಯುತ್ತಿತ್ತು. ಈ ಮೆರವಣೆಗೆ ಗುಂಪಿನಲ್ಲಿ ಏಕಾಏಕಿ ಬಂದ ದುಷ್ಕರ್ಮಿಗಳು ಯದ್ವತದ್ವಾ ಚಾಕು ಇರಿದು ಪರಾರಿಯಾಗಿದ್ದಾರೆ. ಚಾಕು,ಜಂಬೆ ಸಮೇತ ಆಗಮಿಸಿ ಐವರ …
Read More »
BigTv News
November 2, 2025
Breaking News
ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದಾರುಣ ಘಟನೆ ನಡೆದಿದೆ. 25 ವರ್ಷದ ಯುವತಿ ಅನುಮಾನಾಸ್ಪದ ಸಾವನ್ನು ಕಂಡಿದ್ದು, ಆಕೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತಳನ್ನು ದಾವಣಗೆರೆ ಜಿಲ್ಲೆಯ ಮೂಲದ ಸುಪ್ರಿಯಾ ಎಂದು ಗುರುತಿಸಲಾಗಿದೆ.ಅನುಮಾನಗೊಂಡ ಮನೆ ಮಾಲೀಕರು ಇಂದು ಬಾಗಿಲು ತೆರೆದಾಗ ದಾರುಣ ದೃಶ್ಯ ಕಂಡುಬಂದಿತು. ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ತುಂಡಾಗಿ ಬಿದ್ದಿತ್ತು. ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿತ್ತು.
Read More »