Breaking News

Breaking News

ಬೈಕ್‌ಗೆ ಗೂಡ್ಸ್‌ ವಾಹನ ಡಿಕ್ಕಿ: ಸವಾರ ದುರ್ಮರಣ

ಬಾಣಸವಾಡಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ವೇಗವಾಗಿ ಬಂದ ಗೂಡ್ಸ್‌ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟಿದ್ದಾರೆ. ನೇಪಾಳ ಮೂಲದ ಹೂಡಿ ನಿವಾಸಿ ನರೇಶ್‌ ಕುಮಾರ್‌(32) ಮೃತಪಟ್ಟವರು. ಸಂಬಂಧಿಕರೊಬ್ಬರ ಮನೆಯಲ್ಲಿದ್ದ ದೇವರ ಕಾರ್ಯದ ಸಲುವಾಗಿ ಗುರುವಾರ ರಾತ್ರಿ ಅವರ ಮನೆಗೆ ನರೇಶ್‌ ಕುಮಾರ್‌ತೆರಳಿದ್ದರು.ಊಟ ಮಾಡಿ ಮುಂಜಾನೆ 1.20ರ ಸುಮಾರಿನಲ್ಲಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಮಾರ್ಗಮಧ್ಯೆ ರಾಮಮೂರ್ತಿ ನಗರದ ಬಿ.ಚನ್ನಸಂದ್ರ ಮುಖ್ಯರಸ್ತೆಯ ಬಳಿ ಹಿಂದಿನಿಂದ ವೇಗವಾಗಿ ಬಂದ ಗೂಡ್ಸ್‌ ವಾಹನ …

Read More »

ಸೈಡ್‌ ಕೊಡದಿದ್ದಕ್ಕೆ ಬೈಕ್‌ಗೆ ಕಾರು ಗುದ್ದಿಸಿ ಗುಂಡಾವರ್ತನೆ: ಚಾಲಕನ ಕೃತ್ಯ ಕ್ಯಾಮೆರಾದಲ್ಲಿ ಸೆರೆ

ಸೈಡ್ ಕೊಡದ ವಿಚಾರಕ್ಕೆ ಕೋಪಗೊಂಡ ಕ್ಯಾಬ್ ಚಾಲಕನೊಬ್ಬ ದುಂಡಾವರ್ತನೆ ತೋರಿದ ಘಟನೆ ನಗರದ ಕೆ.ಆರ್.ಪುರದ ಬಳಿ ನಡೆದಿದೆ.ಬೈಕ್ ಸವಾರನೊಬ್ಬ ಸೈಡ್ ಕೇಳಿದಾಗ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ನಂತರ ಕ್ಯಾಬ್ ಚಾಲಕ ಕಾರನ್ನು ಮುಂದೆ ತೆಗೆದುಕೊಂಡು ಹೋಗಿ ಬೈಕ್‌ಗೆ ನೇರವಾಗಿ ಗುದ್ದಿಸಿದ್ದಾನೆ.ಇದರಿಂದ ಬೈಕ್ ಸವಾರ ರಸ್ತೆ ಮೇಲೆ ಬಿದ್ದು ಗಾಯಗೊಂಡಿದ್ದಾನೆ. ಈ ಸಂಪೂರ್ಣ ಘಟನೆ ಮತ್ತೊಂದು ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಕ್ಯಾಬ್ …

Read More »

ಕಾಲೇಜಿನಿಂದ ಮನೆಗೆ ಬಂದು ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ!

ಅತಿಯಾದ ಮೊಬೈಲ್ ಬಳಕೆ ಮಾಡುತಿದ್ದ ಮಂಜುನಾಥ ಯಾವಾಗಲೂ ಒಂಟಿಯಾ ಗಿದ್ದು, ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಕರಣ ದಾಖಲಿಸಿರುವ ಮಣಿಪಾಲ ಪೊಲೀಸರು ತಿಳಿಸಿದ್ದಾರೆ.ಮೃತ ವಿದ್ಯಾರ್ಥಿಯನ್ನು ಅಲೆವೂರು ಗ್ರಾಮದ ಗುರುಪ್ಪ ಮೇಟಿ ಎಂಬವರ ಮಗನಾದ ಮಂಜುನಾಥ ಮೇಟಿ (17) ಎಂದು ಗುರುತಿಸಲಾಗಿದೆ.

Read More »

ಒಂಟಿಕಟ್ಟೆ: ಆಟೋ ಚಾಲಕ ಆತ್ಮಹತ್ಯೆ.

ಪುರಸಭೆ ವ್ಯಾಪ್ತಿಯ ಒಂಟಿಕಟ್ಟೆ ನಿವಾಸಿ, ಆಟೋ ಚಾಲಕ ರಾಜೇಶ್ (42) ಅವರು ಬುಧವಾರ ರಾತ್ರಿ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅವರು ಕೊಡಂಗಲ್ಲಿನಲ್ಲಿರುವ ಮಹಾವೀರ ಕಾಲೇಜು ಬಳಿಯ ಆಟೋ ಪಾರ್ಕ್‌ನಲ್ಲಿ ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದರು.ರಾಜೇಶ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

Read More »

ಬಾದಾಮಿ| ಯೋಧ ಆತ್ಮಹತ್ಯೆ: ಸರ್ಕಾರಿ ಗೌರವದೊಂದಿಗೆ ಅಂತ್ಯ ಸಂಸ್ಕಾರ.

ಗ್ರಾಮದ ಬಿಎಸ್‌ಎಫ್ ಯೋಧ ಮನೆಯಲ್ಲಿ ಬುಧವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್‌ಐ ಹನುಮಂತ ನೆರಳೆ ತಿಳಿಸಿದರು.ಮಲ್ಲಯ್ಯ ಬಸಯ್ಯ ರೇಷ್ಮಿ (38) ಮೃತ ಯೋಧ.ಜೀವನದಲ್ಲಿ ಜಿಗುಪ್ಸೆ ಮೂಡಿದ್ದೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ತಂದೆ, ತಾಯಿ ಇದ್ದಾರೆ.

Read More »

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ವಿಷ ಸೇವಿಸಿದ್ದ ವಿವಾಹಿತ ಮಹಿಳೆ ಸಾವು: ಸಾವಿನ ಸುತ್ತ ಅನುಮಾನ!

ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ವಿಷ ಸೇವಿಸಿದ್ದ ವಿವಾಹಿತ ಮಹಿಳೆಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಸಾವನ್ನಪ್ಪಿದ ಮಹಿಳೆಯನ್ನ ಪೂಜಾ ಎಂದು (30) ಎಂದು ಗುರುತಿಸಲಾಗಿದೆ. ಮೂರು ವರ್ಷಗಳ ಹಿಂದೆ ತೀರ್ಥಹಳ್ಳಿಯ ಕೋಣಂದೂರು ಸಮೀಪದ ಶಂಕರಳ್ಳಿ ಈಶ್ವರಪ್ಪನವರ ಮಗಳಾದ ಪೂಜಾಳನ್ನ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಮಾವಿನಕೆರೆ ಶೆಟ್ಟಿಕೊಪ್ಪದ ನಿವಾಸಿ ಶರತ್ ಎಂಬಾತನೊಂದಿಗೆ ವಿವಾಹ ಮಾಡಿಕೊಡಲಾಗಿತ್ತು.

Read More »

ಉ.ಪ್ರ.: ಮೊಹಮ್ಮದ್‌ ಎಂಬುದನ್ನು ತಪ್ಪಾಗಿ ಬರೆದು ಸಿಕ್ಕಿಬಿದ್ದ ನಾಲ್ವರು!

ಉತ್ತರಪ್ರದೇಶದ ಅಲಿಘಡದಲ್ಲಿ ದೇಗುಲ   ಗೋಡೆಗಳ ಮೇಲೆ ” ಐ ಲವ್ ‌ ಮೊಹಮದ್ ‌’ ಎಂದು ಬರೆದ ಪ್ರಕರಣದಲ್ಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ . ಇನ್ನೊರ್ವ ತಲೆ ಮರೆಸಿಕೊಂಡಿದ್ದಾನೆ . ಆರೋಪಿಗಳೆಲ್ಲರೂ ಹಿಂದೂ ಸಮುದಾಯಕ್ಕೆ ಸೇರಿದವರಾಗಿದ್ದು , ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮುಸ್ಲಿಂ ವ್ಯಕ್ತಿಗಳನ್ನು ಸಿಲುಕಿ ಸಲು ಈ ಷಡ್ಯಂತ್ರ ನಡೆಸಲಾಗಿತ್ತು ಎಂದು ತನಿಖೆ ವೇಳೆ ತಿಳಿದುಬಂದಿದೆ .

Read More »

ಸೌದಿ ಅರೇಬಿಯಾ: ಪೊಲೀಸರು, ಸುಲಿಗೆ ಗ್ಯಾಂಗ್ ನಡುವಿನ ಗುಂಡಿನ ಚಕಮಕಿಯಲ್ಲಿ ಭಾರತೀಯ ಯುವಕ ಮೃತ್ಯು..

ಸೌದಿ ಅರೇಬಿಯಾದ ಜಿದ್ದಾದಲ್ಲಿ ಅ.16ರಂದು ಪೊಲೀಸರು ಹಾಗೂ ಸುಲಿಗೆ ಗ್ಯಾಂಗ್ ಮಧ್ಯೆ ನಡೆದ ಗುಂಡಿನ ದಾಳಿಯಲ್ಲಿ ಜಾರ್ಖಂಡ್ ಮೂಲದ ಯುವಕ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.ಮೃತ ಯುವಕನನ್ನು ವಿಜಯ್ ಕುಮಾರ್ ಮಹತೊ (26) ಎಂದು ಗುರುತಿಸಲಾಗಿದ್ದು, ಈತ ಗಿರಿಧ್ ಜಿಲ್ಲೆಯ ದುಮ್ರಿ ತಾಲೂಕಿನ ಮಧ್ ಗೋಪಾಲಿ ಪಂಚಾಯ್ತಿ ವ್ಯಾಪ್ರಿಯ ಧೂದ್ ಪಾನಿಯಾ ಗ್ರಾಮದವನು.ಯುವಕನ ಮೃತದೇಹವನ್ನು ಭಾರತಕ್ಕೆ ಮರಳಿಸಲು ಅಗತ್ಯ ಸೌಲಭ್ಯ ಕಲ್ಪಿಸಿಕೊಡುವಂತೆ ಜಾರ್ಖಂಡ್ ಕಾರ್ಮಿಕ ಇಲಾಖೆ ಸೌದಿ ಅರೇಬಿಯಾದಲ್ಲಿರುವ ಭಾರತೀಯ ರಾಯಭಾರ …

Read More »

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ವೇಳೆ 10 ಹೆಚ್ಚು ಜನರಿಗೆ ಗಾಯ!

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.ಶಿವಮೊಗ್ಗ ತಾಲೂಕು ಹಾಗೂ ಶಿಕಾರಿಪುರದಲ್ಲಿ ವಾರದ ಹಿಂದೆ ಹೋರಿ ಬೆದರಿಸುವ ಸ್ಪರ್ಧೆ ನಡೆದಿತ್ತು. ಈ ವೇಳೆ ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಶಿವಮೊಗ್ಗ ತಾಲೂಕಿನ ರಾಮನಕೊಪ್ಪ ಹಾಗೂ ದೊಡ್ಡಕೇರಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಈ ಘಟನೆ ನಡೆದಿದೆ.

Read More »

ಮಾಟ-ಮಂತ್ರದ ವಿಚಾರವಾಗಿ ಕಲಹ, ಪತ್ನಿ ಮೇಲೆ ಬಿಸಿ ಬಿಸಿ ಫಿಶ್ ಕರಿ ಎರಚಿದ ಪತಿ

ಮಾಟಮಂತ್ರದ ವಿಚಾರವಾಗಿ ಪತಿ–ಪತ್ನಿ ನಡುವೆ ವಾಗ್ವಾದ ನಡೆದಿದೆ. ಪತಿ ಕೋಪದಲ್ಲಿ ಪತ್ನಿಯ ಮೇಲೆ ಬಿಸಿಬಿಸಿಫಿಶ್​ ಕರಿಎರಚಿರುವ ಘಟನೆ ಕೇರಳದ ಕೊಲ್ಲಂನಲ್ಲಿ ವರದಿಯಾಗಿದೆ. ಚಡಯಮಂಗಲಂ ಸಮೀಪದ ವೈಕ್ಕಲ್‌ನ ಸಂತ್ರಸ್ತೆ ರೆಜಿಲಾ ಗಫೂರ್ (36) ಆಸ್ಪತ್ರೆಗೆ ದಾಖಲಾಗಿದ್ದು, ಆಕೆಯ ಪತಿ ಸಜೀರ್ ತಲೆಮರೆಸಿಕೊಂಡಿದ್ದಾನೆ ಎಂದು ಅವರು ತಿಳಿಸಿದ್ದಾರೆ.

Read More »