BigTv News
September 13, 2026
Breaking News
ಬಳ್ಳಾರಿ: ಕೌಟುಂಬಿಕ ಕಲಹದಿಂದ ನೊಂದ ವ್ಯಕ್ತಿಯೊಬ್ಬರು ಪೊಲೀಸ್ ಠಾಣೆಯ ಎದುರಿನ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಏರಿ ಆತಂಕ ಸೃಷ್ಟಿಸಿದ ಘಟನೆ ಬಳ್ಳಾರಿಯ ಬ್ರೂಸ್‌ಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮುಂಡರಗಿ ನಿವಾಸಿ ಇಸ್ಮಾಯಿಲ್, ಪತ್ನಿಯೊಂದಿಗೆ ಠಾಣೆಗೆ ಬಂದಿದ್ದರು. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ನೊಂದ ಇಸ್ಮಾಯಿಲ್ ಏಕಾಏಕಿ ಠಾಣೆಯಿಂದ ಹೊರಗೆ ಓಡಿ ಟ್ರಾನ್ಸ್‌ಫಾರ್ಮರ್ ಏರಿದ್ದಾರೆ. ಇದರಿಂದ ಪೊಲೀಸರು ಹಾಗೂ ಸ್ಥಳೀಯರು ಆತಂಕಗೊಂಡಿದ್ದರು. ಪೊಲೀಸರು ಸಾಕಷ್ಟು ಸಮಯ ಮನವೊಲಿಸಿ ಇಸ್ಮಾಯಿಲ್ ಅವರನ್ನು …
Read More »
BigTv News
September 13, 2026
Breaking News
ಉಡುಪಿ: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತ ಪ್ರಸಾದ್ ಶೆಟ್ಟಿಯನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಾಸಕರಿಗೆ ಜೀವ ಬೆದರಿಕೆ ಒಡ್ಡುವ ರೀತಿಯಲ್ಲಿ ಹಾಗೂ ‘ತಲೆ ಬೇಕು’ ಎಂಬ ಅರ್ಥ ಬರುವಂತೆ ಪೋಸ್ಟ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಪೋಸ್ಟ್ ಹರಿದಾಡುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಈ …
Read More »
BigTv News
September 13, 2026
Breaking News
ಮೈಸೂರು: ಇ-ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ ₹50 ಸಾವಿರ ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಲಯ ಕಚೇರಿ-2ರ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಡಿ.ಎಂ. ಮಂಜುನಾಥ್ ಅಮಾನತುಗೊಂಡಿದ್ದಾರೆ. ಗೂಗಲ್ ಪೇ ಮೂಲಕ ಹಣ ಪಡೆದಿದ್ದು, ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ವಾರ್ಡ್ 62ರ ನಿವಾಸಿ ಪವಿತ್ರ ಇ-ಖಾತೆಗಾಗಿ ಅರ್ಜಿ ಸಲ್ಲಿಸಿದ್ದರು. ಎರಡು ತಿಂಗಳಾದರೂ ಖಾತೆ ಮಾಡಿಕೊಡದೆ ಸತಾಯಿಸಿದ್ದ ಮಂಜುನಾಥ್, ವಕೀಲ ಲೋಕೇಶ್ ಬಳಿ ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. …
Read More »
BigTv News
September 13, 2026
Breaking News
ಹಾವೇರಿ: ಪ್ರೀತಿಸಿ ಮದುವೆಯಾಗಿದ್ದ ಯುವಕನೊಬ್ಬ ಪತ್ನಿಯನ್ನು ಪೋಷಕರು ಬಲವಂತವಾಗಿ ಕರೆದೊಯ್ದಿದ್ದರಿಂದ ಮನನೊಂದು ನೇಣಿಗೆ ಶರಣಾದ ಘಟನೆ ನಗರದ ದೇವದಾರ್ ಏರಿಯಾದಲ್ಲಿ ನಡೆದಿದೆ. ಮಂಜುನಾಥ್ ಅಗಡಿ (24) ಮೃತ ಯುವಕ. ಎರಡು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಮಂಜುನಾಥ್, ಇತ್ತೀಚೆಗೆ ಸ್ಥಳೀಯ ದೇವಸ್ಥಾನವೊಂದರಲ್ಲಿ ಗುಟ್ಟಾಗಿ ಮದುವೆಯಾಗಿದ್ದ. ಆದರೆ ಯುವತಿ ಪೋಷಕರು ಮದುವೆಗೆ ವಿರೋಧ ವ್ಯಕ್ತಪಡಿಸಿ, ಮಹಿಳಾ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು. ಪೊಲೀಸ್ ಠಾಣೆಯಲ್ಲಿ ವಿಚಾರಣೆ ಬಳಿಕ ಯುವತಿಯ ಪೋಷಕರು ಆಕೆಯನ್ನು ಮನೆಗೆ …
Read More »
BigTv News
September 13, 2026
Breaking News
ಹಾವೇರಿ: ದೇವರ ಮೇಲಿನ ಚಿನ್ನ ಕಳವು ಆರೋಪದ ವಿಚಾರಣೆ ವೇಳೆ ಬಡ ಮಹಿಳೆಗೆ ಬಂಕಾಪುರ ಪೊಲೀಸರು ಕರೆಂಟ್ ಶಾಕ್ ನೀಡಿ ಹಿಂಸೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಶಿಗ್ಗಾವಿ ತಾಲೂಕಿನ ಶಿಡ್ಲಾಪುರ ಗ್ರಾಮದ ನೀಲವ್ವ ಅಸ್ವಸ್ಥಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಂದು ಪಕ್ಕದ ಮನೆಯ ಪೂಜೆಗೆ ನೀಲವ್ವ ಸೇರಿದಂತೆ ಹಲವು ಮಹಿಳೆಯರು ತೆರಳಿದ್ದರು. ಈ ವೇಳೆ ದೇವರ ಮೇಲಿದ್ದ ಚಿನ್ನ ಕಳುವಾಗಿದ್ದು, ನೀಲವ್ವ ಮೇಲೆ ಅನುಮಾನಗೊಂಡ ಪೊಲೀಸರು ವಿಚಾರಣೆಗೆ …
Read More »
BigTv News
September 13, 2026
Breaking News
ಕಾರ್ಕಳ: ಶಾಸಕ ಸುನೀಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಡಿ ಪ್ರಸಾದ್ ಶೆಟ್ಟಿ ಎಂಬಾತನನ್ನು ಕಾರ್ಕಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಾಸಕರನ್ನು ಕೊಲೆ ಮಾಡಬೇಕು ಎಂಬ ರೀತಿಯಲ್ಲಿ ಪ್ರಚೋದನಕಾರಿ ವಿಡಿಯೋ ಸೃಷ್ಟಿಸಿ ಸಾರ್ವಜನಿಕರನ್ನು ಪ್ರಚೋದಿಸಲು ಯತ್ನಿಸಿದ್ದಾನೆ ಎಂದು ವಿಘೇಶ್ ಪ್ರಸಾದ್ ರಾವ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಡಿ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು, …
Read More »
BigTv News
September 13, 2026
Breaking News
ಹಾವೇರಿ: ಪ್ರೀತಿಸಿ ಮದುವೆಯಾದ ಜೋಡಿಗೆ ಪೋಷಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮನನೊಂದು ಯುವಕ ನೇಣಿಗೆ ಶರಣಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಮಂಜುನಾಥ್ ಅಗಡಿ (24) ಆತ್ಮಹತ್ಯೆ ಮಾಡಿಕೊಂಡವರು. ಮಂಜುನಾಥ್ ಎರಡು ವರ್ಷಗಳಿಂದ ಯುವತಿಯನ್ನು ಪ್ರೀತಿಸುತ್ತಿದ್ದು, ಇತ್ತೀಚೆಗೆ ದೇವಸ್ಥಾನದಲ್ಲಿ ವಿವಾಹವಾಗಿದ್ದರು. ಮದುವೆ ವಿರೋಧಿಸಿದ್ದ ಯುವತಿಯ ಪೋಷಕರು ನಾಪತ್ತೆ ದೂರು ನೀಡಿದ್ದು, ವಿಚಾರಣೆ ಬಳಿಕ ಯುವತಿಯನ್ನು ಬಲವಂತವಾಗಿ ಮನೆಗೆ ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ಮಂಜುನಾಥ್ ಆತ್ಮಹತ್ಯೆಗೂ ಮುನ್ನ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ …
Read More »
BigTv News
September 13, 2026
Breaking News
ಹುಬ್ಬಳ್ಳಿ: ಗಣೇಶಮೂರ್ತಿ ಆಗಮನದ ಮೆರವಣಿಗೆ ವೇಳೆ ಕೆಲ ಕಿಡಿಗೇಡಿ ಯುವಕರು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದೆ. ಮೆರವಣಿಗೆಯಲ್ಲಿ ಎರಡು ಗಣಪತಿ ಉತ್ಸವ ಸಮಿತಿಗಳು ಮುಖಾಮುಖಿಯಾದ ವೇಳೆ ಘಟನೆ ನಡೆದಿದೆ. ಯುವಕರನ್ನು ತಡೆಯಲು ಸಾರ್ವಜನಿಕರು ಮುಂದಾದಾಗ ಗಲಾಟೆ ಉಂಟಾಗಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಕೆಲವೇ ನಿಮಿಷಗಳಲ್ಲಿ ಕಿಡಿಗೇಡಿಗಳನ್ನು ಚದುರಿಸಲಾಗಿದೆ. ಮಹಿಳೆಯರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. …
Read More »
BigTv News
September 13, 2026
Breaking News
ಮಂಗಳೂರು: ನಗರದ ಹೊರವಲಯದ ಕಣ್ಣೂರು ಬಳಿ ಎರಡು ಗ್ಯಾಂಗ್‌ಗಳು ತಲವಾರು ಹಿಡಿದು ಪರಸ್ಪರ ಬೈದಾಡಿ ಗ್ಯಾಂಗ್‌ವಾರ್‌ಗೆ ಯತ್ನಿಸಿದ ಘಟನೆ ನಡೆದಿದೆ. ಈ ಸಂಬಂಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.9ರಂದು ಗಾಣದಬೆಟ್ಟು ಜಂಕ್ಷನ್ ಬಳಿ ಎರಡು ಕಾರುಗಳಲ್ಲಿ ಬಂದ ತಂಡಗಳು ತಲವಾರು ಝಳಪಿಸಿ ಪರಸ್ಪರ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದವು ಎನ್ನಲಾಗಿದೆ. ರೌಡಿಗಳ ಭಯದಿಂದ ಸ್ಥಳೀಯರು ದೂರು ನೀಡಲು ಹಿಂದೇಟು ಹಾಕಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಸಾರ್ವಜನಿಕರಲ್ಲಿ ಭಯ …
Read More »
BigTv News
September 13, 2026
Breaking News
ದಾವಣಗೆರೆ: ಹರಿಹರ ತಾಲ್ಲೂಕಿನ ನಂದೀಶ್ವರ ಕ್ಯಾಂಪ್‌ನಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬುದು ಸುಳ್ಳು. ವಾಸನ ಗ್ರಾಮದ ಸುನೀಲ್ (20) ಎಐ ಬಳಸಿ ಚಿರತೆ ಪ್ರತ್ಯಕ್ಷವಾದಂತೆ ಫೋಟೊ ಸೃಷ್ಟಿಸಿ ಹಂಚಿಕೊಂಡಿದ್ದಾನೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಈ ಮೂಲಕ ಜನರಲ್ಲಿ ಆತಂಕ ಸೃಷ್ಟಿಸಿದ ಆರೋಪದಡಿ ಸುನೀಲ್ ವಿರುದ್ಧ ಮಲೇಬೆನ್ನೂರು ಠಾಣೆಗೆ ದೂರು ನೀಡಲಾಗಿದೆ. ವಿಚಾರಣೆ ವೇಳೆ ಆತ ತಪ್ಪೊಪ್ಪಿಕೊಂಡಿದ್ದಾನೆ. ಮತ್ತೊಮ್ಮೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿ ಸುನೀಲ್‌ನನ್ನು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ.
Read More »