bigtvnews22
October 17, 2025
Breaking News, Crime
ಪಾಣೆಮಂಗಳೂರು ಶ್ಮಶಾನ ರಸ್ತೆಯ ಬಳಿ ಅನುಮಾನಾಸ್ಪದವಾಗಿ ನಿಲ್ಲಿಸಿದ್ದ ಆಟೋದಲ್ಲಿ ಮಾದಕ ವಸ್ತು (ಎಂ.ಡಿ.ಎಂ.ಎ) ಇರಿಸಿಕೊಂಡಿದ್ದ ಓರ್ವ ವ್ಯಕ್ತಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ರಿಕ್ಷಾ ಚಾಲಕ ಮೊಹಮ್ಮದ್ ಇಮ್ತಿಯಾಜ್(40) ಎಂದು ಗುರುತಿಸಲಾಗಿದೆ.ಪಾಣೆಮಂಗಳೂರು ಶ್ಮಶಾನದ ಪಕ್ಕದಲ್ಲಿ ನಿಲ್ಲಿಸಿದ್ದ ಕೆಎ-19-ಡಿ-1806 ನೇ ನಂಬರಿನ ಆಟೋ ರಿಕ್ಷಾದ ಚಾಲಕ ಸೀಟಿನಲ್ಲಿ ಸಂಶಯಾಸ್ಪದವಾಗಿ ಕುಳಿತಿದ್ದ ವ್ಯಕ್ತಿಯನ್ನು ವಿಚಾರಿಸಿದಾಗ, ಕೃತ್ಯ ಬೆಳಕಿಗೆ ಬಂದಿದೆ. ಪೊಲೀಸ್ ವಿಚಾರಣೆ ವೇಳೆ ಆತ, ತನ್ನ ಬಳಿ ಎಂ.ಡಿ.ಎಂ.ಎ ಇರುವುದಾಗಿ ಹಾಗೂ ಅದನ್ನು …
Read More »
bigtvnews22
October 17, 2025
Breaking News, ಉಡುಪಿ
ಯುವ ಪ್ರೇಮಿಗಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಅಂಬಲಪಾಡಿಯ ಕಾಳಿಕಾಂಬ ನಗರದ ಲೇಬರ್ ಕಾಲನಿಯಲ್ಲಿ ನಡೆದಿದೆ.ಮೃತರನ್ನು ಪವಿತ್ರ (17) ಹಾಗೂ ಮಲ್ಲೇಶ (23) ಎಂದು ಗುರುತಿಸಲಾಗಿದೆ. ಪವಿತ್ರ ಅಜ್ಜರಕಾಡು ಸರಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಈಕೆಯ ತಾಯಿ ರಾಯಚೂರಿಗೆ ತೆರಳಿದ್ದ ಮೇಲೆ ಮಲ್ಲೇಶ ಮನೆಗೆ ಬಂದಿದ್ದ ಎನ್ನಲಾಗಿದೆ.ಬಳಿಕ ಇವರಿಬ್ಬರೂ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಉಡುಪಿ ನಗರ ಪೊಲೀಸರು ಆಗಮಿಸಿ …
Read More »
bigtvnews22
October 17, 2025
Breaking News, ಅಪರಾಧ
ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಹತ್ಯ ನಡೆದಿದ್ದು, ಮಗನೊಬ್ಬ ತನ್ನ ಹೆತ್ತ ತಾಯಿಯ ಕತ್ತು ಸೀಳಿ ಕೊಲೆ ಮಾಡಿದ ಘಟನೆ ನಡೆದಿದೆ.ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಜಾಲಮಂಗಲದಲ್ಲಿ ಸ್ವಂತ ಮಗನೇ ತಾಯಿಯನ್ನು ಕೊಲೆ ಮಾಡಿದ್ದಾನೆ. ಕೊಲೆಯಾದ ಮಹಿಳೆಯನ್ನು ಸರೋಜಮ್ಮ (60) ಎಂದು ಗುರುತಿಸಲಾಗಿದೆ.ಅನಿಲ್ (36) ತಾಯಿಯನ್ನೇ ಕೊಂದ ಮಗ.ಜಮೀನು ಮಾರಾಟ ಮಾಡಿದ ಹಣ ಕೊಡಲಿಲ್ಲ ಎಂದು ತಾಯಿಯಾದ ಸರೋಜಮ್ಮಳ ಕತ್ತು ಕೊಯ್ದಿದ್ದಾನೆ. ತೀವ್ರ ರಕ್ತಸ್ರಾವದಿಂದ ಕುಸಿದು ಬಿದ್ದ ಸರೋಜಮ್ಮ ಸ್ಥಳದಲ್ಲೇ …
Read More »
bigtvnews22
October 17, 2025
Breaking News, ಅಪರಾಧ
ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ ಹಾಕಿ, ಕತ್ತು ಕುಯ್ದು ಕೊಲೆ ಮಾಡಿದ ದಾರುಣ ಘಟನೆ ಬಾಗಲಕೋಟೆ ತಾಲೂಕಿನ ತುಳಸಿಗೇರಿ ಗ್ರಾಮದಲ್ಲಿ ನಡೆದಿದೆ. 28 ವರ್ಷದ ವೆಂಕಟೇಶ್ ಗಿರಿಸಾಗರ್ ಎಂಬಾತ ತನ್ನ 58 ವರ್ಷದ ತಾಯಿ ಶಾವಕ್ಕ ಗಿರಿಸಾಗರ್ ಕೈ ಕಾಲು ಕಟ್ಟಿ ಬಾಯಲ್ಲಿ ಬಟ್ಟೆ ತುರುಕಿ ಕುತ್ತಿಗೆ ಕೊಯ್ದು ಪರಾರಿಯಾಗಿದ್ದಾನೆ.ಮನೆಯಲ್ಲಿ ಮಗ ವೆಂಕಟೇಶ್ ಹಾಗೂ ಶಾವಕ್ಕ ವಾಸ ಮಾಡುತ್ತಿದ್ದರು. ಕಳೆದ 15 ವರ್ಷಗಳಿಂದ ತುಳಸಿಗೇರಿ …
Read More »
bigtvnews22
October 17, 2025
Breaking News, Crime, ಅಪರಾಧ
ವೈದ್ಯ ಡಾ.ಮಹೇಂದ್ರ ರೆಡ್ಡಿ ವೈದ್ಯೆಯಾಗಿದ್ದ ಪತ್ನಿ ಡಾ.ಕೃತ್ತಿಕಾ ರೆಡ್ಡಿಯನ್ನು ಕೊಲೆಗೈದುರುವ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ನಡುವೆ ಚಿಕ್ಕಮಗಳೂರಿನಲ್ಲಿಯೂ ಇಂತದ್ದೇ ಘಟನೆ ನಡೆದಿದೆ. ಪತಿ ಮಹಾಶಯನೇ ಪತ್ನಿಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ನಡೆದಿದೆ.ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತನು (25) ಕೊಲೆಯಾದ ಮಹಿಳೆ. ರಮೇಶ್ ಪತ್ನಿಯನ್ನೇ ಕೊಂದ ಗಂಡ. ರಮೇಶ್ ಹಾಗೂ ತನು 7 ವರ್ಷಗಳ ಹಿಂದೆ ವಿವಾಹವಾಗಿದ್ದು, ದಂಪತಿಗೆ …
Read More »
bigtvnews22
October 17, 2025
Breaking News, ಅಪರಾಧ, ಚಾಮರಾಜನಗರ, ಮಂಡ್ಯ
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹುಂಡಿ ಹಣ ಎಣಿಕೆಯ ವೇಳೆ ಕಳ್ಳತನ ಮಾಡಲು ಯತ್ನಿಸಿದ ಮೂವರು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.ಮಂಡ್ಯ ನಗರದ ಶರವಣ, ಗಿರೀಶ ಮತ್ತು ಶ್ರೀನಿವಾಸ ಬಂಧಿತ ಆರೋಪಿಗಳು.ಗುರುವಾರ ನಡೆದ ಹುಂಡಿ ಹಣ ಎಣಿಕೆಯ ವೇಳೆ ಈ ಮೂವರು ಸೇರಿಕೊಂಡಿದ್ದು, ಜೇಬಿನಲ್ಲಿ ಹಣ ಹಾಕಿಕೊಂಡು ಮೂತ್ರ ವಿಸರ್ಜನೆ ನೆಪದಲ್ಲಿ ಹೊರಬಂದು ತಮ್ಮ ವಾಹನದಲ್ಲಿ ಹಣ ಇಡುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ.ಹಣ ಎಣಿಕೆ ವೇಳೆ ಈ …
Read More »
bigtvnews22
October 17, 2025
Breaking News, News
ಗ್ರಾಮಪಂಚಾಯಿತಿ ಕಚೇರಿ ಎದುರೇ ವಾಟರ್ ಮ್ಯಾನ್ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಗ್ರಾಮಪಂಚಾಯಿತಿ ಕಚೇರಿ ಮುಂದೆಯೇ ವಾಟರ್ ಮ್ಯಾನ್ ಚಿಕ್ಕಸು ನಾಯಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹೊಂಗನೂರು ಗ್ರಾಮಪಂಚಾಯಿತಿನಲ್ಲಿ ಚಿಕ್ಕಸು ವಾಟರ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಮುಂಜಾನೆ ಗ್ರಾಮಸ್ಥರು ಗ್ರಾ.ಪಂ.ಕಚೇರಿಗೆ ಬಂದಾಗ ಚಿಕ್ಕಸು ಗ್ರಾ.ಪಂ. ಬಾಗಿಲು ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಾಟರ್ ಮ್ಯಾನ್ ಚಿಕ್ಕಸು ಆತ್ಮಹತ್ಯೆಗೆ ಪೊಲೀಸರು ನಿಖರ …
Read More »
bigtvnews22
October 17, 2025
Breaking News, Crime
ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ ಭಗ್ನ ಪ್ರೇಮಿಯೊಬ್ಬನಿಂದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಬರ್ಬರವಾಗಿ ಕೊಲೆಯಾದ ಹೃದಯ ವಿದ್ರಾವಕ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಮಲ್ಲೇಶ್ವರಂನ ಮಂತ್ರಿ ಮಾಲ್ ಹಿಂಭಾಗದಲ್ಲಿರುವ ರೈಲ್ವೆ ಟ್ರ್ಯಾಕ್ ಬಳಿ ಈ ಕೃತ್ಯ ನಡೆದಿದ್ದು, ತೀವ್ರ ರಕ್ತಸ್ರಾವದಿಂದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.ಕೊಲೆಯಾದ ಯಾಮಿನಿ ಪ್ರಿಯಾ ತಂದೆ ಗೋಪಾಲ್ ಮಾಧ್ಯಮಗಳೊಂದಿಗೆ ಮಾತನಾಡಿ, ಆಘಾತಕಾರಿ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ. ‘ವಿಘ್ನೇಶ್ ಕಳೆದ ಹಲವು ತಿಂಗಳಿನಿಂದ ನನ್ನ ಮಗಳಿಗೆ ಹಿಂಸೆ ಕೊಡುತ್ತಿದ್ದ. ಹಿಂದೆ ಹಿಂದೆ ಹಿಂಬಾಲಿಸಿಕೊಂಡು …
Read More »
BigTv News
October 16, 2025
Breaking News
ಹರಿಯಾಣ ಪೊಲೀಸ್ ಅಧಿಕಾರಿ ಸಂದೀಪ್ ಕುಮಾರ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ರೋಹ್ಟಕ್ ಸದರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ಎಫ್‌ಐಆರ್‌ನಲ್ಲಿ ಐಪಿಎಸ್ ಅಧಿಕಾರಿ ವೈ ಪುರಣ್ ಕುಮಾರ್ ಅವರ ಗನ್‌ಮ್ಯಾನ್ ಸುಶೀಲ್, ಕುಮಾರ್ ಅವರ ಪತ್ನಿ ಪಿ ಅವನೀತ್ ಕೌರ್, ಬಟಿಂಡಾ ಗ್ರಾಮಾಂತರ ಶಾಸಕ ಅಮಿತ್ ರತ್ನ ಮತ್ತು ಇನ್ನೊಬ್ಬ ವ್ಯಕ್ತಿಯ ಹೆಸರನ್ನು ಉಲ್ಲೇಖಿಸಲಾಗಿದೆ.
Read More »
BigTv News
October 16, 2025
Breaking News
ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ ಆರೋಪಿ ಗುರುತು ಪತ್ತೆಯಾಗಿದ್ದು, ಆತನನ್ನು ಬಂಧಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ.ಮಹಾರಾಷ್ಟ್ರದ ಸೊಲ್ಲಾಪುರ ಮೂಲದ ವ್ಯಕ್ತಿಯೋರ್ವ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದು, ದಾನೇಶ್ ನರೋಣ ಎಂಬಾತನನ್ನು ಬಂಧಿಸಲು ಪೊಲೀಸರು ಸಿದ್ದತೆ ನಡೆಸಿದ್ದಾರೆ.ನನಗೆ ಬೆದರಿಕೆ ಕರೆ ಬರುತ್ತಿದೆ ಎಂದು ಆರೋಪಿಸಿದ್ದ ಸಚಿವ ಸಚಿವ ಪ್ರಿಯಾಂಕ್ ಖರ್ಗೆ ಬೆದರಿಕೆ ಕರೆಯ ವಿಡಿಯೋ ರಿಲೀಸ್ ಮಾಡಿದ್ದಾರೆ.
Read More »