BigTv News
September 17, 2025
Breaking News
ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ, ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಮೂವರು ವೈದ್ಯರನ್ನು ಕರ್ನಾಟಕದ ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ, ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶರೀರ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಚೈತ್ರ ಎಂ.ಎಸ್, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೂಳೆ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. …
Read More »
BigTv News
September 17, 2025
Breaking News
ಬೆಂಗಳೂರಿನ ಕೋಣನಕುಂಟೆಯ ಆರ್ ಬಿಐ ಲೇಔಟ್ ನಲ್ಲಿ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರ ಬಳಿ ಹೋಗುವ ಖದೀಮ, ಅವರಿಗೆ ಲಾಂಗ್ ತೋರಿಸಿ ಸರಗಳ್ಳತನ ಮಾಡಿದ್ದಾನೆ.ಸಿಸಿಟಿವಿಯಲ್ಲಿ ಖದೀಮನ ಭಯಾನಕ ದೃಶ್ಯ ಸೆರೆಯಾಗಿದೆ. ಸದ್ಯ ಘಟನೆ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
September 17, 2025
Breaking News
ಕೇರಳದ ಕಾಸರಗೋಡು ಜಿಲ್ಲೆಯಲ್ಲಿ 14 ಪುರುಷರು ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರ ಎಸಗಿದ ನಾಚಿಕೆಗೇಡಿನ ಘಟನೆ ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳಲ್ಲಿ 16 ವರ್ಷದ ಬಾಲಕನ ಮೇಲೆ 14 ವಿಭಿನ್ನ ಪುರುಷರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆಸಹಾಯಕ ಶಿಕ್ಷಣ ಅಧಿಕಾರಿ ಮತ್ತು ರೈಲ್ವೆ ಪೊಲೀಸ್ ಪಡೆಯ ಸದಸ್ಯ ಸೇರಿದಂತೆ ಈ ಪ್ರಕರಣದಲ್ಲಿ ಪೊಲೀಸರು ಇಲ್ಲಿಯವರೆಗೆ ಒಂಬತ್ತು ಜನರನ್ನು ಬಂಧಿಸಿದ್ದಾರೆ.
Read More »
BigTv News
September 17, 2025
Breaking News
ಉತ್ತರಪ್ರದೇಶದ ಗೋರಖ್ ಪುರದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಗೋ ಕಳ್ಳ ಸಾಗಣೆ ತಡೆದ ಯುವಕನ ಬಾಯಿ ಒಳಗೆ ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಗೋವುಗಳ ಕಳ್ಳ ಸಾಗಾಣೆದಾರರು ನೀಟ್ ವೈದ್ಯಕೀಯ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ 19 ವರ್ಷದ ವಿದ್ಯಾರ್ಥಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಈ ವಿಷಯವನ್ನು ಅರಿತುಕೊಂಡಿದ್ದಾರೆ ಮತ್ತು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ.
Read More »
BigTv News
September 16, 2025
Breaking News
ಚಿತ್ತೂರು ಜಿಲ್ಲೆಯ ಪುಂಗನೂರಿನಲ್ಲಿ ನಡೆದ ಈ ಘಟನೆ ಸೋಮವಾರ ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಪಟ್ಟಣದ ಹರಿ ಮತ್ತು ವಿಜೇತಾ ದಂಪತಿಯ ಪುತ್ರಿ ಸಾತ್ವಿಕಾ ನಾಗಶ್ರೀ (11) ಸ್ಥಳೀಯ ಖಾಸಗಿ ಶಾಲೆಯಲ್ಲಿ ಆರನೇ ತರಗತಿಯಲ್ಲಿ ಓದುತ್ತಿದ್ದಾಳೆ.ಈ ತಿಂಗಳ 10 ರಂದು, ತರಗತಿಯಲ್ಲಿ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಹಿಂದಿ ಶಿಕ್ಷಕಿಯೊಬ್ಬರು ಶಾಲಾ ಬ್ಯಾಗ್ನಿಂದ ಆಕೆಯ ತಲೆಗೆ ಹೊಡೆದಿದ್ದಾರೆ.ಬಾಲಕಿಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ, ಪರೀಕ್ಷೆಗಳಲ್ಲಿ ಆಕೆಯ ತಲೆಬುರುಡೆಯಲ್ಲಿ ತೀವ್ರತರ ಹಾನಿಯಾದ ಬಗ್ಗೆ …
Read More »
BigTv News
September 16, 2025
Breaking News
ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊಮ್ಮಗ ಧವನ್ ರಾಜಕೀಯ ಪ್ರವೇಶಕ್ಕೆ ವೇದಿಕೆಯಲ್ಲೇ ಮನವಿ ಮಾಡಲಾಗಿದೆ. ವರುಣಾ ಕ್ಷೇತ್ರದ ಭುಗತಹಳ್ಳಿ ಗ್ರಾಮದಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.ಗ್ರಾಮದ ಮುಖಂಡ ಕೆ. ಮಣಿಯಯ್ಯ, ದಿವಂಗತ ರಾಕೇಶ್ ಸಿದ್ದರಾಮಯ್ಯ ಅವರ ಕೊಡುಗೆಗಳನ್ನು ಸ್ಮರಿಸಿದರು. ಗ್ರಾಮದ ಜನರು ಸಂಕಷ್ಟದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರನ್ನು ಕೈಬಿಟ್ಟಿಲ್ಲ ಎಂದು ಹೇಳಿದ ಅವರು, ಈಗ ಅವರ ಮೊಮ್ಮಗ ಧವನ್ ಸಿದ್ದರಾಮಯ್ಯ ರಾಜಕೀಯಕ್ಕೆ …
Read More »
BigTv News
September 16, 2025
Breaking News
ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಸೆಪ್ಟೆಂಬರ್ 20ರಿಂದ ದಸರಾ ರಜೆ ಆರಂಭವಾಗಲಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್ನಲ್ಲಿ ಒಟ್ಟು 18 ದಿನಗಳು ರಜೆ ಸಿಗಲಿದೆ.ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ರಜೆ ಹಾಗೂ ಕಾರ್ಯ ಚಟುವಟಿಕೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.ಅದರಂತೆ ದಸರಾ ಸರಜೆಗೆ ಸೆಪ್ಟೆಂಬರ್ 20 ರಿಂದ ಆರಂಭವಾಗಿ ಅಕ್ಟೋಬರ್ 7ರವರೆಗೂ ಇರಲಿದೆ.
Read More »
BigTv News
September 16, 2025
Breaking News
ಉತ್ತರ ಪ್ರದೇಶದ ಲಕ್ನೋದ ಮೋಹನ್ ಲಾಲ್‌ಗಂಜ್ ಪ್ರದೇಶದಲ್ಲಿ ಒಂದು ದುರಂತ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ಬಿಐಪಿಎಸ್ ಶಾಲೆಯಲ್ಲಿ ಓದುತ್ತಿರುವ 6ನೇ ತರಗತಿ ವಿದ್ಯಾರ್ಥಿ ಯಶ್ ಕುಮಾರ್ ಆನ್‌ಲೈನ್ ಆಟಗಳಲ್ಲಿ ಭಾರಿ ಮೊತ್ತವನ್ನು ಕಳೆದುಕೊಂಡ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇದರ ಬಗ್ಗೆಯೂ ತಂದೆ ಮಗನನ್ನು ಗದರಿಸಲಿಲ್ಲ, ಆದರೆ ಇದಾದ ಕೂಡಲೇ ಯಶ್ ತನ್ನ ಕೋಣೆಗೆ ಹೋಗಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರು. ಕುಟುಂಬದವರು ತಕ್ಷಣ ಯಶ್ ಅವರನ್ನು ಸಮುದಾಯ ಆರೋಗ್ಯ …
Read More »
BigTv News
September 16, 2025
Breaking News
ಕಾನಾಹೊಸಹಳ್ಳಿ ಸಮೀಪದ ಬಿಷ್ಣಹಳ್ಳಿ ಕ್ರಾಸ್ ಬಳಿಯ ರಾಹೆ 50 ರಲ್ಲಿ ಸ್ಲೀಪರ್ ಬಸ್ ಹಾಗೂ ಲಾರಿ ಮಧ್ಯೆ ಮಂಗಳವಾರ (ಸೆ.16) ಮುಂಜಾನೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ .ಮೃತರನ್ನು ಮನೋಜ್ ( 28) ಸುರೇಶ್ ( 45) ಎಂದು ಗುರುತಿಸಲಾಗಿದೆ .ಮಧ್ಯರಾತ್ರಿ ಅಪಘಾತವಾದ ಸುದ್ದಿ ತಿಳಿದ ಕೂಡಲೆ ಪಿಎಸೈ ಹಾಗೂ ಸಿದ್ರಾಮ್ ಬಿದ್ರಾಣಿ ಸ್ಥಳಕ್ಕೆ ಹೋಗಿ ಗಾಯಾಳುಗಳನ್ನು ಆಂಬುಲೆನ್ಸ್ ಗೆ ಹಾಕಿ ಆಸ್ಪತ್ರೆಗೆ ಕಳುಹಿಸಿದ್ದಾರೆ ಅಲ್ಲದೆ ಅವರ ಕಾರ್ಯಕ್ಕೆ …
Read More »
BigTv News
September 16, 2025
Breaking News
ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಎಂಜಿನಿಯರ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಯಾನಂದ ಸಾಗರ್ ಕಾಲೇಜು ಬಳಿ ನಡೆದಿದೆ. ಕೋಲಾರ ಜಿಲ್ಲೆ ಬೇತಮಂಗಲ ಗ್ರಾಮದ ಹರ್ಷಿತ್ (19), ನೆಲಮಂಗಲದ ದರ್ಶನ್ (19) ಮೃತರು.
Read More »