BigTv News
September 15, 2025
Breaking News
ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದು 210 ಕ್ವಿಂಟಲ್ ಅಕ್ಕಿ ಜಪ್ತಿ ಮಾಡಿದ್ದಾರೆ.ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಆಜೂರ ಗ್ರಾಮದ ನಿವಾಸಿ, ಲಾರಿ ಚಾಲಕ ಗಜಾನನ ಮಕಾಳೆ ಎಂಬಾತನನ್ನು ಬಂಧಿಸಲಾಗಿದೆ.ವಿಜಯಪುರದಲ್ಲಿರುವ ಎಫ್‌ಸಿಐ ರೈಲ್ವೆ ಗೂಡ್ಸ್ ಶೆಡ್ಡಿನಿಂದ ಅಕ್ಕಿ ಸಾಗಿಸುತ್ತಿರುವುದು ಗೊತ್ತಾಗಿದೆ.ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 4.76 ಲಕ್ಷ ರೂ. ಮೌಲ್ಯದ 210.43 ಕ್ವಿಂಟಲ್ ಅಕ್ಕಿ ಹಾಗೂ ಲಾರಿ ಸೇರಿದಂತೆ ಒಟ್ಟು …
Read More »
BigTv News
September 15, 2025
Breaking News
ಹೈದರಾಬಾದ್ ನ ಈಗಲ್ (ಎಲೈಟ್ ಆಯಕ್ಷನ್ ಗ್ರೂಪ್ ಫಾರ್ ಡ್ರಗ್ ಲಾ ಎನ್ ಫೋರ್ಸ್ ಮೆಂಟ್) ತಂಡವು ಬೊವೇನಪಲ್ಲಿಯಲ್ಲಿನ ಖಾಸಗಿ ಶಾಲೆಯಲ್ಲಿ ಕಾರ್ಯಾಚರಿಸುತ್ತಿದ್ದ ಅಲ್ಪ್ರಝೋಲಂ ತಯಾರಿಕಾ ಘಟಕವನ್ನು ಪತ್ತೆ ಹಚ್ಚಿದ್ದು, ಸ್ಥಳದಿಂದ ಮಾದಕ ದ್ರವ್ಯಗಳು, ನಗದು ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ಉಪಕರಣಗಳನ್ನು ವಶಪಡಿಸಿಕೊಂಡಿದೆ.
Read More »
BigTv News
September 15, 2025
Breaking News
ಹೈದರಾಬಾದ್ ನ ಈಗಲ್ (ಎಲೈಟ್ ಆಯಕ್ಷನ್ ಗ್ರೂಪ್ ಫಾರ್ ಡ್ರಗ್ ಲಾ ಎನ್ ಫೋರ್ಸ್ ಮೆಂಟ್) ತಂಡವು ಬೊವೇನಪಲ್ಲಿಯಲ್ಲಿನ ಖಾಸಗಿ ಶಾಲೆಯಲ್ಲಿ ಕಾರ್ಯಾಚರಿಸುತ್ತಿದ್ದ ಅಲ್ಪ್ರಝೋಲಂ ತಯಾರಿಕಾ ಘಟಕವನ್ನು ಪತ್ತೆ ಹಚ್ಚಿದ್ದು, ಸ್ಥಳದಿಂದ ಮಾದಕ ದ್ರವ್ಯಗಳು, ನಗದು ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ಉಪಕರಣಗಳನ್ನು ವಶಪಡಿಸಿಕೊಂಡಿದೆ.
Read More »
BigTv News
September 15, 2025
Breaking News
ಹರಿದ್ವಾರದಲ್ಲಿ ಹಿರಿಯರ ಅಸ್ಥಿ ವಿಸರ್ಜನೆ ಮಾಡಿ ಹಿಂದಿರುಗುತ್ತಿದ್ದ ಕಾರ್ ಅಪಘಾತಕ್ಕೊಳಗಾಗಿ ಏಳು ಜನರು ಸಾವನ್ನಪ್ಪಿದ್ದಾರೆ. ಭಾನುವಾರ ತಡರಾತ್ರಿ ಜೈಪುರದ ಶಿವದಾಸಪುರ ಪೊಲೀಸ್ ಠಾಣೆ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆ ಎಷ್ಟಿತ್ತೆಂದ್ರೆ ಕಾರ್‌ನಲ್ಲಿದ್ದ ಎಲ್ಲಾ ಏಳು ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಎಲ್ಲಾ ಮೃತದೇಹಗಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಅಪಘಾತಕ್ಕೊಳಗಾದ ಕಾರ್ ತೆರವುಗೊಳಿಸಿದ್ದಾರೆ.
Read More »
BigTv News
September 15, 2025
Breaking News
ಭಾರತೀಯ ವಾಯುಸೇನೆಯಲ್ಲಿ ಇಂಜಿನೀಯರ್ ಆಗಿದ್ದ 25 ವರ್ಷದ ಲೋಕೇಶ್ ಪವನ್ ಕೃಷ್ಣ ಆತ್ಮಹತ್ಯೆ ಮಾಡಿಕೊಂಡ ಯುವಕ. ಬೆಂಗಳೂರಿನ ಚಿಕ್ಕಬಿದರಕಲ್ಲು ಪ್ರೆಸ್ಟೇಜ್ ಜಿಂದಾಲ್ ಸಿಟಿ ಅಪಾರ್ಟ್‌ಮೆಂಟ್‌ನಲ್ಲಿ ಈ ಪ್ರಕರಣ ನಡೆದಿದೆ. ಮೂಲತಃ ಆಂದ್ರದ ಕಡಪ ಜಿಲ್ಲೆಯ ನಿವಾಸಿ ಮೃತ ಲೋಕೇಶ್ ಪವನ್ ಕೃಷ್ಣ, ಹಲಸೂರಿನ ಮಿಲಿಟರಿ ಕ್ವಾಟರ್ಸ್ ನಲ್ಲಿ ವಾಸವಾಗಿದ್ದರು. 24ನೆ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರ ತನಿಖೆ ವೇಳೆ ಮೃತ ಲೋಕೇಶ್, ಹಲವು ದಿನಗಳಿಂದ ಊಟ ಸೇರುತ್ತಿರಲಿಲ್ಲ, ಹಾಗಾಗಿ …
Read More »
BigTv News
September 15, 2025
Breaking News
ತಾಯಿ ಬೈದಿದ್ದಕ್ಕೆ ಆರನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಮೃತನನ್ನು 6ನೇ ತರಗತಿ ವಿದ್ಯಾರ್ಥಿ ಕೃಷ್ಣ ಎಂದು ಗುರುತಿಸಲಾಗಿದೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಇದುವರೆಗೆ ಯಾರ ವಿರುದ್ಧವೂ ಪೊಲೀಸ್ ವರದಿ ದಾಖಲಾಗಿಲ್ಲ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ ಎಂದು ಕೋಟ್ವಾಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ದೇವೇಂದ್ರ ಸಿಂಗ್ ಹೇಳಿದ್ದಾರೆ.
Read More »
BigTv News
September 15, 2025
Breaking News
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವಡ್ಡರಬಂಡೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಇಬ್ಬರು ದುರ್ಮರಣ ಹೊಂದಿದ್ದಾರೆ.ಮೃತರನ್ನು ಗೆದರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎಫ್ ಡಿಎ ಶಶಿ(42), ದಂಡಿಗಾನಹಳ್ಳಿಯ ಮೆಕ್ಯಾನಿಕ್ ಮುನಿರಾಜು(28) ಎಂಬುದಾಗಿ ಗುರುತಿಸಲಾಗಿದೆ. ಮಂಚೇನಹಳ್ಳಿಯ ರಮೇಶ್ ಸ್ಥಿತಿ ಗಂಭೀರವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Read More »
BigTv News
September 15, 2025
Breaking News
ಗ್ರೇಟರ್ ನೋಯ್ಡಾ ಏಸ್ ಸಿಟಿಯಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನ 13 ನೇ ಮಹಡಿಯ ಬಾಲ್ಕನಿಯಿಂದ ಹಾರಿ 37 ವರ್ಷದ ಮಹಿಳೆ ಮತ್ತು ಅವರ 11 ವರ್ಷದ ಮಗ ಶನಿವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.ಮಗನ ದೀರ್ಘಕಾಲದ ಮಾನಸಿಕ ಅಸ್ವಸ್ಥತೆಯಿಂದ ಬೇಸತ್ತಿದ್ದ ಮಹಿಳೆ ಸಾಕ್ಷಿ ಚಾವ್ಲಾ ತನ್ನ 11 ವರ್ಷ ಮಗನೊಂದಿಗೆ (ಮಗ ದಕ್ಷ) 13ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟಿದ್ದಾರೆ.
Read More »
BigTv News
September 15, 2025
Breaking News
ಪಾನಿಪೂರಿ ತಿನ್ನವ ವೇಳೆ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಸ್ಥಳೀಯ ಸಲ್ಮಾನ್ ಕೊಟ್ಟ ಪಂಚ್ ಗೆ ಭೀಮ ಎನ್ನುವ ಯುವಕ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಪುಟ್ಟೇನಹಳ್ಳಿಯ ಬಳಿಯ ಅರಕೆರೆಯಲ್ಲಿ ನಡೆದಿದೆ.ಭೀಮಕುಮಾರ್‌ನ ಕತ್ತಿನ ಭಾಗಕ್ಕೆ ಸಲ್ಮಾನ್ ಬಲವಾಗಿ ಒಂದು ಹೊಡೆದಿದ್ದಾನೆ. ಪರಿಣಾಮ ಪ್ರಜ್ಞೆ ಕಳೆದುಕೊಂಡು ಕೆಳಗೆ ಬಿದ್ದ ಭೀಮಕುಮಾರ್ ಮೂರು ದಿನಗಳ ನಂತರ ಕೊನೆಯುಸಿರೆಳೆದಿದ್ದಾನೆ.
Read More »
BigTv News
September 15, 2025
Breaking News
ಎಂಜಿನ್ನಲ್ಲಿ ಕಾಣಿಸಿಕೊಂಡ ಬೆಂಕಿ ದಿಢೀರನೇ ವ್ಯಾಪಿಸಿ ಇಡೀ ಬಿಎಂಟಿಸಿ ಬಸ್ ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನ ಹೆಚ್‌ಎಎಲ್ ಏರ್ಪೋರ್ಟ್ ಮುಖ್ಯ ಗೇಟ್ ಬಳಿ ಸೊಮವಾರ ಮುಂಜಾನೆ ಸಂಭವಿಸಿದೆ.ಮೆಜೆಸ್ಟಿಕ್ನಿಂದ ಕಾಡುಗೋಡಿಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ನ ಎಂಜಿನ್ನಲ್ಲಿ ಬೆಳಗ್ಗೆ 5.15ಕ್ಕೆ ಬೆಂಕಿ ಕಾಣಿಸಿದೆ.ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಚ್‌ಎಎಲ್ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು.ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಎಂಟಿಸಿ ಬೆಂಕಿ ಕಾಣಿಸಿಕೊಳ್ಳಲು ಕಾರಣ ಪತ್ತೆ ಹಚ್ಚಲು …
Read More »