Breaking News

Breaking News

ರಾತ್ರಿ ಶುಂಠಿ ಬೆಳೆಗೆ ನೀರು ಹಾಯಿಸಲು ಹೋದವನ ಶವ ಪತ್ತೆ! ತನಿಖೆ ವೇಳೆ ಪತ್ನಿಯ ಹಖೀಖತ್ ಬಯಲು!

ಅರಸೀಕೆರೆ: ಅಕ್ರಮ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಮೋಹನ್ ಎಂಬಾತನನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿದ್ದ ಪ್ರಕರಣವನ್ನು ಗಂಡಸಿ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪತ್ನಿ ಜಯಲಕ್ಷ್ಮಿ ಸೇರಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಸೆ.4ರಂದು ರಾತ್ರಿ ಶುಂಠಿ ತೋಟಕ್ಕೆ ನೀರು ಹಾಯಿಸಲು ತೆರಳಿದ್ದ ಮೋಹನ್, ಜಮೀನಿನ ಸಮೀಪ ತಲೆಗೆ ಗಂಭೀರ ಗಾಯಗಳೊಂದಿಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಈ ಕುರಿತು ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ …

Read More »

ರೀಲ್ಸ್ ವಿಚಾರವಾಗಿ ಪತಿ-ಪತ್ನಿ ನಡುವೆ ಗಲಾಟೆ: ಹೆಂಡತಿಯನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾದ ಗಂಡ

ಬೆಂಗಳೂರಿನ ಎಚ್‌ಎಎಲ್‌ ವಿಭೂತಿಪುರದಲ್ಲಿ ರೀಲ್ಸ್ ನೋಡುತ್ತಿದ್ದ ಪತ್ನಿಯನ್ನು ಪತಿ ಬಿಯರ್ ಬಾಟಲ್‌ನಿಂದ ಹೊಡೆದು ಕೊಲೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ರಾಘವೇಂದ್ರ ಮತ್ತು ಶೃತಿ ಪ್ರೀತಿಸಿ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿ ಸದಾ ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತಿದ್ದಾಳೆ ಎಂದು ರಾಘವೇಂದ್ರ ಆಕ್ಷೇಪಿಸುತ್ತಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿದಾಗ ಪತಿ ಬಿಯರ್ ಬಾಟಲ್‌ನಿಂದ ಶೃತಿಯ ತಲೆಗೆ …

Read More »

ಅಪ್ರಾಪ್ತೆಯೊಂದಿಗೆ ಸಮ್ಮತಿಯ ಲೈಂಗಿಕ ಕ್ರಿಯೆ ಮಾನ್ಯವಲ್ಲ: ಪೋಕ್ಸೋ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಹೈಕೋರ್ಟ್

ಅಪ್ರಾಪ್ತ ಬಾಲಕಿಯೊಂದಿಗೆ ಸಮ್ಮತಿಯ ಲೈಂಗಿಕ ಕ್ರಿಯೆ ನಡೆದಿದೆ ಎಂಬ ಕಾರಣಕ್ಕೆ ಪೋಕ್ಸೋ ಪ್ರಕರಣದಿಂದ ಆರೋಪಿಗೆ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯ ಸಮ್ಮತಿ ಕಾನೂನಿನ ದೃಷ್ಟಿಯಲ್ಲಿ ಮಾನ್ಯವಲ್ಲ ಎಂದು ತಿಳಿಸಿ, ಆರೋಪಿಯನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿದೆ. ಮಂಡ್ಯ ಜಿಲ್ಲೆಯ ಪ್ರಕರಣದಲ್ಲಿ ಘಟನೆ ನಡೆದಾಗ ಬಾಲಕಿಗೆ 16 ವರ್ಷ ವಯಸ್ಸಾಗಿತ್ತು ಎಂಬುದು ಜನನ ಪ್ರಮಾಣಪತ್ರ ಹಾಗೂ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಯಿಂದ ದೃಢಪಟ್ಟಿತ್ತು. …

Read More »

ಕಾಸು ಬಿಚ್ಚಿದ್ರೆ ಮಾತ್ರ ಚಿಕಿತ್ಸೆ – ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯನ ಲಂಚಾವತಾರ

ಬೆಂಗಳೂರು ದಕ್ಷಿಣ: ರಾಮನಗರ ಸರ್ಕಾರಿ ಜಿಲ್ಲಾಸ್ಪತ್ರೆಯ ಯುರಾಲಜಿ ವಿಭಾಗದ ವೈದ್ಯ ಡಾ. ವಿಶ್ವನಾಥ್ ಆರ್. ವಿರುದ್ಧ ಬಡ ರೋಗಿಗಳಿಂದ ಲಂಚ ಪಡೆಯುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಮೂತ್ರಪಿಂಡದ ಕಲ್ಲು ಶಸ್ತ್ರಚಿಕಿತ್ಸೆಗೆ ಬರುವ ರೋಗಿಗಳಿಂದ ತಲಾ ₹30 ಸಾವಿರ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎನ್ನಲಾಗಿದೆ. ಹಣ ನೀಡದವರಿಗೆ ಚಿಕಿತ್ಸೆ ನೀಡದೆ ವಾಪಸ್ ಕಳುಹಿಸುತ್ತಿದ್ದಾರೆ ಎಂಬ ಆರೋಪವೂ ಇದೆ. ಈ ಹಿಂದೆ ಲೋಕಾಯುಕ್ತ ಹಾಗೂ ಆರೋಗ್ಯ ಇಲಾಖೆಯ ಮೇಲಾಧಿಕಾರಿಗಳು ಎಚ್ಚರಿಕೆ ನೀಡಿದ್ದರೂ ಲಂಚದ …

Read More »

ಇಬ್ಬರು ಕುಖ್ಯಾತ ಮನೆಗಳ್ಳರ ಸೆರೆ : ಒಬ್ಬನ ಮೇಲೆ 60, ಮತ್ತೊಬ್ಬನ ಮೇಲೆ 33 ಕೇಸ್

ಬೆಂಗಳೂರು: ಬಾಣಸವಾಡಿ ಠಾಣೆ ಪೊಲೀಸರು ಸುಮಾರು 300 ಕಿ.ಮೀ. ಚೇಸ್ ಮಾಡಿ ಕುಖ್ಯಾತ ಮನೆಗಳ್ಳರಾದ ದೊಡ್ಡಬಳ್ಳಾಪುರದ ಗಂಗಾಧರ್‌ (40) ಹಾಗೂ ಕೊರಟಗೆರೆಯ ಬಸವರಾಜು (35) ಅವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ₹77.50 ಲಕ್ಷ ಮೌಲ್ಯದ 470 ಗ್ರಾಂ ಚಿನ್ನಾಭರಣ, 886 ಗ್ರಾಂ ಬೆಳ್ಳಿ ವಸ್ತುಗಳು, ₹3 ಲಕ್ಷ ನಗದು ಹಾಗೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಎಚ್‌ಬಿಆರ್‌ ಲೇಔಟ್‌ನ ನಿವಾಸಿಯೊಬ್ಬರು ಕುಟುಂಬದೊಂದಿಗೆ ಹೊರಗೆ ಹೋಗಿದ್ದ ವೇಳೆ ಮನೆಯ ಬಾಗಿಲು ಮುರಿದು ₹14 ಲಕ್ಷ ಹಣವಿದ್ದ …

Read More »

ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಮೃತ್ಯು!

ಮಂಡ್ಯ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಾಗಮಂಗಲ ತಾಲೂಕಿನ ದೇವಿರಹಳ್ಳಿ ಜಂಕ್ಷನ್ ಬಳಿ ನಡೆದಿದೆ. ಕಬ್ಬಿಣದ ಕಂಬಗಳನ್ನು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್‌ ಅನ್ನು ಬಸ್ ಓವರ್‌ಟೇಕ್ ಮಾಡಲು ಯತ್ನಿಸಿದಾಗ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಬ್ಬಿಣದ ಕಂಬಗಳು ಬಸ್ಸಿನೊಳಗೆ ನುಗ್ಗಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಲವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ …

Read More »

ಬೆಂಗಳೂರು : ಪತ್ನಿಕೊಂದು ಆತ್ಮಹತ್ಯಗೆ ಶರಣಾದ ಆಟೋ ಚಾಲಕ

ಬೆಂಗಳೂರು, ಸೆ. 9: ಪತ್ನಿಯನ್ನು ಕೊಲೆ ಮಾಡಿದ ಆಟೋ ಚಾಲಕನೊಬ್ಬ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಚ್‌ಎಎಲ್‌ ಪೊಲೀಸ್ ಠಾಣಾ ವ್ಯಾಪ್ತಿಯ ವಿಭೂತಿಪುರದಲ್ಲಿ ನಡೆದಿದೆ. ಶ್ರುತಿ (35) ಅವರನ್ನು ಕೊಲೆ ಮಾಡಿದ ಪತಿ ರಾಘವೇಂದ್ರ (38) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಾವಣಗೆರೆ ಮೂಲದ ಶ್ರುತಿ ಹಾಗೂ ರಾಘವೇಂದ್ರ ಅವರಿಗೆ 15 ವರ್ಷಗಳ ಹಿಂದೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಮಕ್ಕಳು ದಾವಣಗೆರೆಯಲ್ಲಿರುವ ಅಜ್ಜಿಯ ಮನೆಯಲ್ಲಿ ವಾಸವಾಗಿದ್ದು, ದಂಪತಿ ಇಬ್ಬರೇ ವಿಭೂತಿಪುರದ ಬಾಡಿಗೆ ಮನೆಯಲ್ಲಿ …

Read More »

ವೈದ್ಯಕೀಯ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್: ರಾಯಚೂರಿನಲ್ಲಿ ಮೂವರು ಖತರ್ನಾಕ್ ಸುಲಿಗೆಕೋರರ ಬಂಧನ!

ರಾಯಚೂರು: ಮೆಡಿಕಲ್ ವಿದ್ಯಾರ್ಥಿಗಳು ಹಾಗೂ ಯುವಕ-ಯುವತಿಯರನ್ನು ಗುರಿಯಾಗಿಸಿಕೊಂಡು ಫೋಟೋ, ವಿಡಿಯೋ ತೆಗೆದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಮೂವರ ಗ್ಯಾಂಗ್‌ ಅನ್ನು ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುರೇಶ್, ತೌಶೀಫ್ ಹಾಗೂ ಓರ್ವ ಅಪ್ರಾಪ್ತನನ್ನು ವಶಕ್ಕೆ ಪಡೆಯಲಾಗಿದೆ. ಡಾಬಾಗೆ ಸ್ನೇಹಿತೆಯೊಂದಿಗೆ ತೆರಳಿದ್ದ ಮೆಡಿಕಲ್ ವಿದ್ಯಾರ್ಥಿಯನ್ನು ಹಿಂಬಾಲಿಸಿದ್ದ ಆರೋಪಿಗಳು, ಫೋಟೋ-ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ₹30 ಸಾವಿರ ನಗದು ಪಡೆದಿದ್ದರು. ಬಳಿಕ ಮತ್ತಷ್ಟು ಹಣಕ್ಕಾಗಿ ಪೀಡಿಸಿದ್ದರು. ಪೊಲೀಸರಿಗೆ ಸಿಕ್ಕಿಬೀಳುವ ಭಯದಿಂದ ಆರೋಪಿಗಳು ಕೇವಲ …

Read More »

ಹುಲಿ, ಚಿರತೆ ಉಗುರು, ಕಾಡೆಮ್ಮೆ ಕೊಂಬು ಸೇರಿ ವನ್ಯಜೀವಿ ಉತ್ಪನ್ನ ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ವನ್ಯಜೀವಿ ಉತ್ಪನ್ನಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಶಿರಸಿ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಬಂಧಿಸಿದ್ದಾರೆ. ಶಂಕರ ಸಿದ್ದಿ ಹಾಗೂ ನರಸಿಂಹ ಸಿದ್ದಿ ಬಂಧಿತ ಆರೋಪಿಗಳು. ಆರೋಪಿಗಳಿಂದ 15.748 ಕೆಜಿ ಪ್ಯಾಂಗೋಲಿನ್ ಚಿಪ್ಪುಗಳು, ಎರಡು ಕಾಡೆಮ್ಮೆ ಕೊಂಬುಗಳು, ಎಂಟು ಹುಲಿ ಉಗುರುಗಳು, 12 ಚಿರತೆ ಉಗುರುಗಳು, ಎರಡು ಹುಲಿ ಹಲ್ಲುಗಳು, ಮೂರು ಚಿರತೆ ಹಲ್ಲುಗಳು, ಆರು ಕಾಡುಹಂದಿ ಹಲ್ಲುಗಳು ಸೇರಿದಂತೆ ಒಂದು ಬೈಕ್ ಮತ್ತು ಒಂದು …

Read More »

ಚಾಮರಾಜನಗರ: ಹನೂರು ಸಮೀಪ ಕತ್ತರಿಸಿದ ಸ್ಥಿತಿಯಲ್ಲಿ ಜಿಂಕೆಯ ಶವ ಪತ್ತೆ

ಚಾಮರಾಜನಗರದ ಹನೂರು ವನ್ಯಜೀವಿ ಉಪವಿಭಾಗದ ಬಫರ್ ವಲಯದಲ್ಲಿ ಜಿಂಕೆಯೊಂದನ್ನು ಕಳ್ಳಬೇಟೆಗಾರರು ಬೇಟೆಯಾಡಿರುವ ಘಟನೆ ನಡೆದಿದೆ. ಸೋಮವಾರ ರಾತ್ರಿ ಪಚ್ಚೆದೊಡ್ಡಿ ಶಾಖೆಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಗುಂಡಿನ ಶಬ್ಧ ಕೇಳಿಬಂದಿದೆ. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಗಂಡು ಜಿಂಕೆಯ ಎದೆಯ ಭಾಗ ಹಾಗೂ ಮುಂಗಾಲುಗಳನ್ನು ಕತ್ತರಿಸಿ ಬಿಸಾಡಿರುವುದು ಪತ್ತೆಯಾಗಿದೆ. ಕಳ್ಳಬೇಟೆಗಾರರು ಜಿಂಕೆಯನ್ನು ಬೇಟೆಯಾಡಿ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಸಿಬ್ಬಂದಿ ಶೋಧ ಕಾರ್ಯ …

Read More »