BigTv News
September 10, 2026
Breaking News
ಯಾದಗಿರಿ: ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ದಂಪತಿ ಯುವಕನೊಬ್ಬನ ಕಿರುಕುಳದಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಶೋಕ ನಗರ ತಾಂಡಾದ ಮಾರುತಿ ಗೋಮ್ಯಾ (25) ಹಾಗೂ ಶಿಲ್ಪಾ ಮಾರುತಿ (21) ಮೃತರು. ರಕ್ಷಾ ಬಂಧನ ಹಬ್ಬಕ್ಕೆ ತವರುಮನೆಗೆ ಬಂದಿದ್ದ ಶಿಲ್ಪಾಗೆ ಅರುಣ್ ಮೇಘ್ಯಾ ಮದುವೆಯಾಗುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ. ಮನೆಯ ಮುಂದೆ ಓಡಾಡಿ ತೊಂದರೆ ನೀಡುತ್ತಿದ್ದರಿಂದ ದಂಪತಿ ನಡುವೆ ಜಗಳವಾಗಿತ್ತು. ಸೆ.1ರಂದು ಇಬ್ಬರೂ ಕೋಣೆಯಲ್ಲಿ ನೇಣು ಹಾಕಿಕೊಂಡಿದ್ದರು. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ …
Read More »
BigTv News
September 10, 2026
Breaking News
ಬೆಂಗಳೂರು: ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸಾಫ್ಟ್‌ವೇರ್ ಉದ್ಯೋಗಿ ಸೇರಿದಂತೆ ಏಳು ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಎಂಡಿಎಂಎ, ಹೈಡ್ರೋ ಗಾಂಜಾ ಹಾಗೂ ಗಾಂಜಾ ಸೇರಿ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಗಿರಿನಗರ ಪೊಲೀಸರು ಐವರಿ ಕೋಸ್ಟ್ ಪ್ರಜೆ ಪೀಟರ್ ಅಲ್ಫ್ರೆಡ್‌ನನ್ನು ಬಂಧಿಸಿ 9.1 ಕೆಜಿ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ ಸುಮಾರು ₹18.26 ಕೋಟಿ ಎಂದು ಪೊಲೀಸರು ತಿಳಿಸಿದ್ದಾರೆ. ಬಟ್ಟೆ …
Read More »
BigTv News
September 10, 2026
Breaking News
ಅರಸೀಕೆರೆ: ಅಕ್ರಮ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಮೋಹನ್ ಎಂಬಾತನನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿದ್ದ ಪ್ರಕರಣವನ್ನು ಗಂಡಸಿ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪತ್ನಿ ಜಯಲಕ್ಷ್ಮಿ ಸೇರಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಸೆ.4ರಂದು ರಾತ್ರಿ ಶುಂಠಿ ತೋಟಕ್ಕೆ ನೀರು ಹಾಯಿಸಲು ತೆರಳಿದ್ದ ಮೋಹನ್, ಜಮೀನಿನ ಸಮೀಪ ತಲೆಗೆ ಗಂಭೀರ ಗಾಯಗಳೊಂದಿಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಈ ಕುರಿತು ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ …
Read More »
BigTv News
September 9, 2026
Breaking News
ಬೆಂಗಳೂರಿನ ಎಚ್‌ಎಎಲ್ ವಿಭೂತಿಪುರದಲ್ಲಿ ರೀಲ್ಸ್ ನೋಡುತ್ತಿದ್ದ ಪತ್ನಿಯನ್ನು ಪತಿ ಬಿಯರ್ ಬಾಟಲ್‌ನಿಂದ ಹೊಡೆದು ಕೊಲೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ರಾಘವೇಂದ್ರ ಮತ್ತು ಶೃತಿ ಪ್ರೀತಿಸಿ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿ ಸದಾ ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತಿದ್ದಾಳೆ ಎಂದು ರಾಘವೇಂದ್ರ ಆಕ್ಷೇಪಿಸುತ್ತಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿದಾಗ ಪತಿ ಬಿಯರ್ ಬಾಟಲ್‌ನಿಂದ ಶೃತಿಯ ತಲೆಗೆ …
Read More »
BigTv News
September 9, 2026
Breaking News
ಅಪ್ರಾಪ್ತ ಬಾಲಕಿಯೊಂದಿಗೆ ಸಮ್ಮತಿಯ ಲೈಂಗಿಕ ಕ್ರಿಯೆ ನಡೆದಿದೆ ಎಂಬ ಕಾರಣಕ್ಕೆ ಪೋಕ್ಸೋ ಪ್ರಕರಣದಿಂದ ಆರೋಪಿಗೆ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯ ಸಮ್ಮತಿ ಕಾನೂನಿನ ದೃಷ್ಟಿಯಲ್ಲಿ ಮಾನ್ಯವಲ್ಲ ಎಂದು ತಿಳಿಸಿ, ಆರೋಪಿಯನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿದೆ. ಮಂಡ್ಯ ಜಿಲ್ಲೆಯ ಪ್ರಕರಣದಲ್ಲಿ ಘಟನೆ ನಡೆದಾಗ ಬಾಲಕಿಗೆ 16 ವರ್ಷ ವಯಸ್ಸಾಗಿತ್ತು ಎಂಬುದು ಜನನ ಪ್ರಮಾಣಪತ್ರ ಹಾಗೂ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಯಿಂದ ದೃಢಪಟ್ಟಿತ್ತು. …
Read More »
BigTv News
September 9, 2026
Breaking News
ಬೆಂಗಳೂರು ದಕ್ಷಿಣ: ರಾಮನಗರ ಸರ್ಕಾರಿ ಜಿಲ್ಲಾಸ್ಪತ್ರೆಯ ಯುರಾಲಜಿ ವಿಭಾಗದ ವೈದ್ಯ ಡಾ. ವಿಶ್ವನಾಥ್ ಆರ್. ವಿರುದ್ಧ ಬಡ ರೋಗಿಗಳಿಂದ ಲಂಚ ಪಡೆಯುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಮೂತ್ರಪಿಂಡದ ಕಲ್ಲು ಶಸ್ತ್ರಚಿಕಿತ್ಸೆಗೆ ಬರುವ ರೋಗಿಗಳಿಂದ ತಲಾ ₹30 ಸಾವಿರ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎನ್ನಲಾಗಿದೆ. ಹಣ ನೀಡದವರಿಗೆ ಚಿಕಿತ್ಸೆ ನೀಡದೆ ವಾಪಸ್ ಕಳುಹಿಸುತ್ತಿದ್ದಾರೆ ಎಂಬ ಆರೋಪವೂ ಇದೆ. ಈ ಹಿಂದೆ ಲೋಕಾಯುಕ್ತ ಹಾಗೂ ಆರೋಗ್ಯ ಇಲಾಖೆಯ ಮೇಲಾಧಿಕಾರಿಗಳು ಎಚ್ಚರಿಕೆ ನೀಡಿದ್ದರೂ ಲಂಚದ …
Read More »
BigTv News
September 9, 2026
Breaking News
ಬೆಂಗಳೂರು: ಬಾಣಸವಾಡಿ ಠಾಣೆ ಪೊಲೀಸರು ಸುಮಾರು 300 ಕಿ.ಮೀ. ಚೇಸ್ ಮಾಡಿ ಕುಖ್ಯಾತ ಮನೆಗಳ್ಳರಾದ ದೊಡ್ಡಬಳ್ಳಾಪುರದ ಗಂಗಾಧರ್ (40) ಹಾಗೂ ಕೊರಟಗೆರೆಯ ಬಸವರಾಜು (35) ಅವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ₹77.50 ಲಕ್ಷ ಮೌಲ್ಯದ 470 ಗ್ರಾಂ ಚಿನ್ನಾಭರಣ, 886 ಗ್ರಾಂ ಬೆಳ್ಳಿ ವಸ್ತುಗಳು, ₹3 ಲಕ್ಷ ನಗದು ಹಾಗೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಎಚ್‌ಬಿಆರ್ ಲೇಔಟ್‌ನ ನಿವಾಸಿಯೊಬ್ಬರು ಕುಟುಂಬದೊಂದಿಗೆ ಹೊರಗೆ ಹೋಗಿದ್ದ ವೇಳೆ ಮನೆಯ ಬಾಗಿಲು ಮುರಿದು ₹14 ಲಕ್ಷ ಹಣವಿದ್ದ …
Read More »
BigTv News
September 9, 2026
Breaking News
ಮಂಡ್ಯ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಾಗಮಂಗಲ ತಾಲೂಕಿನ ದೇವಿರಹಳ್ಳಿ ಜಂಕ್ಷನ್ ಬಳಿ ನಡೆದಿದೆ. ಕಬ್ಬಿಣದ ಕಂಬಗಳನ್ನು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್ ಅನ್ನು ಬಸ್ ಓವರ್‌ಟೇಕ್ ಮಾಡಲು ಯತ್ನಿಸಿದಾಗ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಬ್ಬಿಣದ ಕಂಬಗಳು ಬಸ್ಸಿನೊಳಗೆ ನುಗ್ಗಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಲವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ …
Read More »
BigTv News
September 9, 2026
Breaking News
ಬೆಂಗಳೂರು, ಸೆ. 9: ಪತ್ನಿಯನ್ನು ಕೊಲೆ ಮಾಡಿದ ಆಟೋ ಚಾಲಕನೊಬ್ಬ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ವಿಭೂತಿಪುರದಲ್ಲಿ ನಡೆದಿದೆ. ಶ್ರುತಿ (35) ಅವರನ್ನು ಕೊಲೆ ಮಾಡಿದ ಪತಿ ರಾಘವೇಂದ್ರ (38) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಾವಣಗೆರೆ ಮೂಲದ ಶ್ರುತಿ ಹಾಗೂ ರಾಘವೇಂದ್ರ ಅವರಿಗೆ 15 ವರ್ಷಗಳ ಹಿಂದೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಮಕ್ಕಳು ದಾವಣಗೆರೆಯಲ್ಲಿರುವ ಅಜ್ಜಿಯ ಮನೆಯಲ್ಲಿ ವಾಸವಾಗಿದ್ದು, ದಂಪತಿ ಇಬ್ಬರೇ ವಿಭೂತಿಪುರದ ಬಾಡಿಗೆ ಮನೆಯಲ್ಲಿ …
Read More »
BigTv News
September 9, 2026
Breaking News
ರಾಯಚೂರು: ಮೆಡಿಕಲ್ ವಿದ್ಯಾರ್ಥಿಗಳು ಹಾಗೂ ಯುವಕ-ಯುವತಿಯರನ್ನು ಗುರಿಯಾಗಿಸಿಕೊಂಡು ಫೋಟೋ, ವಿಡಿಯೋ ತೆಗೆದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಮೂವರ ಗ್ಯಾಂಗ್ ಅನ್ನು ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುರೇಶ್, ತೌಶೀಫ್ ಹಾಗೂ ಓರ್ವ ಅಪ್ರಾಪ್ತನನ್ನು ವಶಕ್ಕೆ ಪಡೆಯಲಾಗಿದೆ. ಡಾಬಾಗೆ ಸ್ನೇಹಿತೆಯೊಂದಿಗೆ ತೆರಳಿದ್ದ ಮೆಡಿಕಲ್ ವಿದ್ಯಾರ್ಥಿಯನ್ನು ಹಿಂಬಾಲಿಸಿದ್ದ ಆರೋಪಿಗಳು, ಫೋಟೋ-ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ₹30 ಸಾವಿರ ನಗದು ಪಡೆದಿದ್ದರು. ಬಳಿಕ ಮತ್ತಷ್ಟು ಹಣಕ್ಕಾಗಿ ಪೀಡಿಸಿದ್ದರು. ಪೊಲೀಸರಿಗೆ ಸಿಕ್ಕಿಬೀಳುವ ಭಯದಿಂದ ಆರೋಪಿಗಳು ಕೇವಲ …
Read More »