Breaking News

Breaking News

ಎಸ್ಟೀಮ್‌ ಮಾಲ್‌ ಎದುರು ಸ್ಟಾಪ್‌, ಬಸ್‌ ಜೊತೆ ಪ್ರಯಾಣಿಕರನ್ನೂ ಸೀಜ್‌ ಮಾಡಿದ ಟ್ರಾಫಿಕ್‌ ಪೊಲೀಸ್‌!

ಸ್ಟಾಪ್‌ ಇಲ್ಲದ ಕಡೆ ಬಸ್‌ ನಿಲ್ಲಿಸಿದ್ದಕ್ಕಾಗಿ ಟ್ರಾಫಿಕ್‌ ಪೊಲೀಸ್‌ ಬಸ್‌ ಜೊತೆ, ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನೂ ಸೀಜ್‌ ಮಾಡಿದ ಘಟನೆ ನಡೆದಿದೆ. ಸಂಜಯ್‌ ನಗರ ಟ್ರಾಫಿಕ್‌ ಪೊಲೀಸರ ದುಂಡಾವರ್ತನೆಗೆ ಪ್ರಯಾಣಿಕರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದರಿಂದಾಗಿ ಕಚೇರಿಗಳಿಗೆ ತೆರಳಬೇಕಿದ್ದ ಪ್ರಯಾಣಿಕರಿಗೆ ಭಾರೀ ಸಮಸ್ಯೆ ಉಂಟಾಗಿದೆ. ಬೆಂಗಳೂರಿನ ಟ್ರಾಫಿಕ್‌ ಪೊಲೀಸರ ಅವಾಂತರಕ್ಕೆ ಕೊನೆಯೇ ಇಲ್ಲ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More »

ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಇಬ್ಬರು ಸಾವು.

ರಾಜ್ಯದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಇಬ್ಬರು ವ್ಯಕ್ತಿಗಳು ಹೃದಯಾಘಾತದಿಂದ ಸಾವನ್ನಪ್ಪಿರುವಂತಹ ಎರಡು ಪ್ರತ್ಯೇಕ ಘಟನೆಗಳು ಮಂಡ್ಯ ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆದಿವೆ.ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮಂಜುನಾಥ್ ಮೃತ ವ್ಯಕ್ತಿ. ಕೆ.ಆರ್.ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಘಟನೆ ನಡೆದಿದೆ.

Read More »

ನಾಗವಲ್ಲಿ ಹಾಡಿಗೆ ಡ್ಯಾನ್ಸ್: ಹೃದಯಾಘಾತದಿಂದ ವ್ಯಕ್ತಿ ಸಾವು.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ಕೂಡ ನಿನ್ನೆ ರಾತ್ರಿ ಘಟನೆ ನಡೆದಿದೆ. ಗಣೇಶ ವಿಸರ್ಜನೆ ವೇಳೆ ನಾಗವಲ್ಲಿ ಹಾಡಿಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ವ್ಯಕ್ತಿಗೆ ಹೃದಯಾಘಾತ ಉಂಟಾಗಿ ಮೃತಪಟ್ಟಿದ್ದಾರೆ. ಲಕ್ಷ್ಮಿಪತಿ (40) ಮೃತ ವ್ಯಕ್ತಿ.ಗಣೇಶ ವಿಸರ್ಜನೆ ಹಿನ್ನಲೆ ಗ್ರಾಮಸ್ಥರು ಡ್ಯಾನ್ಸ್​​ ಮಾಡುತ್ತಿದ್ದರು. ಲಕ್ಷ್ಮಿಪತಿ ಕೂಡ ಡ್ಯಾನ್ಸ್ ಮಾಡುತ್ತಿದ್ದು, ಹಠಾತ್ ಹೃದಯಾಘಾತ ಸಂಭವಿಸಿದ್ದು, ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಲಕ್ಷ್ಮಿಪತಿ ಗ್ರಾಮದಲ್ಲಿ ಕೃಷಿ ಮಾಡಿಕೊಂಡು ಜೀವನ‌ ನಡೆಸುತ್ತಿದ್ದರು. ಹೆಂಡತಿ ಮತ್ತು …

Read More »

ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್​​​ನಿಂದ ಬಿದ್ದು ವ್ಯಕ್ತಿ ಸಾವು.

ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್​​​ನಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ನಡೆದಿದೆ. ಆಟೋ ರಾಜು(34) ಮೃತ ವ್ಯಕ್ತಿ. ಗ್ರಾಮದಲ್ಲಿ ಗಣಪತಿ ವಿಸರ್ಜನೆಗಾಗಿ ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ ಮಾಡಲಾಗುತ್ತಿತ್ತು.

Read More »

ಪಟಾಕಿ ಸಿಡಿದು ಬಾಲಕ ಸಾವು ಕೇಸ್​: ಆಯೋಜಕರ ವಿರುದ್ಧ ಎಫ್​ಐಆರ್, ಪಟಾಕಿ ಬಳಕೆ ನಿಷೇಧ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಪ್ರಕರಣ ಹಿನ್ನಲೆ ಸಾರ್ವಜನಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಟಾಕಿ ಬಳಕೆ ನಿಷೇಧಿಸಿ ಬೆಂಗಳೂರು ಗ್ರಾಮಾಂತರ ಡಿಸಿ ಬಸವರಾಜ್ ಆದೇಶಿಸಿದ್ದಾರೆ. ಒಂದು ವೇಳೆ ಪಟಾಕಿ ಬಳಕೆ‌ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ. ದೊಡ್ಡಬಳ್ಳಾಪುರದ ಮುತ್ತೂರಿನಲ್ಲಿ ಗಣೇಶ ವಿಸರ್ಜನೆ ವೇಳೆ‌ ಪಟಾಕಿ ಸಿಡಿದು ಬಾಲಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆಯೋಜಕರ ವಿರುದ್ಧ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

Read More »

ರೋಣ | ಮಸೀದಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ: ಮುಸ್ಲಿಂ ಯುವಕರಿಂದಲೇ ಪೂಜೆ.

ಸಂದಿಗವಾಡ ಗ್ರಾಮದಲ್ಲಿ ಮಸೀದಿಯಲ್ಲಿಯೇ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದು, ನಿತ್ಯವೂ ಮುಸ್ಲಿಂ ಯುವಕರೇ ಮೂರ್ತಿ ಪೂಜೆ ನಡೆಸುವ ಮೂಲಕ ಗಮನಸೆಳೆದಿದ್ದಾರೆ.ಗ್ರಾಮದಲ್ಲಿ ಹಬ್ಬ, ಜಾತ್ರೆ, ಉತ್ಸವಗಳ ಆಚರಣೆಗೆ ಜಾತಿ ಭೇದವಿಲ್ಲ.ಗಣೇಶ ಚತುರ್ಥಿಯಂದು ಅದ್ದೂರಿ ಮೆರವಣಿಗೆಯಲ್ಲಿ ಮುಸ್ಲಿಂ ಯುವಕರೇ ಗಣೇಶನ ಮೂರ್ತಿ ತಂದು ಮಸೀದಿಯಲ್ಲಿ ಪ್ರತಿಷ್ಠಾಪಿಸಿದ್ದಾರೆ. ಮುಸ್ಲಿಂ ಯುವಕರೇ ನಿತ್ಯವೂ ಅವರೇ ಪೂಜೆ, ಪ್ರಾರ್ಥನೆ ಮಾಡುವುದು ವಿಶೇಷ‌. ಗಣೇಶ ಸ್ತೋತ್ರಗಳನ್ನು ನಿರರ್ಗಳವಾಗಿ ಹೇಳುತ್ತಾರೆ.

Read More »

ಕುಟುಂಬವ ತೊರೆದು ಲವರ್​ ಜತೆ ಹೊರಟ ತಾಯಿಯನ್ನು ಪರಿ ಪರಿಯಾಗಿ ಬೇಡಿದ ಮಕ್ಕಳು.

ಗಂಡನನ್ನು ತೊರೆದು ಪ್ರೇಮಿಯ ಜತೆ ಹೊರಡಲು ಸಿದ್ಧಳಾಗುತ್ತಾಳೆ. ಆ ನೋವಿನ ಕ್ಷಣದಲ್ಲಿ ಮಕ್ಕಳು ತಾಯಿಯನ್ನು ಕಳೆದುಕೊಳ್ಳಲು ಇಷ್ಟವಿಲ್ಲದೆ. ಹೋಗಬೇಡಮ್ಮ ನೀನು ನಮಗೆ ಬೇಕು, ಇಲ್ಲೇ ಇದ್ದುಬಿಡು ಎಂದು ಬೇಡಿಕೊಳ್ಳುತ್ತಿರುವ ದೃಶ್ಯ ಕಣ್ಣಂಚಲ್ಲಿ ನೀರು ತರದೆ ಬಿಡದು. ತಾಯಿ ದೂರ ಹೋದಾಗ ಮಕ್ಕಳು ಹತಾಶರಾಗಿ ಬೇಡಿಕೊಳ್ಳುವುದನ್ನು ತೋರಿಸುವ ವೈರಲ್ ವಿಡಿಯೋದಲ್ಲಿ ತಮ್ಮ ಅಮ್ಮನನ್ನುಅಲ್ಲೇ ಉಳಿಸಿಕೊಳ್ಳಲು ಸಾಧ್ಯವಾಗದೆ ಹತಾಶರಾಗಿರುವ ಮಕ್ಕಳನ್ನು ಕಾಣಬಹುದು.ಕೊನೆಯ ಅವಕಾಶಕ್ಕಾಗಿ ಸಣ್ಣ ದನಿಗಳು ಬೇಡಿಕೊಂಡಾಗ ಕಣ್ಣೀರು ಧಾರೆಯಾಗಿ ಹರಿಯಿತು.ಮಿಸ್ ಮೋಹಿನಿ …

Read More »

ರಾಯಚೂರು : ಪತ್ನಿಯ ಕತ್ತು ಸೀಳಿ ಕೊಂದ ಗಂಡ ಯಲ್ಲಪ್ಪ!

ಮಂಚಕ್ಕೆ ಬರಲು ಹಿಂದೇಟು ಹಾಕಿದ್ದ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ದೇಸಾಯಿ ಬೋಗಾಪುರ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. 31 ವರ್ಷದ ಗಂಗಮ್ಮ ಗಂಡನಿಂದ ಕೊಲೆಯಾದ ಮಹಿಳೆ. ಪತ್ನಿಯನ್ನು ಕೊಲೆಗೈದಿರುವ ಗಂಡ ಯಲ್ಲಪ್ಪನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

Read More »

ಕಾಡಾನೆ ಹಾವಳಿ ನಿಯಂತ್ರಣಕ್ಕೆ ನಿರ್ಮಿಸಿದ ಟ್ರಂಚ್‌ಗೆ ಬಿದ್ದು ಯುವಕ ಸಾವು.

ಆಡಿನಕೊಟ್ಟಿಗೆ ವ್ಯಾಪ್ತಿಯಲ್ಲಿ ಆನೆ ನಿಯಂತ್ರಣ ಟ್ರಂಚ್ ತೆಗೆಯುವಾಗ ಗ್ರಾಮಸ್ಥರು ವಿರೋಧಿಸಿದ್ದರು. ಮನೆಗಳ ಸಮೀಪ ಟ್ರಂಚ್ ತೆಗೆಯದಂತೆ ಆಗ್ರಹಿಸಿದ್ದರು. ಈಗ ಟ್ರಾಂಚ್ ಗೆ ಬಿದ್ದು ನಾಗರಾಜ್ ಮೃತಪಟ್ಟಿದ್ದು, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬರಬೇಕು ಎಂದು ಗಾಮಸರು ಆಗಹಿಸಿದ್ದಾರೆ. ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More »

ಹುಟ್ಟುಹಬ್ಬದ ಉಡುಗೊರೆಗಾಗಿ ಜಗಳ, ಪತ್ನಿ ಹಾಗೂ ಅತ್ತೆಯನ್ನು ಕೊಲೆಗೈದ ವ್ಯಕ್ತಿ.

ಹುಟ್ಟುಹಬ್ಬದ ಉಡುಗೊರೆ ವಿಚಾರವಾಗಿ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬ ಪತ್ನಿ ಹಾಗೂ ಅತ್ತೆಯನ್ನು ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ರೋಹಿಣಿಯಲ್ಲಿ ಶನಿವಾರ ಮಗನ ಹುಟ್ಟುಹಬ್ಬದ ಸಂದರ್ಭದಲ್ಲಿ ಕುಟುಂಬದ ಎರಡೂ ಕಡೆಯವರ ನಡುವೆ ವಿನಿಮಯವಾದ ಉಡುಗೊರೆಗಳ ವಿಚಾರದಲ್ಲಿ ಉಂಟಾದ ಜಗಳಕ್ಕೆ ಇಬ್ಬರನ್ನು ಹತ್ಯೆ ಮಾಡಿದ್ದಾನೆ.ತಕ್ಷಣ ಅವರು ಇತರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿ ಬೀಗ ಒಡೆದಾಗ, ಕೋಣೆಯೊಳಗೆ ತನ್ನ ತಾಯಿ ಮತ್ತು ಸಹೋದರಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡರು. ಪ್ರಿಯಾಳ …

Read More »