BigTv News
August 31, 2025
Breaking News
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ , ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದಾಗಿದೆ. ಹೀಗಾಗಿ, ಈ ಏಳೂ ಮಂದಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.ಇದೀಗ ಪವಿತ್ರಾ ಗೌಡ ಕೆಳ ಹಂತದ ಕೋರ್ಟ್ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಅವರು ದಿಂಬು-ಹಾಸಿಗಾಗಿ ಬೇಡಿಕೆ ಇಟ್ಟಿದ್ದಾರೆ. ಸದ್ಯ ಇಬ್ಬರ ಅರ್ಜಿ ವಿಚಾರಣೆಯ ತೀರ್ಪು ಸೆಪ್ಟೆಂಬರ್ 2ಕ್ಕೆ ಹೊರ ಬೀಳಲಿದೆ.
Read More »
BigTv News
August 31, 2025
Breaking News
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಕೆಂಗೇರಿಯಲ್ಲಿರುವ ರಾಘವೇಂದ್ರ ಸ್ವಾಮಿ ಮಠದ ಅರ್ಚಕ ಗುರುರಾಜ್ ಅವರನ್ನು ಪೊಲೀಸರು ಬಂಧನ ಮಾಡಿದ್ದಾರೆ.ಈ ಬಾರಿಯ ದಸರಾ ಉದ್ಘಾಟನೆಗೆ ಹಿರಿಯ ಸಾಹಿತಿ ಭಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದ್ದರು. ಸಿಎಂ ವಿರುದ್ಧ ವಾಗ್ದಾಳಿ ಮಾಡುವ ಭರದಲ್ಲಿ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದರು. ಅವರು ಸಿಎಂ ಅವರಿಗೆ …
Read More »
BigTv News
August 31, 2025
Breaking News
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಂದಿದ್ದ ಬೆಂಗಳೂರಿನ ಮಹಿಳೆಯೊಬ್ಬರು ಇಲ್ಲಿನ ಸೌಪರ್ಣಿಕಾ ನದಿಗೆ ಬಿದ್ದು ಮೃತಪಟ್ಟಿದ್ದಾರೆ. ಅವರನ್ನು ಬೆಂಗಳೂರು ತ್ಯಾಗರಾಜನಗರ ನಿವಾಸಿ ಸಿ.ಆರ್.ಗೋವಿಂದರಾಜು-ವಿಮಲಾ ಎಂಬುವರ ಪುತ್ರಿ ವಸುಧಾ ಚಕ್ರವರ್ತಿ (46) ಎಂದು ಗುರುತಿಸಲಾಗಿದೆ.ವಸುಧಾ ಚಕ್ರವರ್ತಿ ಅವರಿಗೆ ಚೆನ್ನಾಗಿ ಈಜು ಬರುತ್ತಿದ್ದು, ಅವರು ಈಜುವುದಕ್ಕೆಂದು ನದಿಗೆ ಇಳಿದು ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿರಬಹುದೇ ಅಥವಾ ಅವರು ನದಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದೇ ಎಂಬುದು ಖಚಿತವಾಗಿಲ್ಲ.
Read More »
BigTv News
August 31, 2025
Breaking News
ಚೆರ್ಕಳ ಪಾಡಿಯಲ್ಲಿ ಆರನೇ ತರಗತಿ ವಿದ್ಯಾರ್ಥಿ ನೀರಿನ ಸೆಳೆತಕ್ಕೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಮುಟ್ಟತ್ತೋಡಿ ಗ್ರಾಮದ ಕಲ್ಲಕಟ್ಟ ಬೆಳ್ಳೂರಡ್ಕದ ಹಸೈನಾರ್ ಅವರ ಪುತ್ರ ಮಿಥ್‌ಲಾಜ್ (11) ಸಾವಿಗೀಡಾದ ಬಾಲಕ. ಸ್ನೇಹಿತರೊಂದಿಗೆ ಶನಿವಾರ ಸಂಜೆ ತೋಡಿನಲ್ಲಿ ಈಜಾಡಲು ಹೋಗಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ನೀರು ಪಾಲಾಗಿದ್ದು, ವಿದ್ಯಾನಗರ ಪೊಲೀಸ್, ಅಗ್ನಿಶಾಮಕ ದಳ ಶೋಧ ನಡೆಸಿದಾಗ ಮೃತದೇಹ ಪತ್ತೆಯಾಯಿತು. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
Read More »
BigTv News
August 31, 2025
Breaking News
ಗಡಿಭಾಗದಲ್ಲಿರುವ ಕೃಷ್ಣಾ ನದಿ ತೀರದಲ್ಲಿರುವ ಮೇಲಿನಗಡ್ಡಿ, ಜಂಗಿನ ಗಡ್ಡಿ ಸ್ಥಳಕ್ಕೆ ಯಾದಗಿರಿ ಪಶುಪಾಲನ ಉಪನಿರ್ದೇಶಕ ರಾಜು ದೇಶಮುಖ ಹಾಗೂ ಪಶುವೈದ್ಯಾಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.ಒಟ್ಟು 187 ಕುರಿಗಳು ನದಿಯಲ್ಲಿ ಕೊಚ್ಚಿ ಹೋಗಿದ್ದು ಕೆಲವು ಅಲ್ಲಲ್ಲಿ ಕೃಷ್ಣಾ ನದಿ ತೀರದ ಕಲ್ಲುಬಂಡೆಗಳ ಮಧ್ಯೆ ಮೃತ ಕುರಿಗಳ ಕಳೆಬರ ಪತ್ತೆಯಾಗಿದ್ದರೆ ಬಹುತೇಕ ನದಿಯಲ್ಲಿ ಕೊಚ್ಚಿಹೋಗಿವೆ ಎಂದು ಮಾಹಿತಿ ತಿಳಿದು ಬಂದಿದೆ.
Read More »
BigTv News
August 31, 2025
Breaking News
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ವಜ್ಜಲ್ ಗ್ರಾಮದಲ್ಲಿ ನಡೆದ ಘಟನೆಯೊಂದು ಸ್ಥಳೀಯವಾಗಿ ಚರ್ಚೆಗೆ ಗ್ರಾಸವಾಗಿದೆ. ಗ್ರಾಮದಲ್ಲಿ ನಡೆಯುತ್ತಿದ್ದ ಇಸ್ಪೀಟ್ ಆಟದ ಅಡ್ಡೆಯ ಮೇಲೆ ಹುಣಸಗಿ ಪೊಲೀಸರು ದಾಳಿ ನಡೆಸಿದ ವೇಳೆ, ಆಟದಲ್ಲಿ ತೊಡಗಿಕೊಂಡಿದ್ದ ಮಂಜು ಮಡಿವಾಳ (35) ಎಂಬಾತ ಅಕಸ್ಮಾತ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
Read More »
BigTv News
August 31, 2025
Breaking News
ಆನೆ ನಿಯಂತ್ರಣಕ್ಕೆ ಅರಣ್ಯ ಇಲಾಖೆ ತೆಗೆದಿದ್ದ ಗುಂಡಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕು ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಡಿನಕೊಟ್ಟಿಗೆ ಗ್ರಾಮದಲ್ಲಿ ನಡೆದಿದೆಮೃತರನ್ನು ನಾಗರಾಜ್ (32) ಎಂದು ಗುರುತಿಸಲಾಗಿದೆ. ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
Read More »
BigTv News
August 31, 2025
Breaking News
ಯಾದಗಿರಿಯ ಶಹಾಪುರದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಹೆರಿಗೆ ಪ್ರಕರಣ ಸಂಬಂಧ ಪ್ರಮುಖ A1 ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಹಾಸ್ಟೆಲ್ ವಾರ್ಡನ್ ಸೇರಿ ಐವರ ವಿರುದ್ಧ ಕೇಸ್ ದಾಖಲಾಗಿತ್ತು.ಸುರಪುರ ತಾಲೂಕಿನ ಕಕ್ಕೇರ ಗ್ರಾಮದ ಪರಮಣ್ಣ(30) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.ಆರೋಪಿ ಪರಮಣ್ಣ, ಅಪ್ರಾಪ್ತ ಬಾಲಕಿ ಜೊತೆ ಸಂಬಂಧ ಬೆಳೆಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕೃತ್ಯದ ಬಗ್ಗೆ ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಕೆ ಕೂಸದ್ಯ ಇಡೀ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಶಹಾಪುರ …
Read More »
BigTv News
August 31, 2025
Breaking News
ಅಪ್ರಾಪ್ತ ಬಾಲಕಿಯೊಂದಿಗೆ ಹಸೆಮಣೆಯೇರಿ, ಬಳಿಕ ಬಾಲಕಿಯ ನಕಲಿ ಪ್ರಮಾಣಪತ್ರವನ್ನು ಬಿಡುಗಡೆ ಮಾಡುವ ಮೂಲಕ ಕಳ್ಳಾಟವಾಡಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷನಿಗೆ ಈಗ ಬಂಧನ ಭೀತಿ ಎದುರಾಗಿದೆ. ಬಸ್ಸಾಪುರ ಗ್ರಾಮ ಪಂಚಯಿತಿ ಅಧ್ಯಕ್ಷ ಭೀಮಶಿ ಕಾಲಿಮಣಿ ಎಂಬಾತನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹುಕ್ಕೇರಿ ತಾಲೂಕಿನ ಯಮಕನಮರಡಿ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. 2023ರ ನ.5 ರಂದು ಅಪ್ರಾಪ್ತೆ ಜೊತೆಗೆ ಭೀಮಶಿ ಕಾಲಿಮಣಿ ವಿವಾಹವಾಗಿದ್ದ ಎನ್ನಲಾಗಿದೆ. ಬಂಧನದ ಭೀತಿಯಿಂದ ತಪ್ಪಿಸಿಕೊಳ್ಳಲು ಭೀಮಶಿ ಕಳ್ಳಾಟ …
Read More »
BigTv News
August 31, 2025
Breaking News
ಸಾಮಾಜಿಕ ಜಾಲತಾಣ ಫೇಸ್‌ಬುಕ್ ನಲ್ಲಿ ಪರಿಚಯವಾದ ಯುವತಿ ಮೇಲೆ ಅತ್ಯಾಚಾರ ಎಸಗಿದಲ್ಲದೆ, ಆಕೆಯ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಯುವಕನನ್ನು ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರನಗರ ನಿವಾಸಿ ನಿರಂಜನ್(30) ಬಂಧಿತ.ಮತ್ತೊಂದೆಡೆ ನಿರಂಜನ್ ತಂದೆ ರಾಜಶೇಖರ್ ವಿರುದ್ಧವೂ ಇದೇ ಯುವ ತಿ ಯಿಂದ ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
Read More »