BigTv News
August 20, 2025
Breaking News
ಬೆಂಗಳೂರು ಗ್ರಾಮದ ಪಡುಬೆಟ್ಟು ರಸ್ತೆ ಬದಿ ನಿಂತಿದ್ದ ಅಲಿಮಮ್ಮ (65) ಎಂಬವರ ಕುತ್ತಿಗೆಯಿಂದ 10 ಪವನ್ ತೂಕವಿರುವ ಸರವನ್ನು ಸೆಳೆದೊಯ್ದ ಆರೋಪಿ ಸುಳ್ಯದ ಅಲೆಟ್ಟಿ ನಿವಾಸಿ ಅಬ್ದುಲ್ ರಹಿಮಾನ್ (31) ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ನೆಕ್ಕಿಲಾಡಿಯಲ್ಲಿ ಬಂಧಿಸಿ ಚಿನ್ನಾಭರಣವನ್ನು ವಶಪಡಿಸಿಕೊಂಡಿರುತ್ತಾರೆ ಎಂದು ತಿಳಿದುಬಂದಿದೆ.ದರೋಡೆಗೆ ಬಳಸಿದ ಬೈಕ್ ಮತ್ತು ಅಂದಾಜು 4.54 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರು ನಗರದ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಿಂದ ಕೃತ್ಯಕ್ಕೆ ಬಳಸಿದ …
Read More »
BigTv News
August 20, 2025
Breaking News
ಭಾರೀ ಮಳೆಯಿಂದಾಗಿ ತತ್ತರಿಸಿರುವ ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ, ವಿದ್ಯುತ್ ಪೂರೈಕೆಯ ಕೊರತೆಯಿಂದಾಗಿ ಮೋನೋ ರೈಲೊಂದು ಮಾರ್ಗಮಧ್ಯೆ ಕೆಟ್ಟುನಿಂತ ಘಟನೆ ನಡೆದಿದೆ. ಮೋನೋ ರೈಲಿನಲ್ಲಿ 500ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು.ಬಳಿಕ ಅಗ್ನಿಶಾಮಕ ದಳ ಮತ್ತು ರಕ್ಷಣಾ ಅಧಿಕಾರಿಗಳು ಕ್ರೇನ್ ಬಳಸಿ ರೈಲಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಣೆಗೆ ಮಾಡಲಾಗಿದೆ.ರೈಲು ತನ್ನಕಾರ್ಯಾಚರಣೆ ನಿಲ್ಲಿಸಲು ವಿದ್ಯುತ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯ ಕಾರಣ” ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
Read More »
BigTv News
August 20, 2025
Breaking News
ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಬಿಮ್ಸ್ ನ ವಸತಿ ನಿಲಯದಲ್ಲಿ ಔಷಧಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಬಿಮ್ಸ್ ನಲ್ಲಿ ನಡೆದಿದೆ. ಬೆಂಗಳೂರು ಮೂಲದ ವಿದ್ಯಾರ್ಥಿನಿ ಪ್ರಿಯಾ (27) ಮೃತ ವಿದ್ಯಾರ್ಥಿನಿಯಾಗಿದ್ದಾಳೆ.ಸೋಮವಾರ ಸಂಜೆಯವರೆಗೂ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ತಪಾಸಣೆ ಕುರಿತು ಅಧ್ಯಯನ ಮಾಡಿದ್ದ ಪ್ರಿಯಾ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೆಲ ದಿನಗಳ ಹಿಂದೆಯೂ ಪ್ರಿಯಾ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ತಿಳಿದು ಬಂದಿದೆ.
Read More »
BigTv News
August 20, 2025
Breaking News
ದೇವಾಲಯದಲ್ಲಿ ಕಳ್ಳತನ ಮಾಡಿದ ಆರೋಪದ ಮೇಲೆ ಬಂಧಿತನಾಗಿದ್ದ ಆರೋಪಿ ಪೊಲೀಸ್ ಠಾಣೆಯಲ್ಲೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಂತಹ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕೆಸ್ತೂರು ಬಳಿಯ ದುಂಡನಹಳ್ಳಿ ಗ್ರಾಮದ ರಮೇಶ್ ಎಂದು ಗುರುತಿಸಲಾಗಿದೆ. ಕಳ್ಳತನದ ಆರೋಪದ ಮೇಲೆ ರಮೇಶ್‌ನನ್ನು ಎಂಕೆ ದೊಡ್ಡಿ ಪೊಲೀಸರು ಬಂಧಿಸಿದ್ದರು. ಆದರೆ ಬಳಿಕ ರಮೇಶ್ ಠಾಣೆಯ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
Read More »
BigTv News
August 20, 2025
Breaking News
ರಾಜ್ಯ ಸರ್ಕಾರ ಒಳಮೀಸಲಾತಿಯನ್ನು ಜಾರಿಗೆ ತರಬಾರದು ಎಂದು ಆಗ್ರಹಿಸಿ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳನ್ನು ಒಳಗೊಂಡ ವಿಜಯನಗರ ಜಿಲ್ಲಾ ಒಳಮೀಸಲಾತಿ ಹೋರಾಟ ಸಮಿತಿ ವತಿಯಿಂದ ಬುಧವಾರ ಇಲ್ಲಿ ಪ್ರತಿಭಟನೆ ನಡೆಯಿತು.ಟಿ.ಬಿ.ಡ್ಯಾಂ ರಸ್ತೆಯು ಸಣ್ಣಕ್ಕಿ ವೀರಭದ್ರೇಶ್ವರ ದೇವಸ್ಥಾನದ ಬಳಿಯಿಂದ ಆರಂಭವಾದ ಕೈಯಲ್ಲಿ ಪೊರಕೆ ಹಿಡಿದ, ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪುನೀತ್ ರಾಜ್‌ಕುಮಾರ್ ವೃತ್ತಕ್ಕೆ ಬಂತು.ವರದಿಯನ್ನು ಏಕಪಕ್ಷೀಯವಾಗಿ ಅಂಗೀಕರಿಸಬಾರದು ಎಂದು ಒಕ್ಕೊರಲ ಒತ್ತಾಯ ಮಾಡಲಾಯಿತು.
Read More »
BigTv News
August 20, 2025
Breaking News
ಶಾಲೆಯಲ್ಲಿ ಮೆಟ್ಟಿಲುಗಳನ್ನು ಇಳಿಯುತ್ತಿದ್ದಾಗ ವಿದ್ಯಾರ್ಥಿಯೊಬ್ಬ ಇನ್ನೊಬ್ಬನಿಗೆ ಮೊಣಕೈಯಿಂದ ಹೊಡೆದಿದ್ದಾನಂತೆ. ಆ ಬಳಿಕ ಈ ಇಬ್ಬರು ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದೆ. ಈ ಗಲಾಟೆಯು ವಿಕೋಪಕ್ಕೆ ತಿರುಗಿದ್ದು, ಅವರಲ್ಲಿ ಒಬ್ಬನಿಗೆ ಇನ್ನೊಬ್ಬ ವಿದ್ಯಾರ್ಥಿ ಚಾಕುವಿನಿಂದ ಇರಿದಿದ್ದಾನೆ.ಇತ್ತ ಗಾಯಗೊಂಡ ವಿದ್ಯಾರ್ಥಿಯನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ವಿದ್ಯಾರ್ಥಿಯ ಸಾವಿನ ವಿಚಾರ ತಿಳಿಯುತ್ತಿದ್ದಂತೆಯೇ ಆತನ ಕುಟುಂಬದ ಸದಸ್ಯರು ಶಾಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ತಮ್ಮ ಪ್ರತಿಭಟನೆಗಳ ನಡುವೆ …
Read More »
BigTv News
August 20, 2025
Breaking News
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 94 ಅಂಕಗಳೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿನಿಗೆ ಪೋಷಕರು ವಿವಾಹ ಮಾಡಲು ಯತ್ನಿಸಿದ ವಿದ್ಯಮಾನ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.ವಿಷಯ ತಿಳಿದು ಸ್ಥಳಕ್ಕೆ ಬಂದ ಹಗರಿಬೊಮ್ಮನಹಳ್ಳಿ ತಹಶೀಲ್ದಾರ್, ಪೊಲೀಸರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಬಾಲಕಿಯನ್ನು ರಕ್ಷಿಸಿದ್ದಾರೆ. ಬಾಲಕಿಯನ್ನು ರಕ್ಷಿಸಿ ಆಕೆಗೆ ಕಾಲೇಜೊಂದರಲ್ಲಿ ವಸತಿನಿಯಲಯದ ವ್ಯವಸ್ಥೆ ಮಾಡಿದ್ದಾರೆ.
Read More »
BigTv News
August 20, 2025
Breaking News
ಅರ್ಚನಾ ತಿವಾರಿ ಎಂಬ ತರಬೇತಿ ವಕೀಲೆ ರಕ್ಷಾ ಬಂಧನ ಹಬ್ಬಕ್ಕಾಗಿ ಆಗಸ್ಟ್ ೭ರಂದು ರಾತ್ರಿ ಇಂದೋರ್ ನ ಕಟ್ನೆಗೆ ರೈಲಿನಲ್ಲಿ ಹೊರಟಿದ್ದರು.ರಕ್ಷಾ ಬಂಧನ ಹಬ್ಬಕ್ಕಾಗಿ ಕಟ್ನಾಗೆ ನರ್ಮಾದಾ ಎಕ್ಸ್ ಪ್ರೆಸ್ ರೈಲಿನಲ್ಲಿ ಹೊರಟಿದ್ದ ಅರ್ಚನಾ ಕೊನೆಯದಗಿ ಇಟಾರ್ಸಿ ರೈಲು ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಆ ಬಳಿಕ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ರೈಲ್ವೆ ಪೊಲೀಸರು ತೀವ್ರ ಹುಡುಕಾಟದ ಬಳಿಕ ಇದೀಗ ಅರ್ಚನಾರನ್ನು ನೇಪಾಳ ಗಡಿಯಲ್ಲಿ ಪತ್ತೆ ಮಾಡಿದ್ದಾರೆ.ಸದ್ಯ ಅವರನ್ನು ಭೋಪಾಲ್ …
Read More »
BigTv News
August 20, 2025
Breaking News
ಕಾಲೇಜು ವಿದ್ಯಾರ್ಥಿನಿಯ ಶವ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 48ರ ಪಕ್ಕ ಪತ್ತೆಯಾಗಿದ್ದು , ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಕೊಲೆಯಾದ ಯುವತಿಯನ್ನ ಹಿರಿಯೂರು ತಾಲೂಕಿನ ಕೋವೇರಹಟ್ಟಿ ಗ್ರಾಮದ ವರ್ಷಿತಾ (19) ಎಂದು ಗುರುತಿಸಲಾಗಿದೆ.ಮೃತ ಯುವತಿ ಕಾಲೇಜು ವಿದ್ಯಾರ್ಥಿನಿ ವರ್ಷಿತಾ ಎಂದು ಗೊತ್ತಾಗುತ್ತಿದ್ದಂತೆ ಪೋಷಕರು ಸ್ಥಳಕ್ಕೆ ದಾವಿಸಿದ್ದಾರೆ.ಯುವತಿ ಸಂಪರ್ಕದಲ್ಲಿದ್ದ ಯುವಕ ಚೇತನ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
Read More »
BigTv News
August 20, 2025
Breaking News
ಪ್ರಕರಣವೊಂದರಲ್ಲಿ ಬಂಧನ ವಾರಂಟ್‌ನೊಂದಿಗೆ ಹಾಲಪ್ಪ ಅವರು ಹೆಡ್‌ಕಾನ್‌ಸ್ಟೆಬಲ್ ಮತ್ತು ಕಾನ್‌ಸ್ಟೆಬಲ್ ಜತೆಯಲ್ಲಿ ಇದೇ 17ರಂದು ರಾಜಸ್ಥಾನಕ್ಕೆ ತರಳಿದ್ದರು.ಜೋಧಪುರದಲ್ಲಿ ಅವರಿಗೆ ಹೃದಯಾಘಾತವಾಗಿ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ. ಹೂವಿನಹಡಗಲಿ ತಾಲ್ಲೂಕು ಹಿರೇಹಡಗಲಿಯವರಾದ ಹಾಲಪ್ಪ ಅವರು 1993ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದರು. ಅವರ ಮೃತದೇಹವನ್ನು ಗುರುವಾರ ಇಲ್ಲಿಗೆ ತರುವ ನಿರೀಕ್ಷೆ ಇದ್ದು, ಸ್ವಗ್ರಾಮ ಹಿರೇಹಡಗಲಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Read More »