Breaking News

Breaking News

ಕಾಂತಾರ ಚಾಪ್ಟರ್ 1 ರಲ್ಲಿ ಕನಕವತಿ ಆದ ರುಕ್ಮಿಣಿ ವಸಂತ್ – ಫಸ್ಟ್ ಲುಕ್ ರಿಲೀಸ್

ಇಡೀ ದೇಶದಲ್ಲೇ ಭಾರೀ ಕುತೂಹಲ ಮೂಡಿಸಿರುವ ಕಾಂತಾರ ಚಾಪ್ಟರ್ 1 ಸಿನೆಮಾ ಈಗಾಗಲೇ ಶೂಟಿಂಗ್ ಕಾರ್ಯ ಮುಗಿಸಿದೆ. ಇದೀಗ ಈ ಚಿತ್ರದಲ್ಲಿ ನಟಿ ರುಕ್ಮಿಣಿ ವಸಂತ್ ಕನಕವತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಈ ಶುಭದಿನದಂದು, ಚಿತ್ರತಂಡವು ಅವರ ಫಸ್ಟ್ ಲುಕ್ ರಿಲೀಸ್ ಮಾಡಿದೆ.ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ರಿಷಬ್ ಶೆಟ್ಟಿ ನಿರ್ದೇಶಿಸಿರುವ ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಶೂಟಿಂಗ್ ಸಂಪೂರ್ಣವಾಗಿದ್ದು, ಅಕ್ಟೋಬರ್ 2 ರಂದು ಬಿಡುಗಡೆಯಾಗಲಿದೆ. ನಾಯಕ ನಟ ರಿಷಬ್ …

Read More »

ಬೀಳಗಿ | ಸಮುದಾಯ ಭವನ ನಿರ್ಮಾಣಕ್ಕೆ ₹20 ಲಕ್ಷ: ಶಾಸಕ ಜೆ.ಟಿ. ಪಾಟೀಲ

ಹಡಪದ ಅಪ್ಪಣ್ಣ ಸಮಾಜ ಬಾಂಧವರು ಸಮಾಜದ ಕಾರ್ಯಚಟುವಟಿಕೆಗಳಿಗಾಗಿ ಸಮುದಾಯ ಭವನ ನಿರ್ಮಿಸುವ ಉದ್ದೇಶ ಹೊಂದಿದ್ದು, ಇದಕ್ಕೆ₹20 ಲಕ್ಷ ಅನುದಾನ ನೀಡಲಾಗುವುದು ಎಂದು ಶಾಸಕ ಜೆ.ಟಿ. ಪಾಟೀಲ ಹೇಳಿದರು.ನಿರಂತರ ದುಡಿಮೆ ಕಾಯಕ ಮಾಡುವ ಹಡಪದ ಅಪ್ಪಣ್ಣ ಸಮಾಜ, ನಿತ್ಯ ಕ್ಷೌರಿಕ ವೃತ್ತಿ ಮಾಡಿ ಜೀವನ ಸಾಗಿಸುವರು. ಈ ಸಮಾಜದ ಬಹುತೇಕ ಕುಟುಂಬಗಳಲ್ಲಿ ಜಮೀನು ಇಲ್ಲದೆ ಜೀವನ ಸಾಗಿಸುತ್ತಿರುವರು.ಇಂತಹ ಸಮಾಜದ ಅಭಿವೃದ್ಧಿಗೆ ಸರ್ಕಾರದಿಂದ ಎಲ್ಲ ರೀತಿಯ ಸೌಲಭ್ಯ ನೀಡಲಾಗುವುದು ಜೊತೆಗೆ ಹಡಪದ ಅಪ್ಪಣ್ಣ …

Read More »

ಚಾಮುಂಡಿ ಬೆಟ್ಟದ ತಿರುವಿನಲ್ಲಿ ಮಗುಚಿದ ಬಸ್‌!

ಚಾಮುಂಡಿ ಬೆಟ್ಟದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಸಾರಿಗೆ ಬಸ್ ರಸ್ತೆ ತಡೆಗೋಡೆಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.ನಗರ ಬಸ್ ನಿಲ್ದಾಣದಿಂದ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದ ಬಸ್‌ ಬೆಟ್ಟದ ಮಧ್ಯ ಭಾಗದ ರಸ್ತೆಯಲ್ಲಿನ ಗೆಸ್ಟ್ ಹೌಸ್ ಬಳಿ ಗುರುವಾರ ಸಂಜೆ ಮಗುಚಿ ಬಿದ್ದಿದೆ.ಸ್ಥಳಕ್ಕೆ ಬಂದ ಪೊಲೀಸರು, ಬಸ್ ತೆರವುಗೊಳಿಸಿ ಗಾಯಗೊಂಡಿದ್ದ ಪ್ರಯಾಣಿಕನನ್ನು ಕೆ.ಆರ್ ಆಸ್ಪತ್ರೆಗೆ ದಾಖಲಿಸಿದರು. ಅಪಘಾತದಿಂದ ಕೆಲ ಕಾಲ ಬೆಟ್ಟದ ರಸ್ತೆಯಲ್ಲಿ ಸಂಚಾರ ವ್ಯತ್ಯಯಗೊಂಡಿತು. ಕೆ.ಆರ್ ಸಂಚಾರ …

Read More »

ಮಂಗಳೂರು | ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ; ಮೂವರ ವಿರುದ್ಧ ಪ್ರಕರಣ

ಸಾಮಾಜಿಕ ಜಾಲತಾಣದಲ್ಲಿ ಅಪರಾಧಕ್ಕೆ ಪ್ರೇರಣೆಯಾಗುವಂತೆ ಹೇಳಿಕೆ ನೀಡಿದ, ಅಶ್ಲೀಲವಾಗಿ ಮಾತನಾಡಿದ ಹಾಗೂ ದ್ವೇಷ ಹುಟ್ಟಿಸುವಂತೆ ಹೇಳಿಕೆ ನೀಡಿದ ಆರೋಪದ ಮೇಲೆ ಮೂವರ ವಿರುದ್ಧ ಬೆಳ್ತಂಗಡಿ ಠಾಣೆಯ ಪೊಲೀಸರು ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.ಅಪರಾಧ ಕೃತ್ಯಗಳನ್ನು ನಡೆಸಲು ಪ್ರೇರಣೆಯಾಗುವಂತಹ, ಅಶ್ಲೀಲ ಹಾಗೂ ಸಾರ್ವಜನಿಕರಿಗೆ ಕಿರಿ ಕಿರಿಯುಂಟಾಗುವಂತೆ ಆರೋಪಿ ಗಿರೀಶ್ ಮಟ್ಟಣ್ಣನವರ್ ಮಾತನಾಡಿರುವ ವಿಡಿಯೊವನ್ನು ತಮ್ಮ ಫೇಸ್‌ಬುಕ್‌ನಲ್ಲಿ ಬುಧವಾರ (ಆ.6ರಂದು) ಪ್ರಸಾರಮಾಡಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ನಿವಾಸಿ ಚರಣ್ ಶೆಟ್ಟಿ (32) ದೂರು …

Read More »

ಕಲಬುರಗಿ | ʼಲವ್ ಜಿಹಾದ್ʼ ಆರೋಪ ಸುಳ್ಳು ಎಂದು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ ಯುವತಿ

ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಫಜಲಪುರ ಮೂಲದ ಯುವತಿಯೋರ್ವಳು ಕಾಣೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತಿರುವು ಸಿಕ್ಕಿದ್ದು, ಸ್ವತಃ ಯುವತಿಯೇ ವಿಡಿಯೋ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ.’ಲವ್ ಜಿಹಾದ್’ ಎನ್ನುತ್ತಿರುವ ಆರೋಪ ಸುಳ್ಳು, ʼಹಿಂದುತ್ವ ಸಂಘಟನೆಯವರೇ ನಮ್ಮ ಕುಟುಂಬದವರ ತಲೆ ಕೆಡುಸುತ್ತಿದ್ದಾರೆʼ ಎನ್ನುವ ಮೂಲಕ ಯುವತಿಯು ಆರೋಪವನ್ನು ನಿರಾಕರಣೆ ಮಾಡಿದ್ದಾರೆ.ʼನಾನು ಕಾಣೆಯಾಗಿಲ್ಲ, ನಾನು ಇಷ್ಟಪಟ್ಟಂತೆ ನನ್ನ ಸ್ವ ಇಚ್ಛೆಯಿಂದ ಪ್ರೀತಿಸಿದ ಹುಡುಗನ ಜೊತೆಗೆ ಮದುವೆಯಾಗಿದ್ದೇನೆ. ನಾನು ಕಾಣೆಯಾಗಿದ್ದೇನೆ ಎಂದು …

Read More »

ಸುಧಾಕರ್ ಹೆಸರು ಬರೆದಿಟ್ಟು ಜಿ.ಪಂ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆ!

ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಅವರ ಕಾರು ಚಾಲಕ ಬಾಬು (33) ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸುಧಾಕರ್ ಸಚಿವರಾಗಿದ್ದ ವೇಳೆ ಅವರ ಬೆಂಬಲಿಗರಾದ ನಾಗೇಶ್ ಮತ್ತು ಮಂಜುನಾಥ್ ಕಾಯಂ ಸರ್ಕಾರಿ ಕೆಲಸ ಕೊಡಿಸುತ್ತೇವೆ ಎಂದಿದ್ದರು. ₹40 ಲಕ್ಷ ನೀಡಬೇಕು ಎಂದಿದ್ದರು. ನಾನು ನನ್ನ ಬಳಿ ಇದ್ದ ಹಣದ ಜೊತೆಗೆ ಸಾಲ ಮಾಡಿ ₹25 ಲಕ್ಷ ನೀಡಿದ್ದೆ. ಆದರೆ ಕೆಲಸ ಮಾತ್ರ ಕೊಡಿಸಲಿಲ್ಲ’ ಎಂದು ಡೆತ್ …

Read More »

ಚಿನ್ನ ಖರೀದಿಗೆ ಬಂದು ಮಗುವನ್ನೇ ಬಿಟ್ಟುಹೋದ ಆಧುನಿಕ ಕುಂತಿ!

ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತಿದ್ದ ತಾಯಿ ಬಳಿಕ ತನ್ನ ಮಗು ನಾಪತ್ತೆಯಾಗಿದೆ ಎಂದು ಪೊಲೀಸ್‌ ಠಾಣೆಗೆ ದೂರು ನೀಡಿದ್ದಳು. ಜ್ಯೂವೆಲ್ಲರಿ ಶಾಪ್‌ನಿಂದ ಹೊರಗೆ ಬಂದು ಅಳುತ್ತಾ ನಿಂತಿದ್ದ ಮಗುವನ್ನು ಮಹಿಳೆಯೊಬ್ಬರು ಸಂತೈಸಿ ಕರೆದೊಯ್ದಿದ್ದರು. ಮಗುವಿನ ಪೋಷಕರು ಯಾರೂ ಕಾಣದ ಹಿನ್ನೆಲೆಯಲ್ಲಿ ಮಹಿಳೆ ಆ ಮಗುವನ್ನು ತನ್ನೊಟ್ಟಿಗೆ ಕರೆದೊಯ್ದಿದ್ದಳು. ಹಾಸನ ನಗರದ ಗಾಂಧಿ ಬಜಾರ್‌ನಲ್ಲಿ ಈ ಘಟನೆ ನಡೆದಿದೆ.

Read More »

ಬಳ್ಳಾರಿ: ಬಾಲಕಿಯ ಫೋಟೋ ಸ್ಟೇಟಸ್​ ಇಟ್ಟಿದ್ದಕ್ಕೆ ಗ್ಯಾಂಗ್​ನಿಂದ ವಿದ್ಯಾರ್ಥಿ ಮೇಲೆ ಹಲ್ಲೆ

ಅಪ್ರಾಪ್ತ ಬಾಲಕಿಯ ಫೋಟೋ ವಾಟ್ಸ್‌ಆಪ್ ಸ್ಟೇಟಸ್​ ಇಟ್ಟಿದ್ದಕ್ಕೆ ಯುವಕನ ಮೇಲೆ ಮನಸೋ ಇಚ್ಚೆ ಹಲ್ಲೆ ಮಾಡಿರುವ ಘಟನೆ ಬಳ್ಳಾರಿ ನಗರದ ರೆಡಿಯೋ ಪಾರ್ಕ್​ ಬಳಿಯ ಐಟಿಐ ಕಾಲೇಜು ಆವರಣದಲ್ಲಿ ನಡೆದಿದೆ. ದೊಡ್ಡಬಸವ (19) ಹಲ್ಲೆಗೊಳಗಾದ ಯುವಕ.ಹಲ್ಲೆ ಮಾಡಿದ ಆರೋಪಿಗಳಾದ ಶಶಿಕುಮಾರ್, ಸಾಯಿಕುಮಾರ್ ಸೇರಿದಂತೆ 10 ಜನರ ವಿರುದ್ಧ ಕೌಲಬಜಾರ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಹಲ್ಲೆ ಮಾಡಿದ ಆರೋಪಿಗಳೆಲ್ಲರೂ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಹಲ್ಲೆಗೊಳಗಾದ …

Read More »

ವಿಜಯಪುರ: ಕೈಗಡಿಯಾರ ವಿಚಾರಕ್ಕೆ ಗಲಾಟೆ; ಹಲ್ಲೆಗೊಳಗಾಗಿದ್ದ 5ನೇ ತರಗತಿ ವಿದ್ಯಾರ್ಥಿ ಸಾವು

ಬಿಹಾರ ಮೂಲದ ಸುನೀಲ್ ಹಾಗೂ ಶೃತಿ ದಂಪತಿ. ಸುನೀಲ್​ ಅವರು ನಗರದಲ್ಲಿ ಪಾನಿಪುರಿ ಮಾರಾಟ ಮಾಡಿ ಜೀವನ ಮಾಡುತ್ತಿದ್ದರು. ಇತ್ತ ತನ್ನ ಮಗಾ ಅನ್ಸ್ ನನ್ನು ಶ್ರೀ ಸತ್ಯಸಾಯಿ ಬಾಬಾ ಶಿಕ್ಷಣ ಸಂಸ್ಥೆಯ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗೆ ಸೇರಿಸಿದ್ದರು. ಕಳೆದ 5 ದಿನಗಳ ಹಿಂದೆ ಅನ್ಸ್ ಹಾಕಿಕೊಂಡಿದ್ದ ಅದೊಂದು ವಾಚ್ ಕಾರಣಕ್ಕೆ ಶಾಲೆಯಲ್ಲಿ ಗಲಾಟೆ ಆಗಿತ್ತಂತೆ. 9ನೇ ತರಗತಿಯ ಮೂವರು ವಿದ್ಯಾರ್ಥಿಗಳು ಅನ್ಸ್ ಮೇಲೆ ಹಲ್ಲೆ …

Read More »

ವೇತನ ಪರ್ಸಂಟೇಜ್‌ ಹೆಚ್ಚಳಕ್ಕೆ ಆಳದೋಣಿ ಮೀನುಗಾರ ಕಾರ್ಮಿಕರ ಆಗ್ರಹ

ಆಳದೋಣಿ ಮೀನುಗಾರಿಕೆಯಲ್ಲಿ ಕಾರ್ಮಿಕರಾಗಿ ದುಡಿಯುತ್ತಿರುವ ಮೀನುಗಾರರ ವೇತನ ಹೆಚ್ಚಿಸಬೇಕು ಎಂದು ಆಗ್ರಹಿಸಿ ಮೀನುಗಾರ ಕಾರ್ಮಿಕರು ಪ್ರತಿಭಟನೆ ಆರಂಭಿಸಿದ್ದು, ವೇತನ ಹೆಚ್ಚಳ ಮಾಡುವವರೆಗೂ ಮೀನುಗಾರಿಕೆಗೆ ಬರುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.ಮಲ್ಪೆ ಬಂದರಿನಲ್ಲಿರುವ ಆಳದೋಣಿಗಳಲ್ಲಿ ಮೀನುಗಾರರಾಗಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಕುಮಟಾ, ಹೊನ್ನಾವರ, ಮಂಕಿ, ಉಡುಪಿ ಜಿಲ್ಲೆಯ ಬೈಂದೂರು ಹಾಗೂ ಕುಂದಾಪುರ ತಾಲೂಕಿನವರು ಹೆಚ್ಚಿದ್ದಾರೆ. ಈಗ ಹೊರ ರಾಜ್ಯದ ಕಾರ್ಮಿಕರು ಸೇರಿಕೊಂಡಿದ್ದಾರೆ. ಆದರೆ ಪೂರ್ಣ ಹೊರರಾಜ್ಯದ ಕಾರ್ಮಿಕರ ಮೂಲಕವೇ ಆಳದೋಣಿ ಮೀನುಗಾರಿಕೆ …

Read More »