Breaking News

Breaking News

ಏಕಾಏಕಿ ಕಬಾಬ್ ಸೆಂಟರ್‌ಗೆ ನುಗ್ಗಿದ ಕಾರು – ಬಿಸಿ ಎಣ್ಣೆ ಬಿದ್ದು ಮೂವರಿಗೆ ಗಂಭೀರ ಗಾಯ!

ಬೆಂಗಳೂರು: ಬನ್ನೇರುಘಟ್ಟ ಸಮೀಪದ ಹೊಮ್ಮದೇವನಹಳ್ಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಜೆರೊ ಕಾರು ಬೈಕ್‌ಗಳಿಗೆ ಡಿಕ್ಕಿ ಹೊಡೆದು ಕಬಾಬ್ ಸೆಂಟರ್‌ಗೆ ನುಗ್ಗಿದೆ. ಕಳೆದ ತಿಂಗಳ 30ರಂದು ನಡೆದ ಘಟನೆಯಲ್ಲಿ ಬಿಸಿ ಎಣ್ಣೆ ಮೈಮೇಲೆ ಬಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಜೀನಾ ಬೇಗಂ ಚಲಾಯಿಸುತ್ತಿದ್ದ ಕಾರು ಅತಿವೇಗವಾಗಿ ಬಂದು ಬೈಕ್‌ಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದೆ. ಈ ವೇಳೆ ಬಸವರಾಜ್, ಮುನಿಕೃಷ್ಣ ಮತ್ತು ಮಂಜೇಶ್ ಎಂಬುವರಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ …

Read More »

ಬಾಗಲಕೋಟೆ: ಲಾಭದ ಆಮಿಷವೊಡ್ಡಿ ವೈದ್ಯರಿಬ್ಬರಿಗೆ ₹1.70 ಕೋಟಿ ವಂಚನೆ

ಬಾಗಲಕೋಟೆ: ಷೇರು ಮಾರುಕಟ್ಟೆ, ಐಪಿಒ ಹಾಗೂ ಬಿಟ್‌ಕಾಯಿನ್‌ನಲ್ಲಿ ಹೂಡಿಕೆ ಹೆಸರಿನಲ್ಲಿ ಇಳಕಲ್‌ನ ಮಕ್ಕಳ ವೈದ್ಯ ಹಾಗೂ ಜಮಖಂಡಿಯ ವೈದ್ಯರಿಗೆ ಒಟ್ಟು ₹1.70 ಕೋಟಿ ವಂಚಿಸಲಾಗಿದೆ. ವಾಟ್ಸ್‌ಆ್ಯಪ್ ಮತ್ತು ಟೆಲಿಗ್ರಾಂ ಗುಂಪುಗಳ ಮೂಲಕ ಹೆಚ್ಚಿನ ಲಾಭದ ಆಮಿಷವೊಡ್ಡಿ ಹಣ ವರ್ಗಾಯಿಸಿಕೊಂಡು ಮೋಸ ಮಾಡಲಾಗಿದೆ. ಇದಲ್ಲದೆ, ರಬಕವಿ-ಬನಹಟ್ಟಿಯ ವ್ಯಕ್ತಿಯೊಬ್ಬರಿಗೆ ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ ₹10.31 ಲಕ್ಷ ವಂಚಿಸಲಾಗಿದೆ. ವೆಬ್‌ಸೈಟ್ ಲಿಂಕ್ ಮೂಲಕ ಸಂಪರ್ಕಿಸಿ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಿಕೊಂಡಿದ್ದಾರೆ. ನಗರದ …

Read More »

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಚೇರಿಯಲ್ಲಿ ಹಣ ಪಡೆಯುವಾಗ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ. ಇನ್ನೊಂದೆಡೆ, ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಉಪ ಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಸಿದ್ದಾರೆ. ಬೆಳಗಾವಿಯ ವಿವಿಧ ಸರ್ಕಾರಿ ಕಚೇರಿ ಹಾಗೂ ವಸತಿ ಶಾಲೆಗಳಿಗೆ ಭೇಟಿ ನೀಡಿ …

Read More »

ಆನೇಕಲ್​​ ಗುಜರಿ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ: ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಸಮೀಪದ ಕುಂಬಾರನಹಳ್ಳಿಯ ಗುಜರಿ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಪ್ಲಾಸ್ಟಿಕ್, ಕಾಗದ ಸೇರಿದಂತೆ ಅಪಾರ ಪ್ರಮಾಣದ ಗುಜರಿ ವಸ್ತುಗಳು ಸುಟ್ಟು ಭಸ್ಮವಾಗಿವೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿವೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ …

Read More »

ರಾಜಧಾನಿಯಲ್ಲೇ, ಹಾಡಹಗಲೇ ಕಚೇರಿಗೆ ನುಗ್ಗಿದ ದುಷ್ಕರ್ಮಿ – ಯುವತಿಗೆ ಚಾಕು ತೋರಿಸಿ ಚಿನ್ನ ಸುಲಿಗೆಗೆ ಯತ್ನ!

ಬೆಂಗಳೂರು: ನಗರದ ದೊಮ್ಮಲೂರಿನ 100 ಅಡಿ ರಸ್ತೆಯ ಕಚೇರಿಗೆ ನುಗ್ಗಿದ ಪ್ರಭುರಾಜ್ ಎಂಬಾತ ಯುವತಿಯ ಕುತ್ತಿಗೆಗೆ ಚಾಕು ಹಿಡಿದು ಚಿನ್ನಾಭರಣ ನೀಡುವಂತೆ ಬೆದರಿಕೆ ಹಾಕಿದ್ದಾನೆ. ಚಿನ್ನ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಸಿ, ಯುವತಿಯನ್ನು ಕಚೇರಿಯಿಂದ ಹೊರಗೆ ಎಳೆಯಲು ಯತ್ನಿಸಿದ್ದಾನೆ. ಯುವತಿಯ ಚೀರಾಟ ಕೇಳಿದ ಕಚೇರಿ ಸಿಬ್ಬಂದಿ ಹಾಗೂ ಸ್ಥಳೀಯರು ಧೈರ್ಯದಿಂದ ಆರೋಪಿಯನ್ನು ಸುತ್ತುವರಿದು ಹಿಡಿದಿದ್ದಾರೆ. ಬಳಿಕ ಆತನ ಕೈಯಲ್ಲಿದ್ದ ಚಾಕುವನ್ನು ಕಸಿದುಕೊಂಡಿದ್ದಾರೆ. ಆರೋಪಿಯನ್ನು ಇಂದಿರಾನಗರ ಪೊಲೀಸರಿಗೆ ಒಪ್ಪಿಸಲಾಗಿದ್ದು, ಪೊಲೀಸರು ಬಂಧಿಸಿ …

Read More »

ಕಲಬುರಗಿ ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ: ಮದ್ಯ ತರಲು, ಹಣ ನೀಡಲು ಕಿರುಕುಳ ಆರೋಪ

ಕಲಬುರಗಿ: ಹಾಸ್ಟೆಲ್‌ನಲ್ಲಿ ಮದ್ಯ ತಂದುಕೊಡುವಂತೆ ಹಾಗೂ 30 ಸಾವಿರ ರೂ. ನೀಡುವಂತೆ ಒತ್ತಾಯಿಸಿ ವಿದ್ಯಾರ್ಥಿಯ ಮೇಲೆ ಸಹವಿದ್ಯಾರ್ಥಿಗಳೇ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಕಲಬುರಗಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆ. ಚಿತ್ತಾಪುರದ ಸುಮಿತ್ ಎಂಬ ವಿದ್ಯಾರ್ಥಿ ಹೆಚ್‌ಕೆಎಸ್ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೊಮಾ ಓದುತ್ತಿದ್ದ. ಹಣ ನೀಡಲು ನಿರಾಕರಿಸಿದ್ದಕ್ಕೆ ರೋಷನ್, ಶರಣು ಸೇರಿದಂತೆ ಐವರು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಮಗನ ಸ್ಥಿತಿ …

Read More »

ನಕಲಿ ಔಷಧ ಜಾಲ ಪತ್ತೆ : ಬೆಂಗಳೂರಿನ 5 ಕಡೆ ‘ED’ ದಾಳಿ : ಆರೋಪಿ ವೀರೇಶ್ ಬ್ಯಾಂಕ್ ಖಾತೆ ಫ್ರೀಜ್!

ಬೆಂಗಳೂರು: ನಕಲಿ ಔಷಧಿ ತಯಾರಿಕೆ ಮತ್ತು ಮಾರಾಟ ಜಾಲದ ವಿರುದ್ಧ ಇಡಿ ಅಧಿಕಾರಿಗಳು ಬೆಂಗಳೂರು ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ 5 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಪ್ರಮುಖ ಆರೋಪಿ ವೀರೇಶ್ ಕುಮಾರ್‌ನ ಬ್ಯಾಂಕ್ ಖಾತೆ ಫ್ರೀಜ್ ಮಾಡಿ, 9 ಲಕ್ಷ ರೂ. ಜಪ್ತಿ ಮಾಡಿದ್ದಾರೆ. ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ನಕಲಿ ಔಷಧಿಗಳನ್ನು ತಯಾರಿಸಿ, ಮರುಪ್ಯಾಕಿಂಗ್ ಮಾಡಲಾಗುತ್ತಿತ್ತು. ಸಾಮಾನ್ಯ ಔಷಧಿಗಳಿಗೆ ಫಿಜರ್ ಕಂಪನಿಯ ದುಬಾರಿ …

Read More »

ಪಕ್ಷದ ಬಾವುಟ ಹಿಡಿಯುವುದಕ್ಕಷ್ಟೇ ಸೀಮಿತನಾ ಮುಸ್ಲಿಂ ಮುಖಂಡರ ರಾಜಕೀಯ ಅಸ್ತಿತ್ವ..? ಸ್ವಾಭಿಮಾನಕ್ಕೆ ಬೆಲೆ ಇಲ್ವಾ..?

ಹುಬ್ಬಳ್ಳಿ–ಧಾರವಾಡದಲ್ಲಿ ಮುಸ್ಲಿಂ ಮುಖಂಡರಿಗೆ ಕವಡೆ ಕಾಸಿನ ಕಿಮ್ಮತ್ತೂ ಇಲ್ವಾ..? ಹುಬ್ಬಳ್ಳಿ–ಧಾರವಾಡದಲ್ಲಿ ಮುಸ್ಲಿಂ ಮುಖಂಡರಿಗೆ ಕವಡೆ ಕಾಸಿನ ಕಿಮ್ಮತ್ತೂ ಇಲ್ವಾ..? ಪಕ್ಷದ ಬಾವುಟ ಹಿಡಿದು ಅಡ್ಡಾಡುವುದಕ್ಕಷ್ಟೇ ಸೀಮಿತನಾ ರಾಜಕೀಯ ಅಸ್ತಿತ್ವ..? ಪಕ್ಷಕ್ಕಾಗಿ ದುಡಿಯುವವರು ಇವರು, ಮತಗಳ ಕ್ರೋಢೀಕರಣಕ್ಕೆ ಬೇಕಾಗುವವರು ಇವರು..! ಆದರೆ ರಾಜಕೀಯ ಸ್ಥಾನಮಾನ ನೀಡುವ ವಿಚಾರ ಬಂದಾಗ ಮಾತ್ರ ನಿರ್ಲಕ್ಷ್ಯ ಯಾಕೆ..? ಹುಬ್ಬಳ್ಳಿ–ಧಾರವಾಡ: ರಾಜಕೀಯ ಪಕ್ಷಗಳ ಬಾವುಟ ಹಿಡಿದುಕೊಂಡು ಬೀದಿ ಬೀದಿ ಅಡ್ಡಾಡುವುದು, ಪಕ್ಷದ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಳ್ಳುವುದು, ಚುನಾವಣೆಯ …

Read More »

ಅವಳಿ ನಗರದಲ್ಲಿ ಗಾಂಜಾ ಪೆಡ್ಲರ್‌ಗಳ ಬೇಟೆ; 6 ಮಂದಿ ಅಂದರ್, 491 ಗ್ರಾಂ ಗಾಂಜಾ ಜಪ್ತಿ!

ಹುಬ್ಬಳ್ಳಿ–ಧಾರವಾಡದಲ್ಲಿ ಗಾಂಜಾ ಪೆಡ್ಲರ್‌ಗಳಿಗೆ ಖಾಕಿ ಸಿಂಹಸ್ವಪ್ನ; ಎರಡು ಕಡೆ ಏಕಕಾಲಕ್ಕೆ ಪೊಲೀಸ್ ಬೇಟೆ, 6 ಮಂದಿ ಅಂದರ್.. ಗಾಂಜಾ ದಂಧೆಗೆ ಖಾಕಿ ಏಟು! ಅವಳಿ ನಗರದಲ್ಲಿ ಗಾಂಜಾ ಪೆಡ್ಲರ್‌ಗಳ ಬೇಟೆ ಶುರು.. ಖಾಕಿ ಪಡೆ ಫುಲ್ ಆ್ಯಕ್ಷನ್..! ಗುಡಿಹಾಳ ರೋಡ್‌ನಿಂದ ಧಾರವಾಡ ಟೋಲ್‌ನಾಕಾವರೆಗೆ ಪೊಲೀಸ್ ದಾಳಿ; 6 ಮಂದಿ ಪೆಡ್ಲರ್‌ಗಳು ವಶಕ್ಕೆ, 491 ಗ್ರಾಂ ಗಾಂಜಾ ಜಪ್ತಿ.. ಮತ್ತೊಬ್ಬ ಆರೋಪಿಗಾಗಿ ಬಲೆ ಬೀಸಿದ ಖಾಕಿ ಪಡೆ..!! ಹುಬ್ಬಳ್ಳಿ–ಧಾರವಾಡ: ವಾಣಿಜ್ಯ ನಗರಿ …

Read More »

ಮದ್ದೂರಲ್ಲಿ ಗಲಾಟೆ ಬಿಡಿಸಲು ಹೋದವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಅಮಾಯಕ ಯುವಕ ಬಲಿ!

ಮದ್ದೂರು ಪಟ್ಟಣದ ಸಿದ್ಧಾರ್ಥ ನಗರದಲ್ಲಿ ಹಣದ ವಿಚಾರವಾಗಿ ನಡೆಯುತ್ತಿದ್ದ ಗಲಾಟೆ ಬಿಡಿಸಲು ಹೋದ ನಂದನ್ (25) ಎಂಬ ಯುವಕನನ್ನು ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಲಾಗಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಕೆಲಸದ ಹಣದ ವಿಚಾರವಾಗಿ ರಘು ಮತ್ತು ಪ್ರಕಾಶ್ ನಡುವೆ ಗಲಾಟೆ ನಡೆದಿತ್ತು. ಇದನ್ನು ಬಿಡಿಸಲು ಹೋದ ನಂದನ್ ಮೇಲೆ ಆರೋಪಿಗಳು ತಿರುಗಿಬಿದ್ದಿದ್ದು, ಶಿವರಾಜು ಎಂಬಾತ ಡ್ರ್ಯಾಗನ್ ಮಾದರಿಯ ಮಾರಕಾಸ್ತ್ರದಿಂದ ಕುತ್ತಿಗೆಗೆ ಇರಿದಿದ್ದಾನೆ ಎನ್ನಲಾಗಿದೆ. ತೀವ್ರ ರಕ್ತಸ್ರಾವದಿಂದ ನಂದನ್ …

Read More »