Breaking News

Breaking News

ನಾನು ಸ್ಕೂಲಿಗೆ ಬರಲ್ಲಾಂದ್ರೆ ಬರಲ್ಲ – ಸಿಎಂ, ಪಿಎಂ ಗೆ ಪತ್ರ ಬರೆದ ತುಮಕೂರಿನ ಬಾಲಕಿ!

ಶಾಲೆಯ ಕಾಂಪೌಂಡ್ ‌ಗಾಗಿ ಶಾಲೆ ತೊರೆದ ಪುಟಾಣಿ ವಿದ್ಯಾರ್ಥಿನಿಯೋರ್ವಳು ತಾನು ಕಾಂಪೌಂಡ್‌ ನಿರ್ಮಿಸಿಕೊಡುವವರೆಗೂ ಸ್ಕೂಲಿಗೆ ಬರುವುದಿಲ್ಲವೆಂದು ಹಠ ಹಿಡಿದು ಕುಳಿತಿರುವ ಘಟನೆ ತುಮಕೂರಿನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ ಸ್ವಕ್ಷೇತ್ರದಲ್ಲಿ ನಡೆದಿದೆ.2024 ರಲ್ಲಿ ಬಿಇಓ ಗೆ ಪತ್ರ ಬರೆದು ಮನವಿ ಮಾಡಿದ್ದ ಸಿಮ್ರಾ ಸನೋಬರ್ ಕಾಂಪೌಂಡ್‌ ನಿರ್ಮಿಸಿಕೊಡುವಂತೆ ಮನವಿ ಮಾಡಿದ್ದಳು. ಅಂದು ವಿದ್ಯಾರ್ಥಿನಿಗೆ ಕಾಂಪೌಂಡ್ ಕಟ್ಟಿಕೊಡುವ ಆಶ್ವಾಸನೆ ನೀಡಿದ್ದ ಬಿಇಓ, ಬಳಿಕ ಒಂದು ವರ್ಷ ಕಳೆದರೂ ಕಾಂಪೌಂಡ್ ನಿರ್ಮಾಣ ಮಾಡಿರಲಿಲ್ಲ. …

Read More »

ಆತ್ಮಹತ್ಯೆಗೆ ಯತ್ನಿಸಿದ್ದ ಶಿವಮೊಗ್ಗ ಜಿಲ್ಲಾ ಪಂಚಾಯತ್ ‘CEO’ ಮನೆಯ ಅಡುಗೆ ಸಿಬ್ಬಂದಿ ಸಾವು!

ಆತ್ಮಹತ್ಯೆಗೆ ಯತ್ನಿಸಿದ್ದ ಸಿಇಓ ಮನೆಯ ಅಡುಗೆ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಓ ಮನೆಯ ಅಡುಗೆ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಸುರೇಶ್ ಎನ್ನುವವರು ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು ಆದರೆ ಇಂದು ಚಿಕಿತ್ಸೆ ಫಲಿಸದೆ ಸುರೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

Read More »

ಬೆಂಗಳೂರಲ್ಲಿ ಡೆತ್ ನೋಟ್ ಬರೆದಿಟ್ಟು, 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು!

ಗಾಂಧಾರ್ (13) ಆತ್ಮಹತ್ಯೆಗೆ ಶರಣಾಗಿದ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಬೆಳಿಗ್ಗೆ ತಂದೆ ಬಾಲಕನ ರೂಮ್ಗೆ ಹೋಗಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕೆಗೆ ಬಂದಿದೆ. ಬಾಲಕನ ತಂದೆ ಮ್ಯೂಸಿಕ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ವಿದ್ಯಾರ್ಥಿ ಆತ್ಮತೆಯ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸಿ.ಕೆ ಅಚ್ಚುಘಟ್ಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More »

ನಾಳೆ ಬೆಳಗ್ಗೆಯಿಂದ ಸಾರಿಗೆ ಬಸ್ ಬಂದ್, ಸಿಎಂ ಸಿದ್ದರಾಮಯ್ಯ-ನೌಕರರ ಸಂಧಾನ ವಿಫಲ

ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವಿನ ಜಟಾಪಟಿ ತೀವ್ರಗೊಂಡಿದೆ. ಸಿಎಂ ಸಿದ್ದರಾಮಯ್ಯ ಕರೆದಿದ್ದ ಸಂಧಾನ ಸಭೆಯೂ ವಿಫಲಗೊಂಡಿರುವ ಹಿನ್ನಲೆಯಲ್ಲಿ ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ಆರಂಭಗೊಳ್ಳಲಿದೆ. ಹೀಗಾಗಿ ನಾಳೆ ಬೆಳಗ್ಗೆಯಿಂದ ಸಾರಿಗೆ ಬಸ್ ಸೇವೆ ಲಭ್ಯವಿರುವುದಿಲ್ಲ.ಎಸ್ಮಾ ಜಾರಿ, ಸಾರಿಗೆ ನೌಕರರ ರಜಾ ರದ್ದು ಸೇರಿದಂತೆ ಹಲವು ಕಟ್ಟು ನಿಟ್ಟಿನ ಕ್ರಮಗಳನ್ನು ಸರ್ಕಾರ ಕೈಗೊಂಡರೂ ಯಾವುದಕ್ಕೂ ಕ್ಯಾರೇ ಅನ್ನದ ಸಾರಿಗೆ ನೌಕರರು ನಾಳೆಯಿಂದ ಮುಷ್ಕರ ಆರಂಭಿಸಲಿದ್ದಾರೆ. 38 ತಿಂಗಳ ಬಾಕಿ ವೇತನ …

Read More »

ಜಂಗಮ ದೀಕ್ಷೆ ಪಡೆದು ಮಠಾಧೀಶರಾಗಿದ್ದ ಮುಸ್ಲಿಂ ಸಮುದಾಯದ ಸಾಧಕ ವಾಪಸ್!

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ವಿಶೇಷ ಘಟನೆ ನಡೆದಿದೆ. ಮೂಲತಃ ಯಾದಗಿರಿ ಜಿಲ್ಲೆ ಶಹಪುರ ತಾಲ್ಲೂಕಿನ ನಿವಾಸಿಯಾಗಿರುವ ಮಹಮದ್ ನಿಸಾರ್ ಎಂಬ ಯುವಕ ಬಸವ ತತ್ವಗಳಿಂದ ಪ್ರಭಾವಿತರಾಗಿ ಜಂಗಮ ದೀಕ್ಷೆ ಪಡೆದಿದ್ದರು. ಬಸವಕಲ್ಯಾಣದ ಬಸವಪ್ರಭುಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಮಹಮದ್ ನಿಸಾರ್ ಅವರಿಗೆ ‘ನಿಜಲಿಂಗಸ್ವಾಮೀಜಿ’ ಎಂದು ಮರು ನಾಮಕರಣ ಮಾಡಲಾಗಿತ್ತು.ಗ್ರಾಮದ ಕೆಲವರು ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು, ಮುಸ್ಲಿಂ ಸಮುದಾಯದವರನ್ನು ಮಠಾಧೀಶರನ್ನಾಗಿ ಮಾಡಲು ವಿರೋಧ ವ್ಯಕ್ತಪಡಿಸಿದರು. ಈ …

Read More »

ಸೌದಿ ಅರೇಬಿಯಾದಲ್ಲಿ ಶನಿವಾರ ಒಂದೇ ದಿನದಲ್ಲಿ 8 ಜನರಿಗೆ ಮರಣದಂಡನೆ ದಾಖಲೆ!

ಸೌದಿ ಅರೇಬಿಯಾದಲ್ಲಿ ಶನಿವಾರ ಒಂದೇ ದಿನ 8 ಜನರಿಗೆ ಮರಣದಂಡನೆ ವಿಧಿಸಲಾಗಿದೆ, ಇದು ದೇಶದ ಇತಿಹಾಸದಲ್ಲಿ ಒಂದೇ ದಿನದಲ್ಲಿ ಗರಿಷ್ಠ ಶಿಕ್ಷೆಯಾಗಿದೆ. ಸೌದಿ ಪ್ರೆಸ್ ಏಜೆನ್ಸಿ (SPA) ವರದಿಯ ಪ್ರಕಾರ, ಏಳು ಮಂದಿಯನ್ನು ಮಾದಕವಸ್ತು ಕಳ್ಳಸಾಗಣೆ ಆರೋಪದಲ್ಲಿ ಮತ್ತು ಒಬ್ಬ ವ್ಯಕ್ತಿಯನ್ನು ತನ್ನ ತಾಯಿಯ ಕೊಲೆಗಾಗಿ ಗಲ್ಲಿಗೇರಿಸಲಾಗಿದೆ.ಮಾದಕ ವಸ್ತುಗಳ ವಿರುದ್ಧ ಯುದ್ದ ಅಭಿಯಾನದಿಂದಾಗಿ ಮರಣದಂಡನೆಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. 2019-2022ರವರೆಗೆ ಮಾದಕವಸ್ತು ಪ್ರಕರಣಗಳಲ್ಲಿ ಮರಣದಂಡನೆಗೆ ನಿಷೇಧವಿತ್ತಾದರೂ, 2024ರಲ್ಲಿ 117 ಮತ್ತು …

Read More »

ಜಾರ್ಖಂಡ್ ಮಾಜಿ ಸಿಎಂ, ಜೆಎಂಎಂ ಪಕ್ಷದ ಸ್ಥಾಪಕ ಶಿಬು ಸೊರೇನ್ ನಿಧನ

ಕಳೆದ 38 ವರ್ಷಗಳಿಂದ ಜಾರ್ಖಂಡ್ ಮುಕ್ತಿ ಮೋರ್ಚಾದ ನಾಯಕರಾಗಿ ಶಿಬು ಸೊರೇನ್ ಗುರುತಿಸಲ್ಪಟ್ಟಿದ್ದರು. ಅಲ್ಲದೆ ಮೂರು ಬಾರಿ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು.ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ಶಿಬು ಸೊರೇನ್ ಅವರು ಕಳೆದೊಂದು ತಿಂಗಳಿಗಿಂತಲೂ ಹೆಚ್ಚು ಸಮಯದಿಂದ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 81 ವಯಸ್ಸಾಗಿತ್ತು.ಶಿಬು ಸೊರೇನ್ ನಿಧನ ವಾರ್ತೆಯನ್ನು ಪುತ್ರ ಹಾಗೂ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ದೃಢೀಕರಿಸಿದ್ದಾರೆ.

Read More »

ಬೈಂದೂರು: ಸಮುದ್ರದ ಅಲೆಗಳ ಅಬ್ಬರಕ್ಕೆ ಮಗುಚಿದ ದೋಣಿ ; ಜೀವರಕ್ಷಿಸಿದ ಲೈಫ್ ಜಾಕೇಟ್

ಸಮುದ್ರದ ಭಾರೀ ಅಲೆಗೆ ಸಿಲುಕಿದ ಮೀನುಗಾರಿಕಾ ದೋಣಿಯೊಂದು ಮಗುಚಿ ಬಿದ್ದಿದ್ದು, ಇದರಲ್ಲಿದ್ದ 9 ಮೀನುಗಾರರು ಲೈಫ್ ಜಾಕೇಟ್ ಧರಿಸಿದ್ದರಿಂದ ಅಪಾಯದಿಂದ ಪಾರಾಗಿ ದಡ ಸೇರಿದ ಘಟನೆ ಬೈಂದೂರು ತಾಲೂಕಿನ ಉಪ್ಪುಂದ ಮಡಿಕಲ್ ಎಂಬಲ್ಲಿ ರವಿವಾರ ಬೆಳಗ್ಗೆ ನಡೆದಿದೆ.ಇದರಿಂದ ದೋಣಿಯಲ್ಲಿದ್ದ ಎಲ್ಲ 9 ಮಂದಿ ಮೀನುಗಾರರು ಕೂಡ ನೀರಿಗೆ ಬಿದ್ದರು. ಎಲ್ಲ ಮೀನುಗಾರರು ಲೈಪ್ ಜಾಕೆಟ್ ಧರಿಸಿದ್ದರಿಂದ ಸಮುದ್ರದಲ್ಲಿ ಈಜುತ್ತಿದ್ದರು. ಕೂಡಲೇ ದಡದಲ್ಲಿದ್ದ ಇತರೆ ಮೀನುಗಾರರು ರೋಪ್ ನೀಡಿ ಅವರನ್ನು ಸುರಕ್ಷಿತವಾಗಿ …

Read More »

ಬೆಂಗಳೂರಿನಲ್ಲಿ ಗಾಂಜಾ ನಶೆಯಲ್ಲಿ ಸ್ನೇಹಿತರ ನಡುವೆ ಗಲಾಟೆ : ಓರ್ವನ ಹತ್ಯೆ.!

ಗಾಂಜಾ ನಶೆಯಲ್ಲಿ ಸ್ನೇಹಿತರ ನಡುವೆ ಗಲಾಟೆಯಾಗಿದ್ದು, ಓರ್ವನ ಹತ್ಯೆ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಪಟ್ಟಣದಲ್ಲಿ ನಡೆದಿದೆ.ಗಾಂಜಾ ನಶೆಯಲ್ಲಿ ಮಾರಣಾಂತಿಕ ಹಲ್ಲೆಗೈದು ಸ್ನೇಹಿತ ಸುರೇಶ್ ನನ್ನು ಮುನ್ನಾ ಎಂಬಾತ ಹತ್ಯೆಗೈದಿದ್ದಾನೆ.ಕೊಲೆಯಾದ ಸುರೇಶ್ ಹಾಗೂ ಆರೋಪಿ ಬಿಹಾರ ಮೂಲದವರು. ಗಾರೆ ಕೆಲಸ ಮಾಡಿಕೊಂಡು ಒಂದೇ ಮನೆಯಲ್ಲಿ ವಾಸವಿದ್ದರು. ನಿತ್ಯ ಮದ್ಯ ಸೇವಿಸಿ, ಗಾಂಜಾ ಮತ್ತಿನಲ್ಲಿ ಗಲಾಟೆ ಮಾಡುತ್ತಿದ್ದರು.

Read More »

ಸಾರ್ವಜನಿಕರೊಂದಿಗೆ ಅನುಚಿತ ವರ್ತನೆ ಆರೋಪ: ಪೊಲೀಸರಿಗೊಪ್ಪಿಸಿದ ಸ್ಥಳೀಯರು

ಕರ್ನಾಟಕ- ಕೇರಳ ಗಡಿ ಪ್ರದೇಶದ, ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದಲ್ಲಿ ಭಾನುವಾರ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸಿ, ಜನರ ನೆಮ್ಮದಿಗೆ ಭಂಗ ಉಂಟು ಮಾಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಸ್ಥಳೀಯರೇ ಹಿಡಿದು ಕೈಕಾಲು ಕಟ್ಟಿ ಪೊಲೀಸರಿಗೆ ಒಪ್ಪಿಸಿದ್ದಾರೆ.ನಿಷೇಧಿತ ಮಾದಕ ವಸ್ತು ಸೇವಿಸಿ ಈ ರೀತಿ ವರ್ತಿಸುತ್ತಿದ್ದಾನೆ ಎಂಬ ಶಂಕೆಯಲ್ಲಿ ಸ್ಥಳೀಯರು ಹಗ್ಗದಿಂದ ಆತನ ಕೈ-ಕಾಲು ಕಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

Read More »