BigTv News
August 1, 2025
Breaking News
ಪಶ್ಚಿಮ ವಲಯ ಮಹಾಲಕ್ಷ್ಮಿಪುರ ವಿಭಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ 3 ಸಿಬ್ಬಂದಿಯನ್ನು ಕರ್ತವ್ಯ ಲೋಪವೆಸಗಿರುವ ಕಾರಣ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ.ನೌಕರರು ತಮ್ಮ ಕರ್ತವ್ಯದಲ್ಲಿ ತೀವ್ರ ನಿರ್ಲಕ್ಷ್ಯತನ ಮತ್ತು ಬೇಜವಾಬ್ದಾರಿತನ ತೋರಿಸಿರುವುದರಿಂದ ಹಾಗೂ ಸದರಿ ನೌಕರರ ಸೇವೆಯು ತೃಪ್ತಿಕರವಾಗಿರದೇ ಇರುವುದರಿಂದ ಸಾರ್ವಜನಿಕರ ಮತ್ತು ಆಡಳಿತ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ವಾರ್ಡ್-102 ಕರ್ತವ್ಯದಿಂದ ಬಿಡುಗಡೆಗೊಳಿಸಿ ಪಶ್ಚಿಮ ವಲಯ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ಅದೇಶಿಸಿದ್ದಾರೆ.
Read More »
BigTv News
August 1, 2025
Breaking News, Crime, ಕರ್ನಾಟಕ
ಧರ್ಮಸ್ಥಳದಲ್ಲಿನ ಕೊಲೆಯಾದ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಪ್ರಕರಣ ಸಂಬಂಧ ಮಾಧ್ಯಮಗಳ ಮೇಲಿನ ನಿರ್ಬಂಧವನ್ನು ರದ್ದುಗೊಳಿಸಿ ಆದೇಶಿಸಿದೆ.ಇನ್ನೂ ವಿಚಾರಣಾಧೀನ ನ್ಯಾಯಾಲಯವು ಈ ಆದೇಶವನ್ನು ಮಾಡಿರುವ ಅಂಶಗಳನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು. ಸಕ್ಷಮ ನ್ಯಾಯಾಲಯವು ಮಧ್ಯಂತರ ಅರ್ಜಿಯನ್ನು ತುರ್ತಾಗಿ ನಿರ್ಧರಿಸಬೇಕು ಎಂಬುದಾಗಿ ತೀರ್ಪಿನಲ್ಲಿ ಉಲ್ಲೇಖಿಸಿ ಆದೇಶಿಸಿದೆ. ಇದೇ ಸಂದರ್ಭದಲ್ಲಿ ಸಿವಿಲ್ ದಾವೆ, ಕ್ರಿಮಿನಲ್ ಪ್ರಕ್ರಿಯೆ, ಆರೋಪ, ಪ್ರತ್ಯಾರೋಪದ ಮೇಲೆ ಈ ನ್ಯಾಯಲಯವು ಯಾವುದೇ ಅಭಿಪ್ರಾಯ …
Read More »
BigTv News
August 1, 2025
Breaking News
ದೆಹಲಿಯ ಪಕ್ಕದಲ್ಲಿರುವ ಗಾಜಿಯಾಬಾದ್‌ನಲ್ಲಿ ಒಂದು ದುರಂತ ಘಟನೆ ನಡೆದಿದೆ. ಗಾಜಿಯಾಬಾದ್‌ನಲ್ಲಿ ವಾಸಿಸುತ್ತಿದ್ದ ಗುಪ್ತಚರ ಬ್ಯೂರೋ ಅಧಿಕಾರಿ ಮತ್ತು ಅವರ ಸಹೋದರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ..ಒಂದೇ ರೂಂನಲ್ಲಿ ಅವರಿಬ್ಬರ ಶವಗಳು ಪತ್ತೆಯಾಗಿವೆ. ಈ ಪ್ರಕರಣದಲ್ಲಿ ಯಾವುದೇ ಸೂಸೈಡ್ ನೋಟ್ ಪತ್ತೆಯಾಗದ ಕಾರಣದಿಂದ ಆ ಅಣ್ಣ-ತಂಗಿಯ ಆತ್ಮಹತ್ಯೆಗೆ ಕಾರಣ ಸ್ಪಷ್ಟವಾಗಿಲ್ಲ. ಆದರೆ ಮಲತಾಯಿ ಇಬ್ಬರೂ ಮಕ್ಕಳನ್ನು ಹಿಂಸಿಸುತ್ತಿದ್ದರು. ಅದಕ್ಕಾಗಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಚಿಕ್ಕಮ್ಮ ಆರೋಪಿಸಿದ್ದಾರೆ.
Read More »
BigTv News
August 1, 2025
Breaking News
ಕಾಂಗ್ರೆಸ್ ಶಾಸಕರ ಕಚೇರಿ ಆವರಣದಲ್ಲಿ ರೈತ ದಂಪತಿ ಎಮ್ಮೆಗಳನ್ನು ಕಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣ ದಂಪತಿ ಭೂಪಾಲಪಲ್ಲಿಯ ಕಾಂಗ್ರೆಸ್ ಶಾಸಕ ಗಂದ್ರ ಸತ್ಯನಾರಾಯಣ ಅವರ ಕಚೇರಿಯ ಆವರಣದಲ್ಲಿ ಎಮ್ಮೆಗಳನ್ನು ಕಟ್ಟಿದ್ದಾರೆ.ಅವರು ತಮ್ಮ ಮನೆಯ ಕೊಟ್ಟಿಗೆಯನ್ನು ಕೆಡವಲು ಅವರೇ ಕಾರಣ ಎಂದು ಆರೋಪಿಸಿದ್ದಾರೆ.ಶಾಸಕರು ಹೇಳಿದ ಕಾರಣ ಸ್ಥಳೀಯ ಅಧಿಕಾರಿಗಳು ಕೆಡವಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಎಮ್ಮೆಗಳಿಗೆ ಆಶ್ರಯವಿಲ್ಲದ ಕಾರಣ ಇಲ್ಲಿ ಕಟ್ಟಿಹಾಕುವ ನಿರ್ಧಾರ ಮಾಡಿದ್ದೇವೆ ಎಂದು ಹೇಳಿದ್ದಾರೆ. ಎಮ್ಮೆಗಳಿಗೆ ಹೊಸ …
Read More »
BigTv News
August 1, 2025
Breaking News, Crime, ಕರ್ನಾಟಕ
ಮೈಸೂರಿನ ಕೆಆರ್ ನಗರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪು ಹೊರಬೀಳುತ್ತಲೇ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕಣ್ಣೀರು ಹಾಕಿದ ಘಟನೆ ನಡೆದಿದೆ.ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದ್ದು, ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ಪ್ರಜ್ವಲ್ ರೇವಣ್ಣ …
Read More »
BigTv News
August 1, 2025
Breaking News
ವರನಟ ಡಾ.ರಾಜ್ ಕುಮಾರ್ ಸಹೋದರಿ ನಾಗಮ್ಮ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ನಾಗಮ್ಮ ವಿಧಿವಶರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ತಮಿಳುನಾಡಿನ ತಾಳವಾಡಿ ತಾಲೂಕಿನ ದೊಡ್ಡ ಗಾಜನೂರಿನಲ್ಲಿ ಅವರು ಮೃತಪಟ್ಟಿದ್ದಾರೆ. ವರನಟ ಡಾ.ರಾಜ್ ಕುಮಾರ್ ಅವರಿಗೆ ನಾಗಮ್ಮ ಎಂಬ ಸಹೋದರಿ ಇದ್ದರು. ಅವರು ವರನಟ ಡಾ. ರಾಜ್ಕುಮಾರ್ ಅವರ ಹಿರಿಯ ಸಹೋದರಿ ಮತ್ತು ಗಾಜನೂರಿನಲ್ಲಿ ವಾಸಿಸುತ್ತಿದ್ದರು. ಪುನೀತ್ ಕುಮಾರ್ ಅವರು ನಿಧನ ಹೊಂದಿರುವ ವಿಚಾರ ನಾಗಮ್ಮ ಅವರಿಗೆ ಗೊತ್ತೇ …
Read More »
BigTv News
August 1, 2025
Breaking News
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಹದಾಯಿ ಹೋರಾಟ ಮುಂದುವರಿದಿದೆ. ಈ ಭಾಗದ ಬಹುಬೇಡಿಕೆಯ ಯೋಜನೆಗೆ ರೈತ ಹೋರಾಟಗಾರರು ಮುಂದಾಗಿದ್ದು, ರಸ್ತೆ ತಡೆದು ವಿನೂತನ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಮಹದಾಯಿ ಹೋರಾಟ ಇದು ನಿನ್ನೆ ಮೊನ್ನೆಯದಲ್ಲ. ರೈತರಿಗೆ ಮಾತ್ರವೇ ಇರುವ ಯೋಜನೆಯಂತೂ ಅಲ್ಲವೇ ಅಲ್ಲ. ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರ ಕುಡಿಯುವ ನೀರಿನ ಭವಣೆ ನೀಗಿಸುವ ಮಹತ್ವದ ಯೋಜನೆ. ಈ ಯೋಜನೆಯ ಹೋರಾಟ ಈಗ …
Read More »
BigTv News
August 1, 2025
Breaking News
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟ ಹಾಗೆ ಅನಾಮಿಕ ದೂರುದಾರ ಗುರುತಿಸಿರುವಂತಹ ಸ್ಥಳಗಳಲ್ಲಿ ಶೋಧ ಕಾರ್ಯ ಮುಂದುವರೆದಿದೆ . ಈ ನಡುವೆ ಧರ್ಮಸ್ಥಳ ಸುತ್ತ ಶವಗಳನ್ನ ಹೂತಿಟ್ಟಂತಹ ಆರೋಪ ಮಾಡಿರುವ ದೂರುದಾರ ಯಾರು ಅನ್ನೋದು ಧರ್ಮಸ್ಥಳದ ಜನರಿಗೆ ಗೊತ್ತಿದೆ.ಎಲ್ಲಾ ಹೆಣವನ್ನು ನಾನೇ ಹೂತಿದ್ದು, ಅಲ್ಲಿನ ಮ್ಯಾನೇಜರ್ಸ್ ಹೆದರಿಗೆ ಈ ಕೆಲಸ ಮಾಡಿದ್ದಾರೆ. ಪೊಲೀಸ್ ಅವರು ಬರಲೇ ಇಲ್ಲ ಎಂದು ಹೇಳಿದ್ದಾರೆ.ನಾವು ಈ ವ್ಯಕ್ತಿಯನ್ನು ನೋಡುವಾಗ ಎಲ್ಲಿರಿಗೂ ಗೊತ್ತಿದೆ ಆತ ಯಾರು ಅನ್ನೋದು. ನಾನು …
Read More »
BigTv News
August 1, 2025
Breaking News
ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನೋರ್ವ ಜುಲೈ 31ರ ತಡರಾತ್ರಿ ಬೆಟಾಲಿಯನ್ ಪ್ರಧಾನ ಕಚೇರಿಯಿಂದ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.ಸುಗಮ್ ಚೌಧರಿ ನಾಪತ್ತೆಯಾದ ಬಗ್ಗೆ ಪ್ರಕರಣ ದಾಖಲಾಗಿದ್ದು, ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.ಎಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಜಮ್ಮುಕಾಶ್ಮೀರದ ವಿವಿಧ ಭಾಗಗಳಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಯನ್ನು ನಡೆಸುತ್ತಿರುವ ಮಧ್ಯೆ ಈ ಘಟನೆ ನಡೆದಿದೆ.
Read More »
BigTv News
August 1, 2025
Breaking News
ರಾಧೇ.. ರಾಧೇ..’ ಎಂದು ಶುಭ ಕೋರಿದ ಮೂರೂವರೆ ವರ್ಷದ ವಿದ್ಯಾರ್ಥಿನಿಗೆ ಥಳಿಸಿ, ಬಾಯಿಗೆ ಟೇಪ್ ಅಂಟಿಸಿದ ಆರೋಪದಲ್ಲಿ ದರ್ಗ್ ಜಿಲ್ಲೆಯ ಖಾಸಗಿ ಶಾಲೆಯೊಂದರ ಮಹಿಳಾ ಪ್ರಾಂಶುಪಾಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
Read More »