BigTv News
July 27, 2025
Breaking News
ಇನ್ಸ್ಟಾಗ್ರಾಂ ನಲ್ಲಿ ಪರಿಚಯವಾದ ಯುವಕನೋರ್ವ ವಿವಾಹಿತೆ ಮಹಿಳೆಯೊಂದಿಗೆ ಲವ್ ಹೆಸರಿನಲ್ಲಿ ಆಕೆಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿ ಮೋಸ ಮಾಡಿದ್ದು, ಇದರಿಂದ ಮನನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.ಆದಷ್ಟು ಬೇಗ ಮದುವೆಯಾಗೋಣ ಎಂದು ಹೇಳಿ ಆಕೆಯೊಂದಿಗೆ ಸಾಕಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ.ಈ ವೇಳೆ ಅಕ್ಕಪಕ್ಕದಲ್ಲಿದ್ದ ಮೀನುಗಾರರು ಮಹಿಳೆಯನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ ನದಿ ನೀರಿನ ರಭಸಕ್ಕೆ ಮಹಿಳೆ ಕೊಚ್ಚಿಕೊಂಡು ಹೋಗಿದ್ದಾಳೆ. ಸದ್ಯ ಸ್ಥಳಕ್ಕೆ ಹೂವಿನಹಡಗಲಿ ಪೊಲೀಸರು …
Read More »
BigTv News
July 27, 2025
Breaking News
ಪೋಷಕರು ಬೈದರು ಎಂದು ನೊಂದು ಹಾವೇರಿಯಿಂದ ಮನೆ ಬಿಟ್ಟು ಹೋಗಿದ್ದ ಅಕ್ಕ-ತಂಗಿ ಇಬ್ಬರೂ ಪುಣೆಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.ಆತಂಕಕ್ಕೀಡಾದ ಪೋಷಕರು ಹಾವೇರಿ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದರು. ಅಕ್ಕ-ತಂಗಿ ನಾಪತ್ತೆಯಾಗಿರುವ ದೂರು ದಾಖಲಾಗಿತ್ತು. ಪೊಲೀಸರು ಹುಡುಕಾಟ ನಡೆಸಿದ್ದಾಗ, ಅಕ್ಕ-ತಂಗಿ ಇಬ್ಬರೂ ಮಹಾರಾಷ್ಟ್ರದ ಪುಣೆಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಪೋಷಕರು ಬೈದರು ಎಂಬ ಕಾರಣಕ್ಕೆ ಇಬ್ಬರೂ ಮನೆ ಬಿಟ್ಟು ಹೋಗಿದ್ದಾರೆ ಎಂದು ತಿಳಿದುಬಂದಿದೆ.
Read More »
BigTv News
July 27, 2025
Breaking News
ರೈತರಿಗೆ ನಕಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಪೂರೈಕೆ ಮಾಡುತ್ತಿರುವ ಕಂಪನಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದ್ದಾರೆ.ರೈತ ಸಮುದಾಯಕ್ಕೆ ಯಾವುದೇ ತೊಂದರೆಗಳು ಭಾದಿಸದಂತೆ ನೋಡಿಕೊಳ್ಳಬೇಕಾಗಿರುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕಿದೆ. ಸಕಾಲದಲ್ಲಿ ರೈತಸಮೂಹಕ್ಕೆ ಗುಣಮಟ್ಟದ ಬಿತ್ತನೆ ಬೀಜ, ಅಗತ್ಯ ರಸಗೊಬ್ಬರ ದೊರಕಲು ಸಾಧ್ಯವಿರುವ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.
Read More »
BigTv News
July 27, 2025
Breaking News
ಗ್ರಾಮ ಪಂಚಾಯತ್ ಸದಸ್ಯೆಯೊಬ್ಬಳು ತನ್ನ ಅನೈತಿಕ ಸಂಬಂಧದ ಪೋಷಣೆಗಾಗಿ ಸುಪಾರಿ ಕೊಟ್ಟು ಗಂಡನನ್ನೇ ಕೊಲ್ಲಿಸಿದ ಹಾಗೂ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಿದ ಘಟನೆ ನಡೆದಿದೆ. ಇಷ್ಟಲ್ಲದೆ, ಗಂಡ ಸಾವಿನ ಬಳಿಕ ಪತ್ರಿಕಾಗೋಷ್ಠಿಯನ್ನೂ ನಡೆಸಿದ ಈಕೆ, ಗಂಡನ ಸಾವು ಅನುಮಾನಾಸ್ಪದವಾಗಿದೆ ಎಂದೂ ಹೇಳಿದ್ದಳು.ಬೆಂಗಳೂರಿನ ನಾಲ್ವರು ಸುಪಾರಿ ಕಿಲ್ಲರ್‌ಗಳಿಗೆ ಹಣ ಕೊಟ್ಟು ಪತಿಯ ಕೊಲೆ ಮಾಡಿಸಿರುವುದು ತನಿಖೆ ವೇಳೆ ಬಯಲಾಗಿದೆ. ಸದ್ಯ ಎಂ.ಕೆ.ದೊಡ್ಡಿ ಪೊಲೀಸರು ಗ್ರಾ.ಪಂ ಸದಸ್ಯೆ ಚಂದ್ರಕಲಾಳನ್ನು ಬಂಧಿಸಿದ್ದು, ಉಳಿದ ಆರೋಪಿಗಳ …
Read More »
BigTv News
July 27, 2025
Breaking News
ಭೀಮನ ಅಮವಾಸ್ಯೆಯಂದು ಗಂಡನಿಗೆ ಪೂಜೆ ಮಾಡಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಬಹುದೊಡ್ಡ ಸತ್ಯವೊಂದು ಬಯಲಾಗಿದೆ. ಬೆಂಗಳೂರಿನ ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದಲ್ಲಿ ಕಳೆದ ಗುರುವಾರ ಸ್ಪಂದನಾ ಎಂಬಾಕೆ ಆತ್ಮಹತ್ಯೆಗೆ ಶರಣಾಗಿದ್ದಳು.ಮದುವೆಯಾದಾಗಿನಿಂದಲೂ ಗಂಡನ ಮನೆಯವರು ಸ್ಪಂದನಾಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. 5 ಲಕ್ಷ ರೂ. ಹಣವನ್ನ ಕೊಟ್ಟು ರಾಜಿ ಸಂಧಾನ ಮಾಡಿಸಿದ್ದರು ಎನ್ನಲಾಗಿತ್ತು. ಆರೋಪಿ ಕೂಡ ವರದಕ್ಷಿಣೆ ನೀಡುತ್ತಿದ್ದ. ಈ ಕುರಿತು ಸ್ಪಂದನಾ ತನ್ನ ತಾಯಿಗೆ ಫೋನ್ …
Read More »
BigTv News
July 26, 2025
Breaking News
ಕೇ0ದ್ರ ಕಾರಾಗೃಹದಿಂದ ತಪ್ಪಿಸಿಕೊಂಡ ಸೌಮ್ಯಾ ಕೊಲೆ ಪ್ರಕರಣದ ಅಪರಾಧಿಯನ್ನು ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ. ಗೋವಿಂದಚಾಮಿ ಸೆರೆಯಾದ ಅಪರಾಧಿ. ಈತ ಕಣ್ಣೂರು ನಗರದ ಡಿಸಿಸಿ ಕಚೇರಿ ಸಮೀಪದ ಖಾಲಿ ಕಟ್ಟಡದ ಬಳಿಯ ಬಾವಿಯಲ್ಲಿ ಅಡಗಿದ್ದ.ಸ್ನಿಫರ್ ನಾಯಿ ಸೇರಿದಂತೆ ಪೊಲೀಸ್ ತಂಡ ಆ ಪ್ರದೇಶಕ್ಕೆ ತಲುಪಿತು. ಅಪರಾಧಿ ಅಡಗಿರುವ ಪಾಳುಬಿದ್ದ ಕಟ್ಟಡ ಪರಿಶೀಲಿಸಿತು. ಸ್ಥಳೀಯರು ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಆ ಪ್ರದೇಶದಲ್ಲಿ ತೀವ್ರ ಶೋಧ ನಡೆಸಿ ಆತನನ್ನು ಬಂಧಿಸುವಲ್ಲಿ …
Read More »
BigTv News
July 26, 2025
Breaking News
ವರದಕ್ಷಿಣೆಗಾಗಿ ನಡೆದ ಸಂಘರ್ಷದಲ್ಲಿ 8 ತಿಂಗಳ ಮಗುವೊಂದನ್ನು ಅದರ ತಂದೆ ತಲೆಕೆಳಗಾಗಿ ಕಾಲುಗಳಿಂದ ಹಿಡಿದು, ಸುಡುವ ಬಿಸಿಲಿನಲ್ಲಿ ಇಡೀ ಗ್ರಾಮದಲ್ಲಿ ಮೆರವಣಿಗೆ ಮಾಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ರಾಮಪುರ ಜಿಲ್ಲೆಯಲ್ಲಿ ನಡೆದಿದೆ. ಈ ಕಳವಳಕಾರಿ ವಿಡಿಯೋ ಜುಲೈ 19, 2025 ರಂದು ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಮಪುರ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ, ಸಾರ್ವಜನಿಕ ಶಾಂತಿ ಕದಡಿದ ಆರೋಪದಡಿ ತಂದೆಯ …
Read More »
BigTv News
July 26, 2025
Breaking News
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳ ತನಿಖೆಯನ್ನು ಆರಂಭಿಸಿರುವ ವಿಶೇಷ ತನಿಖಾ ದಳ(ಎಸ್‌ಐಟಿ) ದೂರು ನೀಡಿರುವ ಅನಾಮೇಧಯ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದ್ದು, ಸ್ಥಳ ಮಹಜರಿಗೆ ಸಿದ್ಧತೆ ಮಾಡಿಕೊಂಡಿದೆ.ಜಾಗದ ಪರಿಶೀಲನೆ ಬಳಿಕ ಆ ಜಾಗದ ಮಣ್ಣಿನ ಎಫ್‍ಎಸ್‍ಎಲ್ ಪರೀಕ್ಷೆ ಕೂಡ ನಡೆಯಲಿದೆ. ಅನಾಮಿಕ ಕೊಟ್ಟ ಬುರುಡೆಯಲ್ಲಿರೋ ಮಣ್ಣಿನ ಕಣ ಮತ್ತು ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ತೋರಿಸುವ ಜಾಗದ ಮಣ್ಣಿನ ಪರೀಕ್ಷೆ ನಡೆಯಲಿದ್ದು, ಎರಡೂ ಮಣ್ಣಿನ ಕಣಗಳನ್ನು ಮ್ಯಾಚ್ ಮಾಡಿ ನೋಡಿ …
Read More »
BigTv News
July 26, 2025
Breaking News
ಮನೆಯ ಗೋಡೆ ಕುಸಿದು ಕಾರ್ಮಿಕ ಮಹಿಳೆ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲು ಗ್ರಾಮದಲ್ಲಿ ಇಂದು ಬೆಳಿಗ್ಗೆ 5.30ಕ್ಕೆ ನಡೆದಿರುವ ದುರ್ಘಟನೆ ನಡೆದಿದೆ.ಮಣ್ಣಿನ ಗೋಡೆ ಕುಸಿದು ತಲೆ ಭಾಗಕ್ಕೆ ಬಿದ್ದ ಹಿನ್ನೆಲೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕಂದಾಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸುಷ್ಮಾ(37) ಮೃತ ಮಹಿಳೆ. ಮನೆಯೊಳಗಿದ್ದ ಮೂರು ಮಕ್ಕಳು ಹಾಗೂ ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Read More »
BigTv News
July 26, 2025
Breaking News
ವರುಣನ ಆರ್ಭಟಕ್ಕೆ ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದ ಘಟನೆ ಸೋಮವಾರಪೇಟೆ ತಾಲ್ಲೂಕಿನ ಕುಂಬೂರುವಿನಲ್ಲಿ ನಡೆದಿದೆ. ಆಟೋ ಜಖಂ ಆಗಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ.ಮರ ಬಿದ್ದ ಪರಿಣಾಮ ಚಂಚಾರಕ್ಕೆ ಅಡ್ಡಿಯಾಗಿದ್ದು, ಆಟೋ ಮೇಲೆ ಮರ ಬಿದ್ದು ಗಾಯಗೊಂಡಿದ್ದ ಚಾಲಕ ಸೋಮವಾರಪೇಟೆ ಆಸ್ಪತ್ರೆಗೆ ದಾಖಲಾಗಿದ್ದಾರೆ.ಸ್ಥಳಕ್ಕೆ ಸೋಮವಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು
Read More »