BigTv News
July 26, 2025
Breaking News
ತಾಳಿಕೋಟಿ ಗಣೇಶ ನಗರದಲ್ಲಿ ಗುರುವಾರ ತಡರಾತ್ರಿ 6 ಮಂದಿ ಮುಸುಕುದಾರಿ ‘ಚಡ್ಡಿ ಗ್ಯಾಂಗ್’ ಕಳ್ಳರು ಮನೆಯೊಂದರ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ.ಮುಖಕ್ಕೆ ಮುಸುಕು ಹಾಕಿಕೊಂಡಿರುವ ಆರು ಜನರ ತಂಡ ಬೀಗ ಹಾಕಿದ್ದ ಮನೆಯ ಕಳ್ಳತನ ಮಾಡಲು ನುಗ್ಗಿದೆ. ನಾಯಿಗಳ ಕೂಗಾಟದಿಂದಾಗಿ ಮನೆಯ ಮಾಳಿಗೆ ಮನೆಯಲ್ಲಿ ಮಲಗಿದ್ದ ಅದೇ ಮನೆಯ ಬಾಡಿಗೆದಾರ ರಾಮನಗೌಡ ಕರಕಳ್ಳಿಯವರು ಎಚ್ಚೆತ್ತು, ಯಾರೆಂದು ವಿಚಾರಿಸುವಾಗಲೇ ತೂರಿಬಂದ ಕಲ್ಲುಗಳಿಂದ ಭಯಗೊಂಡು ಚೀರಾಟ ಪ್ರಾರಂಭಿಸಿದ್ದಾರೆ. ಇದೇ ವೇಳೆಗೆ ಅಲ್ಲಿನ ನಿವಾಸಿಯೊಬ್ಬರು …
Read More »
BigTv News
July 26, 2025
Breaking News
ಗುಜರಾತ್ನ ಅಹಮದಾಬಾದ್ ನಗರದಲ್ಲಿ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ, ಅಲ್ಲಿ ನವರಂಗಪುರದಲ್ಲಿರುವ ಪ್ರತಿಷ್ಠಿತ ಶಾಲೆಯ 10 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯೊಬ್ಬಳು ಶಾಲೆಯ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಶಾಲಾ ಆಡಳಿತ ಮಂಡಳಿಯು ತಕ್ಷಣ ಆಂಬ್ಯುಲೆನ್ಸ್ಗೆ ಕರೆ ಮಾಡಿ ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿತು, ಆದರೆ ವೈದ್ಯರ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಬಾಲಕಿಯನ್ನು ಉಳಿಸಲು ಸಾಧ್ಯವಾಗಲಿಲ್ಲ.
Read More »
BigTv News
July 26, 2025
Breaking News
ಕಲಬುರಗಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ ಹಾಗೂ ಶನಿವಾರ ಬೆಳಗಿನ ಜಾವ ಭಾರಿ ಮಳೆಯಾಗುತ್ತಿದೆ.ಇದರಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದೆ. ಮಳೆಯಿಂದ ಶಿಥಿಲಗೊಂಡಿದ್ದ ಮನೆಗಳು ನೆಲಕ್ಕುರುಳಿವೆ. ಚಿತ್ತಾಪುರ ತಾಲ್ಲೂಕಿನ ದಂಡೋತಿ ಗ್ರಾಮದಲ್ಲಿ ಬಂದಗಿಸಾಬ್ ರಸೂಲಸಾಬ್ ಡೋಂಗಾ ಅವರ ಮನೆಯ ಮೂರು ಕೋಣೆಗಳು ಮಳೆಯಿಂದಾಗಿ ಉರುಳಿ ಬಿದ್ದಿವೆ.
Read More »
BigTv News
July 26, 2025
Breaking News
ಟೇಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಭಾರತದ ವಿರುದ್ಧ ಅತ್ಯಧಿಕ ಸೆಂಚುರಿ ಸಿಡಿಸಿದ್ದು ಯಾರು? ಈ ಪ್ರಶ್ನೆಗೆ ಸದ್ಯದ ಉತ್ತರ ಜೋಸೆಫ್ ಎಡ್ವರ್ಡ್ ರೂಟ್ ಅಲಿಯಾಸ್ ಜೋ ರೂಟ್. ಮ್ಯಾಂಚೆಸ್ಟರ್ನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ 150 ರನ್ಗಳ ಮ್ಯಾರಥಾನ್ ಇನಿಂಗ್ಸ್ ಆಡುವ ಮೂಲಕ ರೂಟ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.
Read More »
BigTv News
July 26, 2025
Breaking News
ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದ ಹೆಬ್ಬಾಗಿಲಿನ ಬೀಗ ಮುರಿದು ಕಳ್ಳತನಗೈಯುಲು ವಿಫಲ ಯತ್ನ ನಡೆಸಿದ ಘಟನೆ ಶನಿವಾರ ಮುಂಜಾವ 3 ಗಂಟೆ ಸುಮಾರಿಗೆ ನಡೆದಿದೆ.ಕಳ್ಳರ ಕೃತ್ಯ ಗಮನಿಸಿದ ದೇವಸ್ಥಾನದ ಕಾವಲುಗಾರ ಬೊಬ್ಬಿಟ್ಟಾಗ ಕಳ್ಳರು ಕಾವಲುಗಾರನಿಗೆ ಚಾಕು ತೋರಿಸಿ ಜೀವ ಬೆದರಿಕೆಯೊಡ್ಡಿ ಪಲಾಯನಗೈದಿದ್ದಾರೆ.ಪಲಾಯನ ಮಾಡಿರುವುದು ಗೊತ್ತಾಗಿದೆ. ತಕ್ಷಣ ಸ್ಥಳೀಯರು ಹುಡುಕಾಡಿದಾಗ ಕಡಿಯಾಳಿ ಪೆಟ್ರೋಲ್ ಬಂಕ್ ಬಳಿ ಇಬ್ಬರು ಸೆರೆ ಸಿಕ್ಕಿದ್ದಾರೆ.ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಗಳಿಬ್ಬರು ಕೇರಳ ಮೂಲದವರೆಂದು ತಿಳಿದು ಬಂದಿದೆ.
Read More »
BigTv News
July 25, 2025
Breaking News
ರಾಜ್ಯದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಪರೀಕ್ಷಾ ಪದ್ದತಿಯಲ್ಲಿ ಮಹತ್ವದ ಬದಲಾವಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಕರಡು ನಿಯಮಾವಳಿ ಪ್ರಕಟಿಸಿದೆ. ಇನ್ಮುಂದೆ ಪಾಸ್ ಆಗಲು 35 % ಅಲ್ಲ 33 % ಪಡೆದರೆ ಸಾಕು ಎಂದು ಹೇಳಿದೆ.ಇದರಿಂದ ಪರಿಣಾಮ ಬೀರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಮತ್ತು ಅಧಿಕೃತ ಗೆಜೆಟ್ನಲ್ಲಿ ಪ್ರಕಟವಾದ ದಿನಾಂಕದಿಂದ 15 ದಿನಗಳ ಅವಧಿ ಮುಗಿದ ನಂತರ …
Read More »
BigTv News
July 25, 2025
Breaking News
ಥೈಲ್ಯಾಂಡ್-ಕಾಂಬೋಡಿಯಾ ಗಡಿಯಲ್ಲಿ ನಡೆಯುತ್ತಿರುವ ಅಶಾಂತಿಯ ಮಧ್ಯೆ ಏಳು ಪ್ರಾಂತ್ಯಗಳಿಗೆ ಪ್ರಯಾಣ ತಪ್ಪಿಸುವಂತೆ ಭಾರತೀಯ ಪ್ರಜೆಗಳಿಗೆ ಒತ್ತಾಯಿಸಿ ಥೈಲ್ಯಾಂಡ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಶುಕ್ರವಾರ ಸಲಹೆ ನೀಡಿದೆ. ದೀರ್ಘಕಾಲದಿಂದ ವಿವಾದಿತ ಗಡಿ ಪ್ರದೇಶಗಳಲ್ಲಿ ಸಶಸ್ತ್ರ ಘರ್ಷಣೆಗಳು ಉಲ್ಬಣಗೊಳ್ಳುತ್ತಿರುವುದರಿಂದ, ತಿಂಗಳುಗಳಿಂದ ಕುದಿಯುತ್ತಿರುವ ಉದ್ವಿಗ್ನತೆ ತೀವ್ರಗೊಂಡಿರುವುದರಿಂದ ಈ ಸಲಹೆ ಬಂದಿದೆ.
Read More »
BigTv News
July 25, 2025
Breaking News
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಪತ್ರದಲ್ಲಿ ಪ್ರಸ್ತಾಪಿಸಿರುವ ಅಂಶಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆ, ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ 211(ಎ), ಬಿ.ಎನ್.ಎಸ್. ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಯನ್ನು ಕೈಗೊಳ್ಳಲು ಒಂದು ವಿಶೇಷ ತನಿಖಾ ತಂಡವನ್ನು ರಚಿಸುವುದು ಸೂಕ್ತವೆಂದು ಸರ್ಕಾರವು ತೀರ್ಮಾನಿಸಿ ಸರ್ಕಾರ ಎಸ್‌ಐಟಿ ರಚಿಸಿ ಆದೇಶಿಸಿದೆ.ಪ್ರಕರಣದ ತನಿಖೆ ನಡೆಸಲು ಇಂದು ಎಸ್ ಐ ಟಿ ಅಧಿಕಾರಿಗಳ ತಂಡ ಧರ್ಮಸ್ಥಳಕ್ಕೆ ತೆರಳುವ ನಿರೀಕ್ಷೆಯಿದ್ದು, ತಂಡವು ಬೆಳ್ತಂಗಡಿಯಲ್ಲಿ …
Read More »
BigTv News
July 25, 2025
Breaking News
ಲಿವಿಂಗ್ ಇನ್ ರಿಲೇಷನ್ಶಿಪ್ನಲ್ಲಿದ್ದ ಗೆಳತಿಯೊಬ್ಬಳು ತನ್ನ ಗೆಳಯನನ್ನೇ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ನಜೀಬಾಬಾದ್ನ ಆದರ್ಶನಗರದಲ್ಲಿ ಬೆಳಕಿಗೆ ಬಂದಿದೆ.ಅಮಿತ್ ಸಾಗರ್ ಮತ್ತು ಮಮತಾ ಕಳೆದ ಮೂರು ವರ್ಷಗಳಿಂದ ಲಿವಿಂಗ್ ರಿಲೇಷನ್ಶಿಪ್ನಲ್ಲಿದ್ದರು. ಈ ವೇಳೆ ಅಮಿತ್ ಸಾಗರ್ ಹಾಗಾಗ ಕುಡಿದು ಬಂದು ಮಮತಾ ಮೇಲೆ ಹಲ್ಲೆ ಮಾಡುತ್ತಿದ್ದ. ಈತನ ಕಿರುಕುಳ ತಾಳಲಾರದೇ ಕೊಲೆ ಮಾಡಿರುವುದಾಗಿ ಪೊಲೀಸ್ ತನಿಖೆಯಿಂದ ಬಹಿರಂಗವಾಗಿದೆ. ಅಲ್ಲದೆ, ಗೆಳೆಯನನ್ನು ಕೊಲೆ ಮಾಡಿ ಸಹಜ ಮೃತ …
Read More »
BigTv News
July 25, 2025
Breaking News
ಕನಸಿನಲ್ಲಿ ನನ್ನ ತಾಯಿ ಬಾ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವೆ’ ಎಂದು ಡೆತ್ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಸೋಲಾಪುರದಲ್ಲಿ ನಡೆದಿದೆ.ಈ ಕುರಿತು ಸೋಲಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಬಾಲಕ ಶಿವಶರಣ್ ಬರೆದ ಡೆತ್ ನೋಟ್ ಅಧಿಕಾರಿಗಳಿಗೆ ಸಿಕ್ಕಿದ್ದು, ನೋಟ್ನಲ್ಲಿ ನನ್ನ ತಾಯಿ ತನ್ನಲ್ಲಿಗೆ ಬರಲು ಕೇಳಿಕೊಂಡಳು ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ ಎಂದು ಬರೆದಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
Read More »