Breaking News

Breaking News

WWE ದಿಗ್ಗಜ ರಸ್ಲರ್ ಹಲ್ಕ್ ಹೋಗಾನ್ ನಿಧನ!

ವೃತ್ತಿಪರ ಕುಸ್ತಿ ಸೂಪರ್‌ಸ್ಟಾರ್ ಹಲ್ಕ್ ಹೋಗನ್(71) ಅವರು ಹೃದಯಾಘಾತದಿಂದ ಗುರುವಾರ ನಿಧನರಾಗಿದ್ದಾರೆ.ಹೋಗನ್ ಬಹಳ ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಅದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಗುರುವಾರ ಬೆಳಿಗ್ಗೆ 9.51 ರ ಸುಮಾರಿಗೆ, ಹಲ್ಕ್ ಹೋಗನ್ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ವೈದ್ಯಕೀಯ ತಂಡವನ್ನು ಮನೆಗೆ ಕರೆಸಿ, ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆಸ್ಪತ್ರೆ ತಲುಪುವ ಮುನ್ನವೇ ಮೃತಪಟ್ಟಿರುವುದಾಗಿ ವರದಿಯಾಗಿದೆ.

Read More »

ಚಿಂಚೋಳಿಯಲ್ಲಿ ಭಾರೀ ಮಳೆ: ಮುಲ್ಲಾ ಮಾರಿ ಜಲಾಶಯದಿಂದ 1200 ಕ್ಯೂಸೆಕ್ ನೀರು ಹೊರಕ್ಕೆ!

ಚಿಂಚೋಳಿ ತಾಲೂಕಿನಲ್ಲಿ ಸುರಿಯುತ್ತಿರುವ ಅಬ್ಬರದ ಮಳೆಯಿಂದ ಕೆಳದಂಡೆ ಮುಲ್ಲಾ ಮಾರಿ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಜೋರಾದ ಮಳೆ ಬೀಳುತ್ತಿದ್ದರಿಂದ ಜಲಾಶಯದಲ್ಲಿ ಒಳ ಹರಿವು ಹೆಚ್ಚಾಗುತ್ತಿದ್ದು ಜಲಾಶಯ ಸುರಕ್ಷತೆ ಕಾಪಾಡುವುದಕ್ಕಾಗಿ ಎರಡು ಗೇಟಿನಿಂದ ನದಿಗೆ ನೀರು ಹರಿ ಬಿಡಲಾಗುತ್ತಿದೆ ಎಂದು ಯೋಜನೆಯ ಸಹಾಯಕ ಎಂಜಿನಿಯರ್ ವಿನಾಯಕ ಚೌಹಾಣ್ ತಿಳಿಸಿದ್ದಾರೆ.ಕೆಳದಂಡೆ ಮುಲ್ಲಾ ಮಾರಿ ಯೋಜನೆಯ ಜಲಾಶಯದಲ್ಲಿ ಒಳಹರಿವು 280 ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು ಗುರುವಾರ 2 ಗೇಟನ್ನು ತಲಾ ಒಂದು ಅಡಿ ಮೇಲೆತ್ತಿ …

Read More »

ಪತಿ ಜತೆ ಜಗಳ: 5 ವರ್ಷದ ಪುತ್ರಿಯ ಕೊಂದ ತಾಯಿ!

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಹಿಳೆಯೊಬ್ಬಳು ತನ್ನ 5 ವರ್ಷದ ಮಗಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಮಹಾದೇವಿ(28) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಅದಕ್ಕೂ ಮೊದಲು ತನ್ನ 5 ವರ್ಷದ ಪುತ್ರಿ ಸಿರಿಯನ್ನು ಕತ್ತು ಹಿಸುಕಿ ಹತ್ಯೆಗೈದಿದ್ದಾಳೆ

Read More »

ಲೈಂಗಿಕವಾಗಿ ತೃಪ್ತಿ ಪಡಿಸಲಿಲ್ಲವೆಂದು ಗಂಡನನ್ನು ಕೊಂದ ಹೆಂಡತಿ!

ಗಂಡನ ನಿರ್ಲಕ್ಷ್ಯ, ಲೈಂಗಿಕ ಕ್ರಿಯೆಯಲ್ಲಿನ ನಿರಾಸಕ್ತಿಯಿಂದ ಬೇಸತ್ತ ಆ ಮಹಿಳೆ ತನ್ನ ಕಸಿನ್ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಕೊನೆಗೆ ತನ್ನ ಸಂಬಂಧಕ್ಕೆ ಅಡ್ಡ ಬರುತ್ತಾನೆಂದು ಆಕೆ ಗಂಡನನ್ನು ಕೊಲೆ ಮಾಡಿ, ಆತ್ಮಹತ್ಯೆಯ ಕತೆ ಕಟ್ಟಿದ್ದಾಳೆ.ಪೊಲೀಸರ ಪ್ರಕಾರ, ಜುಲೈ 20ರ ಸಂಜೆ 4.15ರ ಸುಮಾರಿಗೆ ನಿಹಾಲ್ ವಿಹಾರ್ ಪೊಲೀಸ್ ಠಾಣೆಗೆ ಸ್ಥಳೀಯ ಆಸ್ಪತ್ರೆಯಿಂದ ಕರೆ ಬಂದಿದ್ದು, ಮಹಿಳೆಯೊಬ್ಬರು ಮೊಹಮ್ಮದ್ ಶಾಹಿದ್ ಎಂಬ ಗುರುತಿಸಲಾದ ತನ್ನ ಪತಿಯನ್ನು ಹಲವಾರು ಇರಿತದ ಗಾಯಗಳೊಂದಿಗೆ …

Read More »

ಬೆಂಕಿ ಹಚ್ಕೊಂಡು ಸಾವಿಗೆ ಶರಣಾದ ಗೃಹಿಣಿ!

ವರದಕ್ಷಿಣೆ ಕಿರುಕುಳವೂ ಸೇರಿದಂತೆ ಗಂಡನ ಅಪ್ಪನೇ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ 32 ಹರೆಯದ ಗೃಹಿಣಿಯೊಬ್ಬಳು ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾದ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ 32 ವರ್ಷದ ಮಹಿಳೆ ರಂಜಿತಾ ಬೆಂಕಿ ಹಚ್ಚಿಕೊಂಡಿದ್ದು, ಕೂಡಲೇ ಆಕೆಯನ್ನು ಮಧುರೈನ ರಾಜಾಜಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರು 70 ಶೇಕಡಾ ಸುಟ್ಟ ಗಾಯಗಳಾಗಿದ್ದರಿಂದ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ.

Read More »

ವಿಜಯಪುರ | ಎರಡು ಬಿ.ಇಡಿ ಕಾಲೇಜುಗಳ ಮಾನ್ಯತೆ ರದ್ದು: ₹ 60 ಲಕ್ಷ ದಂಡ!

ವಿದ್ಯಾರ್ಥಿಗಳಿಂದ ಮನಸ್ಸಿಗೆ ಬಂದಂತೆ ಡೊನೇಶನ್ ಹೆಸರಿನಲ್ಲಿ ದುಡ್ಡು ವಸೂಲಿ ಮಾಡುತ್ತಿದ್ದ ಜಿಲ್ಲೆಯ ಎರಡು ಬಿ.ಇಡಿ ಕಾಲೇಜುಗಳ ಮಾನ್ಯತೆಯನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು 3 ವರ್ಷ ರದ್ದು ಮಾಡಿದೆ. ಜೊತೆಗೆ ₹30 ಲಕ್ಷ ದಂಡ ವಿಧಿಸಿದೆ’ ಎಂದು ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ ಪೂಜಾರಿ ತಿಳಿಸಿದರು.ದಲಿತ ವಿದ್ಯಾರ್ಥಿ ಪರಿಷತ್ ಈ ಖಾಸಗಿ ಶಿಕ್ಷಣ ಸಂಸ್ಥೆಗಳ ಡೋನೆಷನ್ ಹಾವಳಿ ವಿರುದ್ಧ ನಿರಂತರವಾಗಿ ಹೋರಾಟ ಮಾಡುತ್ತ ಬರುತ್ತಿದೆ. ದಲಿತ ವಿದ್ಯಾರ್ಥಿ ಪರಿಷತ್ …

Read More »

ಅವಳಿ ನಗರದಲ್ಲಿ ಹೆಚ್ಚಾದ ಹೃದಯಾಘಾತ ಕೇಸ್: 32 ವರ್ಷದ ಶಂಕ್ರಯ್ಯ ಸಾವು!

ಹುಬ್ಬಳ್ಳಿ : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದಾಗಿ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.ಇತ್ತ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಹಿರೇಹರಕುಣಿ ಗ್ರಾಮದ 32 ವರ್ಷದ ಶಂಕ್ರಯ್ಯ ಗುರಯ್ಯನವರ ಎಂಬ ಯುವಕ ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿದ್ದಾರೆ.ನಿನ್ನೆ ಸಂಜೆ ಮನೆದಲ್ಲಿ ಊಟ ಮಾಡಿ ಮಲಗಿದ್ದ ಶಂಕ್ರಯ್ಯ ಅವರಿಗೆ ಇಂದು ಬೆಳಗ್ಗೆ ಎದೆ ನೋವು ಕಾಣಿಸಿಕೊಂಡು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆ ಅವರು ಸಾವನ್ನಪ್ಪಿದ್ದಾರೆ. ಯುವಕನ …

Read More »

ಫ್ರಿಡ್ಜ್‌ನಲ್ಲಿದ್ದ ಚಿಕನ್, ಮಟನ್, ಬೋಟಿ ಬಿಸಿ ಮಾಡಿ ತಿಂದು ಓರ್ವ ಸಾವು; ಮೂವರ ಸ್ಥಿತಿ ಗಂಭೀರ

ಫ್ರಿಡ್ಜ್‌ನಲ್ಲಿಟ್ಟ ಮಾಂಸಾಹಾರ ಸೇವಿಸಿ ಒಬ್ಬರು ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಒಟ್ಟು 9 ಜನರಲ್ಲಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಫುಡ್ ಪಾಯ್ಸನ್ ಸಾವಿಗೆ ಕಾರಣ ಎಂದು ಶಂಕಿಸಲಾಗಿದೆ.ಮರುದಿನ ಶ್ರೀನಿವಾಸ್ ಯಾದವ್ ಕುಟುಂಬ ಉಳಿದ ಮಾಂಸವನ್ನು ಬಿಸಿ ಮಾಡಿ ತಿಂದಿದೆ. ಸ್ವಲ್ಪ ಸಮಯದಲ್ಲೇ ಕುಟುಂಬದ 9 ಜನರಿಗೆ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿತು. ಕೂಡಲೇ ಎಲ್ಲರನ್ನೂ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಲಾಗಿದೆ.ಸದ್ಯದ ಮಾಹಿತಿ ಪ್ರಕಾರ, ಫುಡ್‌ ಪಾಯಿಸನ್‌ನಿಂದ …

Read More »

ದಾವಣಗೆರೆಯಲ್ಲಿ ಬೃಹತ್ ‘ಖೋಟಾ ನೋಟು’ ಜಾಲ ಪತ್ತೆ, ನಾಲ್ವರು ಆರೋಪಿಗಳು ಅರೆಸ್ಟ್.!

ದಾವಣಗೆರೆಯಲ್ಲಿ ಖೋಟಾ ನೋಟು ಜಾಲ ಪತ್ತೆಯಾಗಿದ್ದು, ನಾಲ್ವರನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಕುಬೇರಪ್ಪ, ಸಂತೋಷ್ ಕುಮಾರ್, ವೀರೇಶ್, ಹನುಮಂತಪ್ಪ ಎಂದು ಗುರುತಿಸಲಾಗಿದೆ. ಬಂಧಿತರಿಂದ 1 ಬೈಕ್ ಹಾಗೂ ಖೋಟಾ ನೋಟು ವಶಕ್ಕೆ ಪಡೆಯಲಾಗಿದೆ.ಜೈಲಿನಿಂದ ರಿಲೀಸ್ ಆಗಿದ್ದ ಆರೋಪಿ ಕುಬೇರಪ್ಪ ಎಂಬಾತ ಈ ದಂಧೆ ನಡೆಸುತ್ತಿದ್ದನು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಹರಿಹರ, ಹೊಸಪೇಟೆ ಸೇರಿದಂತೆ ಹಲವು ಕಡೆಗೆ ಇಲ್ಲಿಂದ ಖೋಟಾ ನೋಟು ಸಪ್ಲೈ …

Read More »

ಈ ಬಾರಿಯೂ ಅಂಬಾರಿ ಹೊರಲಿರುವ ಅಭಿಮನ್ಯು!

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆಯ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಈ ಬಾರಿಯೂ ಕ್ಯಾಪ್ಟನ್‌ ಅಭಿಮನ್ಯು ಅಂಬಾರಿ ಹೊರಲಿದ್ದಾನೆ.2025ನೇ ಸಾಲಿನ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಒಟ್ಟು 14 ಆನೆಗಳ ಪೈಕಿ 9 ಅನೆಗಳ ಪಟ್ಟಿಯನ್ನು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಬಿಡಗಡೆ ಮಾಡಿದರು.ಸತತ ಐದನೇ ಬಾರಿಯೂ ಕ್ಯಾಪ್ಟನ್‌ ಅಭಿಮನ್ಯು ನಾಡದೇವಿ ಚಾಮುಂಡೇಶ್ವರಿ ತಾಯಿ ವಿಗ್ರಹವಿರುವ ಸುಮಾರು 750 ಕೆಜಿ ತೂಕದ ಅಂಬಾರಿಯನ್ನು ಹೊತ್ತು ಹೆಜ್ಜೆ …

Read More »