BigTv News
July 23, 2025
Breaking News
‘ಅಲ್-ಖೈದಾ ಭಯೋತ್ಪಾದಕ ಸಂಘಟನೆಯ ಜಾಲವನ್ನು ಭೇದಿಸಿದ್ದೇವೆ. ಅಲ್-ಖೈದಾ ಜತೆಗೆ ನಿರಂತರವಾಗಿ ಸಂಪರ್ಕ ಹೊಂದಿದ್ದ ನಾಲ್ವರು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದೇವೆ’ ಎಂದು ಎಟಿಎಸ್ ಪ್ರಕಟಣೆಯಲ್ಲಿ ತಿಳಿಸಿದೆ.ನಿಷೇಧಿತ ಭಯೋತ್ಪಾದಕ ಸಂಘಟನೆ ಅಲ್-ಖೈದಾ ಜತೆ ಸಂಪರ್ಕ ಹೊಂದಿದ್ದ ನಾಲ್ವರು ಉಗ್ರರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Read More »
BigTv News
July 23, 2025
Breaking News
2024-25 ನೇ ಆರ್ಥಿಕ ವರ್ಷದಲ್ಲಿ ಅತೀ ಹೆಚ್ಚು ತಲಾ ಆದಾಯ ಹೊಂದಿದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ನಂಬರ್ 1 ಆಗಿದ್ದು ಇದಕ್ಕೆ ಗ್ಯಾರಂಟಿ ಯೋಜನೆಗಳೇ ಕಾರಣ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಹೊಗಳಿದ್ದಾರೆ. ಹಣಕಾಸು ಸಚಿವಾಲಯ ಸಲ್ಲಿಸಿದ ದತ್ತಾಂಶದಲ್ಲಿ ಕರ್ನಾಟಕದಲ್ಲಿ ತಲಾ ಆದಾಯ ಕಳೆದ 10 ವರ್ಷಗಳಲ್ಲಿ ದ್ವಿಗುಣವಾಗಿದೆ ಎಂಬ ಅಂಶ ಬೆಳಕಿಗೆ ಬಂದಿದೆ.ಜನ ಸಾಮಾನ್ಯರನ್ನು ಸಬಲೀಕರಣಗೊಳಿಸಲು ಗ್ಯಾರಂಟಿ ಯೋಜನೆಗಳು ಸಹಾಯ ಮಾಡಿವೆ. ಗ್ಯಾರಂಟಿ ಯೋಜನೆಗಳು ದಿವಾಳಿ …
Read More »
BigTv News
July 23, 2025
Breaking News
ಫರೂಕಾಬಾದ್‌ನಲ್ಲಿ ಮಾವಿನ ಹಣ್ಣು ತಿನ್ನಲೆಂದು ತೋಟಕ್ಕೆ ಹೋಗಿದ್ದ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯುಪಿ ಪೊಲೀಸರು ಆರೋಪಿಯನ್ನು ಎನ್ಕೌಂಟರ್ ಮೂಲಕ ಹೊಡೆದುರುಳಿಸಿದ್ದಾರೆ.ಆರೋಪಿ ಮನು ದೇಶಿ ನಿರ್ಮಿತ ಪಿಸ್ತೂಲ್ ನಲ್ಲಿ ಪೊಲೀಸರ ಮೇಲೆ ದಾಳಿ ನಡೆಸಿದ್ದಾನೆ. ಕೂಡಲೇ ಎಚ್ಚೆತ್ತ ಪೊಲೀಸರು ಸ್ವಯಂ ರಕ್ಷಣೆಗೆ ಆರೋಪಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಆರೋಪಿ ಮನು ಗಂಭೀರ ಗಾಯಗೊಂಡಿದ್ದ. ಬಳಿಕ ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, …
Read More »
BigTv News
July 23, 2025
Breaking News
ಬೆಂಗಳೂರಿನ ಮಹದೇವಪುರ ಕ್ಷೇತ್ರದ ಬಿಜೆಪಿ ಯುವ ಮುಖಂಡ ಹಾಗೂ ಉದ್ಯಮಿ ಪ್ರಶಾಂತ್ ರೆಡ್ಡಿ ಮತ್ತು ಅವರ ತಂದೆ ವೀರಸ್ವಾಮಿ ರೆಡ್ಡಿಯವರನ್ನು ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.ಮಾಜಿ ಸಚಿವ, ಬಿಜೆಪಿ ನಾಯಕ ಅರವಿಂದ ಲಿಂಬಾವಳಿಯವರ ಆಪ್ತರೆಂದು ಹೇಳಲಾಗುತ್ತಿರುವ ಈ ತಂದೆ-ಮಗನ ಕೊಲೆ, ರಾಜಕೀಯ ವಲಯದಲ್ಲಿ ತೀವ್ರ ಸಂಚಲನವನ್ನು ಸೃಷ್ಟಿಸಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದ್ದು, ಆಂಧ್ರ ಪ್ರದೇಶ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
Read More »
BigTv News
July 23, 2025
Breaking News
ಮಾನ್ವಿ ಮತ್ತು ಸಿರವಾರ ತಾಲ್ಲೂಕುಗಳ ರಸಗೊಬ್ಬರ ಮಾರಟಗಾರರು ತಮ್ಮಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಸಗೊಬ್ಬರವನ್ನು ಸಂಗ್ರಹಿಸಿಟ್ಟುಕೊಂಡು ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸುವ ಮೂಲಕ ರೈತರಿಗೆ ಮಾರುಕಟ್ಟೆ ದರಕ್ಕಿಂತ ಅತಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂದು ದೂರಿದರು. ಅಧಿಕ ದರಕ್ಕೆ ರಸಗೊಬ್ಬರ ಮಾರಾಟ ಮಾಡುತ್ತಿರುವ ವರ್ತಕರ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿ ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಕೃಷಿ ಇಲಾಖೆಯ ಸಹಾಯ ನಿರ್ದೇಶಕ ಗುರುನಾಥ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
Read More »
BigTv News
July 23, 2025
Breaking News
11 ವರ್ಷದ ಕೇಸ್ ವಾಪಸ್ ಪಡೆಯುವಂತೆ ಪತಿ ಗುರುಮೂರ್ತಿ ಒತ್ತಾಯಿಸುತ್ತಿದ್ದ ಎನ್ನಲಾಗಿದೆ.ಪತಿಯ ಮಾತಿಗೆ ಬಗ್ಗದ ಪತ್ನಿ ಕೋರ್ಟ್ ಅಲ್ಲಿ ನಿನ್ನ ಬಗ್ಗೆ ಹೇಳಿ ನಿನಗೆ ತಕ್ಕ ಪಾಠ ಕಲಿಸುವುದಾಗಿ ಹೇಳಿದ್ದಳು. ಇದರಿಂದ ಸಿಟ್ಟಾದ ಪತಿ ಗುರುಮೂರ್ತಿ ಕಳೆದ ಮೂರು ದಿನಗಳ ಹಿಂದೆ ಪತ್ನಿ ಜಮುನಾ ಕಾಲು ಚೈನು ಖರೀದಿಗೆ ಚಿನ್ನದ ಅಂಗಡಿಗೆ ಬಂದಿದ್ದಾಗ ಆಕೆಯನ್ನು ಹಿಂಬಾಲಿಸಿಕೊಂಡು ಬಂದು ಚಲನವಲನ ಗಮನಿಸಿ ಪ್ಲಾನ್ ಮಾಡಿ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ …
Read More »
BigTv News
July 23, 2025
Breaking News
ಗದಗದ ಬೆಟಗೇರಿಯ ಸೆಟ್ಮೆಂಟ್ ಪ್ರದೇಶದ ವಿಶಾಲ್ ಕುಮಾರ್ ಎಂಬಾತನನ್ನು ಮದುವೆಯ ನೆಪದಲ್ಲಿ ಮುಸ್ಲಿಂ ಸಮುದಾಯಕ್ಕೆ ಬಲವಂತವಾಗಿ ಮತಾಂತರ ಮಾಡಿಸಿದ್ದಾರೆ, ಅಲ್ಲದೇ ನನಗೆ ಗೊತ್ತೇ ಇಲ್ಲದೇ ನನ್ನ ಹೆಸರನ್ನು ವಿರಾಜ್ ಸಾಬ್ ಅಂತ ಬದಲಿಸಿದ್ದಾರೆ ಎಂದು ಆರೋಪಿಸಿದ್ದ.ಇದೀಗ ಪತ್ನಿಯೇ ಪತಿಯ ವಿರುದ್ಧ ಗದಗ ಮಹಿಳಾ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.ಇದೀಗ ಮುಸ್ಲಿಂ ಯುವತಿ ಗದಗದ ಮಹಿಳಾ ಠಾಣೆಯಲ್ಲಿ ಪತಿಯ ವಿರುದ್ಧ ಪೋಕ್ಸೋ ದೂರು ದಾಖಲಿಸಿದ್ದಾಳೆ. ಸದ್ಯ ಇಬ್ಬರಿಗೂ ಪೊಲೀಸರು ನೋಟಿಸ್ …
Read More »
BigTv News
July 23, 2025
Breaking News
ಭಾರತೀಯ ರಿಸರ್ವ್ ಬ್ಯಾಂಕ್‌ನಿಂದ ಲಕ್ಷ ಲಕ್ಷ ನಾಣ್ಯಗಳನ್ನು ತುಂಬಿಕೊಂಡು ರಾಯಚೂರಿಗೆ ಸರಬರಾಜು ಮಾಡುತ್ತಿದ್ದ ಲಾರಿಯೊಂದು ನೆಲಲಮಂಗಲ ತಾಲೂಕಿನ ರಾಯರಪಾಳ್ಯ ಗೇಟಿನ ಬಳಿ ಹಳ್ಳಕ್ಕೆ ಉರುಳಿ ಬಿದ್ದಿದೆ.ಲಕ್ಷ ಮೌಲ್ಯದ ನಾಣ್ಯಗಳು ರಸ್ತೆಯ ಬದಿಗೆ ಬಿದ್ದಿದ್ದು, ಈ ಘಟನೆಯಲ್ಲಿ ಲಾರಿ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ
Read More »
BigTv News
July 23, 2025
Breaking News
ಕ್ಯಾಲಿಕಟ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬುಧವಾರ ದೋಹಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ, ಟೇಕ್ ಆಫ್ ಆದ ಎರಡು ಗಂಟೆಗಳ ನಂತರ ತಾಂತ್ರಿಕ ದೋಷದಿಂದಾಗಿ ವಾಪಸ್ ಬಂದಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
Read More »
BigTv News
July 23, 2025
Breaking News
ಲಖನೌನಲ್ಲಿ ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದವನನ್ನು ಉತ್ತರ ಪ್ರದೇಶ ಪೊಲೀಸ್‌ನ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಅಧಿಕಾರಿಗಳು ಪತ್ತೆ ಮಾಡಿದ್ದಾರೆ.ಅಸ್ತಿತ್ವದಲ್ಲೇ ಇಲ್ಲದ ದೇಶಗಳ ರಾಜತಾಂತ್ರಿಕ ಅಧಿಕಾರಿ ಎಂದು ಹೇಳಿಕೊಂಡು ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್ ಎಂಬಾತನನ್ನು ಎಸ್‌ಟಿಎಫ್ ಬಂಧಿಸಿದೆ.44.7 ಲಕ್ಷ ನಗದು, ವಿದೇಶಿ ಕರೆನ್ಸಿ, ಹಲವು ಕಂಪನಿಗಳ ದಾಖಲೆಗಳು ಮತ್ತು 18 ನಕಲಿ ನಂಬರ್ ಪ್ಲೇಟ್‌ಗಳನ್ನು ಎಸ್‌ಟಿಎಫ್ ವಶಪಡಿಸಿಕೊಂಡಿದೆ.ಕವಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ …
Read More »