Breaking News

Breaking News

ಪತ್ನಿಯನ್ನೇ ಭೀಕರವಾಗಿ ಕೊಲೆ ಮಾಡಿದ ಪತಿ!!

ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಚೂರಿ ಇರಿದು ಹತ್ಯೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿದೆ. ಕೊಲೆಯಾದವರನ್ನು ಬಾಜಾರು ನಿವಾಸಿ ಝೀನತ್(38) ಎಂದು ಗುರುತಿಸಲಾಗಿದೆ.ಹಲ್ಲೆಯಿಂದ ಗಾಯಗೊಂಡಿದ್ದ ಝೀನತ್ ರನ್ನು ಸ್ಥಳೀಯರು ಹಾಗೂ ಸಂಬಂಧಿಕರು ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆಕೆಯು ಮೃತಪಟ್ಟಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಚಿಕ್ಕಮಗಳೂರು ಕಾಫಿ ತೋಟದ ಹುಡುಗಿ ಕೈಕೊಟ್ಟಳೆಂದು ಅರೆಹುಚ್ಚನಾದ ಯುವಕ; ಹೆಡ್ ಕಾನ್‌ಸ್ಟೇಬಲ್ ಆತ್ಮಹತ್ಯ!

ಚಿಕ್ಕಮಗಳೂರಿನಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಬಾರ್ ಲೈನ್ ರಸ್ತೆಯಲ್ಲಿರುವ ಪೊಲೀಸ್ ಕ್ವಾಟರ್ಸ್‌ನಲ್ಲಿ ಹೆಡ್ ಕಾನ್‌ಸ್ಟೇಬಲ್ ಕಾಂತರಾಜ್ (45) ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ.ಅಲ್ಲಿನ ಸಿಬ್ಬಂದಿ ಹಾಗೂ ಪೊಲೀಸರು ಆತನನ್ನು ತಕ್ಷಣ ಗಮನಿಸಿ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವಕನ ಶಾರೀರಿಕ ಸ್ಥಿತಿ ಸ್ಥಿರವಿದ್ದರೂ, ಮಾನಸಿಕ ಸ್ಥಿತಿ ಅತ್ಯಂತ ಅಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

ಕಳೆದ ಒಂದು ತಿಂಗಳಿಂದ ಆರೋಗ್ಯದಲ್ಲಿ ಭಾಗವಹಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಪ್ರಮಾಣಪತ್ರ ಮತ್ತು ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಹುಬ್ಬಳ್ಳಿ: ಪೊಲೀಸ್ ಇಲಾಖೆಯಲ್ಲಿ ದೈಹಿಕ ಸದೃಢತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಏರ್ಪಡಿಸಿದ ಆರೋಗ್ಯ ಶಿಬಿರದಲ್ಲಿ ಪೊಲೀಸ್ ಸಿಬ್ಬಂದಿ ಸುಮಾರು 400 ಕೆಜಿಗಿಂತಲೂ ಹೆಚ್ಚು ತೂಕ ಕಳೆದುಕೊಂಡಿರುವುದು ಹೆಮ್ಮೆಯ ಸಂಗತಿ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.ನಗರದ ಆರ್.ಎನ್.ಶೆಟ್ಟಿ ರಸ್ತೆಯ ಮುಕುಂದನಗರದಲ್ಲಿರುವ ಪತಂಜಲಿ ವೆಲ್ ನೆಸ್ ವಿಶ್ವ ಚೇತನ್ ಯೋಗ ಮತ್ತು ಸಂಶೋಧನಾ ಕೇಂದ್ರದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ಎರಡು ದಿನಗಳ ಕಾಲ ಆಯೋಜಿಸಿದ ಆರೋಗ್ಯ ಶಿಬಿರದ ಸಮಾರೋಪದಲ್ಲಿ ಸಿಬ್ಬಂದಿಯನ್ನು ಅಭಿನಂದಿಸಿ ಮಾತನಾಡಿದರು. ಪತಂಜಲಿ …

Read More »

ಡಿಸಿಸಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಉಸ್ತುವಾರಿ ನೇಮಕ…

ದೆಹಲಿ : ಸಂಘಟನಾ ಉಸ್ತುವಾರಿಯಾಗಿ ಚಂದ್ ರೆಡ್ಡಿ ಆಯ್ಕೆ… ಶೀಘ್ರವೇ ಕೈ ಅಧ್ಯಕ್ಷರ ಬದಲಾವಣೆ.. ಸಂಘಟನೆ ಚುರುಕುಗೊಳಿಸಿ 2028ರ ಚುನಾವಣೆ ಮತ್ತೆ ಗೆಲ್ಲಲು ಕಾಂಗ್ರೆಸ್ ತಯಾರಿ.. ಗ್ರಾಮೀಣ ಹಾಗು ಮಹಾನಗರ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಯುವಕರ ನೇಮಕ ಸಾಧ್ಯತೆ…? ಡಿಸಿಸಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಸಂಘಟಿಸಲು ಮತ್ತು ಅವರ ಕಾರ್ಯಕ್ಷಮತೆ ಮತ್ತು ಸಾಂಸ್ಥಿಕ ಪರಿಣಾಮಕಾರಿತ್ವಕ್ಕೆ ಸಂಬಂಧಿಸಿದ ಪ್ರತಿಕ್ರಿಯೆಯನ್ನು ಸಂಗ್ರಹಿಸಲು, ಕಾಂಗ್ರೆಸ್ ಅಧ್ಯಕ್ಷರು ಶ್ರೀ ಚಲ್ಲಾ ವಂಶಿ ಚಂದ್ ರೆಡ್ಡಿ ಅವರನ್ನು …

Read More »

ಚುನಾವಣೆಗೂ ಮುನ್ನವೇ ಸಿಎಂ ಸಿದ್ದರಾಮಯ್ಯರನ್ನ ಫಾಲೋ ಮಾಡಿದ ಬಿಜೆಪಿ ಮೈತ್ರಿ ನಾಯಕ

ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನವೇ ಬಿಜೆಪಿ ಮೈತ್ರಿಕೂಟದ ನಾಯಕ, ಸಿಎ ನಿತೀಶ್ ಕುಮಾರ್, ಕರ್ನಾಟಕ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಯನ್ನು ಫಾಲೋ ಮಾಡಿದ್ದಾರೆ. ಈ ತಿಂಗಳಿನಿಂದ ಬಿಹಾರದ ಜನತೆ ಉಚಿತ ವಿದ್ಯುತ್ ಸೌಲಭ್ಯಯನ್ನು ಪಡೆದುಕೊಳ್ಳಲಿದ್ದಾರೆ.ಇನ್ಮುಂದೆ 125 ಯುನಿಟ್ ವಿದ್ಯುತ್ ಬಳಕೆಗೆ ಜನರು ಯಾವುದೇ ಹಣವನ್ನು ಖರ್ಚು ಮಾಡಬೇಕಿಲ್ಲ. ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 10 ಸಾವಿರ ಮೆಗಾವ್ಯಾಟ್‌ಗಳವರೆಗೆ ಸೌರಶಕ್ತಿ ಉತ್ಪಾದನೆ ಆಗಲಿದೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

Read More »

ನೂತನ ಬಿಜೆಪಿ ಅಧ್ಯಕ್ಷರ ಆಯ್ಕೆ ಸಂಬಂಧ ಮೋದಿ-ಶಾ ಜೋಡಿಗೆ ಆರೆಸ್ಸೆಸ್ ತಡೆ ಎಂದ ವರದಿ

ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾರ ಉತ್ತರಾಧಿಕಾರಿಯನ್ನು ಹೆಸರಿಸುವಲ್ಲಿ ಅತಿಯಾದ ವಿಳಂಬವಾಗುತ್ತಿದೆ. ಯಾರು ಈ ಹುದ್ದೆಗೇರಬೇಕು ಎಂಬ ಬಗ್ಗೆ ಬಿಜೆಪಿ ಮತ್ತು ಅದರ ಮಾತೃಸಂಘಟನೆ ಆರೆಸ್ಸೆಸ್ ನಡುವಿನ ಬಗೆಹರಿಯದ ಬಿಕ್ಕಟ್ಟು ಇದಕ್ಕೆ ಕಾರಣವಾಗಿದೆ ಎಂದು telegraphindia.com ವರದಿ ಮಾಡಿದೆ.ಕಳೆದ ವಾರ ಆರೆಸ್ಸೆಸ್ ಮುಖ್ಯಸ್ಥ ಮೋಹನ ಭಾಗವತ್ ಅವರು, ನಾಯಕರು ನಿರ್ದಿಷ್ಟ ವಯಸ್ಸನ್ನು ತಲುಪಿದ ಬಳಿಕ ಗೌರವಪೂರ್ವಕವಾಗಿ ಕೆಳಗಿಳಿಯಬೇಕು ಮತ್ತು ಹೊಸ ಪೀಳಿಗೆಗೆ ಅವಕಾಶ ಕಲ್ಪಿಸಬೇಕು ಎಂದು ಸಲಹೆ ನೀಡಿದ್ದು, ಇದು ಅವರು ಮೋದಿಯವರ …

Read More »

ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಆರ್‌ಸಿಬಿ ಮತ್ತು ವಿರಾಟ್ ಕೊಹ್ಲಿ ಕಾರಣ: ಕರ್ನಾಟಕ ಸರ್ಕಾರದ ವರದಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಈ ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಪ್ರಸ್ತುತ ಪ್ರಕರಣದಲ್ಲಿ, ನಿಗದಿತ ನಮೂನೆಗಳಲ್ಲಿ ಯಾವುದೇ ಅರ್ಜಿಗಳನ್ನು ಸಲ್ಲಿಸಲಾಗಿಲ್ಲ… ಅದರಂತೆ, ಅಂತಿಮ ಪಂದ್ಯದ ಎರಡೂ ಸಂಭವನೀಯ ಫಲಿತಾಂಶಗಳಿಗೆ, ಅಂದರೆ, ಆರ್‌ಸಿಬಿ ಗೆದ್ದಿದೆಯೋ ಅಥವಾ ಸೋತಿದೆಯೋ ಎಂಬುದರ ಕುರಿತು ನಿರೀಕ್ಷಿತ ಅಂದಾಜು ಸಭೆ, ಮಾಡಲಾದ ವ್ಯವಸ್ಥೆಗಳು, ಸಂಭವನೀಯ ಅಡಚಣೆಗಳು ಮತ್ತು ಮುಂತಾದವುಗಳ ಬಗ್ಗೆ ಮಾಹಿತಿಯ ಕೊರತೆಯಿಂದಾಗಿ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ …

Read More »

ಸಿಎಂ ಮಾಧ್ಯಮ ಸಂಜೀವಿನಿ ಯೋಜನೆ ಷರತ್ತು ಸಡಿಲಿಕೆಗೆ ‘ಕೆ.ವಿ.ಪ್ರಭಾಕರ್’ಗೆ ಕೆಯುಡಬ್ಲೂಜೆ ಮನವಿ

ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯಲ್ಲಿನ ಕಠಿಣ ಷರತ್ತಗಳನ್ನು ಸಡಿಲಿಸಿ, ಸರಳೀಕರಣ ಮಾಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಲ್ಲಿ ಮನವಿ ಮಾಡಿದೆ.ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ಯೋಜನೆಯನ್ನು ಜಾರಿಗೆ ತರಬೇಕು ಎನ್ನುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ಹಕ್ಕೊತ್ತಾಯಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ವೇದಿಕೆಯಲ್ಲಿ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದ್ದು …

Read More »

ಕರ್ನಾಟಕದ 14 ಜಿಲ್ಲೆಗಳಲ್ಲಿ ಜು.22ರವರೆಗೆ ಭಾರಿ ಮಳೆ ಮುನ್ಸೂಚನೆ!

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜು.22ರವರೆಗೆ ಭಾರಿ ಮಳೆ ಆಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.ರಾಜ್ಯದ ಏಳು ಜಿಲ್ಲೆಗಳಲ್ಲಿ ಅಂದರೆ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಅದೇ ರೀತಿ, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ.

Read More »

ಭಾರತೀಯ ಸೇನೆಗೆ ಸಿಗಲಿದೆ ಮತ್ತಷ್ಟು ಬಲ: ಕೆಲವೇ ತಿಂಗಳಲ್ಲಿ ಎಂಟ್ರಿ ಆಗುತ್ತೆ ‘ಶೇರ್’!

ಇಂಡೋ-ರಷ್ಯನ್ ರೈಫಲ್ಸ್ ಪ್ರೈವೇಟ್ ಲಿಮಿಟೆಡ್ (IRRPL) ಉತ್ಪಾದನೆಯ ಸ್ವದೇಶಿ AK-203 ಅಸಾಲ್ಟ್ ರೈಫಲ್‌ಗೆ “ಶೇರ್” ಸೇನೆ ಡೀಸೆಂಬರ್‌ನಲ್ಲಿ ಭಾರತೀಯ ಸೇನೆಗೆ ಪೂರೈಕೆಯಾಗುತ್ತಿದೆ.ಇದರ ಜೊತೆಗೆ, 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅರೆಸೇನಾ ಪಡೆಗಳು ಮತ್ತು ಏಜೆನ್ಸಿಗಳು ರೈಫಲ್‌ಗಳನ್ನು ಖರೀದಿಸಲು IRRPL ಅನ್ನು ಸಂಪರ್ಕಿಸಿವೆ. ಮುಂದಿನ ವರ್ಷದಿಂದ ನಾವು 1.5 ಲಕ್ಷ ರೈಫಲ್‌ಗಳನ್ನು ಬೃಹತ್ ಸಂಖ್ಯೆಯಲ್ಲಿ ಉತ್ಪಾದಿಸುತ್ತೇವೆ. ಇದರಲ್ಲಿ ಸುಮಾರು 1.2 ಲಕ್ಷವನ್ನು ನಾವು ಸೇನೆಗೆ ನೀಡುತ್ತೇವೆ ಮತ್ತು ಉಳಿದ 30,000 …

Read More »