BigTv News
September 3, 2026
Breaking News
ಕೆಪಿಎಸ್‌ಸಿ ಭ್ರಷ್ಟಾಚಾರ ಪ್ರಕರಣದ ಆರೋಪಿ ಬಸವರಾಜ್ ಕನ್ನಾಳೆ ಮನೆ ಮೇಲೆ ಸಿಐಡಿ ನಡೆಸಿದ ಶೋಧದಲ್ಲಿ 15 ಗ್ರೂಪ್-ಬಿ ಪರೀಕ್ಷೆಗಳ ಹಾಲ್‌ಟಿಕೆಟ್‌ಗಳು ಪತ್ತೆಯಾಗಿವೆ. ಇದರಿಂದ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮದ ಜೊತೆಗೆ ಗ್ರೂಪ್-ಬಿ ಹಾಗೂ ಕೆಎಎಸ್ ಪರೀಕ್ಷೆಗಳಲ್ಲೂ ಪ್ರಶ್ನೆಪತ್ರಿಕೆ ಡೀಲ್ ನಡೆದಿರಬಹುದೆಂಬ ಅನುಮಾನ ಸಿಐಡಿಗೆ ಮೂಡಿದೆ. ಕೆಎಎಸ್ ಪ್ರಿಲಿಮ್ಸ್, ಮೇನ್ಸ್ ಹಾಗೂ ಸಂದರ್ಶನದ ಮೂರು ಹಂತಗಳಿಗೂ ಪ್ಯಾಕೇಜ್ ದರ ನಿಗದಿಪಡಿಸಿ ಅಕ್ರಮ ನಡೆಸಲಾಗಿತ್ತೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಪಶುವೈದ್ಯಾಧಿಕಾರಿ ನೇಮಕಾತಿ ತನಿಖೆ …
Read More »
BigTv News
September 3, 2026
Breaking News
ಮೂಡುಬಿದಿರೆ: ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದ ಮೇರೆಗೆ ಕಾಂಗ್ರೆಸ್ ಮುಖಂಡರೊಬ್ಬರು ಸೇರಿ ಮೂವರ ವಿರುದ್ಧ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ವಿದ್ಯಾರ್ಥಿನಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳು ಕೆಫೆಗೆ ತೆರಳಿದ್ದ ವೇಳೆ ಆರೋಪಿಗಳು ಅಕ್ರಮವಾಗಿ ಒಳನುಗ್ಗಿ ಅವರ ಹೆಸರು ಕೇಳಿ ಅವಾಚ್ಯವಾಗಿ ನಿಂದಿಸಿ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿಗಳು ದೂರು ನೀಡಲು ಹೆದರಿದ್ದ ಹಿನ್ನೆಲೆಯಲ್ಲಿ ಪಿಎಸ್ಸೈ ಪ್ರತಿಭಾ ನೀಡಿರು ಅವರ ದೂರಿನ …
Read More »
BigTv News
September 3, 2026
Breaking News
ಬೆಂಗಳೂರು: ಪ್ರತಿಭಟನೆ ವೇಳೆ ಕರ್ತವ್ಯದಲ್ಲಿದ್ದ ಉತ್ತರ ವಿಭಾಗದ ಡಿಸಿಪಿ ನೇಮಗೌಡ ಅವರನ್ನು ಹಿಡಿದು ತಳ್ಳಾಡಿದ ಆರೋಪದ ಮೇರೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ವೈಯಾಲಿಕಾವಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆ.31ರಂದು ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಮಲ್ಲೇಶ್ವರದ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಪ್ರತಿಭಟನಾಕಾರರು …
Read More »
BigTv News
September 3, 2026
Breaking News
ದಾವಣಗೆರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತಳನ್ನು ಹೂವಿನಹಡಗಲಿ ತಾಲೂಕಿನ ಕುರುವತ್ತಿ ಗ್ರಾಮದ 17 ವರ್ಷದ ರಂಜಿತಾ ಎಂದು ಗುರುತಿಸಲಾಗಿದೆ. ಸೆ.2ರ ರಾತ್ರಿ ಹಾಸ್ಟೆಲ್ ಕೊಠಡಿಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ರಂಜಿತಾ ಕಳೆದ ಒಂದೂವರೆ ವರ್ಷದಿಂದ ದಾವಣಗೆರೆಯ ಟೀಮ್ ಅಕಾಡೆಮಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಘಟನೆಗೆ ಸಂಬಂಧಿಸಿ ಪೋಷಕರು ಕಾಲೇಜು ಆಡಳಿತದ ವಿರುದ್ಧ …
Read More »
Shaikh BigTv
September 3, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ ಇಂದು ಸಾಕಾರ! ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರೇಟ್‌ಗೆ ನೂತನ ಕಮಿಷನರ್ ಆಗಿ ಬೋರ್ಸೆ ಭೂಷಣ್ ಗುಲಾಬರಾವ್, IPS ನೇಮಕಗೊಂಡಿರುವ ಸುದ್ದಿ ನಿನ್ನೆ ಭಾರೀ ಗಮನ ಸೆಳೆದಿತ್ತು. ಇದೀಗ ಆ ಸುದ್ದಿಗೆ ಮತ್ತೊಂದು ಮಹತ್ವದ ಅಪ್‌ಡೇಟ್ ಸಿಕ್ಕಿದೆ. ಇಂದು ಮಧ್ಯಾಹ್ನ 1:30ರಿಂದ 2 ಗಂಟೆಯೊಳಗೆ ನೂತನ …
Read More »
BigTv News
September 3, 2026
Breaking News
ಕಾಸರಗೋಡು: ಯುವಕನನ್ನು ಅಪಹರಿಸಿ ಕೊಠಡಿಯೊಂದರಲ್ಲಿ ಕೂಡಿ ಹಾಕಿ ಅಪ್ರಾಪ್ತ ಬಾಲಕಿಯೊಂದಿಗೆ ಅರೆನಗ್ನವಾಗಿ ನಿಲ್ಲಿಸಿ ವಿಡಿಯೋ ಚಿತ್ರೀಕರಿಸಿ ₹1.02 ಲಕ್ಷ ದೋಚಿದ ಆರೋಪದಡಿ ಬದಿಯಡ್ಕ ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸೇರಾಜೆ ನಿವಾಸಿ ಎ.ಎಸ್. ಸುಜಿತ್ ದೂರು ನೀಡಿದ್ದಾರೆ. ಆ.29ರಂದು ತನ್ನನ್ನು ಕಾರಿನಲ್ಲಿ ಅಪಹರಿಸಿ ಕೊಠಡಿಯಲ್ಲಿ ಬಂಧಿಸಿಟ್ಟ ಆರೋಪಿಗಳು, ಅಪ್ರಾಪ್ತ ಬಾಲಕಿಯೊಂದಿಗೆ ಅರೆನಗ್ನವಾಗಿ ನಿಲ್ಲಿಸಿ ವಿಡಿಯೋ ಚಿತ್ರೀಕರಿಸಿದ್ದಾರೆ. ಬಳಿಕ ಪೋಕ್ಸೋ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಸಿ …
Read More »
BigTv News
September 3, 2026
Breaking News, Crime
ಮೈಸೂರಿನ ವಿವೇಕಾನಂದ ವೃತ್ತದಲ್ಲಿರುವ ‘ಮೋಹನ್ ಜ್ಯುವೆಲರಿ’ ಮಾಲೀಕ ಮೋಹನ್ ಲಾಲ್, ಚಿನ್ನ ನೀಡುವುದಾಗಿ ನಂಬಿಸಿ ಮಾಸಿಕ ಕಂತುಗಳ ಮೂಲಕ 80ಕ್ಕೂ ಹೆಚ್ಚು ಗ್ರಾಹಕರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ವಂಚಿಸಿರುವ ಆರೋಪ ಕೇಳಿಬಂದಿದೆ. ಕಳೆದ ಎರಡು ಕಂತು ಯೋಜನೆಗಳಲ್ಲಿ ಸಮಯಕ್ಕೆ ಸರಿಯಾಗಿ ಚಿನ್ನ ನೀಡಿದ್ದರಿಂದ ಗ್ರಾಹಕರ ವಿಶ್ವಾಸ ಗಳಿಸಿದ್ದ ಎನ್ನಲಾಗಿದೆ. ಆದರೆ, ಈ ಬಾರಿ ಕಳೆದ ಒಂದು ವಾರದಿಂದ ಅಂಗಡಿ ಬಾಗಿಲು ಮುಚ್ಚಿದ್ದು, ಮೋಹನ್ ಲಾಲ್ ಕೂಡ ನಾಪತ್ತೆಯಾಗಿದ್ದ. ಮನೆಯೂ ಖಾಲಿಯಾಗಿರುವುದು …
Read More »
BigTv News
September 3, 2026
Breaking News
ರಾಮನಗರದ ಶಾಂತಿಲಾಲ್ ಲೇಔಟ್‌ನ ನಿರ್ಮಾಣ ಹಂತದ ಮನೆಯೊಂದರಲ್ಲಿ ನಡೆಯುತ್ತಿದ್ದ ಖೋಟಾ ನೋಟು ತಯಾರಿಕೆಯ ದಂಧೆಯನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ದಾಳಿ ವೇಳೆ ₹5 ಲಕ್ಷ ಮೌಲ್ಯದ ನಕಲಿ ನೋಟು ತಯಾರಿಕೆಗೆ ಸಿದ್ಧಪಡಿಸಿದ್ದ 10 ಪೇಪರ್ ಬಂಡಲ್‌ಗಳು, ಕೆಮಿಕಲ್, ಗ್ಲಾಸ್ ಫಿಲ್ಮ್ ಸೇರಿದಂತೆ ಹಲವು ಸಾಮಗ್ರಿಗಳನ್ನು ಜಪ್ತಿ ಮಾಡಿ 7 ಮಂದಿಯನ್ನು ಬಂಧಿಸಿದ್ದಾರೆ. ಮನೆ ಮಾಲೀಕ ಸಂತೋಷ್‌ಗೆ ಕಮಿಷನ್ ನೀಡುವ ಆಮಿಷವೊಡ್ಡಿ ಆರೋಪಿ ಸಂಪತ್ ಈ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ. ನಿರ್ಮಾಣ ಕಾಮಗಾರಿಗೆ …
Read More »
BigTv News
September 3, 2026
Breaking News
ಬೆಂಗಳೂರು: ಎಚ್‌ಎಸ್‌ಆರ್ ಲೇಔಟ್‌ನ ಅಗರ ಕೆರೆ ಆವರಣದಲ್ಲಿ ಜಾಗಿಂಗ್ ಮಾಡುತ್ತಿದ್ದ ಮಹಿಳೆಯರಿಗೆ ತಿಳಿಯದಂತೆ ಮೊಬೈಲ್‌ನಲ್ಲಿ ವಿಡಿಯೋ ಹಾಗೂ ಫೋಟೋ ಸೆರೆಹಿಡಿಯುತ್ತಿದ್ದ ಆರೋಪದಡಿ ಗೊಲ್ಡನ್ ಕುಮಾರ್ ಎಂಬ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯ ಅನುಮಾನಾಸ್ಪದ ವರ್ತನೆ ಗಮನಿಸಿದ ಮಹಿಳೆಯರು ಆತನನ್ನು ತಡೆದು ಪ್ರಶ್ನಿಸಿದ್ದು, ಮೊಬೈಲ್ ಪರಿಶೀಲಿಸಿದಾಗ ಹಲವು ಮಹಿಳೆಯರ ವಿಡಿಯೋಗಳು ಪತ್ತೆಯಾಗಿವೆ. ಬಳಿಕ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಎಚ್‌ಎಸ್‌ಆರ್ ಲೇಔಟ್ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು …
Read More »
Shaikh BigTv
September 2, 2026
Breaking News, Crime, ಕರ್ನಾಟಕ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ
ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಎನಿ ಕಂಡೀಶನ್… ನಾಳೆ ಬೆಳಗ್ಗೆ ಹುಬ್ಬಳ್ಳಿ ಕಮಿಷನರ್ ಅಧಿಕಾರ ಸ್ವೀಕಾರ! ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರೇಟ್‌ಗೆ ನೂತನ ಕಮಿಷನರ್ ಆಗಿ ನೇಮಕಗೊಂಡಿರುವ ಹಿರಿಯ ಐಪಿಎಸ್ ಅಧಿಕಾರಿ ಬೋರ್ಸೆ ಭೂಷಣ್ ಗುಲಾಬರಾವ್ ಅವರು ನಾಳೆ ಬೆಳಗ್ಗೆ ಹುಬ್ಬಳ್ಳಿಗೆ ಆಗಮಿಸಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ. ಕರ್ನಾಟಕ ಸರ್ಕಾರದ ಇತ್ತೀಚಿನ ಐಪಿಎಸ್ …
Read More »