BigTv News
July 2, 2025
Breaking News
ಶತಮಾನೋತ್ಸವ ವೃತ್ತದಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾದ ಹಿನ್ನೆಲೆಯಲ್ಲಿ ಹೋಟೆಲ್‌ನಿಂದ ಹೊರಗೆ ಬಾರದಂತೆ ಭಾರತ ಕ್ರಿಕೆಟ್ ತಂಡಕ್ಕೆ ಮಂಗಳವಾರ ಸೂಚಿಸಲಾಗಿತ್ತು ಎಂದು ವರದಿಯಾಗಿದೆ.ಇಂಗ್ಲೆಂಡ್ ಹಾಗೂ ಭಾರತ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸೆಣಸಾಟ ನಡೆಸುತ್ತಿವೆ. ಲೀಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಗೆದ್ದಿರುವ ಆತಿಥೇಯ ತಂಡ ಮುನ್ನಡೆಯ ಅಂತರವನ್ನು ಹೆಚ್ಚಿಸಿಕೊಳ್ಳುವ ಲೆಕ್ಕಾಚಾರದಲ್ಲಿದೆ. ಆದರೆ, ಈ ಪಂದ್ಯದಲ್ಲಿ ತಿರುಗೇಟು ನೀಡಿ ಸರಣಿಯನ್ನು 1-1ರಲ್ಲಿ ಸಮಬಲ ಮಾಡಿಕೊಳ್ಳುವ ಯೋಜನೆಯಲ್ಲಿ ಟೀಂ ಇಂಡಿಯಾ ಇದೆ.
Read More »
BigTv News
July 2, 2025
Breaking News
ಇರಾಕಿನ ಕಿರ್ಕುಕ್ ವಿಮಾನ ನಿಲ್ದಾಣದ ಮಿಲಿಟರಿ ವಿಭಾಗಕ್ಕೆ ಸೋಮವಾರ ತಡರಾತ್ರಿ ಎರಡು ರಾಕೆಟ್ಗಳು ಅಪ್ಪಳಿಸಿದ್ದು ಇಬ್ಬರು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿರುವುದಾಗಿ ಭದ್ರತಾ ಅಧಿಕಾರಿಗಳನ್ನು ಉಲ್ಲೇಖಿಸಿ ಎಎಫ್ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.ಇರಾಕ್ ಸೇನಾನೆಲೆ, ಫೆಡರಲ್ ಪೊಲೀಸ್ ಕಚೇರಿ ಮತ್ತು ಸಶಸ್ತ್ರ ಪಡೆಗಳ ನೆಲೆಯಿದೆ. ಯಾವುದೇ ಸಂಘಟನೆ ದಾಳಿಯ ಹೊಣೆ ವಹಿಸಿಕೊಂಡಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Read More »
BigTv News
July 2, 2025
Breaking News
ಚೆನ್ನೈಗೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನದ ಕ್ಯಾಬಿನ್ ನಲ್ಲಿ ಸುಟ್ಟ ವಾಸನೆ ಕಂಡುಬಂದಿದೆ.ಮುಂಜಾಗ್ರತಾ ಕ್ರಮವಾಗಿ ಮುಂಬೈಗೆ ಮರಳಿದೆ ಎಂದು ಏರ್‌ಲೈನ್ ಹೇಳಿಕೆಯಲ್ಲಿ ತಿಳಿಸಿದೆ.ಸುರಕ್ಷಿತವಾಗಿ ಲ್ಯಾಂಡ್ ಆದ ಬಳಿಕ ವಿಮಾನ ಬದಲಾವಣೆ ಪ್ರಾರಂಭಿಸಲಾಯಿತು. ಈ ಅನಿರೀಕ್ಷಿತ ಘಟನೆಯಿಂದ ಪ್ರಯಾಣಿಕರಿಗೆ ಆದ ಅನಾನುಕೂಲವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಬೆಂಬಲ ಒದಗಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.
Read More »
BigTv News
July 2, 2025
Breaking News
ಬೆಂಗಳೂರಿನ ಗ್ರಾಮಾಂತರ ಜಿಲ್ಲೆಗೆ ಸಚಿವ ಸಂಪುಟ ಅನುಮೋದನೆಯನ್ನು ಕೊಟ್ಟರೆ ಬೆಂಳೂರು ಗ್ರಾಮಾಂತರ ಬೆಂಗಳೂರು ಉತ್ತರ ಎಂದು ಮರುನಾಮಕರಣ ಆಗುತ್ತದೆ. ಜೊತಗೆ ಆರ್ಥಿಕ ಅಭಿವೃದ್ಧಿಗೂ ಸಹ ನೆರವಾಗುತ್ತದೆ. ಬೆಂಗಳೂರಿನಲ್ಲಿ ಬೆಂಗಳೂರಿನ ಉತ್ತರ ಮತ್ತು ದಕ್ಷಿಣ ಭಾಗಗಳನ್ನು ಮರುನಾಮಕರಣ ಮಾಡುವುದರಿಂದ ಕೈಗಾರಿಕಾ ಬೆಳವಣಿಗೆಯನ್ನು ಸಮಾನವಾಗಿ ವಿಸ್ತರಿಸಲು ಸಹಾಯವಾಗುತ್ತದೆ. ಬೆಂಗಳೂರು ಗ್ರಾಮಾಂತರದ ಹೆಸರು ಬದಲಾವಣೆಯ ಜೊತೆಗೆ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣವನ್ನು ಭಾಗ್ಯನಗರ ಎಂದು ಮರುನಾಮಕರಣ ಮಾಡುವ ಬಗ್ಗೆಯೂ ರಾಜ್ಯ ಸರ್ಕಾರ ಚಿಂತನೆಯನ್ನು ನಡೆಸಿತ್ತು …
Read More »
BigTv News
July 2, 2025
Breaking News
ವಿಡಿಯೋದಲ್ಲಿ, ಒಬ್ಬ ವ್ಯಕ್ತಿ ತನ್ನ ಹೆಂಡತಿಯನ್ನು ರಸ್ತೆಯ ಮಧ್ಯದಲ್ಲಿ ಇನ್ನೊಬ್ಬ ಪುರುಷನೊಂದಿಗೆ ರೆಡ್ ಹ್ಯಾಂಡ್ ಆಗಿ ಹಿಡಿದಿರುವುದು ಕಂಡುಬರುತ್ತದೆ. ಈ ಸಮಯದಲ್ಲಿ, ಆ ವ್ಯಕ್ತಿ “ನನ್ನ ಮಕ್ಕಳನ್ನು ಕೊಲ್ಲಲು ನೀವು ನನ್ನನ್ನು ಕರೆತಂದಿದ್ದೀರಿ!” ಎಂದು ಕೂಗುತ್ತಲೇ ಇರುತ್ತಾನೆ. ಈ ಘಟನೆ ಯಾವಾಗ ಮತ್ತು ಎಲ್ಲಿ ನಡೆಯಿತು ಎಂಬುದು ಸ್ಪಷ್ಟವಾಗಿಲ್ಲ.ಘಟನೆಯನ್ನು ನೋಡಿ ಗಂಡನಿಗೆ ಇನ್ನಷ್ಟು ಕೋಪ ಬರುತ್ತದೆ. ಅವನು ಕೋಪದಿಂದ ಕಿರುಚಲು ಪ್ರಾರಂಭಿಸಿದನು ಮತ್ತು ತನ್ನ ಹೆಂಡತಿ ಮಕ್ಕಳಿಗೆ ಹಾನಿ ಮಾಡಲು …
Read More »
BigTv News
July 2, 2025
Breaking News
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಸಿಲಿಕಾನ್ ಸಿಟಿ ಆಸ್ಪತ್ರೆಗೆ ಇಂದು ಬೆಳಿಗ್ಗೆ 52 ವರ್ಷದ ಕೋನಪ್ಪ ಎಂಬವರು ಎದೆ ನೋವಿನಿಂದ ಬಳಲುತ್ತಾ ಸ್ವತಃ ನಡೆದುಕೊಂಡು ಆಸ್ಪತ್ರೆಗೆ ಬಂದಿದ್ದರು. ಆದರೆ, ಆಸ್ಪತ್ರೆಯ ಭದ್ರತಾ ಕ್ಯಾಮೆರಾದ ದೃಶ್ಯಗಳ ಪ್ರಕಾರ, ಅವರು ಒಳಗೆ ಪ್ರವೇಶಿಸಿದ ಕೆಲವೇ ಕ್ಷಣಗಳಲ್ಲಿ ಕಾರ್ಡಿಯಾಕ್ ಅರೆಸ್ಟ್ (ಹೃದಯ ನಿಲ್ಲುವಿಕೆ) ಉಂಟಾಗಿ, ಅವರು ಕುಸಿದು ಬಿದ್ದರು. ವೈದ್ಯರು ತಕ್ಷಣವೇ ಚಿಕಿತ್ಸೆ ನೀಡಲು ಮುಂದಾದರೂ, ಹೆಚ್ಚಿನ ಚಿಕಿತ್ಸೆಗೆ ಮತ್ತೊಂದು ಆಸ್ಪತ್ರೆಗೆ ರವಾನಿಸಲು …
Read More »
BigTv News
July 2, 2025
Breaking News
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ 18 ಕೋತಿಗಳ ಶವ ಪತ್ತೆಯಾಗಿದೆ.ಕೋತಿಗಳಿಗೆ ವಿಷವಿಕ್ಕಿ ಕೊಲೆ ಮಾಡಿರುವುದು ಖಚಿತ ಎಂದು ವೈದ್ಯ ಡಾ. ಮಹದೇಶ್ ಹೇಳಿದ್ದಾರೆ. ‘ಟಿವಿ9’ಗೆ ಪ್ರತಿಕ್ರಿಯೆ ನೀಡಿದ ಅವರು, ಒಟ್ಟು 18 ಕೋತಿಗಳು ಸಾವನ್ನಪ್ಪಿವೆ. ಎರಡು ಕೋತಿಗಳು ಜೀವಂತವಾಗಿದ್ದವು. ನಿತ್ರಾಣಗೊಂಡ ಅವುಗಳನ್ನು ಈಗಾಗಲೇ ಜಿಲ್ಲಾಸ್ಪತ್ರೆಗೆ ತೆಗೆದುಕೊಂಡು ಹೋಗಿ ಚಿಕಿತ್ಸೆ ನೀಡುತ್ತಿದ್ದೇವೆ. ಚಿಕಿತ್ಸೆ ಪಡೆಯುತ್ತಿರುವ ಕೋತಿಗಳು ಅಲ್ಪ ಪ್ರಮಾಣದಲ್ಲಿ ಚೇತರಿಸಿಕೊಂಡಿವೆ. ಇನ್ನು ಮೂರು ಕೋತಿಗಳಿಗೆ ಪ್ರಜ್ಞೆಯಿದ್ದು ಪರಾರಿಯಾಗಿವೆ ಎಂದು …
Read More »
BigTv News
July 2, 2025
Breaking News
ನಾಗೇಶ್ ಮಹಿಳಾ ಉದ್ಯೋಗಿಯ ಶೌಚಾಲಯದ ವಿಡಿಯೋ ರೆಕಾರ್ಡ್ ಮಾಡಿದ್ದ. ಪಕ್ಕದ ಶೌಚಾಲಯದ ಕಮೋಡ್ ಮೇಲೆ ನಿಂತು ರೆಕಾರ್ಡ್ ಮಾಡಿದ್ದಾನೆ. ಈತ ರೆಕಾರ್ಡ್ ಮಾಡುತ್ತಿರುವುದು ಎದುರುಗಡೆ ಡೋರ್ ಮೇಲೆ ಪ್ರತಿಬಿಂಬ ಮೂಡಿದೆ. ಕೂಡಲೇ ಹೊರ ಬಂದು ನೋಡಿದಾಗ ಯಾರೂ ಇರಲಿಲ್ಲ. ಮತ್ತೆ ಶೌಚಾಲಯದ ಒಳ ಹೋಗಿ ಆಕೆ ಪರಿಶೀಲನೆ ಮಾಡಿದ್ದಾರೆ. ಆಗ ಆರೋಪಿ ಸಿಕ್ಕಿಬಿದ್ದಿದ್ದಾನೆ. ಕೂಡಲೇ ಮಹಿಳೆ ಕಿರುಚಾಡಿದ್ದು, ಅಲ್ಲಿಯೇ ಮಹಿಳಾ ಉದ್ಯೋಗಿಯ ಕ್ಷಮೆ ಕೇಳಿದ್ದಾನೆ. ಈ ಹಂತದಲ್ಲಿ ಎಚ್‌ಆರ್ ಸಿಬ್ಬಂದಿ …
Read More »
BigTv News
July 1, 2025
Breaking News
ಯುವತಿ ಬೇರೊಬ್ಬ ಹುಡುಗನಿಗೆ ಮೆಸೇಜ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಆಕೆ ಲವ್ ಬ್ರೇಕ್ ಆಪ್ ಎಂದಿದ್ದಾಳೆ. ಇದರಿಂದ ಮನನೊಂದು ವೀಡಿಯೋ ಮಾಡಿ, ವಾಟ್ಸ್ಯಾಪ್ ಸ್ಟೇಟಸ್ ನಲ್ಲಿ ತಮ್ಮಿಬ್ಬರ ಫೋಟೋಗಳನ್ನು ಹಾಕಿಕೊಂಡು ನೇಣಿಗೆ ಶರಣಾಗಿದ್ದಾನೆ ಎಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ತನ್ನ ಸಾವಿಗೆ ಯುವತಿಯೇ ಕಾರಣ, ಅವಳನ್ನು ಬಿಟ್ಟು ಇನ್ಯಾರು ಕಾರಣರಲ್ಲ ಎಂದು ಯುವಕ ಸಂತೋಷ್ ವಿಡಿಯೋ ಮಾಡಿದ್ದಾನೆ. ತೆರಕಾಂಬಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು …
Read More »
BigTv News
July 1, 2025
Breaking News
ಕಾರಿನಲ್ಲಿ ಎಂಟು ಜನರು ದೊಡ್ಡಬಳ್ಳಾಪುರದಿಂದ ಗೌರಿಬಿದನೂರು ಸಮೀಪದ ಮಂಚೇನಹಳ್ಳಿಯ ಭೀಮೇಶ್ವರ ಬೆಟ್ಟಕ್ಕೆ ಹೊರಟಿದ್ದರು.ಕಾರಿನಲ್ಲಿದ್ದ ಇನ್ನೂ ಮೂವರ ಸ್ಥಿತಿ ಗಂಭೀರವಾಗಿದ್ದು, ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬರಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಲಾರಿಯೊಂದನ್ನು ಓವರ್ ಟೇಕ್ ಮಾಡುವ ವೇಳೆ ಎದುರಿನಿಂದ ಕೆಎಸ್ಆರ್ಟಿಸಿ ಬಸ್ ಬಂದಿದೆ. ಬಸ್ ಹಾಗೂ ಲಾರಿಯನ್ನು ತಪ್ಪಿಸಲು ಹೋಗಿ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಕಾರು ಪಲ್ಟಿಯಾಗಿದ್ದೇ …
Read More »