BigTv News
September 2, 2026
Breaking News
ಮಂಗಳೂರು: ಕೋಟೆಕಾರು ಗ್ರಾಮದ ಜಲಾಲ್‌ಬಾಗ್ ಬಳಿ ಮಾದಕ ವಸ್ತು ಸೇವನೆ ಮಾಡಿದ ಆರೋಪದಡಿ ನಾಲ್ವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೊಹಮ್ಮದ್ ಕೈಶ್, ಮೊಹಮ್ಮದ್ ಸಿರಾಜುದ್ದೀನ್ ಅಲಿಯಾಸ್ ಎಂ.ಎಸ್. ಶಕೀರ್ ಇಲ್ಯಾಸ್, ಮೊಹಮ್ಮದ್ ಮುನೀಝ್ ಹಾಗೂ ಕೆ. ಮೊಹಮ್ಮದ್ ಶವದ್ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.
Read More »
BigTv News
September 2, 2026
Breaking News
ಬೆಂಗಳೂರು: ಸಣ್ಣ ಓವರ್‌ಟೇಕ್ ವಿಚಾರಕ್ಕೆ ಆರಂಭವಾದ ಗಲಾಟೆ ಕಾಲೇಜು ವಿದ್ಯಾರ್ಥಿಯ ಅಪಹರಣ ಹಾಗೂ ಹಲ್ಲೆ ಪ್ರಕರಣವಾಗಿ ತಿರುಗಿದೆ. ನಟ ದುನಿಯಾ ವಿಜಯ್ ಅವರ ಪುತ್ರ ಹಾಗೂ ಆತನ ಸ್ನೇಹಿತರ ವಿರುದ್ಧ ವಿದ್ಯಾರ್ಥಿಯೊಬ್ಬನನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ರಾಜರಾಜೇಶ್ವರಿ ನಗರದಲ್ಲಿ ಓವರ್‌ಟೇಕ್ ವಿಚಾರವಾಗಿ ವಿದ್ಯಾರ್ಥಿ ಹಾಗೂ ಆರೋಪಿಗಳ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಮರುದಿನ ಮೈಸೂರು ರಸ್ತೆಯ ಆರ್‌ವಿ ಯೂನಿವರ್ಸಿಟಿ ಬಳಿ ವಿದ್ಯಾರ್ಥಿಯನ್ನು ಕಾರಿಗೆ ಎಳೆದುಕೊಂಡು …
Read More »
BigTv News
September 2, 2026
Breaking News
ಕಾಸರಗೋಡು: ಬಂದ್ಯೋಡ್‌ನಲ್ಲಿ ವ್ಯಾಪಾರಿಯನ್ನು ತಡೆದು ನಿಲ್ಲಿಸಿ ಹಲ್ಲೆ ನಡೆಸಿ, ಬಳಿಕ ಅವರ ಕಾರು ಹಾಗೂ ಐಫೋನ್ ಕಸಿದುಕೊಂಡು ತಂಡವೊಂದು ಪರಾರಿಯಾದ ಘಟನೆ ನಡೆದಿದೆ. ಹಲ್ಲೆಗೊಳಗಾದ ಮಳ್ಳಂಗೈಯ ಆಲಿ ಮುಕ್ತಾದ್ (34) ಅವರನ್ನು ಗಂಭೀರ ಗಾಯಗಳ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ.31ರಂದು ಸಂಜೆ ಅಡ್ಕ ಗುರ್ಮೆ ಸಾರ್ವಜನಿಕ ಶ್ಮಶಾನದ ಸಮೀಪ ಘಟನೆ ನಡೆದಿದೆ. ಬಂದ್ಯೋಡ್‌ನಿಂದ ಕಾರಿನಲ್ಲಿ ಮನೆಗೆ ತೆರಳುತ್ತಿದ್ದ ಆಲಿ ಅವರನ್ನು ಮೂವರ ತಂಡ ಕಾರು ಅಡ್ಡಗಟ್ಟಿ ₹50 …
Read More »
BigTv News
September 2, 2026
Breaking News
ಬೆಂಗಳೂರು: ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ವಾಜರಹಳ್ಳಿಯಲ್ಲಿ ತಾಯಿ ತನ್ನಿಬ್ಬರು ಅವಳಿ ಹೆಣ್ಣು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ನಡೆದಿದೆ. ಮಕ್ಕಳ ತಾಯಿ ಉಮಾದೇವಿ (42) ಅವರನ್ನು ರಕ್ಷಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆ ಹಾಗೂ ಮಾನಸಿಕ ತಪಾಸಣೆಗಾಗಿ ನಿಮ್ಹಾನ್ಸ್‌ಗೆ ದಾಖಲಿಸಲಾಗಿದೆ. ದೀರ್ಘಕಾಲ ಮಕ್ಕಳಿಗಾಗಿ ಕಾಯುತ್ತಿದ್ದ ದಂಪತಿಗೆ IVF ಮೂಲಕ ಅವಳಿ ಹೆಣ್ಣು ಮಕ್ಕಳು ಜನಿಸಿದ್ದರು. ಆದರೆ ಹೆರಿಗೆಯ ಬಳಿಕ ಉಮಾದೇವಿ ಅವರ ಮಾನಸಿಕ ಸ್ಥಿತಿ ಹದಗೆಟ್ಟಿತ್ತು …
Read More »
BigTv News
September 1, 2026
Breaking News
ಶಿವಮೊಗ್ಗ: ಯುವತಿ ಬೇರೊಬ್ಬ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಆಕ್ರೋಶಗೊಂಡ ಪ್ರಿಯಕರ, ಆಕೆಯ ಭಾವಿ ಪತಿ ಹಾಗೂ ಸಹೋದರನ ಎರಡು ಬೈಕ್‌ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಗರದ ವೆಂಕಟೇಶನಗರದಲ್ಲಿ ನಡೆದಿದೆ. ಆರೋಪಿ ಮಣಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಣಿ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಆತನ ದುಶ್ಚಟಗಳಿಂದಾಗಿ ಯುವತಿ ದೂರವಾಗಿದ್ದಳು. ಬಳಿಕ ಕುಟುಂಬಸ್ಥರು ಆಕೆಗೆ ಬೇರೊಬ್ಬ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿದ್ದರು. ಇದರಿಂದ ಕೋಪಗೊಂಡ ಮಣಿ ಮಧ್ಯರಾತ್ರಿ ಯುವತಿಯ ಮನೆ ಬಳಿ ತೆರಳಿ …
Read More »
BigTv News
September 1, 2026
Breaking News
ಬೆಂಗಳೂರು: ಸಿಗರೇಟ್ ಸೇದುವ ವಿಚಾರಕ್ಕೆ 2017ರಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಎಂಟು ಮಂದಿ ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಹರೀಶ್ ಎಂಬ ಯುವಕನ ಮೇಲೆ ಆರೋಪಿಗಳ ಗುಂಪು ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿತ್ತು. ಪ್ರಕರಣ ಸಂಬಂಧ ಪೊಲೀಸರು ಮೂವರು ಅಪ್ರಾಪ್ತರು ಸೇರಿದಂತೆ 13 ಮಂದಿಯನ್ನು ಬಂಧಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ಬಳಿಕ 59ನೇ ಸಿಸಿಎಚ್ ನ್ಯಾಯಾಲಯವು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಎಂಟು ಮಂದಿ …
Read More »
BigTv News
September 1, 2026
Breaking News
ಶಿವಮೊಗ್ಗ: ಅಂಗವಿಕಲರ ಪಿಂಚಣಿ ಕೊಡಿಸಲು ಲಂಚಕ್ಕೆ ಬೇಡಿಕೆಯಿಟ್ಟು ಲೋಕಾಯುಕ್ತ ಬಲೆಗೆ ಬಿದ್ದಿದ್ದ ಭದ್ರಾವತಿ ತಾಲೂಕಿನ ಕಲ್ಲಿಹಾಳ್ ನಾಡಕಚೇರಿಯ ಉಪ ತಹಶೀಲ್ದಾರ್ ಪುಷ್ಪಲತಾ ಅವರಿಗೆ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ಹಾಗೂ ₹40 ಸಾವಿರ ದಂಡ ವಿಧಿಸಿದೆ. ತಮ್ಮ ಹುಟ್ಟು ಮೂಕ ತಂದೆಗೆ ಅಂಗವಿಕಲರ ಪಿಂಚಣಿ ಸೌಲಭ್ಯ ಕೊಡಿಸಲು ಗಿರೀಶ್ ಎಂಬುವರು ನಾಡಕಚೇರಿಗೆ ತೆರಳಿದ್ದರು. ಈ ವೇಳೆ ಪುಷ್ಪಲತಾ ₹10 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, ಮುಂಗಡವಾಗಿ ₹5 ಸಾವಿರ ಪಡೆಯುತ್ತಿದ್ದಾಗ …
Read More »
BigTv News
September 1, 2026
Breaking News
ಬೆಂಗಳೂರು: ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ ಅವರ ಪುತ್ರನ ವಿರುದ್ಧ ಸಹಪಾಠಿ ವಿದ್ಯಾರ್ಥಿಯನ್ನು ಕಾರಿನಲ್ಲಿ ಬಲವಂತವಾಗಿ ಕರೆದೊಯ್ದು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ರಾಜರಾಜೇಶ್ವರಿ ನಗರದಲ್ಲಿ ಕಾರು ಓವರ್‌ಟೇಕ್ ಮಾಡಿದ ವಿಚಾರಕ್ಕೆ ಆರಂಭವಾದ ಗಲಾಟೆ ಬಳಿಕ ಗಂಭೀರ ಸ್ವರೂಪ ಪಡೆದಿದೆ ಎನ್ನಲಾಗಿದೆ. ಮೈಸೂರು ರಸ್ತೆಯ ಆರ್‌ವಿ ಯೂನಿವರ್ಸಿಟಿ ಆವರಣದ ಹೊರಗೆ ವಿದ್ಯಾರ್ಥಿಯನ್ನು ವಿಜಯ್ ಪುತ್ರ ಹಾಗೂ ಆತನ ಸ್ನೇಹಿತರು ಕಾರಿನಲ್ಲಿ ಎಳೆದೊಯ್ದು, ಚಲಿಸುತ್ತಿದ್ದ ಕಾರಿನಲ್ಲೇ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. …
Read More »
BigTv News
September 1, 2026
Breaking News
ಮಂಗಳೂರು: ನಕಲಿ NCIB ಅಧಿಕಾರಿ ಎಂದು ಪರಿಚಯಿಸಿಕೊಂಡು ವಂಚನೆ ಹಾಗೂ ಸುಲಿಗೆ ಮಾಡುತ್ತಿದ್ದ ಸ್ಯಾಮ್ ಪೀಟರ್ ಅಲಿಯಾಸ್ ಡ್ಯಾನಿ ತಾರಕನ್ (64)ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಳೆದ 3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನನ್ನು ಲಖನೌನಲ್ಲಿ ಪತ್ತೆಹಚ್ಚಲಾಗಿದೆ. ಹಣಕಾಸು, ಬ್ಯಾಂಕ್ ಹಾಗೂ ತೆರಿಗೆ ವಂಚನೆ ಪ್ರಕರಣಗಳಲ್ಲಿ ಸಿಲುಕಿದವರನ್ನು ಗುರಿಯಾಗಿಸಿಕೊಂಡು, ತಾನು ಉನ್ನತಾಧಿಕಾರಿ ಎಂದು ನಂಬಿಸಿ ಹಣ ವಸೂಲಿ ಮಾಡುತ್ತಿದ್ದ ಎನ್ನಲಾಗಿದೆ. ತನ್ನ ಗುರುತು ಮರೆಮಾಚಲು ಹಲವು ನಕಲಿ …
Read More »
BigTv News
September 1, 2026
Breaking News
KPSC ನೇಮಕಾತಿ ಅಕ್ರಮ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು, ಪಶುವೈದ್ಯಾಧಿಕಾರಿ ಹುದ್ದೆಯ ಬಳಿಕ ಇದೀಗ DySP ಹುದ್ದೆಗಳ ನೇಮಕಾತಿಯಲ್ಲೂ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಹಾಗೂ ಬಿಜೆಪಿ ಮುಖಂಡ ಬಸವರಾಜ್ ಕನ್ನಾಳೆ ಬಂಧಿತರಾಗಿದ್ದು, ಸಿಐಡಿ ವಿಚಾರಣೆ ನಡೆಸುತ್ತಿದೆ. ವಿಚಾರಣೆ ವೇಳೆ ಕನ್ನಾಳೆ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆಯ ಅಭ್ಯರ್ಥಿಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಮಾಹಿತಿ ಹೊರಬಂದಿದೆ ಎನ್ನಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳೊಂದಿಗೆ ಕನ್ನಾಳೆ …
Read More »