Breaking News

Breaking News

ಪಾದಚಾರಿ ಮಹಿಳೆಯರಿಗೆ ಡಿಕ್ಕಿ ಹೊಡೆದ ಕಾರು : ಇಬ್ಬರು ಸ್ಥಳದಲ್ಲೇ ಸಾವು!

ಪಾದಚಾರಿ ಮಹಿಳೆಯರಿಗೆ ಕಾರು ಡಿಕ್ಕಿಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಬೊಮ್ಮವಾರ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯರು ಸಾವನ್ನಪ್ಪಿದ್ದಾರೆ.60 ವರ್ಷದ ತಿಮ್ಮಕ್ಕ ಹಾಗೂ 33 ವರ್ಷದ ಯಶೋಧ ಮೃತರು. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನದೆಸಿದ್ದಾರೆ.

Read More »

ಬೈಕ್‌ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿದ ಕಾರು; ಸವಾರನಿಗೆ ಗಂಭೀರ ಗಾಯ!

ಕೊಪ್ಪಳದಿಂದ ಗದಗ ಕಡೆ ತೆರಳುತ್ತಿದ್ದ ಕಾರು ಜಮೀನಿನಿಂದ ಹೂವಿನ ಗಂಟನ್ನು ತೆಗೆದುಕೊಂಡು ಲಕ್ಕುಂಡಿ ಗ್ರಾಮಕ್ಕೆ ಹೊರಟಿದ್ದ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Read More »

ಮಂಡ್ಯ: ಬಾಲಕಿ ಎಳೆದೊಯ್ದಿದ್ದ ಮೈಕ್ರೋ ಸಿಬ್ಬಂದಿ ಅರೆಸ್ಟ್!

ಮೈಕ್ರೋ ಫೈನಾನ್ಸ್ ಸಿಬ್ಬಂದಿ ಬಾಲಕಿಯನ್ನ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಬಾಲಕಿ ಎಳೆದೊಯ್ದಿದ್ದ ಪ್ರಕರಣದ A1 ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಜಿತ್ ಬಂಧಿತ ಆರೋಪಿ.ತಮಿಳುನಾಡಿನ ಕೊಯಮತ್ತೂರಿನಲ್ಲಿ ತಲೆಮರಿಸಿಕೊಂಡಿದ್ದ ಆರೋಪಿಯನ್ನ ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.

Read More »

ಅನಂತ್ ಕುಮಾರ್ ಹೆಗಡೆ ಗನ್ ಮ್ಯಾನ್, ಚಾಲಕ ಅರೆಸ್ಟ್!!

ಕಾರುಗಳ ಓವರ್ ಟೆಕ್ ವಿಚಾರದಲ್ಲಿ ಗಲಾಟೆಯಾಗಿ ಕಾರಿನಲ್ಲಿದ್ದ ಮುಸ್ಲಿಂ ವ್ಯಕ್ತಿಗಳಿಗೆ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಬೆಂಬಲಿಗರು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದ್ದು, ಇದೀಗ ಅನಂತ್ ಕುಮಾರ್ ಹೆಗಡೆ ಗನ್ ಮ್ಯಾನ್ ಹಾಗೂ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.ಅನಂತ್ ಕುಮಾರ್ ಹೆಗಡೆ ಅವರು ತೆರಳುತ್ತಿದ್ದ ಕಾರನ್ನು, ಓವರ್ ಟೇಕ್ ಮಾಡಲಾಯಿತು ಎಂಬ ಕಾರಣಕ್ಕೆ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ, ಅನಂತ್ ಕುಮಾರ್ ಹೆಗಡೆ ಪುತ್ರ ಅಶುತೋಷ್, ಚಾಲಕ ಹಾಗೂ …

Read More »

ಲೋಕಾಯುಕ್ತ ದಾಳಿ: ಅಧಿಕಾರಿಗಳ ಮನೆಗಳಲ್ಲಿ ಕೆಜಿಗಟ್ಟಲೆ ಚಿನ್ನ-ಬೆಳ್ಳಿ, ನೋಟಿನ ಕಂತೆಗಳು ಪತ್ತೆ!

ವಿವಿಧ ಜಿಲ್ಲೆಗಳಲ್ಲಿನ ಅಧಿಕಾರಿಗಳ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕೋಟ್ಯಂತರ ಮೌಲ್ಯದ ಚಿನ್ನ, ಬೆಳ್ಳಿ, ನಗದು ಹಾಗೂ ದಾಖಲೆ ವಶಪಡಿಸಿಕೊಂಡಿದ್ದಾರೆ. ಬೆಳಗಾವಿಯ ಕೆಎನ್‌ಎನ್‌ಎಲ್ ಮುಖ್ಯ ಇಂಜಿನಿಯರ್ ಅಶೋಕ ವಸಂದ್ ಮನೆ ಮೇಲೆ ದಾಳಿ. ಸ್ಥಳ: ರಾಮತೀರ್ಥ ನಗರ, ಬೆಳಗಾವಿ ಮತ್ತು ಧಾರವಾಡ ಕಚೇರಿ.ಹುದ್ದೆ: ಧಾರವಾಡದ ಕೆಎನ್‌ಎನ್‌ಎಲ್ ಮುಖ್ಯ ಇಂಜಿನಿಯರ್. ಶಿವಮೊಗ್ಗದ ಡಾ. ಎಸ್. ಪ್ರದೀಪ್ ಮನೆ ಮೇಲೆ ದಾಳಿ ಮೂರು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ …

Read More »

ಇಸ್ರೇಲ್ ಮತ್ತು ಇರಾನ್ ನಡುವೆ ಕದನ ವಿರಾಮ ಘೋಷಣೆ!!

ಆರಂಭವಾದ ಯುದ್ಧಕ್ಕೆ ವಿರಾಮ ಘೋಷಿಸಲಾಗಿದೆ. ಇದೀಗ ಟ್ರಂಪ್ ಆಡಳಿತವು ಮಧ್ಯಪ್ರಾಚ್ಯದಲ್ಲಿ ಯಾವುದೇ ಮಿಲಿಟರಿ ಹಸ್ತಕ್ಷೇಪವನ್ನು ಬಯಸುವುದಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಅಮೆರಿಕ ಅಧ್ಯಕ್ಷ ಟ್ರಂಪ್ ಇಸ್ರೇಲ್ ಮತ್ತು ಇರಾನ್ ನಡುವೆ ಕದನ ವಿರಾಮವನ್ನು ಘೋಷಿಸಿದ್ದಾರೆ.ಕತಾರ್‌ನಲ್ಲಿರುವ ಅಮೆರಿಕದ ನೆಲೆಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿ ಸ್ವೀಕಾರಾರ್ಹವಲ್ಲ ಮತ್ತು ಅದನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಸೌದಿ ಹೇಳಿತ್ತು. ಇದಕ್ಕೂ ಮೊದಲು, ರಷ್ಯಾದ ಪರವಾಗಿ ಮೆಡ್ವೆಡೆವ್, ರಷ್ಯಾ ಇರಾನ್‌ಗೆ ಪರಮಾಣು ಶಸ್ತ್ರಾಸ್ತ್ರಗಳನ್ನು ನೀಡುವ …

Read More »

ಮಹಾಯುದ್ಧ! ಅಮೆರಿಕ ಮೇಲೆ ಇರಾನ್‌ ಪ್ರತೀಕಾರ..

ಇರಾಕ್‌ನಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೆ ದಾಳಿ ಆರಂಭಿಸಿದೆ. ಈ ಮೂಲಕ, ಇಸ್ರೇಲ್‌ – ಇರಾನ್‌ಗೆ ಸೀಮಿತವಾಗಿದ್ದ ಸಂಘರ್ಷವು ಈಗ 5 ದೇಶಗಳಿಗೆ ವ್ಯಾಪಿಸಿದಂತಾಗಿದ್ದು, ಜಗತ್ತಿನಲ್ಲಿ “ಮಿನಿ ಮಹಾಯುದ್ಧ’ ಆರಂಭವಾದಂತಾಗಿದೆ. ಅಮೆರಿಕವು ರವಿವಾರ ಬೆಳಗಿನ ಜಾವ ಇರಾನ್‌ನ ಮೂರು ಪರಮಾಣು ಸ್ಥಾವರಗಳ ಮೇಲೆ “ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’ ಎಂಬ ಹೆಸರಿನಲ್ಲಿ ದಿಢೀರ್‌ ದಾಳಿ ನಡೆಸಿತ್ತು. ಇದಾದ 48 ಗಂಟೆಯಲ್ಲೇ ಇರಾನ್‌ ತಿರುಗೇಟು ನೀಡಿದೆ. “ಆಪರೇಷನ್‌ ಅಲ್‌-ಬಸತ್‌’ ಹೆಸರಿನಲ್ಲಿ ಇರಾನ್‌ ಪ್ರತಿದಾಳಿ ಆರಂಭಿಸಿದ್ದು, …

Read More »

ಧಾರವಾಡ : ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಮೇಲೆ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಗದಗ, ಧಾರವಾಡ, ಕಲಬುರಗಿ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.ಧಾರವಾಡ ಜಿಲ್ಲೆಯಲ್ಲೂ ಲೋಕಾಯುಕ್ತ ದಾಳಿ ನಡೆದಿದೆ. ಮಲಪ್ರಭಾ ಪ್ರಾಜೆಕ್ಟ್‌ನ ಇಂಜಿನಿಯರ್ ಅಶೋಕ್ ವಲ್ಸಂದ ಅವರ ಮನೆ ಮೇಲೂ ಲೋಕಾ ದಾಳಿ ಮಾಡಲಾಗಿದೆ. ಧಾರವಾಡ ನಗರದ ಕೆವಿಜಿ ಬ್ಯಾಂಕ್ ಬಳಿಯಿರುವ ಕ್ವಾಟರ್ಸ್ ಸೇರಿ …

Read More »

ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ!!

ಬೆಂಗಳೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಬಿಬಿಎಂಪಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಪ್ರಕಾಶ್ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.ಕಚೇರಿ, ನಿವಾಸ ಸೇರಿದಂತೆ ನಗರದ ಒಟ್ಟು ಐದು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗೋವಿಂದರಾಜನಗರ ವಿಭಾಗದ ಎಕ್ಸಿಕ್ಯೂಟಿವ್ ಇಂಜಿನಿಯರ್ ಪ್ರಕಾಶ್, ನಾಗರಬಾವಿ, ಗೋವಿಂದರಾಜನಗರ, ಯಲಹಂಕ ಭಾಗದಲ್ಲಿ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಸಿದ್ದಾರೆ.

Read More »

ಮಹಾನಗರ ಪಾಲಿಕೆ : ನಿವೃತ್ತನಾಗಿ 15 ವರ್ಷ ಕಳೆದರೂ ಕುರ್ಚಿ ಬಿಡದ ಅಧಿಕಾರಿ!!

ಮಂಗಳೂರು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕ ಡಾ.ಗಾನ ಪಿ ಕುಮಾರ್, ಸುರೇಶ್ ಕುಮಾರ್ ಪಿ ಮತ್ತು ಪೊಲೀಸ್ ನಿರೀಕ್ಷಕಿ ಭಾರತಿ ಜಿ, ಚಂದ್ರಶೇಖರ್ ಕೆ.ಎನ್ ಮತ್ತು ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ, ರಾಜೇಂದ್ರ ನಾಯ್ಕ್ ಎಂ.ಎನ್ ರವರು ಮಂಗಳೂರು ಮತ್ತು ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯ ಸಿಬಂದಿಗಳೊಂದಿಗೆ ಮಂಗಳೂರು ಮಹಾನಗರ ಪಾಲಿಕೆಗೆ ಲೋಕಾಯುಕ್ತರಿಂದ ಸರ್ಚ್ ವಾರಂಟ್ ಪಡೆದು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ …

Read More »