Breaking News

Breaking News

ಬೆಂಗಳೂರು ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಭರ್ಜರಿ ಬೇಟೆ – 1.07 ಕೋಟಿ ರೂ. ಮೌಲ್ಯದ ಗಾಂಜಾ ವಶ!

ಬೆಂಗಳೂರು: ಥೈಲ್ಯಾಂಡ್‌ನ ಫುಕೆಟ್‌ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನೊಬ್ಬನಿಂದ ಸುಮಾರು ₹1.07 ಕೋಟಿ ಮೌಲ್ಯದ 3.05 ಕೆ.ಜಿ. ಹೈಡ್ರೋಪೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಆರೋಪಿ ತನ್ನ ಚೆಕ್‌ಇನ್ ಬ್ಯಾಗೇಜ್‌ನಲ್ಲಿ ಗಾಂಜಾವನ್ನು ಸೂಕ್ಷ್ಮವಾಗಿ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ ಎನ್ನಲಾಗಿದೆ. ತಪಾಸಣೆ ವೇಳೆ ಮಾದಕ ವಸ್ತು ಪತ್ತೆಯಾಗಿದ್ದು, ಕಸ್ಟಮ್ಸ್ ಕಾಯ್ದೆ ಹಾಗೂ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಗಾಂಜಾವನ್ನು ನಗರದಲ್ಲಿ ಯಾರಿಗೆ ತಲುಪಿಸಲು …

Read More »

ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ ಆರೋಪ: ಮೂವರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ನಗರದ ಪ್ರೆಸ್‌ಕ್ಲಬ್ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿದ ಆರೋಪದಡಿ ಮೂವರು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳವಾರ ಅಪರಾಹ್ನ ಕೆಲವರು ಗುಂಪು ಸೇರಿ ಗಲಾಟೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿದಾಗ, ಪರಸ್ಪರ ಕೈ ಕೈ ಮಿಲಾಯಿಸಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡುತ್ತಿರುವುದು ಕಂಡುಬಂದಿದೆ. ಪೊಲೀಸರು ತಿಳುವಳಿಕೆ ನೀಡಿದರೂ ಗಲಾಟೆ ಮುಂದುವರಿಸಿದ ಹಿನ್ನೆಲೆಯಲ್ಲಿ ಪ್ರಕರಣ …

Read More »

ಮಾದಕ ವಸ್ತು ಸೇವನೆ: ಐದು ಮಂದಿಯ ಬಂಧನ

ಮಂಗಳೂರು: ಕೋಟೆಕಾರು ಗ್ರಾಮದ ಜಲಾಲ್‌ಬಾಗ್ ಬಳಿ ಮಾದಕ ವಸ್ತು ಸೇವನೆ ಮಾಡಿದ ಆರೋಪದಡಿ ನಾಲ್ವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೊಹಮ್ಮದ್ ಕೈಶ್, ಮೊಹಮ್ಮದ್ ಸಿರಾಜುದ್ದೀನ್ ಅಲಿಯಾಸ್ ಎಂ.ಎಸ್. ಶಕೀರ್ ಇಲ್ಯಾಸ್, ಮೊಹಮ್ಮದ್ ಮುನೀಝ್ ಹಾಗೂ ಕೆ. ಮೊಹಮ್ಮದ್ ಶವದ್ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Read More »

ಕಾರು ಓವರ್‌ಟೇಕ್ ಮಾಡಿದ್ದಕ್ಕೆ ಸ್ಟೂಡೆಂಟ್ ಮೇಲೆ ಅಟ್ಯಾಕ್, ನಟ ದುನಿಯಾ ವಿಜಯ್ ಮಗನ ವಿರುದ್ಧ FIR

ಬೆಂಗಳೂರು: ಸಣ್ಣ ಓವರ್‌ಟೇಕ್ ವಿಚಾರಕ್ಕೆ ಆರಂಭವಾದ ಗಲಾಟೆ ಕಾಲೇಜು ವಿದ್ಯಾರ್ಥಿಯ ಅಪಹರಣ ಹಾಗೂ ಹಲ್ಲೆ ಪ್ರಕರಣವಾಗಿ ತಿರುಗಿದೆ. ನಟ ದುನಿಯಾ ವಿಜಯ್ ಅವರ ಪುತ್ರ ಹಾಗೂ ಆತನ ಸ್ನೇಹಿತರ ವಿರುದ್ಧ ವಿದ್ಯಾರ್ಥಿಯೊಬ್ಬನನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ರಾಜರಾಜೇಶ್ವರಿ ನಗರದಲ್ಲಿ ಓವರ್‌ಟೇಕ್ ವಿಚಾರವಾಗಿ ವಿದ್ಯಾರ್ಥಿ ಹಾಗೂ ಆರೋಪಿಗಳ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಮರುದಿನ ಮೈಸೂರು ರಸ್ತೆಯ ಆರ್‌ವಿ ಯೂನಿವರ್ಸಿಟಿ ಬಳಿ ವಿದ್ಯಾರ್ಥಿಯನ್ನು ಕಾರಿಗೆ ಎಳೆದುಕೊಂಡು …

Read More »

ವ್ಯಾಪಾರಿಯನ್ನು ರಸ್ತೆಯಲ್ಲಿ ತಡೆದು ನಿಲ್ಲಿಸಿ ಹಲ್ಲೆ ಮಾಡಿ ಕಾರು ಸಹಿತ ತಂಡ ಪರಾರಿ

ಕಾಸರಗೋಡು: ಬಂದ್ಯೋಡ್‌ನಲ್ಲಿ ವ್ಯಾಪಾರಿಯನ್ನು ತಡೆದು ನಿಲ್ಲಿಸಿ ಹಲ್ಲೆ ನಡೆಸಿ, ಬಳಿಕ ಅವರ ಕಾರು ಹಾಗೂ ಐಫೋನ್ ಕಸಿದುಕೊಂಡು ತಂಡವೊಂದು ಪರಾರಿಯಾದ ಘಟನೆ ನಡೆದಿದೆ. ಹಲ್ಲೆಗೊಳಗಾದ ಮಳ್ಳಂಗೈಯ ಆಲಿ ಮುಕ್ತಾದ್‌ (34) ಅವರನ್ನು ಗಂಭೀರ ಗಾಯಗಳ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ.31ರಂದು ಸಂಜೆ ಅಡ್ಕ ಗುರ್ಮೆ ಸಾರ್ವಜನಿಕ ಶ್ಮಶಾನದ ಸಮೀಪ ಘಟನೆ ನಡೆದಿದೆ. ಬಂದ್ಯೋಡ್‌ನಿಂದ ಕಾರಿನಲ್ಲಿ ಮನೆಗೆ ತೆರಳುತ್ತಿದ್ದ ಆಲಿ ಅವರನ್ನು ಮೂವರ ತಂಡ ಕಾರು ಅಡ್ಡಗಟ್ಟಿ ₹50 …

Read More »

ಬೆಂಗಳೂರಲ್ಲಿ ಕರುಳು ಹಿಂಡುವ ಕೃತ್ಯ; ಮುದ್ದಾದ ಅವಳಿ ಹೆಣ್ಮಕ್ಕಳ ಜೀವ ತೆಗೆದ ತಾಯಿ

ಬೆಂಗಳೂರು: ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ವಾಜರಹಳ್ಳಿಯಲ್ಲಿ ತಾಯಿ ತನ್ನಿಬ್ಬರು ಅವಳಿ ಹೆಣ್ಣು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ನಡೆದಿದೆ. ಮಕ್ಕಳ ತಾಯಿ ಉಮಾದೇವಿ (42) ಅವರನ್ನು ರಕ್ಷಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆ ಹಾಗೂ ಮಾನಸಿಕ ತಪಾಸಣೆಗಾಗಿ ನಿಮ್ಹಾನ್ಸ್‌ಗೆ ದಾಖಲಿಸಲಾಗಿದೆ. ದೀರ್ಘಕಾಲ ಮಕ್ಕಳಿಗಾಗಿ ಕಾಯುತ್ತಿದ್ದ ದಂಪತಿಗೆ IVF ಮೂಲಕ ಅವಳಿ ಹೆಣ್ಣು ಮಕ್ಕಳು ಜನಿಸಿದ್ದರು. ಆದರೆ ಹೆರಿಗೆಯ ಬಳಿಕ ಉಮಾದೇವಿ ಅವರ ಮಾನಸಿಕ ಸ್ಥಿತಿ ಹದಗೆಟ್ಟಿತ್ತು …

Read More »

ನಿಶ್ಚಿತಾರ್ಥದ ಸಿಟ್ಟಿಗೆ ಬೈಕ್‌ಗಳಿಗೆ ಬೆಂಕಿ ಹಚ್ಚಿದ ಆರೋಪಿ ಬಂಧನ

ಶಿವಮೊಗ್ಗ: ಯುವತಿ ಬೇರೊಬ್ಬ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಆಕ್ರೋಶಗೊಂಡ ಪ್ರಿಯಕರ, ಆಕೆಯ ಭಾವಿ ಪತಿ ಹಾಗೂ ಸಹೋದರನ ಎರಡು ಬೈಕ್‌ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಗರದ ವೆಂಕಟೇಶನಗರದಲ್ಲಿ ನಡೆದಿದೆ. ಆರೋಪಿ ಮಣಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಣಿ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಆತನ ದುಶ್ಚಟಗಳಿಂದಾಗಿ ಯುವತಿ ದೂರವಾಗಿದ್ದಳು. ಬಳಿಕ ಕುಟುಂಬಸ್ಥರು ಆಕೆಗೆ ಬೇರೊಬ್ಬ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿದ್ದರು. ಇದರಿಂದ ಕೋಪಗೊಂಡ ಮಣಿ ಮಧ್ಯರಾತ್ರಿ ಯುವತಿಯ ಮನೆ ಬಳಿ ತೆರಳಿ …

Read More »

ಸಿಗರೇಟ್​​​​ಗಾಗಿ ನಡೆದ ಕೊಲೆ ಕೇಸ್​, 8 ಮಂದಿಗೆ ಜೀವಾವಧಿ ಶಿಕ್ಷೆ!

ಬೆಂಗಳೂರು: ಸಿಗರೇಟ್ ಸೇದುವ ವಿಚಾರಕ್ಕೆ 2017ರಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಎಂಟು ಮಂದಿ ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಹರೀಶ್ ಎಂಬ ಯುವಕನ ಮೇಲೆ ಆರೋಪಿಗಳ ಗುಂಪು ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿತ್ತು. ಪ್ರಕರಣ ಸಂಬಂಧ ಪೊಲೀಸರು ಮೂವರು ಅಪ್ರಾಪ್ತರು ಸೇರಿದಂತೆ 13 ಮಂದಿಯನ್ನು ಬಂಧಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ಬಳಿಕ 59ನೇ ಸಿಸಿಎಚ್ ನ್ಯಾಯಾಲಯವು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಎಂಟು ಮಂದಿ …

Read More »

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಉಪ ತಹಶೀಲ್ದಾರ್ ಗೆ 4 ವರ್ಷ ಜೈಲು, 40 ಸಾವಿರ ರೂ. ದಂಡ

ಶಿವಮೊಗ್ಗ: ಅಂಗವಿಕಲರ ಪಿಂಚಣಿ ಕೊಡಿಸಲು ಲಂಚಕ್ಕೆ ಬೇಡಿಕೆಯಿಟ್ಟು ಲೋಕಾಯುಕ್ತ ಬಲೆಗೆ ಬಿದ್ದಿದ್ದ ಭದ್ರಾವತಿ ತಾಲೂಕಿನ ಕಲ್ಲಿಹಾಳ್ ನಾಡಕಚೇರಿಯ ಉಪ ತಹಶೀಲ್ದಾರ್ ಪುಷ್ಪಲತಾ ಅವರಿಗೆ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ಹಾಗೂ ₹40 ಸಾವಿರ ದಂಡ ವಿಧಿಸಿದೆ. ತಮ್ಮ ಹುಟ್ಟು ಮೂಕ ತಂದೆಗೆ ಅಂಗವಿಕಲರ ಪಿಂಚಣಿ ಸೌಲಭ್ಯ ಕೊಡಿಸಲು ಗಿರೀಶ್‌ ಎಂಬುವರು ನಾಡಕಚೇರಿಗೆ ತೆರಳಿದ್ದರು. ಈ ವೇಳೆ ಪುಷ್ಪಲತಾ ₹10 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, ಮುಂಗಡವಾಗಿ ₹5 ಸಾವಿರ ಪಡೆಯುತ್ತಿದ್ದಾಗ …

Read More »

ನಟ ದುನಿಯಾ ವಿಜಯ್ ಪುತ್ರನ ವಿರುದ್ಧ ಕಿಡ್ನಾಪ್ ಕೇಸ್, ಸಹಪಾಠಿಯನ್ನು ಅಪಹರಿಸಿ ಕಾರಲ್ಲಿ ಹಲ್ಲೆಆರೋಪ!

ಬೆಂಗಳೂರು: ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ ಅವರ ಪುತ್ರನ ವಿರುದ್ಧ ಸಹಪಾಠಿ ವಿದ್ಯಾರ್ಥಿಯನ್ನು ಕಾರಿನಲ್ಲಿ ಬಲವಂತವಾಗಿ ಕರೆದೊಯ್ದು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ರಾಜರಾಜೇಶ್ವರಿ ನಗರದಲ್ಲಿ ಕಾರು ಓವರ್‌ಟೇಕ್ ಮಾಡಿದ ವಿಚಾರಕ್ಕೆ ಆರಂಭವಾದ ಗಲಾಟೆ ಬಳಿಕ ಗಂಭೀರ ಸ್ವರೂಪ ಪಡೆದಿದೆ ಎನ್ನಲಾಗಿದೆ. ಮೈಸೂರು ರಸ್ತೆಯ ಆರ್‌ವಿ ಯೂನಿವರ್ಸಿಟಿ ಆವರಣದ ಹೊರಗೆ ವಿದ್ಯಾರ್ಥಿಯನ್ನು ವಿಜಯ್ ಪುತ್ರ ಹಾಗೂ ಆತನ ಸ್ನೇಹಿತರು ಕಾರಿನಲ್ಲಿ ಎಳೆದೊಯ್ದು, ಚಲಿಸುತ್ತಿದ್ದ ಕಾರಿನಲ್ಲೇ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. …

Read More »