BigTv News
June 17, 2025
Breaking News
ಬಂಟ್ವಾಳದ ಬೆಂಜನಪದವು ನಿವಾಸಿ ಸಾಗರ್ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು ಸಾಗರ್‌ಗಾಗಿ ಮನೆಮಂದಿ ಹಾಗೂ ಸ್ನೇಹಿತರು ಹುಡುಕಾಟ ನಡೆಸಿದ್ದರು.ಇಂದು ಪಕ್ಕದ ಹಳ್ಳದಲ್ಲಿ ಸಾಗರ್ ಮೃತದೇಹ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಬಂಟ್ವಾಳ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.
Read More »
BigTv News
June 17, 2025
Breaking News
ವೃದ್ಧೆ, ವಿಕಲಾಂಗೆಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದ ಫಿರೋಜ್ ಯರಗಟ್ಟಿ ಎಂಬಾತನನ್ನು ನಗರ ಪೊಲೀಸರು ಬಂಧಿಸಿದ್ದಾರೆ.ಬಂಧಿಸುವಾಗ ಫಿರೋಜ್ ಪೊಲೀಸರ ಮೇಲೆ ದಾಳಿ ಮಾಡಿದ್ದರಿಂದ, ಆತನ ಕಾಲಿಗೆ ಗುಂಡು ಹಾರಿಸಲಾಗಿದ್ದು, ಇದರಿಂದ ಆತ ಗಾಯಗೊಂಡಿದ್ದಾನೆ. ಫಿರೋಜ್ ಅತ್ಯಾಚಾರ ಎಸಗಿ, ಮೊಬೈಲ್ ಮತ್ತು 5 ಸಾವಿರ ರೂಪಾಯಿ ಕಳವು ಮಾಡಿ ಪರಾರಿಯಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Read More »
BigTv News
June 17, 2025
Breaking News
ಬಿಹಾರದ ಮುಜಾಫರ್ಪುರ ಜಿಲ್ಲೆಯಲ್ಲಿ ಶತ್ರುಘ್ನ ರಾಯ್ (40) ಎಂಬಾತ ಪತ್ನಿಯ ಮೇಲೆ ಅನುಮಾನ ಪಟ್ಟು ಎರಡು ದಿನಗಳ ಕಾಲ ಆಹಾರ ಅಥವಾ ನೀರಿಲ್ಲದ ಕೋಣೆಯಲ್ಲಿ ಲಾಕ್ ಮಾಡಿದಲ್ಲದೆ, ಆಕೆಯ ಗುಪ್ತಾಂಗಕ್ಕೆ ಕಾರದ ಪುಡಿ ಹಾಕಿ ಹಲ್ಲೆ ನಡೆಸಿದ್ದಾನೆ ಎಂದು ಪತ್ನಿ ಆರೋಪಿಸಿದ್ದಾರೆ.ಇನ್ನು ಪತಿಯ ಜೊತೆ ಅತ್ತೆ ಮಾವ ಭಾವ, ಅತ್ತಿಗೆ ಕೂಡ ನಿನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಸದ್ಯ ಸಂತ್ರಸ್ತೆಯ ಹೇಳಿಕೆಯ ಮೇರೆಗೆ ಪತಿ ಶತ್ರುಘ್ನ ರಾಯ್, …
Read More »
BigTv News
June 17, 2025
Breaking News
ಅಪಾಯಕಾರಿಯಾಗಿ ಹಾದುಹೋಗಿರುವ ವಿದ್ಯುತ್ ತಂತಿಯ ಬಳಿ ನಿನ್ನೆ ಆಟ ಆಡುತ್ತಾ ಬಾಲಕ ಪೊರಕೆ ಬಿಸಾಡಲು ಹೋಗಿದ್ದ. ವಿದ್ಯುತ್ ತಂತಿಗೆ ಪೊರಕೆ ತಾಗಿ ಬಾಲಕನಿಗೆ ಕರೆಂಟ್ ಶಾಕ್ ಹೊಡೆದಿದೆ. ಕರೆಂಟ್ ಶಾಕ್ ಗಾಯಗಳಿಂದ ಬಾಲಕ ಇದೀಗ ತೀವ್ರವಾಗಿ ನರಳಾಡುತ್ತಿದ್ದಾನೆ. ಸದ್ಯ ಬಾಲಕನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಸುಟ್ಟ ಗಾಯಗಳ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
June 17, 2025
Breaking News
ಔಷಧಿ ತರಲು ನನ್ನ ಮಗನು ಬಿ.ಸಿ.ರೋಡ್‌ಗೆ ಶನಿವಾರ ತನ್ನ ಪತ್ನಿ ಹಾಗೂ ಮಕ್ಕಳ ಜೊತೆ ತೆರಳಿದ್ದ. ಅಲ್ಲಿಂದ ಮರಳುವಾಗ ಆತ ಮೂರು ಮಾರ್ಗದ ಬಳಿ ರಿಕ್ಷಾದಿಂದ ಇಳಿದಿದ್ದ. ಆ ಬಳಿಕ ಮನೆಗೆ ಮರಳದೇ ನಾಪತ್ತೆಯಾಗಿದ್ದ’ ಎಂಬುದಾಗಿ ಸಾಗರ್ ತಂದೆ ಜನಾರ್ದನ ಪೂಜಾರಿ ಅವರು ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ನಾಪತ್ತೆ ಪ್ರಕರಣ ದಾಖಲಾಗಿತ್ತು. ಸಾಗರ್‌ಗಾಗಿ ಆತನ ಮನೆಯವರು, ಬಂಧುಗಳು ಹಾಗೂ ಗೆಳೆಯರು ಹುಡುಕಿದ್ದರು. ಆದರೂ ಆತನ ಸುಳಿವು ಸಿಕ್ಕಿರಲಿಲ್ಲ. …
Read More »
BigTv News
June 17, 2025
Breaking News
ವಂಡ್ಸೆ ಕಡೆಯಿಂದ ಹೆಮ್ಮಾಡಿ ಕಡೆಗೆ ಹೋಗುತ್ತಿದ್ದ ಬೈಕ್ ಹೆಮ್ಮಾಡಿ ಕಡೆಯಿಂದ ವಂಡ್ಸೆ ಕಡೆಗೆ ಬರುತ್ತಿದ್ದ ಶ್ರೀದುರ್ಗಾಂಬಾ ಬಸ್‌ಗೆ ಎದುರಿನಿಂದ ಢಿಕ್ಕಿ ಹೊಡೆದ ಪರಿಣಾಮ ಸವಾರ ಬೈಕ್ ಸಮೇತ ರಸ್ತೆಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಶರತ್ ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ.ಢಿಕ್ಕಿಯ ತೀವ್ರತೆಗೆ ಬೈಕ್ ನಜ್ಜುಗುಜ್ಜಾಗಿದ್ದು, ಬೈಕ್ ರೇಡಿಯೇಟರ್ ಮೇಲೆ ಪೆಟ್ರೋಲ್ ಬಿದ್ದ ಕಾರಣ ಬೈಕ್‌ಗೆ ಬೆಂಕಿ ಹೊತ್ತಿಕೊಂಡು ಭಾಗಶಃ ಸುಟ್ಟು ಹೋಗಿದೆ. ಸ್ಥಳಕ್ಕೆ ಶಂಕರನಾರಾಯಣ ಠಾಣೆಯ ವೃತ್ತನಿರೀಕ್ಷಕ ಜಯರಾಮ್ …
Read More »
BigTv News
June 17, 2025
Breaking News
ನಗರದ ನಂತೂರಿನ ತಾರೆತೋಟ ಬಳಿ ಸೋಮವಾರ ರಾತ್ರಿ ಕಾರೊಂದು ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ, ಸ್ಕಿಡ್ ಆಗಿ ಡಿವೈಡರ್ ಬಡಿದು ಸಂಭವಿಸಿದ ಅಪಘಾತದಲ್ಲಿ ಕಾರು ಚಲಾಯಿಸುತ್ತಿದ್ದ ಫಿಸಿಯೋಥೆರಪಿ ವೈದ್ಯರೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆಕೇರಳದ ಆಲಪ್ಪುಝ ನಿವಾಸಿ ಡಾ.ಮುಹಮ್ಮದ್ ಅಮಲ್ (29) ಮೃತಪಟ್ಟವರು ಎಂದು ತಿಳಿದು ಬಂದಿದೆ.
Read More »
BigTv News
June 17, 2025
Breaking News
ಒಡಿಶಾದ ಗಂಜಾಮ್ ಜಿಲ್ಲೆಯ ಗೋಪಾಲಪುರ ಸಮುದ್ರ ತೀರದಲ್ಲಿ ಅಡ್ಡಾಡುತ್ತಿದ್ದ 20 ವರ್ಷದ ಕಾಲೇಜು ವಿದ್ಯಾರ್ಥಿನಿಯ ಮೇಲೆ, ಆಕೆಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು ಸುಮಾರು 10 ಜನರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ.ಏಳು ಶಂಕಿತರನ್ನು ವಿಚಾರಣೆಗಾಗಿ ಬಂಧಿಸಿದ್ದಾರೆ, ಉಳಿದ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸುವ ಪ್ರಯತ್ನಗಳು ಮುಂದುವರೆದಿವೆ ಎಂದು ಹೇಳಿದರು. “ಬಂಧನಗಳನ್ನು ತ್ವರಿತಗೊಳಿಸಲು ವಿಶೇಷ ತಂಡವನ್ನು ರಚಿಸಲಾಗಿದ್ದು, ಎಲ್ಲಾ ಅಪರಾಧಿಗಳನ್ನು ಶೀಘ್ರದಲ್ಲೇ ನ್ಯಾಯಕ್ಕೆ ತರಲಾಗುವುದು. ಬದುಕುಳಿದ …
Read More »
BigTv News
June 17, 2025
Breaking News
ಮೂತ್ರ ವಿಸರ್ಜನೆಗೆಂದು ಹೋದಾಗ ನಾಲದಲ್ಲಿದ್ದ ಕೊಳಕ ಮಂಡಲ ಹಾವು ಕಚ್ಚಿದ್ದು, ತಕ್ಷಣ ಪಡಿಯಪ್ಪನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದ್ರೆ ಚಿಕಿತ್ಸೆ ಫಲಿಸದೆ ಇಂದು ಪಡಿಯಪ್ಪ ಸಾವನ್ನಪ್ಪಿದ್ದಾರೆ. ಶನಿವಾರ ರಾತ್ರಿ ಹಾವು ಕಚ್ಚಿದ್ದು, ವೈದ್ಯರ ಸತತ ಪ್ರಯತ್ನದ ನಂತರವೂ ಮೃತ ಪಟ್ಟಿದ್ದಾರೆ. ಕಸಬಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »
BigTv News
June 17, 2025
Breaking News
ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಅವರು ಆರೋಪಿ ತಪ್ಪಿತಸ್ಥನೆಂದು ತೀರ್ಪು ನೀಡಿ ಜೀವಾವಧಿ ಹಾಗೂ ₹1 ಲಕ್ಷಗಳ ದಂಡವನ್ನು ತೀರ್ಪಿನ ದಿನಾಂಕದಿಂದ ಮೂರು ತಿಂಗಳ ಒಳಗೆ ಮೃತಳ ತಾಯಿಗೆ ನೀಡುವಂತೆ ತಿಳಿಸಿದ್ದಾರೆ.ದಂಡ ಪಾವತಿಸದಿದ್ದಲ್ಲ 1 ವರ್ಷ ಸಾದಾ ಕಾರಾಗೃಹ, ಹಾಗೂ ಕಲಂ 392ರ ಅಪರಾಧಕ್ಕೆ 7 ವರ್ಷ ಕಾರಾಗೃಹ ಹಾಗೂ ₹10 ಸಾವಿರ ದಂಡವನ್ನು ಮೂರು ತಿಂಗಳಲ್ಲಿ ಭರಿಸಬೇಕು. ದಂಡ ಕಟ್ಟದಿದ್ದಲ್ಲಿ 3 ತಿಂಗಳ ಸಾದಾ ಕಾರಾಗೃಹ ವಾಸ ಅನುಭವಿಸಬೇಕು …
Read More »