BigTv News
August 30, 2026
Breaking News
ಗೌರಿಬಿದನೂರು: ತಾಲೂಕಿನಲ್ಲಿ 14 ವರ್ಷದ ಬಾಲಕಿ 5 ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗೆ ತೆರಳಿದ್ದ ವೇಳೆ ಪರೀಕ್ಷೆ ನಡೆಸಿದಾಗ ಗರ್ಭಿಣಿಯಾಗಿರುವುದು ಪತ್ತೆಯಾಗಿದೆ. ವಿಷಯ ತಿಳಿದು ಪೊಲೀಸರು ಹಾಗೂ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಬಾಲಕಿಯ ಚಿಕ್ಕಪ್ಪನ ಮಗನೇ ಕೃತ್ಯ ಎಸಗಿದ್ದಾನೆ ಎನ್ನಲಾಗಿದ್ದು, ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಸದ್ಯ ಬಾಲಕಿಯನ್ನು ಚಿಕ್ಕಬಳ್ಳಾಪುರದ ಬಾಲಮಂದಿರದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Read More »
BigTv News
August 30, 2026
Breaking News
ಬೆಂಗಳೂರು, ಆ.30: ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ ಸಂಬಂಧ ಸಿಐಡಿ ತನಿಖೆ ಚುರುಕುಗೊಂಡಿದ್ದು, ಎಕ್ಸಾಮ್ ಕಂಟ್ರೋಲರ್ ಆಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ಬಂಧಿಸಲಾಗಿದೆ. ಮತ್ತಷ್ಟು ಬಂಧನದ ಸಾಧ್ಯತೆ ಹಿನ್ನೆಲೆಯಲ್ಲಿ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸೇರಿದಂತೆ ಕೆಲ ಅಧಿಕಾರಿಗಳು ಹಾಗೂ ಸದಸ್ಯರಲ್ಲಿ ಆತಂಕ ಶುರುವಾಗಿದೆ. ಓಎಂಆರ್ ಶೀಟ್ ತಿದ್ದುಪಡಿಯಲ್ಲಿ ಜ್ಞಾನೇಂದ್ರ ಕುಮಾರ್ ಕೈವಾಡವಿರುವ ಬಗ್ಗೆ ಸಾಕ್ಷ್ಯ ಸಿಕ್ಕಿದೆ ಎನ್ನಲಾಗಿದೆ. ಅಭ್ಯರ್ಥಿಗಳಿಗೆ ಹೋಟೆಲ್ ಹಾಗೂ ರೆಸಾರ್ಟ್‌ಗಳಲ್ಲಿ ತರಬೇತಿ ನೀಡಿದ …
Read More »
BigTv News
August 30, 2026
Breaking News
ಚಿಕ್ಕಮಗಳೂರು: ನಗರದ ಮಾರ್ಕೆಟ್ ರಸ್ತೆಯ ಮನೆಯೊಂದರ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಹಾಗೂ ನಗರ ಠಾಣೆ ಪೊಲೀಸರು ದಾಳಿ ನಡೆಸಿ 30 ಕೆ.ಜಿ.ಗೂ ಹೆಚ್ಚು ನಕಲಿ ನಾಟಿ ತುಪ್ಪ ವಶಪಡಿಸಿಕೊಂಡಿದ್ದಾರೆ. ಮನೆಯೊಳಗೆ ಡಾಲ್ಡಾ ಹಾಗೂ ರಾಸಾಯನಿಕ ಬಳಸಿ ತುಪ್ಪ ತಯಾರಿಸಿ, ಅದನ್ನು ನಾಟಿ ತುಪ್ಪ ಎಂದು ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಅಧಿಕಾರಿಗಳು ದಾಳಿ ನಡೆಸುವ ವೇಳೆ ದಂಧೆಕೋರರು ಮನೆಯ ಬಾಗಿಲು ಲಾಕ್ ಮಾಡಿ ಪರಾರಿಯಾಗಿದ್ದಾರೆ. ಕಳೆದ ವಾರವೂ ಪಾಳುಬಿದ್ದ ಮನೆಯೊಂದರ …
Read More »
BigTv News
August 30, 2026
Breaking News
ಮಂಗಳೂರು: ಸೈಬರ್ ವಂಚನೆಗೆ ಬಳಸಲಾಗುತ್ತಿದ್ದ ಮ್ಯೂಲ್ ಬ್ಯಾಂಕ್ ಖಾತೆಗಳ ಜಾಲದ ವಿರುದ್ಧ ಮುಂಬಯಿ ಸೈಬರ್ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಪುತ್ತೂರು ಮೂಲದ ರಕ್ಷಿತ್ ಹೆಗ್ಡೆ (35) ಸೇರಿದಂತೆ ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ₹10 ಲಕ್ಷ ನಗದು, 16 ಮೊಬೈಲ್‌ಗಳು, 23 ಸಿಮ್‌ಕಾರ್ಡ್‌ಗಳು, 22 ಚೆಕ್‌ಬುಕ್‌ಗಳು ಹಾಗೂ 31 ಕಂಪನಿಗಳ ಸೀಲುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸೈಬರ್ ವಂಚನೆಯ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಿ, ಬಳಿಕ ಚೆಕ್‌ಗಳ ಮೂಲಕ ಹಿಂಪಡೆದು …
Read More »
BigTv News
August 29, 2026
Breaking News
ಬೆಂಗಳೂರು: ಆನೇಕಲ್ ತಾಲೂಕಿನ ಹೊಸೂರು ಮುಖ್ಯರಸ್ತೆಯ ನೆರಳೂರು ಗೇಟ್ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ನಡೆದಿದೆ. ಕಾರಿನ ಎಂಜಿನ್‌ನಿಂದ ದಟ್ಟ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಾಲಕ ಸಮಯಪ್ರಜ್ಞೆ ಮೆರೆದು ರಸ್ತೆ ಬದಿಗೆ ನಿಲ್ಲಿಸಿ ಹೊರಬಂದಿದ್ದಾರೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಕಾರಿಗೆ ವ್ಯಾಪಿಸಿದ್ದು, ಸಮೀಪದ ಪೆಟ್ರೋಲ್ ಬಂಕ್ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಕಾರಿನಲ್ಲಿದ್ದವರು ಸಮಯಕ್ಕೆ ಸರಿಯಾಗಿ ಹೊರಬಂದಿದ್ದರಿಂದ ಯಾವುದೇ ಪ್ರಾಣಾಪಾಯ …
Read More »
BigTv News
August 29, 2026
Breaking News
ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುತ್ತಿದ್ದುದನ್ನು ಪ್ರಶ್ನಿಸಿದ್ದಕ್ಕೆ ಹರೀಶ್ (32) ಎಂಬಾತನನ್ನು ಕೊಲೆ ಮಾಡಿದ್ದ 8 ಮಂದಿ ಅಪರಾಧಿಗಳಿಗೆ ನಗರದ 58ನೇ ಹೆಚ್ಚುವರಿ ಸಿಟಿ ಸಿವಿಲ್ ಹಾಗೂ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 2017ರ ಅ.1ರಂದು ಶಾಂತಿನಗರದ ‘ಬಿ’ ಸ್ಟ್ರೀಟ್‌ನಲ್ಲಿ ವಿಜಯದಶಮಿ ಪಲ್ಲಕ್ಕಿ ಉತ್ಸವ ನಡೆಯುತ್ತಿದ್ದ ವೇಳೆ ಘಟನೆ ನಡೆದಿತ್ತು. ಧೂಮಪಾನ ನಿಲ್ಲಿಸಿ ಸ್ಥಳದಿಂದ ತೆರಳುವಂತೆ ಹರೀಶ್ ಎಚ್ಚರಿಸಿದ್ದ. ಇದರಿಂದ ಕೋಪಗೊಂಡ ಆರೋಪಿಗಳು ಬಳಿಕ ಮಾರಕಾಸ್ತ್ರಗಳೊಂದಿಗೆ ಬಂದು ಹರೀಶ್ …
Read More »
Shaikh BigTv
August 29, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಮರಳು ಮಾಫಿಯಾಗೆ ಲೋಕಾಯುಕ್ತ ಶಾಕ್! ಲಂಚದ ಜಾಲದಲ್ಲಿ ಸಿಕ್ಕಿದ್ದು ಕೆಳಹಂತದವರೇನಾ, ಇನ್ನೂ ದೊಡ್ಡವರ ಸರದಿ ಬಾಕಿಯಿದೆಯಾ..? ಹುಬ್ಬಳ್ಳಿ: ಮರಳು ದಂಧೆಯ ಮೇಲೆ ಲೋಕಾಯುಕ್ತರ ದಾಳಿ ಬೀಳುತ್ತಿದ್ದಂತೆ, ಹುಬ್ಬಳ್ಳಿಯಲ್ಲಿ ಮತ್ತೊಂದು ಕುತೂಹಲಕಾರಿ ಚರ್ಚೆ ಶುರುವಾಗಿದೆ… ಲಂಚದ ಆರೋಪದಲ್ಲಿ ಕೆಳಹಂತದ ಪೊಲೀಸ್ ಸಿಬ್ಬಂದಿ ಲೋಕಾಯುಕ್ತರ ಬಲೆಗೆ ಬಿದ್ದ ಬೆನ್ನಲ್ಲೇ, ಮರಳು ದಂಧೆಯ ಹಿಂದೆ ಓಡಾಡುತ್ತಿದ್ದ ಕೆಲವರು ಇದೀಗ ಏಕಾಏಕಿ ಕಾಣೆಯಾಗಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ…. ಲೋಕಾಯುಕ್ತರ ದಾಳಿ ಬೀಳುವವರೆಗೂ ಎಲ್ಲವೂ ಸರಾಗವಾಗಿತ್ತಂತೆ… ಆದರೆ …
Read More »
BigTv News
August 29, 2026
Breaking News
ಚಿಕ್ಕಮಗಳೂರು: ಇಸ್ಪೀಟ್ ಆಡುತ್ತಿದ್ದ ವೇಳೆ ಪೊಲೀಸರ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ತಪ್ಪಿಸಿಕೊಳ್ಳುವಾಗ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಬಸಾಪುರದಲ್ಲಿ ಘಟನೆ ನಡೆದಿದೆ. ಗುಡ್ಡೆಕೊಪ್ಪ ಗ್ರಾಮದ ರಮೇಶ್(35) ಮೃತಪಟ್ಟವರು ಎಂದು ಹೇಳಲಾಗಿದೆ. ಬಸಾಪುರ ಗ್ರಾಮದ ಸಮೀಪ ಅರಣ್ಯದಲ್ಲಿ ರಾತ್ರಿ ಗುಂಪು ಕಟ್ಟಿಕೊಂಡು ಇಸ್ಪೀಟ್ ಆಡುತ್ತಿದ್ದರು. 9 ಜನರ ಪೈಕಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಪೊಲೀಸರ ದಾಳಿ ವೇಳೆ ಪೊಲೀಸರಿಗೆ ಹೆದರಿ ಓಡಿ ಹೋಗುತ್ತಿದ್ದ ರಮೇಶ್ ಸಾವನ್ನಪ್ಪಿದ್ದಾರೆ. ಜಾರಿ ಬಿದ್ದು …
Read More »
BigTv News
August 29, 2026
Breaking News
ಮೈಸೂರು: ನಂಜನಗೂಡು ತಾಲೂಕಿನ ಹರಗನಪುರ ಗ್ರಾಮದ ಗುರುಮೂರ್ತಿ (24) ಎಂಬ ಯುವಕ ಡೆತ್‌ನೋಟ್ ಬರೆದಿಟ್ಟು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮನೆ ಮುಂದೆ ಕೆಲವರು ಗಲಾಟೆ ಮಾಡಿ ಅವಮಾನಿಸಿದ್ದರಿಂದ ಮನನೊಂದು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಗುರುಮೂರ್ತಿ ಡೆತ್‌ನೋಟ್‌ನಲ್ಲಿ ಶ್ರವಣ, ಅಭಿ ಸೇರಿದಂತೆ ಐವರ ವಿರುದ್ಧ ಆರೋಪ ಮಾಡಿದ್ದಾನೆ. ಗಲಾಟೆ ಹಾಗೂ ಅವಮಾನವೇ ತನ್ನ ಸಾವಿಗೆ ಕಾರಣ ಎಂದು ಬರೆದಿರುವುದಾಗಿ ತಿಳಿದುಬಂದಿದೆ. ವಿಷಯ ತಿಳಿದು ಪೊಲೀಸರು ಹಾಗೂ …
Read More »
BigTv News
August 29, 2026
Breaking News
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕಡಬಗೆರೆ ಸಮೀಪ ಕಾಫಿ ತೋಟದಲ್ಲಿ ನಡೆಯುತ್ತಿದ್ದ ಅಂದರ್-ಬಾಹರ್ ಜೂಜಾಟದ ಅಡ್ಡೆ ಮೇಲೆ ಬಾಳೆಹೊನ್ನೂರು ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸರನ್ನು ಕಂಡು ಜೂಜಾಟದಲ್ಲಿ ತೊಡಗಿದ್ದವರು ಓಡಿಹೋಗಲು ಯತ್ನಿಸಿದ್ದಾರೆ. ಈ ವೇಳೆ ಗುಡ್ಡೆಕೊಪ್ಪ ಗ್ರಾಮದ ರಮೇಶ್ (35) ಎಂಬಾತ ಕಾಡಿನಲ್ಲಿ ಓಡುವಾಗ ಜಾರಿ ಬಿದ್ದು, ತಲೆ ಬಂಡೆಗೆ ಬಲವಾಗಿ ಹೊಡೆದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳದಲ್ಲಿದ್ದ 9 ಮಂದಿಯಲ್ಲಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. …
Read More »