BigTv News
June 1, 2025
Breaking News
ಶನಿವಾರ ಸದಾಶಿವನಗರದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಮಣಿವಣ್ಣನ್ ಅವರಿಗೆ ಡಿಸಿಎಂ ಶುಭ ಹಾರೈಸಿದರು. ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ. ಮಣಿವಣ್ಣನ್‌ಗೆ ಬಿಡಿಎ ಆಯುಕ್ತ ಹುದ್ದೆಯನ್ನು ಸಮಪ್ರಭಾರ ಜವಾಬ್ದಾರಿವಹಿಸಿ ಸರ್ಕಾರ ಆದೇಶಿಸಿದ್ದು, ಇದರಂತೆ ಬಿಡಿಎ ಆಯುಕ್ತರಾಗಿ ಅವರು ಶನಿವಾರ ಅಧಿಕಾರ ಸ್ವೀಕಾರ ಮಾಡಿದರು.
Read More »
BigTv News
June 1, 2025
Breaking News, Crime
ಶಿಕಾರಿಪುರ ಪಟ್ಟಣದ ಮಹಿಳೆಯೊಬ್ಬರು ಜ. 24ರಂದು ಮನೆಯ ಬೀರುವಿನಲ್ಲಿ ಇಟ್ಟಿದ್ದ ಚಿನ್ನಾಭರಣ ಕಳುವಾಗಿರುವ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಬಗ್ಗೆ ತನಿಖೆ ಕೈಗೊಳ್ಳಲಾಗಿತ್ತು.ಕಳವು ಮಾಲು ಪತ್ತೆಗೆ ಶಿಕಾರಿಪುರ ಠಾಣೆ ಇನ್‌ಸ್ಪೆಕ್ಟರ್ ಸಂತೋಷ್ ಎಂ. ಪಾಟೀಲ್ ನೇತೃತ್ವದಲ್ಲಿ ಪಿಎಸ್‌ಐ ಪಿ.ಎಸ್. ಶರತ್ ಒಳಗೊಂಡ ವಿಶೇಷ ತಂಡ ರಚಿಸಲಾಗಿತ್ತು. ಖಚಿತ ಸುಳಿವಿನ ಮೇರೆಗೆ ಆರೋಪಿಯನ್ನು ಬಂಧಿಸಿ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
Read More »
BigTv News
June 1, 2025
Breaking News
ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಕೋಣನಕೇರಿ ಗ್ರಾಮದಲ್ಲಿ ನಡೆದಿದೆ.ಮದ್ಯದ ಅಮಲಿನಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಇವರಿಬ್ಬರನ್ನು ಕೂಡಲೇ ಮಹಾರಾಷ್ಟ್ರ ದ ಗಡಹಿಂಗ್ಲಜ್ ಪಟ್ಟಣದ ಆಸ್ಪತ್ರೆಗೆ ಚಿಕಿತ್ಸೆ ಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಬ್ಬರು ಸಹೋದರರು ಮೃತಪಟ್ಟಿದ್ದಾರೆ.ಈ ಕುರಿತು ಮೃತರ ಸಂಬಂಧಿಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸಂಕೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
Read More »
BigTv News
June 1, 2025
Breaking News, Crime
ಹಳೆ ದ್ವೇಷ ಹಿನ್ನೆಲೆ ವ್ಯಕ್ತಿಯೋರ್ವನನ್ನು ಕೊಲೆ ಮಾಡಿದ ಘಟನೆ ಹಳೆ ಬಸ್ ನಿಲ್ದಾಣದ ಬೇಕರಿ ಮುಂದೆ ನಡೆದಿದೆ.ಚೆನ್ನಪ್ಪ ಹರಿಜನ್ ಅವರನ್ನು ಮಚ್ಚಿನಿಂದ ಕೊಲೆ ಮಾಡಿದ್ದು, ಈ ಘಟನೆಯ ಪರಿಣಾಮ ಪಟ್ಟಣದ ಜನರಲ್ಲಿ ಆತಂಕ ಮೂಡುವಂತಾಗಿದೆ.ಘಟನಾ ಸ್ಥಳಕ್ಕೆ ಕೊಪ್ಪಳ ಎಸ್ಪಿ ಡಾ. ಎಲ್.ಆರ್. ಅರಸಿದ್ದಿ, ಗಂಗಾವತಿ ಡಿಎಸ್ಪಿ ಸಿದ್ದಲಿಂಗಪ್ಪ ಗೌಡ, ಸಿಪಿಐ ಯಶವಂತ್ ಬಿಸನಹಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.
Read More »
BigTv News
June 1, 2025
Breaking News
ರಷ್ಯಾದ ಫೆಡರಲ್ ರಸ್ತೆ ಸಾರಿಗೆ ಸಂಸ್ಥೆ ರೊಸಾವ್ಟೊಡೋರ್, ಕುಸಿದ ಸೇತುವೆಯು ಈ ಸಮಯದಲ್ಲಿ ರೈಲು ಹಾದುಹೋಗುತ್ತಿದ್ದ ರೈಲ್ವೆ ಹಳಿಗಳ ಮೇಲೆ ಹಾದುಹೋಗಿದೆ ಎಂದು ಹೇಳಿದೆ. ಸಾರಿಗೆ ಕಾರ್ಯಾಚರಣೆಯಲ್ಲಿ ಕಾನೂನುಬಾಹಿರ ಹಸ್ತಕ್ಷೇಪದ ಪರಿಣಾಮವಾಗಿ ಸೇತುವೆ ಕುಸಿದಿದೆ ಎಂದು ಮಾಸ್ಕೋ ರೈಲ್ವೆ ಹೇಳಿಕೆಯಲ್ಲಿ ತಿಳಿಸಿದೆ.ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವವರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ಅವರಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಬ್ರಿಯಾನ್ಸ್ಕ್ ಪ್ರದೇಶದ ಗವರ್ನರ್ ಅಲೆಕ್ಸಾಂಡರ್ ಬೊಗೊಮಾಜ್ ಹೇಳಿದ್ದಾರೆ. ಮೃತಪಟ್ಟವರಲ್ಲಿ ಲೋಕೋವೋಟಿವ್ ಚಾಲಕರು ಸೇರಿದ್ದಾರೆ …
Read More »
BigTv News
June 1, 2025
Breaking News
ವಿಶ್ವ ಸುಂದರಿ 2025 ಗ್ರ್ಯಾಂಡ್ ಫಿನಾಲೆ ಶನಿವಾರ ಸಂಜೆ ಹೈದರಾಬಾದ್‌ನಲ್ಲಿರುವ ಹೈಟೆಕ್ಸ್ ಕನ್ವೆನ್ಷನ್ ಸೆಂಟರ್‌ನಲ್ಲಿ ಅದ್ಧೂರಿಯಾಗಿ ನಡೆದಿದ್ದು, ಥೈಲ್ಯಾಂಡ್‌ನ ಓಪಲ್ ಸುಚಾತಾ ಚುವಾಂಗ್ಸ್ರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.ಅದ್ಧೂರಿಯಾಗಿ ನಡೆದ ಸಮಾರಂಭದಲ್ಲಿ ಹಾಲಿ ವಿಶ್ವ ಸುಂದರಿ ಕ್ರಿಸ್ಟಿನಾ ಪಿಸ್ಟೋ ಅವರು ಓಪ್ಲಾ ಸುಚಾತಾ ಚುಂಗಸಿರಿ ಅವರಿಗೆ ಕಿರೀಟ ಧಾರಣೆ ಮಾಡಿದರು.ಪ್ರತಿಷ್ಠಿತ ಮಿಸ್ ವರ್ಲ್ಡ್ ಕಿರೀಟ ಹಿಂದಿನ ಯಾವುದೇ ಕಿರೀಟಕ್ಕಿಂತ ಭಿನ್ನವಾಗಿದೆ.175.49 ಕ್ಯಾರೆಟ್‌ಗಳ 1,770 ವಜ್ರಗಳಿಂದ ಮಾಡಿದ, 18 ಕ್ಯಾರೆಟ್ ಬಿಳಿ ಚಿನ್ನದಲ್ಲಿ ಹೊಂದಿಸಲಾಗಿದೆ.ಈ …
Read More »
BigTv News
May 31, 2025
Breaking News
ಗ್ರಾಮದ ದೇವರಾಜ ಮೃತ ವ್ಯಕ್ತಿ. ಅವರು ಎಂದಿನಂತೆ ಕೆಲಸ ಮುಗಿಸಿಕೊಂಡು ರಾತ್ರಿ 8 ಗಂಟೆಗೆ ಮನೆಗೆ ತೆರಳುವ ವೇಳೆ ಮನೆಯ ವಿದ್ಯುತ್ ಲೈನ್ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ತುಳಿದು ವಿದ್ಯುತ್ ಸ್ಪರ್ಶಸಿ ಅಸ್ವಸ್ಥರಾಗಿದ್ದರು.ಸ್ಥಳೀಯರು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ದೇವರಾಜ್ ಮೃತಪಟ್ಟಿದ್ದಾರೆ.
Read More »
BigTv News
May 31, 2025
Breaking News, Crime
ಚಾಮರಾಜನಗರದಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಬಸ್ ನಿಲ್ದಾಣದಲ್ಲಿ ಕಾಂಪೌಂಡ್‌ನ ಸರಳಿಗೆ ಕುತ್ತಿಗೆ ಸಿಲುಕಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.ಯುವಕನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು, ಎರಡು ಸರಳಿನ ಮಧ್ಯೆ ಕುತ್ತಿಗೆ ಸಿಲುಕಿದ ಸ್ಥಿತಿಯಲ್ಲಿ ಯುವಕನ ಮೃತದೇಹವಿತ್ತು. ಸ್ಥಳಕ್ಕೆ ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
Read More »
BigTv News
May 31, 2025
Breaking News, Crime
ಶಂಕರ್ ಹಾಗೂ ಸುರೇಶ್ ಅವರು ಐಪಿಎಲ್ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದರು. ₹1,200 ಮೌಲ್ಯದ ಟಿಕೆಟ್ ಅನ್ನು ₹ 5,000ಕ್ಕೆ ಮಾರಾಟ ಮಾಡಲಾಗುತ್ತಿತ್ತು. ಟಿಕೆಟ್ ಖರೀದಿಸುವ ನೆಪದಲ್ಲಿ ಕಾರ್ಯಾಚರಣೆ ನಡೆಸಿದ್ದ ಗೋವಿಂದರಾಜ ನಗರ ಠಾಣೆಯ ಪೊಲೀಸರು ಇಬ್ಬರನ್ನೂ ಬಂಧಿಸಿದ್ದರು. ಆರೋಪಿಗಳ ವಿಚಾರಣೆ ನಡೆಸಿದಾಗ ಪೊಲೀಸ್ ಸಿಬ್ಬಂದಿಯ ಕೈವಾಡ ಇರುವುದು ಪತ್ತೆಯಾಗಿತ್ತು.ಆರೋಪಿಗಳಿಗೆ ಕಾಳಸಂತೆಯಲ್ಲಿ ಮಾರಾಟ ಮಾಡಲು ಟಿಕೆಟ್ ನೀಡಿದ್ದ ಆರೋಪದ ಮೇರೆಗೆ ವೆಂಕಟಗಿರಿಗೌಡ ಮತ್ತು ರವಿಚಂದ್ರ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ …
Read More »
BigTv News
May 31, 2025
Breaking News
CET ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಇಎಐ ಅಂಡ್ ಡಿಎಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿರಿಯಾಪಟ್ಟಣ ಮೂಲದ ಯಶ್ವಂತ್ (20) ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪಿರಿಯಾಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದೆ.
Read More »