Breaking News

Breaking News

ಜೈಲಿನಲ್ಲಿರುವ ಮಾಜಿ ಸಂಸದರ ಬ್ಯಾರಕ್‌ ಮೇಲೆ ದಾಳಿ!!

ಬಲರಾಂಪುರದ ಮಾಜಿ ಸಂಸದ ರಿಜ್ವಾನ್ ಜಹೀರ್ ಜುಲೈ 2022 ರಿಂದ ಲಲಿತಪುರ ಜಿಲ್ಲಾ ಕಾರಾಗೃಹದಲ್ಲಿ ಬಂಧನದಲ್ಲಿದ್ದಾರೆ. ತುಳಶಿಪುರ ನಗರ ಪಂಚಾಯತ್‌ನ ಮಾಜಿ ಅಧ್ಯಕ್ಷ ಫಿರೋಜ್ ಅಹ್ಮದ್ ಪಪ್ಪು ಅವರ ಹತ್ಯೆಯಲ್ಲಿ ಪಿತೂರಿ ನಡೆಸಿದ ಆರೋಪ ಅವರ ಮೇಲಿದೆ. ಉತ್ತರ ಪ್ರದೇಶ ಪೊಲೀಸರು ಅವರ ವಿರುದ್ಧ ಗ್ಯಾಂಗ್‌ಸ್ಟರ್ ಕಾಯ್ದೆಯನ್ನೂ ಹೇರಿದ್ದಾರೆ. ಅವರ ಮನೆ ದಾಳಿಯಲ್ಲಿ ಜಹೀರ್ ಜೈಲಿನಲ್ಲಿ ಜೈಲಿನ ನಿಯಮಗಳನ್ನು ಉಲ್ಲಂಘಿಸುವ ವಿವಿಐಪಿ ಸೌಲಭ್ಯಗಳನ್ನು ಅನುಭವಿಸುತ್ತಿರುವುದು ಬೆಳಕಿಗೆ ಬಂದಿದೆ. ಅಧಿಕಾರಿಗಳು ದಿಂಬಿನ …

Read More »

ಇನ್ನೂ 5 ದಿನ ಸುರಿಯಲಿದೆ ಸೈಕ್ಲೋನ್‌ ಮಳೆ!

ಭಾನುವಾರ ರಾತ್ರಿಯಡೀ ಸುರಿದ ಭಾರೀ ಮಳೆಗೆ ಬೆಂಗಳೂರಿಗರು ತತ್ತರಿಸಿ ಹೋಗಿದ್ದಾರೇ. ಇಷ್ಟಕ್ಕೇ ಮುಗಿದಿಲ್ಲ, ಇನ್ನೂ 5 ದಿನ ಇದೇ ರೀತಿಯ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ ರಾಜ್ಯದಾದ್ಯಂತ ಮುಂಗಾರುಪೂರ್ವ ಮಳೆಯ ಅಬ್ಬರ ಜೋರಾಗಿದೆ.ಬೆಳಗಾವಿ, ಧಾರವಾಡ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಈ ಜಿಲ್ಲೆಗಳಿಗೆ ನಾಳೆ ನಾಡಿದ್ದು ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದಂತೆ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. …

Read More »

ಸಿಕ್ಕಿಂ: ಭೂಕುಸಿತ, ಯೋಧರ ದುರ್ಮರಣ, 9ಮಂದಿ ಕಣ್ಮರೆ!!

ಲಾಚೆನ್ ಜಿಲ್ಲೆಯ ಚಾಟೆನ್‌ನಲ್ಲಿರು ಸೇನಾ ಶಿಬಿರದ ಬಳಿ ಭಾನುವಾರ ಸಂಜೆ 7 ಗಂಟೆಗೆ ಭೂಕುಸಿತ ಸಂಭವಿಸಿದ್ದು, ಇದುವರೆಗೆ ಮೂವರು ಸೈನಿಕರ ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ, ಆದರೆ 9 ಸೈನಿಕರು ಇನ್ನೂ ಕಾಣೆಯಾಗಿದ್ದಾರೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ಹೇಳಿಕೆಯಲ್ಲಿ ತಿಳಿಸಿದ್ದಾರೆ.ಭಾರತೀಯ ಸೇನೆಯು ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಪ್ರತಿಕೂಲ ವಾತಾವರಣದ ನಡುವೆಯೇ ಕಾರ್ಯಾಚರಣೆ ಮುಂದುವರಿದಿದೆ. ನಾಲ್ವರನ್ನು ರಕ್ಷಿಸಲಾಗಿದ್ದು, ಅವರಿಗೆ ಗಾಯಗಳಾಗಿವೆ. ಆದರೆ ಮೂವರು ಯೋಧರು ಕೊನೆಯುಸಿರೆಳೆದಿದ್ದಾರೆ. ಮೃತರನ್ನು ಹವಾಲ್ದಾರ್ ಲಖ್ವಿಂದರ್ ಸಿಂಗ್, ಲ್ಯಾನ್ಸ್ …

Read More »

ಕೂಲರ್​​​​​ ಗಾಗಿ ಬೀಗರ ಕಿತ್ತಾಟ!

ಇಲ್ಲೊಂದು ಮದುವೆ ಮನೆ ಕ್ಷುಲ್ಲಕ ಕಾರಣವೊಂದಕ್ಕೆ ರಣರಂಗವಾಗಿ ಬದಲಾಗಿದೆ.ಕೇವಲ ಕೂಲರ್ ವಿಚಾರಕ್ಕೆ ವರ ಮತ್ತು ವಧುವಿನ ಕಡೆಯವರ ನಡುವೆ ಜಗಳ ಜೋರಾಗಿದ್ದು ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.ಮಂಟಪದಲ್ಲಿ ಕೂಲರ್ ವಿಚಾರಕ್ಕೆ ವಧು & ವರನ ಕಡೆಯವರ ಮಧ್ಯೆ ಜಗಳ ಪ್ರಾರಂಭವಾಗಿ ನಂತರ ಅತಿರೇಕಕ್ಕೆ ತಿರುಗಿದೆ.ಅತಿಥಿಗಳು ಪರಸ್ಪರ ಪ್ಲಾಸ್ಟಿಕ್ ಕುರ್ಚಿ, ಪಾತ್ರೆಗಳಿಂದ ಬಡಿದಾಡಿಕೊಂಡಿದ್ದಾರೆ. ಈ ಘಟನೆಯ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ

Read More »

ಚಾಮರಾಜನಗರ : ಹಾವು ಕಚ್ಚಿ ಬಾಲಕಿ ಸಾವು!!

ಸಾರ್ವಜನಿಕ ನಳ್ಳಿಯ ಬಳಿ ನೀರು ತರಲು ಹೋಗಿದ್ದ ವೇಳೆ ಹಾವು ಕಚ್ಚಿದೆ. ಇದರಿಂದ ಅಸ್ವಸ್ಥಗೊಂಡ ಬಾಲಕಿಯನ್ನು ಕುಟುಂಬಸ್ಥರು ಸಮೀಪದ ಆಸ್ಪತ್ರೆಗೆ ಕರೆ ತರುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ತಡರಾತ್ರಿ ಮೃತದೇಹವನ್ನು ಹನೂರಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು. ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Read More »

ವಿಜಯಪುರ: ಕೆನರಾ ಬ್ಯಾಂಕ್‌ನಲ್ಲಿ ದರೋಡೆ, 59ಕೆಜಿ ಚಿನ್ನಾಭರಣ ಕಳವು!

ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಕೆನರಾ ಬ್ಯಾಂಕ್ ದರೋಡೆ ಮಾಡಲಾಗಿದ್ದು, 59 ಕೆ.ಜಿ. ಚಿನ್ನಾಭರಣ ಹಾಗೂ ₹5.20 ಲಕ್ಷ ನಗದು ಕಳವು ಮಾಡಲಾಗಿದೆ.ಅಲ್ಲದೇ, ತಮ್ಮ ಗುರುತು ಸಿಗದಂತೆ ಮಾಡಲು ಬ್ಯಾಂಕಿನಲ್ಲಿ ಅಳವಡಿಸಿದ್ದ ಸಿ.ಸಿ.ಟಿವಿ ಕ್ಯಾಮೆರಾದ ಎನ್.ವಿ.ಆರ್. ಅನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ತಿಳಿಸಿದರು.ದರೋಡೆಕೋರರ ಪತ್ತೆಗಾಗಿ ಎಂಟು ತಂಡಗಳನ್ನು ರಚಿಸಲಾಗಿದೆ. ವಿವಿಧ ಆಯಾಮಗಳಲ್ಲಿ ತನಿಖೆ ಮತ್ತು ಪತ್ತೆ ಕಾರ್ಯ ನಡೆದಿದೆ ಎಂದು ತಿಳಿಸಿದ್ದಾರೆ.

Read More »

ಕೆಲಸಕ್ಕಿದ್ದ ಮನೆಯಲ್ಲಿ 2 ಕೆಜಿ ಚಿನ್ನ ದೋಚಿದ ದಂಪತಿ!!

ಎಚ್‌ಎಎಲ್‌ ಸಮೀಪದ ಎಲ್‌.ಬಿ.ಶಾಸ್ತ್ರಿ ನಗರ ನಿವಾಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹಾಗೂ ರಾಜಕೀಯ ಮುಖಂಡ ರಮೇಶ್‌ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದ್ದು, 1.70 ಕೋಟಿ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ಸಂಬಂಧ ರಮೇಶ್‌ ಅವರು ನೀಡಿದ ದೂರಿನ ಮೇರೆಗೆ ನೇಪಾಳ ಮೂಲದ ರಾಜ್‌ ಮತ್ತು ಆತನ ಪತ್ನಿ ದೀಪಾ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿತ ದಂಪತಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.ಸಂಬಂಧ ಪ್ರಕರಣ …

Read More »

ಮಂಡ್ಯ : ಹಿಂದೂ ಮುಖಂಡನ ವಿರುದ್ಧ FIR!!

ಯುವತಿಯ ಬೆನ್ನುಬಿದ್ದ ಹಿಂದೂ ಮುಖಂಡನೊಬ್ಬ ನಿರಂತರ ನಾಲ್ಕು ವರ್ಷಗಳಿಂದ ಆಕೆಗೆ ಕಿರುಕುಳ ನೀಡಿದ್ದಾನೆ , 7 ಮದುವೆ ರದ್ದು ಮಾಡಿಸಿದ್ದಾನೆ . ಅಲ್ಲದೆ, ಆಕೆಗೆ ನಿಶ್ಚಯವಾಗುತ್ತಿದ್ದ ಮದುವೆಯನ್ನೆಲ್ಲ ರದ್ದು ಮಾಡಿಸಿದ್ದಲ್ಲದೆ, ಆಯಸಿಡ್ ದಾಳಿ ಮಾಡುವ ಬೆದರಿಕೆಯೊಡ್ಡಿದ್ದ ಆರೋಪದಲ್ಲಿ ಸದ್ಯ ಆತನ ಆತನ ವಿರುದ್ದ ಕೆರಗೋಡು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಂತ್ರಸ್ತೆ ನೀಡಿದ್ದ ದೂರಿನ ಆಧಾರದಲ್ಲಿ ಹಿಂದೂ ಮುಖಂಡ ಚಿಕ್ಕಬಳ್ಳಿ ಬಾಲಕೃಷ್ಣ ವಿರುದ್ಧ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ

Read More »

ಹಾಸನ: ಭಾರಿ ಮಳೆ, ಇಬ್ಬರ ಸಾವು!!

ಸಕಲೇಶಪುರ ತಾಲ್ಲೂಕಿನ ತಿನಗನಹಳ್ಳಿಯಲ್ಲಿ ನಂಜಯ್ಯ (56) ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. ನಂಜಯ್ಯ ಮೇ 26ರಂದು ಜಮೀನಿಗೆ ತೆರಳಿ ಕಾಣೆಯಾಗಿದ್ದರು. ನಿರಂತರ ಮಳೆಯಿಂದ ಶೋಧಕ್ಕೆ ಅಡಚಣೆಯಾಗಿತ್ತು.ಮಳೆ ಕಡಿಮೆಯಾದ ಬಳಿಕ ಹುಡುಕಾಟ ನಡೆಸಿದ್ದು, ಶನಿವಾರ ಸಂಜೆ ತಿನಗನಹಳ್ಳಿಯಲ್ಲಿ ಅವರ ಶವ ಪತ್ತೆಯಾಗಿದೆ.ನಂಜಯ್ಯನವರ ಹುಡುಕಾಟದ ವೇಳೆ ಚಿಕ್ಕಮಗಳೂರು ಜಿಲ್ಲೆಯ ಕಲ್ಲುದೊಡ್ಡಿ ಗ್ರಾಮದ ಕಾರ್ಮಿಕ ಮುರುಗೇಶ್ (65) ಶವವೂ ಪತ್ತೆಯಾಗಿದ್ದು, ಕಾಫಿ ತೋಟದಲ್ಲಿ ಕೆಲಸ ಮಾಡುವ ವೇಳೆ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು …

Read More »

ಗುಡಿಬಂಡೆ : ಬೈಕ್‌ಗಳ ಡಿಕ್ಕಿ,2 ಸವಾರರ ಸ್ಥಿತಿ ಚಿಂತಾಜನಕ!!

ಗುಡಿಬಂಡೆ- ಗೌರಿಬಿದನೂರು ರಸ್ತೆಯ ಕಣಿವೆಯಲ್ಲಿ ಎರಡು ಬೈಕ್‌ಗಳು ಭಾನುವಾರ ಮುಖಮುಖಿ ಡಿಕ್ಕಿ ಹೊಡೆದು ಬೈಕ್ ಸವಾರನ ಕಾಲು ಮುರಿದಿದ್ದು, ಚಿಕ್ಕಬಳ್ಳಾಪುರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮತ್ತೊಬ್ಬ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಗುಡಿಬಂಡೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ. ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More »