BigTv News
May 28, 2025
Breaking News, Crime
ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ನಡೆದಿದೆ.ಮೃತನನ್ನು ರಹೀಮ್ ಎಂದು ಗುರುತಿಸಲಾಗಿದ್ದು, ಈತ ಕೊಳತ್ತಮಜಲು ನಿವಾಸಿ ಪಿಕಪ್ ಚಾಲಕ. ರಹೀಮ್ ಅವರು ಇಂದು ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಮಾರಕಾಸ್ತ್ರಗಳೊಂದಿಗೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.
Read More »
BigTv News
May 28, 2025
Breaking News, Crime
ಬಂಟ್ವಾಳದ ಅಬ್ದುಲ್ ರಹೀಂ ಹತ್ಯೆ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಇದೀಗ ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ. ಅಬ್ದುಲ್ ರಹೀಮ್ ಹಾಗೂ ಕಲಂದರ್ ಶಫೀ ಮೇಲೆ ದಾಳಿ ಮಾಡಿದ ಆರೋಪಿಗಳ ಕೆಲ ಸುಳಿವು ಪತ್ತೆಯಾಗಿದೆ.ಡಿವೈಎಸ್ಪಿ ವಿಜಯ ಪ್ರಕಾಶ್ ನೇತೃತ್ವದಲ್ಲಿ 5 ಪೊಲೀಸ್ ತಂಡಗಳ ರಚನೆ ಮಾಡಲಾಗಿದೆ. ಈ ತಂಡದಲ್ಲಿ ಮಂಗಳೂರು ನಗರ ಸಿಸಿಬಿ ತಂಡ ಮತ್ತು ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ಜಂಟಿ …
Read More »
BigTv News
May 28, 2025
Breaking News
ಕೇರಳದ ವಕ್ಕಂನಲ್ಲಿರುವ ಅವರ ಮನೆಯಲ್ಲಿ ತಂದೆ, ತಾಯಿ ಮತ್ತು ಅವರ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಮಕ್ಕಳ ಕುಟುಂಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಆತ್ಮಹತ್ಯೆಯಂತೆ ಕಾಣುತ್ತಿದೆ ಎಂದು ಪೊಲೀಸರು ತಿಳಿಸಿದ್ದು, “ಅನಿಲ್‌ಕುಮಾರ್ ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಶಂಕಿಸಲಾಗಿದೆ. ತನಿಖೆ ನಡೆಯುತ್ತಿದೆ. ಮನೆಯಿಂದ ಇಲ್ಲಿಯವರೆಗೆ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ” ಎಂದು ತಿಳಿಸಿದ್ದಾರೆ.ಕುಟುಂಬದ ಸದಸ್ಯರು ಯಾರೂ ಹೊರಗೆ ಕಾಣಿಸದ ಕಾರಣ …
Read More »
BigTv News
May 28, 2025
Breaking News, Crime
ಇಬ್ಬರ ನಡುವೆ ಕೌಟುಂಬಿಕ ಕಾರಣಗಳಿಂದಾಗಿ ಹಲವು ದಿನಗಳಿಂದ ಜಗಳ ನಡೆಯುತ್ತಿತ್ತು.ಇದೇ ಕಾರಣದಿಂದ ಹತ್ಯೆ ನಡೆದಿರಬಹುದೆಂದು ಊಹಿಸಲಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದು ಮಕ್ಕಳು ಶಾಲೆಯಿಂದ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.ಡಂಬಲ್ಸ್ ನಿಂದ ಹೆಂಡತಿಯ ತಲೆಗೆ ಹೊಡೆದು ಬಳಿಕ ಪತಿಯೂ ನೇಣಿಗೆ ಶರಣಾಗಿರುವ ಘಟನೆ ದೇವನಹಳ್ಳಿಯ ವಿಜಯಪುರದಲ್ಲಿ ನಡೆದಿದೆ. ಶಾಮಣ್ಣ (40) ಮತ್ತು ಸುಮಾ (35) ಮೃತರು
Read More »
BigTv News
May 28, 2025
Breaking News
ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಕೆ.ಎನ್ ಪುಟ್ಟೇಗೌಡ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇಂದು ಬೆಂಗಳೂರಿನ ಸ್ವಗೃಹದಲ್ಲಿ ಕೆ ಎನ್ ಪುಟ್ಟೇಗೌಡ ಅವರು ನಿಧನರಾಗಿದ್ದಾರೆ. ದೃಷ್ಟಿ ಹೀನರಿಗೆ ನೆರವಾಗಲೆಂದು ಅವರ ನೇತೃದಾನ ಮಾಡಲಾಗುತ್ತಿದೆ.ಕುಟುಂಬಸ್ಥರ ಮಾಹಿತಿ ಪ್ರಕಾರ ಆದಿಚುಂಚನಗಿರಿ ಆಸ್ಪತ್ರೆಗೆ ಕೆ.ಎನ್ ಪುಟ್ಟೇಗೌಡ ದೇಹದಾನ ಮಾಡಲು ಇದೀಗ ಕುಟುಂಬಸ್ಥರು ನಿರ್ಧರಿಸಿದ್ದಾರೆ. ಕೆ.ಎನ್ ಪುಟ್ಟೇಗೌಡ ಪ್ರಮಾಣಿಕ ಮತ್ತು ಮೌಲ್ಯಯುತ ವಕೀಲರಾಗಿ ಹೆಸರಾಗಿದ್ದರು. ಬಿಬಿಎಂಪಿ ವಕೀಲರಾಗಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ರಕ್ಷಿಸಿದ್ದರು. …
Read More »
BigTv News
May 28, 2025
Breaking News
ದೆಹಲಿಯಲ್ಲಿ ನಡೆದ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರು ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದರು.ಕನ್ನಡ ಚಿತ್ರರಂಗದಲ್ಲಿ 52 ವರ್ಷಗಳ ಸುದೀರ್ಘ ಸಿನಿಪಯಣಕ್ಕೆ ಅವರಿಗೆ ರಾಷ್ಟ್ರಪತಿಯಿಂದ ಪದ್ಮಭೂಷಣ ಪ್ರಶಸ್ತಿ ಒಲಿದು ಬಂದಿರುವುದು ಕನ್ನಡಿಗರಿಗೆ ಹೆಮ್ಮೆಯ ಕ್ಷಣ.ಕೇಂದ್ರ ಸರ್ಕಾರ, ಇದೀಗ ಅವರಿಗೆ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಇದೇ ವೇಳೆ ಡಾ. ರಿಕಿ ಗ್ಯಾನ್ ಕೇಜ್ (ಕಲೆ), ಪ್ರಶಾಂತ್ ಪ್ರಕಾಶ್ (ವ್ಯಾಪಾರ …
Read More »
Shaikh BigTv
May 27, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಅವಳಿ ನಗರ ಪೊಲೀಸರ ಭರ್ಜರಿ ಕಾರ್ಯಚರಣೆ.. ಗಾಂಜಾ ಮಾರಾಟಗಾರನ ಹತ್ತಿರ ಲಕ್ಷ ಲಕ್ಷ ಮೌಲ್ಯದ ಗಾಂಜಾ !!!! ಗಾಂಜಾ ಮುಕ್ತ ಅವಳಿ ನಗರದತ್ತ ಪೊಲೀಸರ ನಡೆ ಹುಬ್ಬಳ್ಳಿಯ ಗಬ್ಬೂರ ಕುಂದಗೋಳ ಕ್ರಾಸ್ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಮೂರು ಜನ ಆರೋಪಿತರನ್ನು ಬೆಂಡಿಗೇರಿ ಪೊಲೀಸರು ಬಂಧಿಸಿದ್ದಾರೆ. ಸಿ ಸಿ ಬಿ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳು ಬಂಧಿತ ಆರೋಪಿತರಿಂದ 12.64 ಲಕ್ಷ ರೂ ಮೌಲ್ಯದ 10.5 KG ಗಾಂಜಾ, 3 …
Read More »
BigTv News
May 27, 2025
Breaking News
ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆ.75ರ ಬಿ.ಸಿ.ರೋಡ್- ಕೈಕಂಬದ ಸಮೀಪ ಮಂಗಳವಾರ ಮುಂಜಾನೆ 4 ಗಂಟೆ ಸುಮಾರಿಗೆ ಸಂಭವಿಸಿದೆ.ಜಯರಾಮ್ ಅವರು ತುಂಬೆ ಖಾಸಗಿ ಆಸ್ಪತ್ರೆಯ ಕ್ಯಾಂಟೀನ್ ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. ಇಂದು ಮುಂಜಾನೆ ಇವರು ಮನೆಯಿಂದ ಕಾರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ …
Read More »
BigTv News
May 27, 2025
Breaking News
ಕಾರೆಕೊಪ್ಪ ಗ್ರಾಮದಲ್ಲಿ ಸೋಮವಾರ ಸ್ಯಾಂಟ್ರೋ ಹಾಗೂ ಹೋಂಡಾ ಕಾರಿನ ನಡುವೆ ಡಿಕ್ಕಿಯಾಗಿ ಸ್ಯಾಂಟ್ರೋ ಕಾರಿನಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗೆ ತೀವ್ರ ಗಾಯಗಳಾಗಿವೆ.ಹೋಂಡ ಕಾರಿನಲ್ಲಿದ್ದ ಸಲೀಂ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಗಾಯಾಳುಗಳನ್ನು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ, ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಇಬ್ಬರು ಪೊಲೀಸರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಪೊಲೀಸ್ ಇನ್‌ಸ್ಪೆಕ್ಟರ್ ಮುದ್ದುಮಹದೇವ, ಎಎಸ್‌ಐ ಪ್ರವೀಣ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read More »
BigTv News
May 27, 2025
Breaking News
ಬೈಕ್‌ಗೆ ಮರಳಿನ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಂಕನೂರು ಕ್ರಾಸ್ ಬಳಿ ನಡೆದಿದೆ.ಗಾಯಾಳು ಲಕ್ಷ್ಮಣ ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Read More »