Breaking News

Breaking News

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ 5.28 ಕೋಟಿ ರೂ. ಡ್ರಗ್ಸ್ ಜಪ್ತಿ

ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ಪ್ರಕರಣಗಳಲ್ಲಿ ₹5.28 ಕೋಟಿ ಮೌಲ್ಯದ 15.06 ಕೆ.ಜಿ ಹೈಡ್ರೋಫೋನಿಕ್ ಗಾಂಜಾ ಜಪ್ತಿ ಮಾಡಲಾಗಿದೆ. ಬ್ಯಾಂಕಾಕ್‌ನಿಂದ ಬಂದ ಇಬ್ಬರು ಪ್ರಯಾಣಿಕರ ಬ್ಯಾಗ್‌ಗಳಲ್ಲಿ ಗಾಂಜಾ ಪತ್ತೆಯಾಗಿದೆ. ಇದೇ ವೇಳೆ ವಿದ್ಯಾರ್ಥಿಗಳಿಗೆ ಹೈಡ್ರೋ ಗಾಂಜಾ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಅಶ್ವಿನ್ ಟಾಮ್ ಜೋಶ್ (24) ಎಂಬಾತನನ್ನು ಬಾಲಗೂರು ಪೊಲೀಸರು ಬಂಧಿಸಿದ್ದಾರೆ. ಆತನಿಂದ ₹9 ಲಕ್ಷ ಮೌಲ್ಯದ 276 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ಕಡಿಮೆ …

Read More »

ಬಾಲಕಿ ಮೇಲೆ ಅತ್ಯಾಚಾರ ಆರೋಪಿ ಶ್ರೀಕಾಂತ್ ಬಂಧನ

ಧರ್ಮಸ್ಥಳ: 16 ವರ್ಷದ ಬಾಲಕಿ ಮೇಲೆ ಒಂದು ವರ್ಷ ಅತ್ಯಾಚಾರ ಎಸಗಿ, ಯಾರಿಗೂ ಹೇಳದಂತೆ ಬೆದರಿಸಿದ್ದ ಆರೋಪದಡಿ ಶ್ರೀಕಾಂತ್ (21) ಎಂಬಾತನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಆ.22ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಆ.23ರಂದು ಪೊಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿ ಬೆಂಗಳೂರಿನಿಂದ ಆಂಧ್ರಪ್ರದೇಶದ ಹಿಂದೂಪುರಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಆ.25ರಂದು ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆರೋಪಿಯನ್ನು ಮಂಗಳೂರಿನ ಪೊಕ್ಸೋ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Read More »

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ₹8.89 ಕೋಟಿ ಸೈಟ್ ಅಕ್ರಮ, ಹಲವರ ಬಂಧನ!

ಕೊಪ್ಪಳ ನಗರಭಿವೃದ್ಧಿ ಪ್ರಾಧಿಕಾರ(KUDA)ದಲ್ಲಿ ನಡೆದ ₹8.89 ಕೋಟಿ ಸೈಟ್ ಅಕ್ರಮ ಮತ್ತು ಹಣ ವಂಚನೆ ಪ್ರಕರಣದಲ್ಲಿ ಹೊರಗುತ್ತಿಗೆ ನೌಕರ ರವೀಂದ್ರಕುಮಾರ್, ಪತ್ನಿ ರಮಾ ಹಾಗೂ ಸಹೋದರ ಅನಿಲ್ ಕುಮಾರ್ ಬಂಧನವಾಗಿದ್ದಾರೆ. ಸೈಟ್ ನೀಡುವುದಾಗಿ ಹೇಳಿ 40ಕ್ಕೂ ಹೆಚ್ಚು ಖಾತೆಗಳಿಗೆ ಹಣ ವರ್ಗಾಯಿಸಿಕೊಂಡ ಆರೋಪ ಇವರ ಮೇಲಿದೆ. ಅನಿಲ್ ಖಾತೆಗೆ ₹1.5 ಕೋಟಿಗೂ ಅಧಿಕ ಹಾಗೂ ರಮಾ ಖಾತೆಯಿಂದ ₹30 ಲಕ್ಷಕ್ಕೂ ಅಧಿಕ ಹಣ ವರ್ಗಾವಣೆಯಾಗಿರುವುದು ಪತ್ತೆಯಾಗಿದೆ. ಪ್ರಕರಣದ ಆರೋಪಿ ಮಾಜಿ …

Read More »

ಧಾರವಾಡ: ಮಗುವಿನ ಎದುರೆ ಪತ್ನಿಯನ್ನು ಕೊಂದು ಪತಿ ನೇಣಿಗೆ ಶರಣು

ಧಾರವಾಡ: ಪತ್ನಿಯನ್ನು ಕೊಲೆ ಮಾಡಿದ ಬಳಿಕ ಪತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ. ಮೌಲಾಸಾಬ್ (28) ತನ್ನ ಪತ್ನಿ ಸಲ್ಮಾ (21) ಅವರನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಂಪತಿಗೆ ಒಂದೂವರೆ ವರ್ಷದ ಮಗು ಇದ್ದು, ಮಗುವಿನ ಎದುರೇ ಕೃತ್ಯ ನಡೆದಿದೆ ಎನ್ನಲಾಗಿದೆ. ತಡರಾತ್ರಿವರೆಗೂ ಮನೆಯಿಂದ ಯಾವುದೇ ಶಬ್ದ ಕೇಳದ ಹಿನ್ನೆಲೆಯಲ್ಲಿ ವೃದ್ಧೆಯೊಬ್ಬರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸಲ್ಮಾ ಕುಟುಂಬಸ್ಥರು …

Read More »

ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ಆರೋಪಿಗೆ ಪೊಲೀಸರ ಗುಂಡೇಟು

ಬೆಂಗಳೂರು: ಮಧ್ಯರಾತ್ರಿ ಮಾರಕಾಸ್ತ್ರ ಹಿಡಿದು ಬೈಕ್‌ನಲ್ಲಿ ಸಂಚರಿಸುತ್ತಿದ್ದ ಸೈಯ್ಯದ್‌ ಜಿಶಾನ್‌ (34) ಎಂಬ ಆರೋಪಿಗೆ ಪೊಲೀಸರು ಗುಂಡು ಹಾರಿಸಿ ಗಾಯಗೊಳಿಸಿದ್ದಾರೆ. ಮಡಿವಾಳ ಮೆಡಿಕಲ್‌ ಸ್ಟೋರ್‌ ಮಾಲೀಕನ ಕೊಲೆ ಪ್ರಕರಣದ ಆರೋಪಿಗಳಿಗೆ ಜಿಶಾನ್‌ ಮಾರಕಾಸ್ತ್ರ ಪೂರೈಸಿದ್ದ ಎನ್ನಲಾಗಿದೆ. ಗುರುವಾರ ರಾತ್ರಿ ಸೋಮಸುಂದರಪಾಳ್ಯ ಕೆರೆ ಬಳಿ ಜಿಶಾನ್‌ನನ್ನು ಬಂಧಿಸಲು ಪೊಲೀಸರು ಮುಂದಾದಾಗ, ಆತ ಮಾರಕಾಸ್ತ್ರದಿಂದ ಕಾನ್‌ಸ್ಟೆಬಲ್‌ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಎಚ್ಚರಿಕೆ ನೀಡಿದರೂ ದಾಳಿ ಮುಂದುವರಿಸಿದ್ದರಿಂದ ಆತ್ಮರಕ್ಷಣೆಗಾಗಿ ಎಸ್‌ಐ ಸಚಿನ್‌ ಗುಂಡು ಹಾರಿಸಿದ್ದು, …

Read More »

ಹುಬ್ಬಳ್ಳಿಯಲ್ಲಿ ಹಾಡಹಗಲೇ ಯುವಕನ ಬರ್ಬರ ಹತ್ಯೆ..! ಸಾಯೋವರೆಗೂ ಕೊಚ್ಚಿ ಕೊಂದ ದುಷ್ಕರ್ಮಿಗಳು

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹಾಡಹಗಲೇ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಸಿದ್ದೇಶ್ವರ ಪಾರ್ಕ್‌ ಬಳಿ ನಡೆದಿದೆ. ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಏಕಾಏಕಿ ದಾಳಿ ನಡೆಸಿದ್ದಾರೆ. ಯುವಕ ತಪ್ಪಿಸಿಕೊಳ್ಳಲು ಯತ್ನಿಸಿದರೂ ಬಿಡದ ಆರೋಪಿಗಳು ಮಾರಕಾಸ್ತ್ರಗಳಿಂದ ಸಾಯುವವರೆಗೂ ಕೊಚ್ಚಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಮೃತ ಯುವಕನ ಗುರುತು ಹಾಗೂ ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವೈಯಕ್ತಿಕ ದ್ವೇಷವೇ ಕಾರಣವೇ ಅಥವಾ ಬೇರೆ …

Read More »

ಧಾರವಾಡದಲ್ಲಿ ಘೋರ ದುರಂತ : ಪತ್ನಿಗೆ ಚಾಕು ಇರಿದು ಕೊಂದು ಪತಿ ನೇಣಿಗೆ ಶರಣು

ಧಾರವಾಡ: ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಪತಿ-ಪತ್ನಿ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದ ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಗರಗ್ ಗ್ರಾಮದಲ್ಲಿ ನಡೆದಿದೆ. ಮೃತ ಪತ್ನಿಯನ್ನು ಸಲ್ಮಾ (22) ಎಂದು ಗುರುತಿಸಲಾಗಿದ್ದು, ಪತಿ ಮೌಲಾಸಾಬ್ (28) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆ ಅನೈತಿಕ ಸಂಬಂಧದ ಶಂಕೆ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಈ ವೇಳೆ ಮೌಲಾಸಾಬ್ ಚಾಕುವಿನಿಂದ …

Read More »

ಬೆಂಗಳೂರಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿ ಸರಗಳ್ಳತನ : ಇಬ್ಬರು ನಟೋರಿಯಸ್ ಕಳ್ಳರು ಅರೆಸ್ಟ್!

ಬೆಂಗಳೂರು: ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಕದ್ದು ಪರಾರಿಯಾಗಿದ್ದ ಇಬ್ಬರು ನಟೋರಿಯಸ್ ಸರಗಳ್ಳರನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ. ಪ್ರೇಮ್ ಕುಮಾರ್ ಹಾಗೂ ಯಶವಂತ್ ಬಂಧಿತ ಆರೋಪಿಗಳು. ಆಗಸ್ಟ್ 12ರಂದು ದೊಡ್ಡಬಿದರಕಲ್ಲು ಬಳಿ ಒಂಟಿಯಾಗಿ ತೆರಳುತ್ತಿದ್ದ ವಿಜಯಮ್ಮ ಅವರನ್ನು ಬೈಕ್‌ನಲ್ಲಿ ಹಿಂಬಾಲಿಸಿ ಬಂದ ಆರೋಪಿಗಳು ಕುತ್ತಿಗೆ ಹಿಡಿದು ಕೆಳಗೆ ಬೀಳಿಸಿ ಚಿನ್ನದ ಸರ ಕದ್ದು ಪರಾರಿಯಾಗಿದ್ದರು.bಆರೋಪಿಗಳು ಅಪ್ರಾಪ್ತರಾಗಿದ್ದಾಗಲೇ ಬೈಕ್ ಕಳ್ಳತನಕ್ಕೆ ಇಳಿದಿದ್ದು, ಈ ಹಿಂದೆ ಸುಮಾರು 8 ವಾಹನಗಳನ್ನು …

Read More »

ನಾ ಮಾಡಿದ ತಪ್ಪೇನು ಅಪ್ಪ…? ಆಟವಾಡ್ತಾ 4 ವರ್ಷದ ಮಗನನ್ನ ಕೊಂದು ಜಲಾಶಯಕ್ಕೆ ಎಸೆದ ಪಾಪಿ ತಂದೆ

ಕಲಬುರಗಿ: ಸ್ವಂತ 4 ವರ್ಷದ ಮಗನನ್ನು ತಂದೆಯೇ ಜಲಾಶಯಕ್ಕೆ ಎಸೆದು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಚಿಂಚೋಳಿ ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತ ಬಾಲಕನನ್ನು ಗುಂಡೇಶ್ ಎಂದು ಗುರುತಿಸಲಾಗಿದೆ. ಮಗನ ಜೊತೆ ಆಟವಾಡುತ್ತಿದ್ದ ತಂದೆ ಸೋಮರಾವ್ ಹೂಗಾರ್, ಬಳಿಕ ಯಾರಿಗೂ ತಿಳಿಸದೆ ಮಗುವನ್ನು ಕರೆದುಕೊಂಡು ಹೋಗಿ ಮುಲ್ಲಾಮಾರಿ ಯೋಜನೆಯ ನಾಗರಾಳ ಜಲಾಶಯಕ್ಕೆ ಎಸೆದಿದ್ದಾನೆ ಎಂದು ತಾಯಿ ಕಲ್ಪನಾ ಆರೋಪಿಸಿದ್ದಾರೆ. ಈ ಕುರಿತು ಅವರು ಚಿಂಚೋಳಿ ಪೊಲೀಸ್ ಠಾಣೆಗೆ …

Read More »

ದಯಾಮರಣ ಕೋರಿದ್ದ ಮಹಿಳೆ ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆ

ಶಿರಾ: ಇಬ್ಬರು ಹೆಣ್ಣು ಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ವಿಷ ಸೇವಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರಾ ನಗರದ ಹೊರವಲಯದಲ್ಲಿ ನಡೆದಿದೆ. ಮೃತರನ್ನು ರಾಬಿಯಾ (32) ಹಾಗೂ ಅವರ ಮಕ್ಕಳಾದ ತಮನ್ನಾ (9) ಮತ್ತು ಸಿಮ್ರಾನ್ (4) ಎಂದು ಗುರುತಿಸಲಾಗಿದೆ. ರಾಬಿಯಾ ಅವರಿಗೆ ನಿವೇಶನ ಮಂಜೂರಾಗಿದ್ದರೂ ಅಧಿಕಾರಿಗಳು ನೀಡಲು ವಿಳಂಬ ಮಾಡಿದ್ದರಿಂದ ಅವರು ಹಲವು ಬಾರಿ ಹೋರಾಟ ನಡೆಸಿದ್ದರು ಎನ್ನಲಾಗಿದೆ. ಇತ್ತೀಚೆಗೆ ನಗರಸಭೆ ಸಭೆಯಲ್ಲೂ ರಾಬಿಯಾಗೆ ನೀಡಿದ್ದ ನಿವೇಶನದ …

Read More »