BigTv News
May 25, 2025
Breaking News
ಮೇ 22ರ ರಾತ್ರಿ ಝಾನ್ಸಿ ಜಿಲ್ಲೆಯ ಕೆಲವು ಭಾಗಗಳನ್ನು ಅಪ್ಪಳಿಸಿದ ಭಾರೀ ಬಿರುಗಾಳಿಯಿಂದಾಗಿ ಅನೇಕರು ಗಾಯಗೊಂಡಿದ್ದಾರೆ. 70ಕ್ಕೂ ಹೆಚ್ಚು ಗಿಳಿಗಳು ಸಾವನ್ನಪ್ಪಿವೆ, 50ಕ್ಕೂ ಹೆಚ್ಚು ಗಿಳಿಗಳಿಗೆ ಗಾಯವಾಗಿದೆ. ಅವುಗಳನ್ನು ತಕ್ಷಣವೇ ಪಶುವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸತ್ತ ಗಿಳಿಗಳ ನಿಖರ ಸಂಖ್ಯೆ ನೂರಾರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಜಿಲ್ಲೆಯ ಬಾಮೋರ್ ಬ್ಲಾಕ್ ಅಡಿಯಲ್ಲಿ ಬರುವ ಸಿಂಘಾರ್ ಗ್ರಾಮದ ದೇವಾಲಯದ ಬಳಿಯ ದೊಡ್ಡ ಹಳೆಯ ಮರದಲ್ಲಿ ನೂರಾರು ಗಿಳಿಗಳು ವಾಸಿಸುತ್ತಿವೆ. ಅವು …
Read More »
BigTv News
May 25, 2025
Breaking News
ಭಾರತವು ಈಗ ಜಪಾನ್ ಅನ್ನು ಮೀರಿಸಿ, ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕಶಕ್ತಿಯಾಗಿ ಹೊರಹೊಮ್ಮಿದೆ. ಈ ಬಗ್ಗೆ ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಹ್ಮಣ್ಯಂ ಬಹಿರಂಗಪಡಿಸಿದ್ದಾರೆ. ಅವರು ಶನಿವಾರ ನಡೆದ ನೀತಿ ಆಯೋಗದ 10ನೇ ಆಡಳಿತ ಮಂಡಳಿಯ ಸಭೆ ನಂತರ ಮಾತನಾಡುತ್ತಾ, “ಭಾರತದ ಆರ್ಥಿಕತೆ ಈಗ 4 ಟ್ರಿಲಿಯನ್ ಡಾಲರ್ ಆಗಿದೆ.ಅಷ್ಟೆ ಅಲ್ಲದೆ ಭಾರತ ಅಮೆರಿಕಾ, ಚೀನಾ ಮತ್ತು ಜರ್ಮನಿಯ ನಂತರದ ಸ್ಥಾನದಲ್ಲಿದ್ದು, ಮುಂದಿನ 2.5 ರಿಂದ 3 ವರ್ಷಗಳಲ್ಲಿ ಮೂರನೇ …
Read More »
BigTv News
May 25, 2025
Breaking News, Crime
ಜಿಲ್ಲಾ ಕಾಂಗ್ರೆಸ್‌ನ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದ ತನ್ನ ಪತ್ನಿಯನ್ನು ಕೆಳಗಿಳಿಸಿ ಆಕೆಯ ಸ್ಥಾನದಲ್ಲಿ ಬೇರೊಬ್ಬರನ್ನು ನೇಮಿಸಿದ್ದಕ್ಕೆ ಆಕ್ರೋಶಗೊಂಡ ಪತಿ, ಜಿಲ್ಲಾ ಕಾಂಗ್ರೆಸ್ ಕಚೇರಿಗೇ ಬೆಂಕಿಯಿಟ್ಟ ಘಟನೆ ಯಾದಗಿರಿಯಲ್ಲಿ ನಡೆದಿದೆ.ಪತ್ನಿಯ ಸ್ಥಾನಕ್ಕೆ ನಿಲೋಫರ್ ಬಾದಲ್‌ರನ್ನು ಆಯ್ಕೆ ಮಾಡಿದ್ದಕ್ಕೆ ಮಂಜುಳಾ ಅವರ ಪತಿ, ಪಿಯು ಉಪನ್ಯಾಸಕನಾಗಿರುವ ಶಂಕರ್ ಗೂಳಿ ಆಕ್ರೋಶಗೊಂಡಿದ್ದ. ಹೀಗಾಗಿ, ಶಂಕರ್ ಗೂಳಿ ರೌಡಿಶೀಟರ್ ಬಾಪುಗೌಡ ಅಗತೀರ್ಥ ಎಂಬಾತನ ಜೊತೆಗೂಡಿ ಶನಿವಾರ ಬೆಳಗಿನ ಜಾವ ನಗರದ ಕನಕದಾಸ ವೃತ್ತದಲ್ಲಿರುವ ಜಿಲ್ಲಾ ಕಾಂಗ್ರೆಸ್ …
Read More »
BigTv News
May 25, 2025
Breaking News
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಮುದ್ದನಹಳ್ಳಿ ಮೀಸಲು ಅರಣ್ಯದ ಆನೇಚೌಕೂರು ಶಾಖೆಯ ಶೆಟ್ಟಹಳ್ಳಿ -ಲಕ್ಕಪಟ್ಟಣ ಗಸ್ತಿನಲ್ಲಿ ಸುಮಾರು 6 ವರ್ಷದ ಗಂಡು ಹುಲಿ ಕಳೇಬರ ಪತ್ತೆಯಾಗಿದೆ..ಹುಲಿ ಸಾವಿನ ಬಗ್ಗೆ ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರದಲ್ಲಿ ತಿಳಿಯಲಿದೆ’ ಎಂದು ಉಪ ಅರಣ್ಯ ಸಂರಕ್ಷಾಧಿಕಾರಿ ಸೀಮಾ ತಿಳಿಸಿದ್ದಾರೆ.ಹನಗೋಡು ಹಾಗೂ ಗುರುಪುರ ಅರಣ್ಯದಂಚಿನಲ್ಲಿ ಕಳೆದ ಹಲವು ದಿನಗಳಿಂದ ಜಾನುವಾರು ಬೇಟೆಯಾಡಿ ಆತಂಕ ಸೃಷ್ಟಿಸಿದ್ದ ಈ ಹುಲಿ ನೇರಳಕುಪ್ಪೆ ಗ್ರಾಮದಲ್ಲಿ ಕಳೆದ ಮೂರು ದಿನಗಳ …
Read More »
BigTv News
May 25, 2025
Breaking News
ರಾಜ್ಯದಲ್ಲಿ ಹೊಸದಾಗಿ ಇನ್ನೂ 184 ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ಹಿನಕಲ್‌ನಲ್ಲಿ 9 ಇಂದಿರಾ ಕ್ಯಾಂಟೀನ್‌ಗಳನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ಮೊದಲ ಬಾರಿ ಮುಖ್ಯಮಂತ್ರಿಯಾಗಿ ಇಂದಿರಾ ಕ್ಯಾಂಟೀನ್‌ಗಳನ್ನು ಬಡವರು, ಕೂಲಿ ಕಾರ್ಮಿಕರು, ಆಸ್ಪತ್ರೆಗಳಿಗೆ ಬರುವ ಜನರ ಹಸಿವನ್ನು ಕಡಿಮೆ ದರದಲ್ಲಿ ನೀಗಿಸುವ ಉದ್ದೇಶದಿಂದ ಆರಂಭಿಸಿದೆ ಎಂದರು.ಹಿನಕಲ್‌ನಲ್ಲೇ ಇಂದಿರಾ ಕ್ಯಾಂಟೀನ್‌ಗಳನ್ನು ಉದ್ಘಾಟಿಸಿದ್ದು, ಹೊಸದಾಗಿ 184 ಕ್ಯಾಂಟೀನ್‌ಗಳನ್ನು ಆರಂಭಿಸುತ್ತಿದ್ದೇವೆ ಎಂದು ಅವರು ಹೇಳಿದರು.ಜಿಲ್ಲಾ ಉಸ್ತುವಾರಿ ಸಚಿವ …
Read More »
BigTv News
May 25, 2025
Breaking News
ನೈಋತ್ಯ ರೈಲ್ವೆ, ಮೈಸೂರು ವಿಭಾಗದ, ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯ ತ್ವರಿತ ಹಾಗೂ ಪ್ರಾಮಾಣಿಕ ಕಾರ್ಯಾಚರಣೆಯಿಂದ ಒಬ್ಬ ಮಹಿಳಾ ಪ್ರಯಾಣಿಕರಿಗೆ ₹1,49,465/- ಮೌಲ್ಯದ ಚಿನ್ನಾಭರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಒಳಗೊಂಡ ವ್ಯಾನಿಟಿ ಬ್ಯಾಗ್ ಅನ್ನು ಯಶಸ್ವಿಯಾಗಿ ಮರಳಿಸಿದ್ದಾರೆ.
Read More »
BigTv News
May 25, 2025
Breaking News
ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಸಿಕ್ಕಿದ್ದಕ್ಕೆ ವಿಜಯೋತ್ಸವ ಆಚರಿಸಿದ ಏಳು ಆರೋಪಿಗಳನ್ನು ಹಾನಗಲ್ ಠಾಣೆ ಪೊಲೀಸರು ಬಂಧಿಸಿದ್ದು, ಎಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ವಹಿಸಿ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.ಜೈಲಿನಿಂದ ಗುರುವಾರ ರಾತ್ರಿ ಬಿಡುಗಡೆಯಾಗಿದ್ದ ಆರೋಪಿಗಳು, ಹಾವೇರಿಯಿಂದ ಅಕ್ಕಿಆಲೂರುವರೆಗೂ ಕಾರು ಹಾಗೂ ಬೈಕ್‌ನಲ್ಲಿ ರೋಡ್ ಶೋ ಆಚರಿಸಿದ್ದರು.ತಲೆಮರೆಸಿಕೊಂಡಿದ್ದ ಆರೋಪಿಗಳಾದ ಅಪ್ತಾಬ ಮಖಬೂಲಅಹ್ಮದ್ ಚಂದನಕಟ್ಟಿ, ಮದರಸಾಬ್ ಮಹ್ಮದಸಾದಿಕ ಮಂಡಕ್ಕಿ ಹಾಗೂ ತೌಸೀಪ ಖಾಸಿಂಸಾಬ ಚೌಟಿಯನ್ನು ಶಿರಾಳಕೊಪ್ಪದಲ್ಲಿ ಬಂಧಿಸಲಾಗಿದೆ.
Read More »
BigTv News
May 25, 2025
Breaking News
ರಾಘವೇಂದ್ರ ಶೆಟ್ಟರ ಎಂಬುವವರು 4 ತೊಲೆ ಬಂಗಾರದ ತಾಳಿ ಸರವಿದ್ದ ಬ್ಯಾಗ್ ಅನ್ನು ಬಸ್‌ನಲ್ಲಿ ಮರೆತು ಹೋಗಿದ್ದು, ಅದನ್ನು ಅವರಿಗೆ ಮರಳಿಸುವ ಮೂಲಕ ವಾ.ಕ.ರಾ.ರ.ಸಾರಿಗೆ ಬಸ್‌ನ ರೋಣ ಘಟಕದ ಬಸ್ ಚಾಲಕ ಕೆ.ಜಿ.ದಾಸರ ಹಾಗೂ ನಿರ್ವಾಹಕ ಬಸವರಾಜ ಮುಗಳಿ ಪ್ರಾಮಾಣಿಕತೆ ಮೆರೆದಿದ್ದಾರೆ.ರೋಣ ಪೊಲೀಸ್ ಠಾಣೆಗೆ ಮಹಿಳೆಯನ್ನು ಕರೆಸಿ ಬ್ಯಾಗ್ ನೀಡಲಾಯಿತು. ರೋಣ ಪೊಲೀಸ್ ಠಾಣೆಯ ಪಿ.ಎಸ್.ಐ ಪ್ರಕಾಶ ಬಣಕಾರ ಚಾಲಕ ಹಾಗೂ ನಿರ್ವಾಹಕರ ಕಾರ್ಯವನ್ನು ಶ್ಲಾಘಿಸಿ, ಸನ್ಮಾನಿಸಿದರು.
Read More »
BigTv News
May 25, 2025
Breaking News, Crime
ಬಿಹಾರದ ಜಮುಯಿ ಜಿಲ್ಲೆಯಲ್ಲಿ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. ಮಾವನೊಬ್ಬ ತನ್ನ ಸೊಸೆಯನ್ನು ಕತ್ತಿಯಿಂದ ಕತ್ತು ಸೀಳಿ ಕೊಂದಿದ್ದಾನೆ ಎನ್ನಲಾಗಿದೆ. ಕೊಲೆ ನಡೆದ ತಕ್ಷಣ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ಶವವನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.ನೆರೆಹೊರೆಯವರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದಾಗ ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿದರು. ಕೊಲೆಗೆ ಬಳಸಲಾದ ಕತ್ತಿಯನ್ನು ಪೊಲೀಸರು ಅಪರಾಧ ಸ್ಥಳದಿಂದ ವಶಪಡಿಸಿಕೊಂಡಿದ್ದಾರೆ.ಖುಷ್ಬೂ ದೇವಿಯ ಮೃತದೇಹವನ್ನು ಸದರ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು. ನಂತರ …
Read More »
BigTv News
May 25, 2025
Breaking News
ಹಾರೂಗೊಪ್ಪ ಗ್ರಾಮದಲ್ಲಿ ಶುಕ್ರವಾರ ರಾತ್ರಿ, ಮೂರು ವರ್ಷದ ಗಂಡು ಮಗುವನ್ನು ಮಲತಂದೆ, ಮೂವರು ಸಂಗಡಿಗರು ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ.ಬಿಹಾರ ಮೂಲದವರಾದ 30ರಿಂದ 35 ವರ್ಷ ವಯಸ್ಸಿನ ನಾಲ್ವರು ಆರೋಪಿಗಳನ್ನು ಮುರಗೋಡ ಪೊಲೀಸ್ ಠಾಣೆ ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ.
Read More »