BigTv News
May 24, 2025
Breaking News, Crime
ಅಡುಗೆ ಎಣ್ಣೆ ಮಿಲ್ ನಲ್ಲಿ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ.ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ರಫಿಕ್ ಸೈಯದ್ ಕುಡುಚಿ (35) ಮೃತಪಟ್ಟಿದ್ದಾರೆ.ಜಮಖಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
Read More »
BigTv News
May 24, 2025
Breaking News, Crime
ಮಹಿಳೆಯರಿಂದ ಚಿನ್ನಾಭರಣ ದೋಚಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿ, ಅಂದಾಜು ₹48 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳು, ಕಾರು, ಸ್ಕೂಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.ಮನೆಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ವಿಜಯನಗರದ ಜೆ.ಸಯ್ಯದ್ ಅಹಮದ್ (43) ಮತ್ತು ಬೆಂಗಳೂರಿನ ಕೆ.ಆರ್.ಪುರಂ, ದೇವಸಂದ್ರದ ತಸ್ಲೀಂ ಪಾಷಾ (43) ಈ ಇಬ್ಬರನ್ನು ಮಳವಳ್ಳಿ ಗ್ರಾಮಾಂತರ ಠಾಣೆಯ …
Read More »
BigTv News
May 24, 2025
Breaking News, Crime
ಸಂತೆಕಟ್ಟೆ ಸಮೀಪ ಮುಖ್ಯ ಶಾಖೆ ಹೊಂದಿರುವ ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂ. ನಷ್ಟು ಹಣವನ್ನು ವಾಪಸ್ ನೀಡದೆ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು. ಈ ಬಗ್ಗೆ 2021ರಿಂದ 2024ರ ವರೆಗೆ ಸೊಸೈಟಿಯಲ್ಲಿ ಜವಾಬ್ದಾರಿ ವಹಿಸಿಕೊಂಡಿದ್ದ 14 ಜನರ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೊಡ್ಡ ಮೊತ್ತದ ಹಗರಣ ವಾಗಿರುವ ಕಾರಣ ತನಿಖೆಯ ಹೊಣೆಗಾರಿಕೆ ಸಿಐಡಿ ವಿಭಾಗಕ್ಕೆ …
Read More »
BigTv News
May 24, 2025
Breaking News, Crime
ಫೋನ್ ವಾಲ್ಯೂಮ್ ಕಡಿಮೆ ಮಾಡಲು ಹೇಳಿದ್ದಕ್ಕೆ ಕುಡಿದ ಮತ್ತಿನಲ್ಲಿದ್ದ ಗಂಡನ ಮೇಲೆ ಮಹಿಳೆಯೊಬ್ಬಳ ಸುರಿದ ಘಟನೆ ಮೇ 19 ರಂದು ನಡೆದಿದ್ದು, ಬೆಂಗಳೂರಿನ ಎನ್‌ಎಂಎಚ್ ಲೇಔಟ್ ಪ್ರದೇಶದಲ್ಲಿ ನಡೆದಿತ್ತು.ಸಂತ್ರಸ್ತೆ ನೋವಿನಿಂದ ಕಿರುಚಿದಾಗ ಆತ ಸ್ಥಳದಿಂದ ಪರಾರಿಯಾಗಿದ್ದಾನೆ. ನೆರೆಹೊರೆಯವರು ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರು. ಅವರ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆಕೆಯ ಪತಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ‘ವಿವರವಾದ ತನಿಖೆ ನಡೆಯುತ್ತಿದೆ. ಆರೋಪಿಗಳನ್ನು ಶೀಘ್ರದಲ್ಲೇ …
Read More »
BigTv News
May 24, 2025
Breaking News, Crime
ಮಸೂದ್ ಪಟೇಲ್ ಎಂಬವರು ಸುಮಾರು 200 ಚೀಲ ಒಣಗಿಸಿದ ಸಿಪ್ಪೆಅಡಿಕೆಯನ್ನು ಪ್ಯಾಸ್ಟಿಕ್ ಚೀಲದಲ್ಲಿ ಹಾಕಿ ಚೀಲ ಮಾಡಿ ಗೋಡೌನ್‌ನಲ್ಲಿ ಇಟ್ಟಿದ್ದು, ಮೇ 15ರಿಂದ ಮೇ 22ರ ಮಧ್ಯಾವದಿಯಲ್ಲಿ ಗೋಡೌನ್ ಬೀಗ ಮುರಿದು ಒಳನುಗ್ಗಿದ ಕಳ್ಳರು, 200 ಚೀಲ ಒಣಗಿಸಿದ ಸಿಪ್ಪೆಅಡಿಕೆಯನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ.ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
May 24, 2025
Breaking News
ಹುಲಿಕಟ್ಟಿ ಗ್ರಾಮದ ಬಳಿ ಸಾರಿಗೆ ಬಸ್ ಪಲ್ಟಿ ಹೊಡೆದು 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬಸ್ ದಾವಣಗೆರೆಯಿಂದ ಹಾಲೇಕಲ್ ಗ್ರಾಮಕ್ಕೆ ಸಂಚರಿಸುತ್ತಿತ್ತು.ಗಾಯಾಳುಗಳನ್ನು ಅಣಜಿ ಆಸ್ಪತ್ರೆ, ಜಿಲ್ಲಾ ಚಿಗಟೇರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
Read More »
BigTv News
May 24, 2025
Breaking News
ಬೇಸಿಗೆ ರಜೆ ಕಳೆಯಲು ಸಹೋದರರಾದ ಯಶ್ವಂತ್, ನೂತನ್ ಹಾಗೂ ಚಿಕ್ಕಪ್ಪನ ಮಗ ಬೀರೇಶ್, ಪಕ್ಕದ ಅಣತಿ ಗ್ರಾಮದ ಕೆರೆಗೆ ಈಜಲು ತೆರಳಿದ್ದರು.ಆಳವಾದ ಕೆರೆಗೆ ಇಳಿಯುತ್ತಿದ್ದಂತೆ ನೂತನ್ ಹಾಗೂ ಬೀರೇಶ್ ಮುಳುಗಿದ್ದಾರೆ. ಯಶ್ವಂತ್‌ಗೆ ಈಜು ಬಾರದ ಕಾರಣ, ಕಣ್ಣೆದೆರು ಅವರು ಮುಳುಗುತ್ತಿದ್ದರೂ ರಕ್ಷಿಸಲು ಸಾಧ್ಯವಾಗಿಲ್ಲ.ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಮೃತದೇಹಗಳನ್ನು ಹೊರತೆಗೆದರು. ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ನುಗ್ಗೇಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
Read More »
BigTv News
May 24, 2025
Breaking News, Crime
ಪೋಷಕರೊಂದಿಗೆ ಬಾಲಕಿ ಸಂಬಂಧಿಕರ ಮನೆಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಬಾಲಕಿ ಮನೆಯ ಹೊರಗೆ ಆಟವಾಡುತ್ತಿದ್ದಾಗ ಆಕೆಯನ್ನು ನಂಬಿಸಿ ಕರೆದೊಯ್ದ ದುರುಳ, ಅತ್ಯಾಚಾರವೆಸಗಿ ಬಳಿಕ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದ.ಪೋಷಕರು ಬಾಲಕಿ ಕಾಣದಿದ್ದಾಗ ಆತಂಕಗೊಂಡು ಹುಡುಕಾಟ ನಡೆಸಿದಾಗ ಮನೆಯಬಳಿ ಪೊದೆಯಲ್ಲಿ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಪ್ರಕರಣ ಸಂಬಂಧ ರಹಮತ್ ಉಲ್ಲಾ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸಿದ್ದಾರೆ.
Read More »
BigTv News
May 24, 2025
Breaking News
ಬೆಂಗಳೂರಿಗೆ ಬರುವ ಮಾರ್ಗದಲ್ಲಿ ಮಧ್ಯರಾತ್ರಿ ಸುಮಾರು ಎರಡು ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. 10 ಚಕ್ರಗಳ ಓಪನ್ ಬಾಡಿ ವಾಹನ, ಬಿಬಿಎಂಪಿ ಕಸದ ಲಾರಿ ಮತ್ತು ಎರ್ಟಿಗಾ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಸ ತುಂಬಿದ್ದ ಲಾರಿಯ ಮೇಲೆ ಕಲ್ಲು ತುಂಬಿದ್ದ ಟ್ರಕ್ ಪಲ್ಟಿಯಾಗಿದ್ದು, ಇದರ ಪರಿಣಾಮವಾಗಿ ಕಸದ ಲಾರಿ ಚಾಲಕ ಫಯಾಜ್ ಅಹಮ್ಮದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಅಪಘಾತದಲ್ಲಿ ಮೃತಪಟ್ಟ ಚಾಲಕನ ದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಬ್ಬಾಳ ಸಂಚಾರ …
Read More »
BigTv News
May 24, 2025
Breaking News
ಹಿರಿಯ ಮಗಳು ಅರ್ಪಿತಾ ಮನೆ ಬಿಟ್ಟು ಹೋಗಿದ್ದಕ್ಕೆ ಮಹದೇವಸ್ವಾಮಿ, ಪತ್ನಿ ಮಂಜುಳಾ, ಕಿರಿಯ ಮಗಳು ಸೇರಿ ಕೆರೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.ಮೃತರನ್ನು ಮಹದೇವಸ್ವಾಮಿ, ಪತ್ನಿ ಮಂಜುಳಾ ಹಾಗೂ ಪುತ್ರಿ ಹರ್ಷಿತ ಎಂದು ಗುರುತಿಸಲಾಗಿದೆ. ಮೃತ ಮಹದೇವಸ್ವಾಮಿ ಹಿರಿಯ ಪುತ್ರಿ ಅರ್ಪಿತ ಮನೆ ಬಿಟ್ಟು ಹೋಗಿದ್ದಾಳೆ. ಮನನೊಂದು ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಬೂದನೂರು ಕೆರೆಯ ಏರಿಯ ಮೇಲೆ ಬೈಕ್ ಹಾಗೂ ಮೂವರ ಚಪ್ಪಲಿ …
Read More »