BigTv News
May 23, 2025
Breaking News, Crime
23 ವರ್ಷದ ಯುವತಿಯೊಬ್ಬಳಿಗೆ ಪಾನೀಯದಲ್ಲಿ ಮಾದಕ ದ್ರವ್ಯ ಬೆರೆಸಿ ಕುಡಿಸಿ, ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಆಕೆಯನ್ನು ಹೋಟೆಲ್ ಒಂದಕ್ಕೆ ಕರೆದೊಯ್ದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಗುಜರಾತ್‌ನ ಸೂರತ್ ನಗರದಲ್ಲಿ ನಡೆದಿದೆ.ತನಗೆ ಪ್ರಜ್ಞೆ ಮರಳಿದ ಕೂಡಲೇ ಪೊಲೀಸರನ್ನು ಸಂಪರ್ಕಿಸಿರುವ ಸಂತ್ರಸ್ತ ಯುವತಿಯು, ಈ ಸಂಬಂಧ ಅಧಿಕೃತ ದೂರು ದಾಖಲಿಸಿದ್ದಾಳೆ. ಇದರ ಬೆನ್ನಿಗೇ ಕ್ಷಿಪ್ರ ಕ್ರಮ ಕೈಗೊಂಡಿರುವ ಪೊಲೀಸರು, ಆರೋಪಿಗಳಾದ ಆದಿತ್ಯ ಉಪಾಧ್ಯಾಯ ಹಾಗೂ ಆತನ ಸಹಚರ ಗೌರವ್ …
Read More »
BigTv News
May 23, 2025
Breaking News, Crime
ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ತಾಲ್ಲೂಕಿನ ಕರಳಪುರದಲ್ಲಿ ಬುಧವಾರ ಶ್ರೀಕಾಂತ ಅವರ ಮಡದಿ ಮಹಾದೇವಿ (25) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮೃತಳ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆಯ ಸಿಪಿಐ ಸುನಿಲ್‌ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read More »
BigTv News
May 23, 2025
Breaking News
ತರೀಕೆರೆಯ ಬುಕ್ಕಾಂಬೂದಿಯಿಂದ ಸಾಗರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ಆನಂದಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿದ್ದ ತಾಯಿ, ಮಗು ಸಾವನ್ನಪ್ಪಿದ್ದಾರೆ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ತಾಯಿ ಅಸ್ಮಾ ಬಾನು(30), ಮಹಮ್ಮದ್ ಕಬೀರ್(3) ಮೃತಪಟ್ಟವರು ಎಂದು ಗುರುತಿಸಲಾಗಿದೆಪತಿ ಕಲಂದರ್ ಪಾಶ ಹಾಗೂ ಮತ್ತೊಂದು ಮಗು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Read More »
BigTv News
May 23, 2025
Breaking News, Crime
ಮದುವೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬರಿಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ಮಂಗಳೂರಿನ ಹೊರವಲಯದ ವಳಚ್ಚಿಲ್‌ನಲ್ಲಿ ಗುರುವಾರ ನಡೆದಿದೆ. ಸುಲೇಮಾನ್ ತಮ್ಮ ಇಬ್ಬರು ಪುತ್ರರಾದ ರಿಯಾಬ್ ಮತ್ತು ಶಿಯಾಬ್ ಜೊತೆ ಗುರುವಾರ ರಾತ್ರಿ ಮುಸ್ತಾಫಾ ಮನೆಗೆ ತೆರಳಿದ್ದರು. ಮಾತುಕತೆ ಫಲಪ್ರದವಾಗದೆ, ಮುಸ್ತಾಫಾ ಅವರನ್ನು ಮನೆಯಿಂದ ಹೊರಡುವಂತೆ ಹೇಳಿದ್ದಾನೆ. ಬಳಿಕ ಏಕಾಏಕಿ ಸಿಟ್ಟಾದ ಮುಸ್ತಾಫಾ ಮನೆಯಲ್ಲಿದ್ದ ಚೂರಿಯನ್ನು ತೆಗೆದುಕೊಂಡು ಸುಲೇಮಾನ್ ಅವರ ಕುತ್ತಿಗೆಗೆ ಇರಿದಿದ್ದಾನೆ. ಗಾಯಗೊಂಡ ಸುಲೇಮಾನ್ ಸ್ಥಳದಲ್ಲೇ ಕುಸಿದು …
Read More »
BigTv News
May 23, 2025
Breaking News
ವಿಟ್ಲ ಸಮೀಪದ ಕನ್ಯಾನದಲ್ಲಿ ತನ್ನ ಪತ್ನಿಯ ಸೀಮಂತ ಕಾರ್ಯಕ್ರಮದ ಸಿದ್ಧತೆಯಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ಕುಸಿದು ಬಿದ್ದು ಶುಕ್ರವಾರ ಮೃತಪಟ್ಟಿದ್ದಾರೆ.ಮನೆಯಲ್ಲಿ ಬೆಳಿಗ್ಗೆ ಕುಸಿದು ಬಿದ್ದ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಯಿತು. ಅಷ್ಡರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.ಸೀಮಂತದ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ಆಕ್ರಂದನ ಮುಗಿಲು ಮುಟ್ಟಿದೆ. ಸಾವಿಗೆ ವೈದ್ಯಕೀಯ ಕಾರಣ ತಿಳಿದು ಬಂದಿಲ್ಲ.
Read More »
BigTv News
May 23, 2025
Breaking News
ವಾಹನವೊಂದಕ್ಕೆ ಹಿಂದೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಓಡಿಸುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ಬಳಿ ನಡೆದಿದೆ. ಮೂಲತಃ ಮದ್ಯಪ್ರದೇಶ ಮೂಲದ ರಾಹುಲ್ ಶುಕ್ಲಾ, ಧಾರವಾಡದಿಂದ ಬೆಳಗಾವಿಗೆ ಕುಟುಂಬ ಸಮೇತ ಹೊರಟಿದ್ದರು.ರಾಹುಲ್ ಶುಕ್ಲಾ (40)ಸಾವನ್ನಪ್ಪಿದ್ದರೆ, ಪತ್ನಿ ಶ್ರೇಯಾ ಶುಕ್ಲಾ(35), ಮಗಳು ಕಿಯಾನಾ ಶುಕ್ಲಾ(3) ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ …
Read More »
BigTv News
May 22, 2025
Breaking News
ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕೊಡಗಿನ ದೇವರಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ತೋಟದ ಕಾರ್ಮಿಕ ಅಣ್ಣಯ್ಯ (41) ಎಂದು ಗುರುತಿಸಲಾಗಿದೆ. ತೋಟಕ್ಕೆ ಕೆಲಸಕ್ಕೆಂದು ತೆರಳುತ್ತಿದ್ದಾಗ ಎದುರಾದ ಕಾಡಾನೆ ದಾಳಿ ಮಾಡಿದೆ ಎನ್ನಲಾಗಿದೆ.ಗ್ರಾಮಸ್ಥರ ಸಹಕಾರದಿಂದ ಅರಣ್ಯ ಸಿಬ್ಬಂದಿಗಳು ಕಾಡಾನೆಯನ್ನು ಕಾಡಿಗಟ್ಟಿದ್ದು, ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ.ಕಾಡಾನೆ ಹಾವಳಿ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Read More »
BigTv News
May 22, 2025
Breaking News
ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ನಂಜಪ್ಪ ಅವರು ಕಳೆದ ಅಗಸ್ಟ್ ತಿಂಗಳಿನಿಂದ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕಾರಾಗಿ ಸೇವೆ ಸಲ್ಲಿಸುತ್ತಿದ್ದರು.ಸೋಮವಾರದಂದು ಕರ್ತವ್ಯದಲ್ಲಿರುವಾಗಲೇ ರಕ್ತದೊತ್ತಡದಿಂದ ಬಳಲುತ್ತಿದ್ದ ನಂಜಪ್ಪ ಅವರು ಚಿಕಿತ್ಸೆಗಾಗಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನಗಳ ಕಾಲ ಚಿಕಿತ್ಸೆಪಡೆದರೂಅವರ ಆರೋಗ್ಯದಲ್ಲಿ ಯಾವುದೇ ಗಣನೀಯ ಚೇತರಿಕೆ ಕಂಡುಬಂದಿರಲಿಲ್ಲ. ಬುಧವಾರ ರಾತ್ರಿ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಆಗಸ್ಟ್‌ನಲ್ಲಿ ಕುಂದಾಪುರ ಠಾಣೆ ಪೊಲೀಸ್ ನಿರೀಕ್ಷಕರಾಗಿ ನಿಯುಕ್ತಿಗೊಂಡಿದ್ದರು. ಇನ್ಸ್‌ಪೆಕ್ಟರ್ ನಿಧನಕ್ಕೆ ಜಿಲ್ಲಾ ಪೊಲೀಸ್ …
Read More »
BigTv News
May 22, 2025
Breaking News, Crime
ಮೈಸೂರಿನ ಹೊರವಲಯದಲ್ಲಿ ಯುವತಿ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಲತಾ (25) ಶವ ಪತ್ತೆಯಾಗಿದೆ. ವೇಲಿನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಲತಾ ಗಿರಿಯಾಬೋವಿ ಪಾಳ್ಯ ನಿವಾಸಿಯಾಗಿದ್ದಾಳೆ.ಸ್ಥಳಕ್ಕೆ ಡಿಸಿಪಿ ಮುತ್ತುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನ ಮರಣೋತ್ತರ ಪರೀಕ್ಷಗೆ ರವಾನೆ ಮಾಡಲಾಗಿದೆ. ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Read More »
BigTv News
May 22, 2025
Breaking News, Crime
ಮಡುವಿನಹಳ್ಳಿ ಗ್ರಾಮದ ಮಹದೇವಶೆಟ್ಟಿ ಎಂಬುವವರ ಪುತ್ರಿ ಮಹದೇವಿಯನ್ನು ಕರಳಪುರ ಗ್ರಾಮದ ಕಾಂತ ಎಂಬುವವರಿಗೆ 3 ವರ್ಷದ ಹಿಂದೆ ವಿವಾಹ ಮಾಡಿಕೊಡಲಾಗಿತ್ತು.ಮಗಳ ಸಾವಿಗೆ ಆಕೆಯ ಗಂಡ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಕಾಂತ ಎಂಬಾತನನ್ನ ಮಹಾದೇವಿ ಪ್ರೀತಿಸಿ ವಿವಾಹವಾಗಿದ್ದಳು ಎನ್ನಲಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.ಸ್ಥಳಕ್ಕೆ ಪಿಎಸ್‌ಐ ಸುನೀಲ್ ಕುಮಾರ್, ಎಎಸ್‌ಐ ನಾಗರಾಜು, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಶವವನ್ನು ಮರಣೋತ್ತರ …
Read More »