Breaking News

Breaking News

ಬೆಳಗಾವಿ :ಮಕ್ಕಳಾಗಿಲ್ಲ ಎಂದು ಸೊಸೆಯನ್ನು ಹತ್ಯೆಗೈದ ಅತ್ತೆ!

ಬೆಳಗಾವಿಯಲ್ಲಿ ಭೀಕರವಾದ ಕೊಲೆಯಾಗಿದ್ದು, ಸೊಸೆಗೆ ಮಕ್ಕಳಾಗಲಿಲ್ಲ ಎಂದು ಅತ್ತೆಯೇ ಮಹಿಳೆಯನ್ನು ಕಲ್ಲಿನಿಂದ ಜಜ್ಜಿ, ಭೀಕರವಾಗಿ ಕೊಲೆ ಮಾಡಿರುವ ಧಾರುಣ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಮಲಬಾದ್​ ಗ್ರಾಮದಲ್ಲಿ ನಡೆದಿದೆ.ಆರೋಪದ ಹಿನ್ನೆಲೆ ಪತಿ ಸಂತೋಷ , ಮಾವ ಕಾಮಣ್ಣ , ಅತ್ತೆ ಜಯಶ್ರೀ ಎನ್ನು ಅರೆಸ್ಟ್ ಮಾಡಲಾಗಿದ್ದು, ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ವಿದೇಶದಲ್ಲಿ ಉದ್ಯೊಗ ಕೊಡಿಸುವುದಾಗಿ ನಂಬಿಸಿ ವಂಚನೆ: ಪ್ರಮುಖ ಆರೋಪಿ CCB ವಶಕ್ಕೆ!

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನೂರಾರು ಯುವಕರಿಂದ ಸುಮಾರು ₹1. 82 ಕೋಟಿಗೂ ಅಧಿಕ ಹಣವನ್ನು ಪಡೆದು ವಂಚಿಸಿದ ಪ್ರಕರಣದ ಅರೋಪಿಯನ್ನು ಇಲ್ಲಿನ‌ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮುಂಬೈ ನಿವಾಸಿ ಮಸೀವುಲ್ಲಾ ಅತಿವುಲ್ಲಾ ಖಾನ್ ಬಂಧಿತ ಆರೋಪಿ.ಹೆಚ್ಚಿನ ತನಿಖೆ ಸಲುವಾಗಿ ಅರೋಪಿಯನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ತವಾಲ್ ತಿಳಿಸಿದ್ದಾರೆ.

Read More »

ಆಪರೇಷನ್ ಸಿಂದೂರ್‌ನಲ್ಲಿ ಪಾಕಿಸ್ತಾನದ 64 ಸೈನಿಕರು ಹಾಗೂ ಅಧಿಕಾರಿಗಳ ಸಾವು!

ಭಾರತೀಯ ಸೇನೆಯಿಂದ ನಡೆಸಲಾದ “ಆಪರೇಷನ್ ಸಿಂದೂರ” ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಸೇನೆಯ 64 ಸೈನಿಕರು ಮತ್ತು ಅಧಿಕಾರಿಗಳು ಕೊಲ್ಲಲ್ಪಟ್ಟಿದ್ದಾರೆ.ಗಡಿಯುದ್ದಕ್ಕೂ ಒಳನುಗ್ಗುವಿಕೆಯ ಪ್ರಯತ್ನಗಳನ್ನು ತಡೆಗಟ್ಟಲು ಭಾರತೀಯ ಸೇನೆಯು ತೀವ್ರ ಕಾರ್ಯಾಚರಣೆ ನಡೆಸಿತು, ಇದರಲ್ಲಿ ಗಮನಾರ್ಹ ಯಶಸ್ಸು ಸಾಧಿಸಲಾಗಿದೆ. ಕೆಲವು ಮೂಲಗಳ ಪ್ರಕಾರ, ಈ ಕಾರ್ಯಾಚರಣೆಯು ಭಯೋತ್ಪಾದಕ ಚಟುವಟಿಕೆಗಳನ್ನು ತಡೆಗಟ್ಟಲು ಮತ್ತು ರಾಷ್ಟ್ರದ ಭದ್ರತೆಯನ್ನು ಖಾತ್ರಿಪಡಿಸಲು ನಡೆಸಲಾಯಿತು. ಈ ಘಟನೆಯು ಭಾರತ-ಪಾಕಿಸ್ತಾನದ ಗಡಿಯಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ.ಈ ಕಾರ್ಯಾಚರಣೆಯ ಯಶಸ್ಸು ಭಾರತೀಯ ಸೇನೆಯ ಶಕ್ತಿ …

Read More »

ಪ್ರವಾಸ ಹೋಗಿ ಅಪಘಾತಕ್ಕೆ ಕೆಂಕೆರೆಯ ಮೂವರು ಸಾವು!

ತುಮಕೂರು ಜಿಲ್ಲೆಯ ಮೂವರು ಕಾರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಕರ್ನೂಲ್ ಬಳಿ ನಡೆದಿದೆ.ಕರ್ನೂಲ್ ಬಳಿ ನಿಯಂತ್ರಣ ತಪ್ಪಿದ ಪ್ರವಾಸಿಗರಿದ್ದ ಕಾರು ರಸ್ತೆ ವಿಭಜಕ್ಕೆ ಡಿಕ್ಕಿಯಾಗಿ ಅನಾಹುತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಮೂವರು ಮೃತಪಟ್ಟರೇ, ಉಳಿದ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕರ್ನೂಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಮೃತರನ್ನು ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆಯ ನವೀನ್, ಸಂತೋಷ್, ಲೋಕೇಶ್ ಎಂದು ಗುರುತಿಸಲಾಗಿದೆ.

Read More »

ಮಂಗಳೂರು: ಜೈಲ್‌ನಲ್ಲಿ ಗ್ಯಾಂಗ್ ವಾರ್, ಸುಹಾಸ್ ಶೆಟ್ಟಿ ಕೊಲೆ ಆರೋಪಿ ಮೇಲೆ ಕೈದಿಗಳಿಂದ ಹಲ್ಲೆ!

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳು ಹಾಗೂ ಮತ್ತೊಂದು ಗ್ಯಾಂಗ್‌ನ ನಡುವೆ ಘರ್ಷಣೆ ನಡೆದಿರುವುದಾಗಿ ವರದಿಯಾಗಿದೆ.ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ನೌಶಾದ್ ಮೇಲೆ ಹಲವಾರು ಕೈದಿಗಳು ಹಲ್ಲೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಸಹಾಯಕ ಪೊಲೀಸ್ ಆಯುಕ್ತ ಪ್ರತಾಪ್ ಸಿಂಗ್ ಥೋರಟ್ ಜೈಲಿಗೆ ತಕ್ಷಣ ಆಗಮಿಸಿದ್ದು,ಗಲಾಟೆಯ ನಂತರ, ಪೊಲೀಸರು ಜೈಲಿನ ಆವರಣದ ಸುತ್ತಲೂ ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.ಈ ಘಟನೆಯ …

Read More »

ರಾಯಚೂರು :CRPF ಯೋಧನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ!

ದೆಹಲಿಯಿಂದ ಆಸ್ಸಾಂಗೆ ವರ್ಗಾವಣೆಯಾದ ಹಿನ್ನೆಲೆ ರಜೆ ಮೇಲೆ ಊರಿಗೆ ಬಂದಿದ್ದ ಯೋಧನ ಮೇಲೆ ಹಲ್ಲೆ ನಡೆದಿದೆ. ಅಕ್ಕನ ಜಮೀನಿನ ಬದುವಿನ ವಿಚಾರದಲ್ಲಿ ಅಕ್ಕನ ಪರ ನ್ಯಾಯ ಕೇಳಿದ್ದರಿಂದ ಜಗಳವಾಗಿದ್ದು, ಪಕ್ಕದ ಜಮೀನಿನ ಅಮರೇಶ್, ಮಂಜುನಾಥ ಎಂಬುವವರು ಹಲ್ಲೆ ನಡೆಸಿದ್ದಾರೆ.ವಾಕಿಂಗ್ ಮಾಡುತ್ತಿದ್ದಾಗ ಏಕಾಏಕಿ ಬಂದ ಅಮರೇಶ್ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಚನ್ನಬಸಪ್ಪ ತಪ್ಪಿಸಿಕೊಂಡು ಓಡಿದ್ದು, ಆದರೂ ಬಿಡದೇ ಬೆನ್ನಟ್ಟಿ ಹಲ್ಲೆಗೆ ಮುಂದಾಗಿದ್ದಾರೆ. ಆಗ ಸ್ಥಳೀಯರು ಸಹಾಯಕ್ಕೆ ಮುಂದಾಗಿದ್ದಾರೆ. ಸದ್ಯ …

Read More »

ಪಿರಿಯಾಪಟ್ಟಣ: ಗಾಂಜಾ ಮಾರಾಟಕ್ಕೆ ಯತ್ನ; ಆರೋಪಿ ಬಂಧನ!!

ಗೋಣಿಕೊಪ್ಪ ರಸ್ತೆಯಲ್ಲಿನ ಉತ್ತೇನಹಳ್ಳಿ ಗೇಟ್ ಬಳಿ ಇರುವ ಖಾಸಗಿ ಹೊಟೇಲ್ ಮುಂಭಾಗ ಆರೋಪಿ ಮತೀನ್‌ಖಾನ್ ಭಾನುವಾರ ಮಧ್ಯಾಹ್ನ ಪ್ಲಾಸ್ಟಿಕ್ ಕವರ್‌ನಲ್ಲಿ ಗಾಂಜಾ ಇಟ್ಟುಕೊಟ್ಟು ಸಾರ್ವಜನಿಕರಿಗೆ ₹ 150 ರಿಂದ ₹ 200ಗಳಿಗೆ ಮಾರಾಟ ಮಾಡುತ್ತಿದ್ದು ಈ ವೇಳೆ ಸ್ಥಳೀಯರು ನೀಡಿದ ಮಾಹಿತಿಯಂತೆ ಪೊಲೀಸ್ ಇನ್‌ಸ್ಪೆಕ್ಟರ್ ಗೋವಿಂದರಾಜು, ಪಿಎಸ್‌ಐ ನವ್ಯಾ ಮತ್ತು ಸಿಬ್ಬಂದಿ ಸ್ಥಳಕ್ಕೆ ಹೋಗಿ ತಪಾಸಣೆ ಮಾಡಿದಾಗ ಗಾಂಜಾ ಇರುವುದು ಪತ್ತೆಯಾಗಿದೆ. ಆರೋಪಿಯನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂ ಮಹಾದೇವಪ್ಪ, …

Read More »

ಮಣಿಪಾಲ : ಬಿಬಿಎ ವಿದ್ಯಾರ್ಥಿ ಆತ್ಮಹತ್ಯೆ!

ಮಣಿಪಾಲದ ಸ್ಕೂಲ್ ಆಫ್ ಕಾಮರ್ಸ್ ಎಕೊನೋಮಿಕ್ ಅಕಾಡೆಮಿ ವಿದ್ಯಾರ್ಥಿ ಯೊಬ್ಬ ಅನುತ್ತೀರ್ಣಗೊಂಡ ಚಿಂತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.ಮೊದಲ ವರ್ಷದ ಸೆಕೆಂಡ್ ಸೆಮಿಸ್ಟರ್‌ನಲ್ಲಿ 4 ವಿಷಯ ಗಳಲ್ಲಿ ಅನುತ್ತೀರ್ಣಗೊಂಡ ವಿಚಾರದಲ್ಲಿ ಮನನೊಂದು ಮೇ 12ರಂದು ರಾತ್ರಿಯಿಂದ ಮೇ 18ರ ಬೆಳಗಿನ ಮಧ್ಯಾವಧಿಯಲ್ಲಿ ಹಾಸ್ಟೆಲ್ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತದೇಹವು ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Read More »

ರಾಯಚೂರು: ಸಿಡಿಲು ಬಡಿದು ಕುರಿಗಾಹಿ, ಎತ್ತು ಸಾವು!

ಜಿಲ್ಲೆಯ ವಿವಿಧೆಡೆ ಭಾನುವಾರ ತಡ ರಾತ್ರಿ ಹಾಗೂ ಸೋಮವಾರ ಸಂಜೆ ಸಾಧಾರಣ ಮಳೆಯಾಗಿದೆ. ಭಾನುವಾರ ರಾತ್ರಿ ಲಿಂಗಸುಗೂರು ತಾಲ್ಲೂಕಿನ ಜಾಂತಾಪೂರ ಗ್ರಾಮದಲ್ಲಿ ಭಾನುವಾರ ರಾತ್ರಿ ಸಿಡಿಲು ಬಡಿದು ಅಮರಗುಂಡಪ್ಪ ತಿಪ್ಪಣ್ಣ ಅವರ ಎತ್ತು ಸಾವನ್ನಪ್ಪಿದೆ.ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಹೊರವಲಯದಲ್ಲಿ ಸೋಮವಾರ ಸಿಡಿಲು ಬಡಿದು ಕುರಿಗಾಹಿ ಹನುಮಗೌಡ ನಾಯಕ (16) ಸ್ಥಳದಲ್ಲೇ ಮೃತಪಟ್ಟಿದ್ದಾನೆ

Read More »

ಚಿಕ್ಕಮಗಳೂರು: ನಾಯಿಗಳ ದಾಳಿಗೆ ಜಿಂಕೆ ಸಾವು!

ಮೂಗ್ತಿಹಳ್ಳಿ ಬಳಿ ಸೋಮವಾರ ಬೆಳಿಗ್ಗೆ ಕಾಣಿಸಿಕೊಂಡ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಾಡಿಸಿದ್ದವು. ಈ ವೇಳೆ ತಂತಿ ಬೇಲಿ ದಾಟುವ ಪ್ರಯತ್ನದಲ್ಲಿ ಗಾಯಗೊಂಡಿತ್ತು.ನಾಯಿಗಳ ದಾಳಿಯಿಂದ ನಿತ್ರಾಣಗೊಂಡಿದ್ದ ಜಿಂಕೆ ರಕ್ಷಿಸಲು ಸ್ಥಳೀಯರು ನಡೆಸಿದ ಪ್ರಯತ್ನದ ನಡುವೆಯೂ ಮೃತಪಟ್ಟಿದೆ.ಸ್ಥಳೀಯರು ನಾಯಿಗಳನ್ನು ಓಡಿಸಿ ಜಿಂಕೆಯನ್ನು ಹಿಡಿದು ರಕ್ಷಣೆ ಮಾಡಲು ಪ್ರಯತ್ನಿಸಿದರು.ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಅಧಿಕಾರಿಗಳು ಜಿಂಕೆಯನ್ನು ಪಶು ವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ದರು. ನಾಯಿಗಳ ದಾಳಿಯಿಂದ ಗಾಬರಿಗೊಂಡಿದ್ದ ಜಿಂಕೆ ಆಘಾತಕ್ಕೆ ಒಳಗಾಗಿತ್ತು. …

Read More »