Breaking News

Breaking News

ಕರ್ನೂಲ್: ಬಳಿ ಕಾರು ಅಪಘಾತ, ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮೂವರು ಯುವಕರ ಸಾವು!

ಆಂಧ್ರಪ್ರದೇಶ ಪ್ರವಾಸಕ್ಕೆ ಹೋಗಿದ್ದ‌ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆಂಕೆರೆ ಗ್ರಾಮದ ನವೀನ್, ಸಂತೋಷ್, ಲೋಕೇಶ್ ಭಾನುವಾರ ರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.ಮಂತ್ರಾಲಯದ ನಂತರ ಶ್ರೀಶೈಲಕ್ಕೆ ಹೋಗುವ ವೇಳೆ ಕರ್ನೂಲ್ ಬಳಿ ಕಾರು ರಸ್ತೆ ವಿಭಜಕ್ಕೆ ಡಿಕ್ಕಿಯಾಗಿದೆ.ತೀವ್ರವಾಗಿ ಗಾಯಗೊಂಡಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಉಳಿದವರಿಗೆ ಗಾಯಗಳಾಗಿವೆ.

Read More »

ಬೆಂಗಳೂರು : ಕಲ್ಯಾಣ ಮಂಟಪದಲ್ಲಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ!

ನೆಲಮಂಗಲ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆ ಸಮಾರಂಭದ ವೇಳೆ ಕದ್ದಿದ್ದ ಚಿನ್ನಾಭರಣ ಪ್ರಕರಣದಲ್ಲಿ ದಾವಣಗೆರೆ ಮೂಲದ ಕಿರಣ್ ಅಲಿಯಾಸ್ ಚೌಲ್ಟ್ರಿ ಕಿರಣ್ (25) ಎಂಬಾತನನ್ನು ನೆಲಮಂಗಲ ಟೌನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಪೊಲೀಸರು ಮಂಟಪದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಆರೋಪಿ ದಾವಣಗೆರೆಯ ಮನೆಗೆ ದಾಳಿ ನಡೆಸಿ ಬಂಧಿಸಿದ್ದಾರೆ. ಪ್ರಕರಣವನ್ನು ನಯನ ಅವರ ತಂದೆ ವೆಂಕಟೇಶ್ ಅವರು ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದರು.ತನಿಖೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ಹೊರಬರುವ ನಿರೀಕ್ಷೆಯಿದೆ. ಪೊಲೀಸರು …

Read More »

ಉತ್ತರಪ್ರದೇಶ: ಹೆಂಡತಿಯನ್ನು ತಲೆಕೆಳಗಾಗಿ ನೇತುಹಾಕಿದ ಕ್ರೂರಿ ಪತಿ!

ಉತ್ತರ ಪ್ರದೇಶದ ಬರೇಲಿಯಿಂದ ಅಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿ ಕ್ರೂರ ಗಂಡನೊಬ್ಬ ತನ್ನ ಹೆಂಡತಿಯನ್ನು ಮನೆಯ ಟೆರೇಸ್‌ನಿಂದ ತಲೆಕೆಳಗಾಗಿ ನೇತುಹಾಕಿ ಐದು ನಿಮಿಷಗಳ ಕಾಲ ಹಾಗೆಯೇ ಬಿಟ್ಟಿದ್ದಾನೆ.ಮಹಿಳೆಯ ಕಿರುಚಾಟ ಕೇಳಿ ನೆರೆಹೊರೆಯವರು ಧಾವಿಸಿ ಬಂದ ನಂತರ ಆಕೆಯನ್ನು ರಕ್ಷಿಸಲಾಗಿದೆ. ಈ ಸಂಬಂಧ ಪೊಲೀಸರು ಪತಿ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ಸಂತ್ರಸ್ತೆಯ ಸಹೋದರ ರಘುನಾಥ್ ಸಿಂಗ್ ಅವರು ತಮ್ಮ ಭಾವನ ವಿರುದ್ಧ ದೂರು ದಾಖಲಿಸಿದ್ದಾರೆ. ಕೆಲವು ವರದಿಗಳ ಪ್ರಕಾರ, …

Read More »

ಧರ್ಮಸ್ಥಳ: ಏರೋಸ್ಪೇಸ್ ನ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು!

ಕಳೆದ ಆರು ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಕಾರ್ಯನಿರ್ವಹಿಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಯವತಿಯೊಬ್ಬಳು ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಅಷ್ಟೇ ಅಲ್ಲದೆ, ಉದ್ಯೋಗಕ್ಕಾಗಿ ಜಪಾನ್ ಗೆ ತೆರಳಲು ಪ್ಲಾನ್ ಮಾಡಿದ್ದಳು. ಹೀಗಾಗಿ ಕಾಲೇಜಿನಲ್ಲಿ ಸರ್ಟಿಫಿಕೇಟ್ ತೆಗೆದುಕೊಂಡು ಮನೆಗೆ ಕರೆ ಮಾಡಿದ್ದರು, ಇದಾದ ಬಳಿಕ ಆಕಾಂಕ್ಷಾ ಯಾರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇದೀಗ ಯುವತಿ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ.ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಲಂಧರ್ ಪೊಲೀಸರು ಪೋಷಕರಿಗೆ ಮಾಹಿತಿ ನೀಡಿದ್ದು, …

Read More »

ದಕ್ಷಿಣಕನ್ನಡ: ‘KSRTC’ ಬಸ್ ಲಾರಿ ಮುಖಾಮುಖಿ ಡಿಕ್ಕಿ, ಚಾಲಕರು ಸೇರಿ ನಾಲ್ವರಿಗೆ ಗಂಭೀರ ಗಾಯ!

ದಕ್ಷಿಣಕನ್ನಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಸರ್ಕಾರಿ ಬಸ್ ಹಾಗು ಲಾರಿ ಪರಸ್ಪರ ಡಿಕ್ಕಿಯಾಗಿ ಇಬ್ಬರು ಚಾಲಕರು ಸೇರಿದಂತೆ ನಾಲ್ವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಗುಂಡ್ಯದಲ್ಲಿ ನಡೆದಿದೆ.ತಿರುವಿನಲ್ಲಿ ಎದುರುನಿಂದ ವೇಗವಾಗಿ ಲಾರಿ ಬರುತ್ತಿತ್ತು ಈ ವೇಳೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಬಸಕ್ಕೆ ಕೆಎಸ್‌ಆರ್ಟಿಸಿ ಬಸ್ ಹಾಗು ಲಾರಿಯ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಲಾರಿ ಮತ್ತು ಬಸ್ ಚಾಲಕರ …

Read More »

ಮೂಲ್ಕಿ :ಲಾರಿ ಢಿಕ್ಕಿ ಬೈಕ್‌ನ ಸಹಸವಾರ ಸಾವು!

ಹಳೆಯಂಗಡಿ ಪಕ್ಷಿಕೆರೆ ಜಂಕ್ಷನ್‌ ಬಳಿ ರವಿವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಕಂಟೈನರ್‌ ಲಾರಿಯೊಂದು ಬೈಕ್‌ಗೆ ಢಿಕ್ಕಿ ಹೊಡೆದು ಸಹಸವಾರ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಸವಾರ ಗಾಯಗೊಂಡಿನದ್ದಾರೆ.ಗಂಭೀರವಾಗಿ ಗಾಯಗೊಂಡಿದ್ದ ಬೈಕ್‌ ಸವಾರರಿಬ್ಬರನ್ನೂ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರು. ಆದರೆ ಹಿಂಬದಿ ಸವಾರ ಸುಗಾಂದ್‌ (21) ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದರು. ಬೈಕ್‌ ಚಾಲನೆ ಮಾಡುತ್ತಿದ್ದ ಇನ್ಸಾಫ್‌ (21) ಚಿಕಿತ್ಸೆ ಪಡೆಯುತ್ತಿದ್ದಾರೆ.ಇಬ್ಬರೂ ಮೂಲ್ಕಿ ಸೈಂಟ್‌ ಆಯನ್ಸ್‌ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು ಕೇರಳ ಮೂಲದವರಾಗಿದ್ದಾರೆ. …

Read More »

ಹೈದರಾಬಾದ್ ನ ಚಾರ್ಮಿನಾರ್ ಬಳಿ ಅಗ್ನಿ ದುರಂತ: 8 ಮಕ್ಕಳು ಸೇರಿ 17 ಮಂದಿ ಸಾವು, ಪ್ರಧಾನಿ ಪರಿಹಾರ ಘೋಷಣೆ.

ಐತಿಹಾಸಿಕ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿರುವ ಆಭರಣ ಅಂಗಡಿಯಲ್ಲಿ ಇಂದು ಭಾನುವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದ್ದು, ಅವರಲ್ಲಿ 8 ಮಕ್ಕಳು ಸೇರಿದ್ದಾರೆ. ಗಾಯಗೊಂಡವರಲ್ಲಿ ಹಲವಾರು ಮಕ್ಕಳು ಸೇರಿದ್ದಾರೆ. ಎಲ್ಲರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ನಾನು ಅಧಿಕಾರಿಗಳಿಗೆ …

Read More »

ಆಂಧ್ರಪ್ರದೇಶ: ಕಾರಿನೊಳಗೆ ಉಸಿರುಗಟ್ಟಿ ನಾಲ್ವರು ಮಕ್ಕಳ ದಾರುಣ ಸಾವು!

ಆಂಧ್ರಪ್ರದೇಶದ ವಿಜಯನಗರಂ ಗ್ರಾಮೀಣ ಮಂಡಲದ ದ್ವಾರಪುಡಿ ಗ್ರಾಮದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಸಿಲುಕಿ ಮೂವರು ಬಾಲಕಿಯರು ಸೇರಿದಂತೆ ನಾಲ್ವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಡೆದಿದೆ.ಎಷ್ಟು ಹೊತ್ತಾದರೂ ಮಕ್ಕಳು ಬಾರದ ಕಾರಣ ಪೋಷಕರು ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೂರು ಗಂಟೆಗಳಿಗೂ ಹೆಚ್ಚು ಕಾಲ ಹುಡುಕಿದ ನಂತರ ಕಾರಿನಲ್ಲಿ ಸಿಲುಕಿರುವುದು ಪತ್ತೆಯಾಗಿದೆ.ಬಳಿಕ ಕಾರಿನ ಕಿಟಕಿಗಳನ್ನು ಒಡೆದು ಮಕ್ಕಳನ್ನು ಹೊರಗೆ ತಂದಿದ್ದಾರೆ. ಕೂಡಲೇ ವಿಜಯನಗರದ ಸರ್ಕಾರಿ ಜನರಲ್ ಆಸ್ಪತ್ರೆಗೆ …

Read More »

ಆಂಧ್ರಪ್ರದೇಶ: ಬಾವಿಗೆ ಬಿದ್ದ ಕಾರು, ಕರ್ನಾಟಕದ ಮೂವರು ದುರ್ಮಣ!!

ಅಡುಗೆ ಕೆಲಸಕ್ಕೆಂದು ಕಾರಿನಲ್ಲಿ ಹೋಗುತ್ತಿದ್ದರು. ಆ ವೇಳೆ ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿಯ ಬಾವಿಗೆ ಕಾರು ಬಿದ್ದಿದೆ. ಪಿಲೇರು ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ಸಂಭವಿಸಿದೆ.ಅಡುಗೆ ಕೆಲಸಕ್ಕಾಗಿ ಕಾರಿನಲ್ಲಿ ಒಟ್ಟು ಐವರು ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಚಿಂತಾಮಣಿ ಮೂಲಕ ಐವರು ಮೃತಪಟ್ಟಿದ್ದಾರೆ. ಇನ್ನುಳಿದ ಇಬ್ಬರು ಬಚಾವ್ ಆಗಿದ್ದಾರೆ.ಬಾವಿ ಆಳವಾಗಿದ್ದರಿಂದ ಕಾರೊನೊಳಗೆ ಮೂವರು ಮೃತಪಟ್ಟಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ …

Read More »

ಮದುವೆಯಾದ ಒಂದೇ ವಾರದಲ್ಲಿ ಪತ್ನಿಯನ್ನು ಬರ್ಬರವಾಗಿ ಕೊಂದ ಗಂಡ!!

ಮದುವೆಯಾದ ಒಂದೇ ವಾರದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯ ಅಮೌಲಿ ಗ್ರಾಮದಲ್ಲಿ ನಡೆದಿದೆ.ಮದುವೆಯಾದ ಕೂಡಲೇ ಇಬ್ಬರ ನಡುವೆ ಜಗಳ ಆರಂಭವಾಯಿತು. ಒಂದು ದಿನ ರಾತ್ರಿ ಆರತಿ, ಆತನೊಂದಿಗೆ ಲೈಂಗಿಕ ಸಂಬಂಧ ಹೊಂದಲು ನಿರಾಕರಿಸಿದ್ದಕ್ಕೆ ಆಕೆಯ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಈ ವಿಚಾರವನ್ನು ನರೆಹೊರೆಯವರು ತಿಳಿಸಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಕುಟುಂಬ ಸದಸ್ಯರ ದೂರಿನ ಆಧಾರದ ಮೇಲೆ, ಪೊಲೀಸರು ಆರೋಪಿ ಪತಿಯ …

Read More »