BigTv News
May 14, 2025
Breaking News, Crime
ನಾಗಸಮುದ್ರ ಗ್ರಾಮದ ಯುವತಿಯೊಬ್ಬರು ಪ್ರೀತಿಸಿದ ಯುವಕ ಮದುವೆಯಾಗಲು ನಿರಾಕರಿಸಿದ ಎಂಬ ಕಾರಣಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ರಾಂಪುರ ಗ್ರಾಮದ ಭಾರ್ಗವ ರೆಡ್ಡಿ ಪರಿಚಯವಾಗಿತ್ತು. ನಂತರ ಇಬ್ಬರೂ ಪ್ರೀತಿಸುತ್ತಿದ್ದರು. ಬಳಿಕ ಭಾರ್ಗವರೆಡ್ಡಿ, ‘ನಿಮ್ಮದು ನಮ್ಮದು ಬೇರೆ ಬೇರೆ ಜಾತಿ. ಮದುವೆಯಾದಲ್ಲಿ ಸಮಸ್ಯೆಯಾಗುತ್ತದೆ’ ಎಂದು ನಿರಾಕರಿಸಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪಾಲಕರು ದೂರಿನಲ್ಲಿ ತಿಳಿಸಿದ್ದಾರೆ.ಭಾರ್ಗವರೆಡ್ಡಿ ಮತ್ತು ಪಾಲಕರ ವಿರುದ್ಧ ಕ್ರಮ ಕೊಳ್ಳಬೇಕು ಎಂದು ಆಗ್ರಹಿಸಿ ಅಂಜಲಿ ಸಂಬಂಧಿಕರು ಕೆಲಕಾಲ ರಾಂಪುರ ಆಸ್ಪತ್ರೆ …
Read More »
BigTv News
May 14, 2025
Breaking News, Crime
ಮಹಿಳೆಯೊಬ್ಬರು ತನ್ನ ಪ್ರಿಯಕರ ಮತ್ತು ಇತರ ಇಬ್ಬರ ಸಹಾಯದಿಂದ ತನ್ನ ಮಾಜಿ ಸೇನಾ ಸೈನಿಕ ಪತಿಯನ್ನು ಆರು ತುಂಡುಗಳಾಗಿ ಕತ್ತರಿಸಿ ಹತ್ಯೆ ಮಾಡಿದ್ದಾಳೆ.ನಂತರ, ಕೈಗಳು ಮತ್ತು ಕಾಲುಗಳನ್ನು ಘಟನಾ ಸ್ಥಳದಿಂದ ಸುಮಾರು 38 ಕಿಲೋಮೀಟರ್ ದೂರದಲ್ಲಿರುವ ಖಾರಿದ್ ಗ್ರಾಮದ ತೋಟದಲ್ಲಿ ಎಸೆಯಲಾಯಿತು.ಮೇ 9 ರ ರಾತ್ರಿ ಕೊಲೆ ಮಾಡಿದ ನಂತರ, ಪತ್ನಿ ಮೇ 10 ರಂದು ತನ್ನ ಪತಿಯ ನಾಪತ್ತೆ ದೂರು ದಾಖಲಿಸಿದ್ದರು.ಸೋಮವಾರ ತಡರಾತ್ರಿ ಪೊಲೀಸರು ಆರೋಪಿ ಪ್ರೇಮಿಯನ್ನು ಎನ್‌ಕೌಂಟರ್‌ನಲ್ಲಿ …
Read More »
BigTv News
May 14, 2025
Breaking News
ಕಾರ್ಮಿಕರನ್ನು ಊಟಕ್ಕೆ ಕರೆದೊಯ್ಯುತ್ತಿದ್ದ ಬಸ್ ಬೇಗೂರು ಜಂಕ್ಷನ್ ಬಳಿ ಪಲ್ಟಿಯಾಗಿ 9 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.ಒಬ್ಬರ ಸ್ಥಿತಿ ಗಂಭೀರವಾಗಿದೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು. ರಸ್ತೆ ವಿಭಜಕಕ್ಕೆ ಬಸ್ ಡಿಕ್ಕಿಯಾಗಿ ಪಲ್ಟಿಯಾಗಿದೆ. ಕ್ರೇನ್ ತರಿಸಿ ಬಸ್ ಅನ್ನು ಮೇಲಕ್ಕೆ ಎತ್ತಲಾಯಿತು ಎಂದು ಸಂಚಾರ ಪೊಲೀಸರು ಹೇಳಿದರು.ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
May 14, 2025
Breaking News
ಗದಗ ಜಿಲ್ಲೆಯಲ್ಲೂ ಸಹ ಮಳೆ ಆರ್ಭಟ ಜೋರಾಗಿದ್ದು, ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ವ್ಯಕ್ತಿಯೋರ್ವ ಕೊಚ್ಚಿ ಹೋಗಿದ್ದಾರೆ. ಗದಗ ತಾಲೂಕಿನ ಬೆನಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 39 ವರ್ಷದ ಶರಣಪ್ಪ ಹಡಗಲಿ ಎಂಬುವವರು ಬೈಕ್‌ನಲ್ಲಿ ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ನೀರು ಪಾಲಾಗಿದ್ದಾರೆ.ಬೆನಕೊಪ್ಪ ಗ್ರಾಮದಲ್ಲೇ ಇದ್ದ ತನ್ನ ಪತ್ನಿಯ ಮನೆಗೆ ತೆರಳುತ್ತಿದ್ದ ಶರಣಪ್ಪ ಹಡಗಲಿ ನೀರಿನಿಲ್ಲಿ ಕೊಚ್ಚಿ ಹೋದ ಬಳಿಕ ಸ್ಥಳಕ್ಕಾಗಮಿಸಿದ ಶೋಧ ಆರಂಭಿಸಿದ್ದರು. ಗದಗ ಗ್ರಾಮಾಂತರ ಠಾಣೆಯಲ್ಲಿ …
Read More »
BigTv News
May 14, 2025
Breaking News
ಅಂಬೇಡ್ಕರ್ ನಗರದ ನಿವಾಸಿ ಕಾಟೆಪ್ಪ ದುರಗಪ್ಪ ಶಿರಹಟ್ಟಿ (52) ಅವರು ಮಂಗಳವಾರ ಸಂಜೆ ಚರಂಡಿಯಲ್ಲಿ ಬಿದ್ದು ಕೊಚ್ಚಿಕೊಂಡು ಹೋಗಿದ್ದಾರೆ.ಧಾರಾಕಾರ ಮಳೆಯಿಂದಾಗಿ ಬೃಹತ್ ಚರಂಡಿಯಲ್ಲಿ ನೀರು ಹರಿಯುತ್ತಿತ್ತು. ಕಾಟೆಪ್ಪ ಅವರು ಚರಂಡಿ ಮೇಲೆ ನಡೆದುಕೊಂಡು ಹೊರಟಾಗ ಆಯತಪ್ಪಿ ಬಿದ್ದರು.ಹತ್ತಿರದಲ್ಲಿದ್ದವರು ಅವರನ್ನು ಕಾಪಾಡಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಕೆಲವೇ ನಿಮಿಷಗಳಲ್ಲಿ ಕಾಟೆಪ್ಪ ದೂರ ತೇಲಿಕೊಂಡು ಹೋದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದರು. ಮಳೆಯ ಕಾರಣ ಕಾರ್ಯಾಚರಣೆ ಸ್ಥಗಿತಗೊಂಡಿದ್ದು, …
Read More »
BigTv News
May 14, 2025
Breaking News
ಕೊಂಡೋಜಿ ಗ್ರಾಮದ ಮಾವಿನ ತೋಟದಲ್ಲಿ ಕೆಲಸಕ್ಕಿದ್ದ ಗದಗ ಜಿಲ್ಲೆಯ ಬಸಾಪುರ ಗ್ರಾಮದ ಮರಿಯವ್ವ ನಾಯ್ಕರ (60) ಸೋಮವಾರ ಸಂಜೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸೋಮವಾರ ಸಂಜೆ ತಾಲ್ಲೂಕಿನ ಅಲ್ಲಲ್ಲಿ ಗಾಳಿ, ಗುಡುಗು ಸಮೇತ ಬಿರುಸಿನ ಮಳೆಯಾಗಿತ್ತು. ಮಂಗಳವಾರ ಮಧ್ಯಾಹ್ನ ಹಾನಗಲ್ ಪಟ್ಟಣದಲ್ಲಿ ಉತ್ತಮ ಮಳೆಯಾಗಿದೆ. ಒಂದು ತಾಸು ಸುರಿದ ಮಳೆಗೆ ಚರಂಡಿಗಳು ಮಳೆ ನೀರಿನಿಂದ ತುಂಬಿ ಹರಿದವು.
Read More »
BigTv News
May 14, 2025
Breaking News
ತಾಲ್ಲೂಕಿನ ಚಿಕ್ಕಾಂಶಿ ಗ್ರಾಮದ ಕೆರೆಯಲ್ಲಿ ಮುಳುಗಿ ಗ್ರಾಮದ ಇಬ್ಬರು ಯುವಕರು ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ಬಸವರಾಜ ಬಡಕಣ್ಣನವರ (38) ಮತ್ತು ಮಾಲತೇಶ ಕುರುಬರ (19) ಮೃತಪಟ್ಟವರು. ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.ಮೃತ ದೇಹಗಳ ಶೋಧ ಕಾರ್ಯಾಚರಣೆಯನ್ನು ಅಗ್ನಿಶಾಮಕ ಸಿಬ್ಬಂದಿ ಕೈಗೊಂಡಿದ್ದರು. ಮಾಲತೇಶ ಕುರುಬರ ಮೃತ ದೇಹ ಮಾತ್ರ ಸಿಕ್ಕಿದೆ. ಸಂಜೆಯ ತನಕ ನಡೆದ ಕಾರ್ಯಾಚರಣೆಯಲ್ಲಿ ಮತ್ತೊಂದು ಮೃತ ದೇಹದ …
Read More »
BigTv News
May 14, 2025
Breaking News
ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸದ್ದು, ಟೆಂಪೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಹೊಸಕೋಟೆಯ ಚಿಕ್ಕಹುಲ್ಲೂಅರಿನಲ್ಲಿ ಟೆಂಪೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡಿದ್ದಾರೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »
BigTv News
May 14, 2025
Breaking News
ಮೈಸೂರಿನಿಂದ ಗುಂಡ್ಲುಪೇಟೆ ಬಳಿಯ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುತಿದ್ದ ಕಾರಿನ ಮೇಲೆ ಟ್ಯಾಂಕರ್ ಲಾರಿ ಉರುಳಿ ಬಿದ್ದು ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟು, ಮಕ್ಕಳು ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.ಮೃತಪಟ್ಟಿರುವ ಕಾರಿನ ಚಾಲಕನ ಮೃತದೇಹವನ್ನು ನಂಜನಗೂಡಿನ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಆರು ಮಂದಿಯನ್ನು ಮೈಸೂರಿನ ಖಾಸಗಿ ಆಸ್ಪತ್ರೆಯ ತುರ್ತು ಘಟಕದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ನಂಜನಗೂಡಿನ ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ಸಿದ್ದರಾಜು, ಮಾದೇಶ್ …
Read More »
BigTv News
May 13, 2025
Breaking News
ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ ನಾಲ್ವರು ಉಗ್ರರ ಪೈಕಿ ಮೂವರನ್ನು ಭಾರತೀಯ ಸೇನೆ ಕೊಂದು ಹಾಕಿದೆ. ಇದನ್ನು ಸ್ವತಃ ಭಾರತೀಯ ಸೇನೆ ಖಚಿತಪಡಿಸಿದೆ.ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಅಡಗಿದ್ದ ಉಗ್ರರನ್ನು ಭಾರತೀಯ ಸೇನೆ ಹುಡುಕಿ ನುಗ್ಗಿ ಕೊಂದಿದೆ.ಇಬ್ಬರ ಹೆಸರುಗಳನ್ನು ಸೇನೆ ಬಹಿರಂಗಪಡಿಸಿದೆ.ಹತರಾದ ಉಗ್ರರ ಪೈಕಿ ಶಾಹಿದ್, ಅದ್ನಾನ್ ಶಫಿ ಎಂಬ ಇಬ್ಬರು ಉಗ್ರರ ಹೆಸರು ಬಹಿರಂಗವಾಗಿದೆ. ಇನ್ನೊಬ್ಬಾತನ ವಿವರ ಕಲೆ ಹಾಕಲಾಗುತ್ತಿದೆ. ಇದೀಗ ನಾಲ್ಕನೇ ಉಗ್ರನ ಮಾಹಿತಿಯನ್ನು ಸೇನೆ ಕಲೆ ಹಾಕಿದ್ದು …
Read More »