Breaking News

Breaking News

ಬಳ್ಳಾರಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿ ನಾಪತ್ತೆ, ಕಣ್ಣೀರಾದ ಪೋಷಕರು…

ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿಯೊಬ್ಬ 3 ದಿನಗಳಿಂದ ನಾಪತ್ತೆಯಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ವಡ್ಡು ಗ್ರಾಮದಲ್ಲಿ ನಡೆದಿದೆ. ಸುಶಾಂತ್ ವಡ್ಡು ಗ್ರಾಮದ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ. ಮೇ 2ರಂದು ಫಲಿತಾಂಶ ಪ್ರಕಟವಾಗಿದ್ದು, ವಿಜ್ಞಾನ ವಿಷಯದಲ್ಲಿ ಫೇಲ್ ಆಗಿದ್ದ. ಇದರಿಂದ ಮನನೊಂದು ಮನೆ ಬಿಟ್ಟು ಹೋಗಿದ್ದಾನೆ. ಕಳೆದು ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಪೋಷಕರು ಹುಡುಕಾಟ ನಡೆಸಿದ್ದಾರೆ. ಪೋಷಕರು ಕಣ್ಣೀರಿಡುತ್ತಿದ್ದು, ಮಗನ ಬಗ್ಗೆ ಯಾವುದೇ ಮಾಹಿತಿ ಸಿಕ್ಕರೂ ನೀಡಿ, …

Read More »

ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ಅಪಹರಣ!!

ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಗೃಹಿಣಿಯ ಕೊರಳಿನಿಂದ 45 ಗ್ರಾಂ. ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಪೋಲೋಸರು ಆರೋಪಿ ಯನ್ನು ಹುಡುಕುವ ಕಾರ್ಯಾಚರಣೆಯಲ್ಲಿದ್ದಾರೆ.

Read More »

ಚಲಿಸುತ್ತಿರುವಾಗಲೇ ಕಾರ್‌ ಬ್ಲಾಸ್ಟ್, ಚಾಲಕ ಸಜೀವ ದಹನ!!

ಕಾರ್‌ನಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಈ ಅವಘಡ ಸಂಭವಿಸಿದ್ದು, ಕೆಲವೇ ಸೆಕೆಂಡುಗಳಲ್ಲಿ ಕಾರು ಧಗಧಗಿಸಿದೆ.ಬೆಂಕಿಯ ಅಬ್ಬರ ಹೇಗಿತ್ತು ಎಂದರೆ, ಕಾರ್​ನಲ್ಲಿದ್ದ ವ್ಯಕ್ತಿಯನ್ನು ಹೊರಗೆಳೆಯೋಕೂ ಆಗಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿಯನ್ನು ನಂದಿಸಿದ್ದಾರೆ. ಅಷ್ಟೊತ್ತಿಗೆ ಕಾರಿನಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದ ಎಂದು ಪೊಲೀಸರು ತಿಳಿಸಿದ್ದಾರೆ

Read More »

ಬೆಳಗಾವಿ : ದನಗಳ ಮೇಯಿಸದ ವೃದ್ಧ ರೈತನ ಬಡಿದು ಕೊಂದ ಮಾಲೀಕ..!

ನಾಗನಗೌಡ ಗೌಡಪ್ಪ ಪಾಟೀಲ್ ಒಡೆತನದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಭೀಮಪ್ಪ, ಪಾಟೀಲ್ ಅವರ ಕೃಷಿ ಭೂಮಿಯಲ್ಲಿ ಕೆಲಸ ಮಾಡಿಕೊಂಡು, ಅವರ ಜಾನುವಾರುಗಳನ್ನು ಸಹ ನೋಡಿಕೊಳ್ಳುತ್ತಿದ್ದರು. ಅನಾರೋಗ್ಯದ ಕಾರಣ ಭೀಮಪ್ಪ ಅವರಿಗೆ ದನಗಳನ್ನು ನೋಡಿಕೊಳ್ಳಲು, ತನ್ನ ದೈನಂದಿನ ಕರ್ತವ್ಯಗಳನ್ನು ನಿರ್ವಹಿಸಲು ಸಾಧ್ಯವಾಗಿಲ್ಲ.ಮೇ 1ರ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಭೀಮಪ್ಪ ಅವರ ಆರೋಗ್ಯ ಹದಗೆಟ್ಟಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಮನೆಗೆ ಬಂದಿರುವ ಮಾಲೀಕ ನಾಗನಗೌಡ, ದನಗಳನ್ನು ಮೇಯಿಸಲು …

Read More »

ರಾಮನಗರ: ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ದುರ್ಮರಣ!!

ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅಮ್ಮಳ್ಳಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮೃತರು ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಿವಾಸಿಗಳು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಚಿರು ಎಂಬಾತನ ಸ್ಥಿತಿ ಗಂಭೀರವಾಗಿದ್ದು ಆತನನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ಮಧು, ದೀಪು ಮತ್ತು ಅಭಿ ಎಂಬವರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಕಬ್ಬಾಳು …

Read More »

ಬೆಂಗಳೂರು :ಕ್ಷುಲ್ಲಕ ಕಾರಣಕ್ಕೆ ಸುತ್ತಿಗೆಯಿಂದ ಹೊಡೆದು ಹೆಂಡತಿಯ ಕೊಲೆ

ಗಂಡನೊಬ್ಬ ಕ್ಷುಲ್ಲಕ ಕಾರಣಕ್ಕೆ ಹೆಂಡತಿಯನ್ನು ಕೊಲೆ ಮಾಡಿದ್ದಾನೆ. ದಂಪತಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ವಾಗ್ಯುದ್ಧ ಆರಂಭವಾಗಿದ್ದು, ಅದು ಗಲಾಟೆಗೆ ತಿರುಗಿದೆ.ಆಗ ಗಂಡ ಸುತ್ತಿಗೆಯಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹೆಮ್ಮಿಗೆಪುರದ ಗಾಣಪ್ಪ ಲೇಔಟ್‌ನಲ್ಲಿ ನಡೆದಿದೆ.ಕೊಲೆಯಾದ ಮಹಿಳೆಯನ್ನು ಭಾಗ್ಯ ಎಂದು ಗುರುತಿಸಲಾಗಿದ್ದು, ಪತಿ ಶ್ರೀ ರಾಮ ಕೊಲೆ ಆರೋಪಿಯಾಗಿದ್ದಾನೆ. ಭಾಗ್ಯ ಹಾಗು ಶ್ರೀ ರಾಮನ ನಡುವೆ ಯಾವಾಗಲೂ ಜಗಳ ನಡೆಯುತ್ತಿತ್ತು ಎಂದು ತಿಳಿದುಬಂದಿದೆ. ಘಟನೆಯ ಸ್ಥಳಕ್ಕೆ ತಲಘಟ್ಟಪುರ …

Read More »

ಮೈಸೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ.!

ಮಾರಕಾಸ್ತ್ರಗಳಿಂದ ಕೊಚ್ಚಿ ಕಾರ್ತಿಕ್ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಯಾದ ಕಾರ್ತಿಕ್ ಕೊಲೆಯಾಗಿದ್ದು, ವೈಯಕ್ತಿಕ ದ್ವೇಷದ ಹಿನ್ನೆಲೆ ಈ ಕೊಲೆ ನಡೆದಿದೆ. ಈ ಸಂಬಂಧ ವರುಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More »

ಧರ್ಮಸ್ಥಳ : ಮನೆ ಮುಂದೆ ಆಟವಾಡುತ್ತಿದ್ದ ಬಾಲಕ ಹೃದಯಾಘಾತದಿಂದ ಸಾವು!!

ಮನೆಯ ಮುಂದೆ ಆಟವಾಡುತ್ತಿದ್ದ 10ನೇ ತರಗತಿ ಬಾಲಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಧರ್ಮಸ್ಥಳದ ಜೋಡುಸ್ಥಾನದಲ್ಲಿ ನಡೆದಿದೆ.ಮೃತ ಬಾಲಕನನ್ನು ಪ್ರಥಮ್ (16) ಎಂದು ಗುರುತಿಸಲಾಗಿದೆ. ಶಾಲೆಗೆ ರಜೆಯಿದ್ದ ಹಿನ್ನಲೆ ಪ್ರಥಮ್ ತನ್ನ ಪಾಡಿಗೆ ತಾನು ಮನೆಯ ಮುಂದೆ ಮಧ್ಯಾಹ್ನದ ವೇಳೆ ಆಟವಾಡುತ್ತಿದ್ದ. ಕೂಡಲೇ ಬಾಲಕನನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ, ಫ‌ಲಕಾರಿಯಾಗಿಲ್ಲ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ವೇಶ್ಯಾವಾಟಿಕೆ ಮನೆಯೊಂದರ ಮೇಲೆ ಪೊಲೀಸರ ದಾಳಿ!!

ನಗರದ ಅಂಜನಿ ಬಡಾವಣೆಯ ಮನೆಯೊಂದರ ಮೇಲೆ ನಗರಠಾಣೆ ಪೊಲೀಸರು ಶುಕ್ರವಾರ ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿ ಒಟ್ಟು 5 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಅಂಜನಿ ಬಡಾವಣೆಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಪಿ.ಮುರಳೀಧರ್ ನೇತೃತ್ವದಲ್ಲಿ ನಗರಠಾಣೆ ಪೊಲೀಸರು ದಾಳಿ ನಡೆಸಿದರು.ಮಹಿಳಾ ಮತ್ತು ಪುರುಷ ಪೊಲೀಸ್ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.

Read More »

ಅಜಮ್ಮಘಡ: ಮಾಜಿ ಪ್ರೇಯಸಿಯ ಮೇಲೆ ಆಯಸಿಡ್​ ಎರಚಿದ ಪಾಗಲ್ ಪ್ರೇಮಿ!!

ರೀಮಾ ಮತ್ತು ರಾಮ್​ ಜನಮ್​ ಸಿಂಗ ಪಟೇಲ್​ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿ ದೂರಾಗಿದ್ದರು. ಯುವತಿ ರೀಮಾಗೆ ಇತ್ತೀಚೆಗೆ ಬೇರೊಬ್ಬ ಯುವಕನ ಜೊತೆ ಮದುವೆ ನಿಶ್ಚಯವಾಗಿತ್ತು. ಇದೇ ಮೇ.27ಕ್ಕೆ ಯುವತಿಯ ಮದುವೆಗೆ ಸಿದ್ದತೆ ನಡೆಸಬೇಕಿತ್ತು. ಆದರೆ ಇಂದು ಆಕೆಯ ಮಾಜಿ ಪ್ರಿಯತಮ ಆಕೆಯ ಮೇಲೆ ಆಯಸಿಡ್​ ದಾಳಿ ಮಾಡಿದ್ದಾನೆ.ನನಗೆ ಸಿಗದ ನೀನು ಇನ್ಯಾರಿಗೂ ಸಿಗಬಾರದು’ ಎಂದು ಹೇಳಿ ಆಕೆಯ ಮೇಲೆ ಆಯಸಿಡ್ ಎರಚಿ ಪರಾರಿಯಾಗಿದ್ದಾನೆ. ಆಯಸಿಡ್​ …

Read More »