Breaking News

Breaking News

ಮೈಸೂರು: ಕಾರು ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ!!

ಬೈಕ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೋರ್ವ ಗಂಭೀರ ಗಾಯಗೊಂಡಿರುವ ಪ್ರಕರಣ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಳಲೆ ಗೇಟ್ ಬಳಿ ನಡೆದಿದೆ. ನಂಜನಗೂಡು ತಾಲ್ಲೂಕಿನ ಹೆಮ್ಮರಗಾಲ ಗ್ರಾಮದ ಚಿನ್ನಸ್ವಾಮಪ್ಪ (55) ಮೃತಪಟ್ಟಿದ್ದು, ಹೆಮ್ಮರಗಾಲ ಗ್ರಾಮದ ರಾಮೇಗೌಡ (55) ಎಂಬವರಿಗೆ ಗಂಭೀರ ಗಾಯಗಳಾಗಿವೆ.ಅಪಘಾತದ ಪರಿಣಾಮ ಬೈಕ್ ಸವಾರ ಚಿನ್ನಸ್ವಾಮಪ್ಪ ಸ್ಥಳದಲ್ಲಿಯೇ ಸಾವಿಗೀಡಾಗಿದ್ದರೆ. ರಾಮೇಗೌಡಗೆ ಗಂಭೀರ ಗಾಯವಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ …

Read More »

ಪುಣೆ :ಹಿಂದೂ ದೇಗುಲ ಒಳಗೆ ಪ್ಯಾಂಟ್ ಬಿಚ್ಚಿ ಅಪವಿತ್ರ,ಆರೋಪಿ & ತಂದೆ ಬಂಧನ!!

ದೇವನಸ್ಥಾನದ ಒಳಗೆ ನುಗ್ಗಿ ಚಡ್ಡಿ ಬಿಚ್ಚಿ ಮಾಡಬಾರದ್ದು ಮಾಡಿ, ಅನ್ನಪೂರ್ಣ ದೇವಿಯ ವಿಗ್ರಹವನ್ನು ಅಪವಿತ್ರಗೊಳಿಸಿದ್ದಾನೆ.ಆತನ ತಂದೆ ನೌಶಾದ್ ಶೇಖ್ ಸೇರಿ ಇಬ್ಬರನ್ನು ಬಂಧಿಸಿದ್ದನ್ನೂ ಪುಣೆ ಗ್ರಾಮೀಣ ಪೊಲೀಸರ ಹವೇಲಿ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಪೂಜಾರಿ ದೃಢಪಡಿಸಿದ್ದಾರೆ. ಪ್ರಕರಣದ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಸದ್ಯ ಸ್ಥಳದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿದೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಭದ್ರತಾ ಸಿಬ್ಬಂದಿ ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಅಗತ್ಯ ಎಚ್ಚರಿಕೆ ಕೈಗೊಳ್ಳಲಾಗಿದೆ …

Read More »

ಹುಬ್ಬಳ್ಳಿ – ಧಾರವಾಡದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ರೋಡ್‌ಗಳಿಗೆ ಡಾಂಬರು!

ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಪ್ಲಾಸ್ಟಿಕ್ ಬಳಸುವ ಮೂಲಕ ಏಕಬಳಕೆಯ ಪ್ಲಾಸ್ಟಿಕ್‌ನಿಂದ ಪರಿಸರಕ್ಕಾಗುವ ಹಾನಿಯನ್ನು ತಪ್ಪಿಸುವುದರ ಜೊತೆಗೆ, ತ್ಯಾಜ್ಯವನ್ನು ಸಂಪನ್ಮೂಲವನ್ನಾಗಿ ಕೂಡ ಬಳಕೆ ಮಾಡಿಕೊಳ್ಳಬಹುದೆಂದು ತೋರಿಸಿಕೊಟ್ಟಿದೆ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ. ಹೌದು ಹೊಸ ಮಾರ್ಗದ ಮೂಲಕ ರಸ್ತೆಗಳನ್ನು ಸುಸಜ್ಜಿತವಾಗಿಸುತ್ತಿದೆ. ಹುಬ್ಬಳ್ಳಿಯ ಲಿಂಗರಾಜನಗರದಲ್ಲಿ ಪಾಲಿಕೆಯ ವತಿಯಿಂದ ಕೈಗೆತ್ತಿರೊಂಡಿರುವ ಡಾಂಬಾರು ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಪ್ರಾಯೋಗಿಕವಾಗಿ ಬಳಸಲಾಗುತ್ತಿದೆ. ಹುಬ್ಬಳ್ಳಿ – ಧಾರವಾಡದ ಪ್ರತಿ ಮನೆ ಮನೆಯಿಂದ ದಿನ ನಿತ್ಯ …

Read More »

ಹಾವೇರಿ: ಬ್ಯಾಡಗಿ ಬಸ್ ನಿಲ್ದಾಣ ಗಲೀಜು, ಅಧಿಕಾರಿಗಳ ತರಾಟೆ!

ಬ್ಯಾಡಗಿ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಇಲ್ಲದಿರುವುದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬಸ್ ನಿಲ್ದಾಣ ಸ್ವಚ್ಛಗೊಳಿಸಬೇಕು. ನಿತ್ಯವೂ ಸ್ವಚ್ಛತೆ ಕಾಪಾಡಬೇಕು. ಬಸ್ ಕಾರ್ಯಾಚರಣೆ ಸುಧಾರಣೆ ಮಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾವೇರಿ ಕೇಂದ್ರ ಬಸ್ ನಿಲ್ದಾಣಕ್ಕೂ ಪ್ರಿಯಾಂಗ ಅವರು ಭೇಟಿ ನೀಡಿದರು. ಸಾರಿಗೆಗಳ ವ್ಯವಸ್ಥಿತ ಕಾರ್ಯಾಚರಣೆ ಬಗ್ಗೆ ಪರಿಶೀಲನೆ ನಡೆಸಿದರು. ಬಸ್‌ಗಳು ಹಾಗೂ ಪ್ರಯಾಣಿಕರ ದಟ್ಟಣೆಯನ್ನು ವ್ಯವಸ್ಥಿತವಾಗಿ ನಿಯಂತ್ರಿಸಲು ಅಧ್ಯಯನ ಮಾಡಿ ಪ್ರಸ್ತಾವ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Read More »

ಶತಾಯುಷಿ 128 ವರ್ಷದ ಯೋಗ ಗುರು ಸ್ವಾಮಿ ಶಿವಾನಂದ ನಿಧನ…

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶತಾಯುಷಿ ಯೋಗ ಗುರು ಸ್ವಾಮಿ ಶಿವಾನಂದ ಇಂದು ನಿಧನರಾಗಿದ್ದಾರೆ. ಅವರಿಗೆ 128 ರ್ಷ ವಯಸ್ಸಾಗಿತ್ತು. ಉತ್ತರ ಪ್ರದೇಶದ ವಾರಣಾಸಿಯಲ್ಲಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿರಂತರ ಯೋಗ ಮಾಡುತ್ತಲೇ ಅವರು ತಮ್ಮ ಆರೋಗ್ಯವನ್ನು ಬಹಳ ಕಾಳಜಿಯಿಂದ ರಕ್ಷಿಸಿಕೊಂಡು ಬಂದಿದ್ದರು. ಮೂರು ವರ್ಷದ ಹಿಂದೆ ಅವರಿಗೆ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ವಾರಾಣಾಸಿಯ ಬಿಹೆಚ್‌ಯು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ …

Read More »

ಟ್ರ್ಯಾಕ್ಟರ್‌ ಹಾಗೂ ಬೈಕ್‌ ನಡುವೆ ಅಪಘಾತ: ಸವಾರ ಸ್ಥಳದಲ್ಲೇ ಸಾವು!!

ಟ್ರ್ಯಾಕ್ಟರ್‌ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಅಸುನೀಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಸೋಸಲೆ ಗ್ರಾಮದ ಬಳಿ ನಡೆದಿದೆ. ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಬನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಬನ್ನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಗದೀಶ್‌ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾನೆ.

Read More »

ತಮಿಳುನಾಡು: ಆಕ್ರಮವಾಗಿ ಸಾಗಿಸುತ್ತಿದ್ದ 30 ಟನ್ ಪಡಿತರ ಅಕ್ಕಿ ವಶ!!

ಆಕ್ರಮವಾಗಿ ತಮಿಳುನಾಡಿಗೆ ಸಾಗಿಸುತ್ತಿದ್ದ 30 ಟನ್ ಪಡಿತರ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಪೊಲೀಸರ ಸಹಕಾರದೊಡನೆ ವಶಪಡಿಸಿಕೊಂಡಿದ್ದಾರೆ.ಗ್ರಾಮಾಂತರ ಪ್ರದೇಶಗಳಲ್ಲಿ ಅನ್ನಭಾಗ್ಯ ಫಲಾನುಭವಿಗಳಿಂದ ಕಡಿಮೆ ಬೆಲೆಗೆ ಅಕ್ಕಿ ಖರೀದಿಸಿ ಒಂದೆಡೆ ಸಂಗ್ರಹಿಸಿ ರೈಸ್ ಮಿಲ್‌ಗಳಿಗೆ ಹಾಗೂ ಹೊರ ರಾಜ್ಯಗಳಿಗೆ ಸಾಗಾಟ ಮಾಡುತ್ತಿರುವುದು ನಿರಂತರವಾಗಿದೆ.ದಾಳಿಯಲ್ಲಿ ಪಟ್ಟಣ ಠಾಣೆ ಪ್ರಭಾರ ಆರಕ್ಷಕ ಉಪನಿರೀಕ್ಷಕ ಸುಪ್ರೀತ್, ಎಎಸ್‌ಐ ಮಧುಕುಮಾರ್, ಮುಖ್ಯ ಪೇದೆ ಸೂರ್ಯಪ್ರಕಾಶ್, ಪೇದೆಗಳಾದ ಸಚಿನ್, ಅನಿಲ್, ಚಾಲಕ ನಂಜುಂಡಸ್ವಾಮಿ ಭಾಗವಹಿಸಿದ್ದರು. …

Read More »

ಚಿತ್ರದುರ್ಗ: ಕ್ಷುಲ್ಲಕ ಕಾರಣಕ್ಕೆ ಅಳಿಯನಿಗೆ ಚಾಕು ಹಾಕಿದ ಮಾವ!!

ಜಿಲ್ಲೆಯ ಹಿರಿಯೂರು ನಗರದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಅಳಿಯ ಧಾಮೋದರ್ ಗೆ ಮಾವ ಲೋಕನಾಥ್, ದಾಮೋದರ್ ಹೊಟ್ಟೆಗೆ ಎರಡು ಭಾರಿ ಚಾಕುವಿನಿಂದ ಇರಿದು ಪರಾರಿಯಾಗಿದ್ದ ಅದಾದ ಬಳಿಕ ಹಿರಿಯೂರು ಪೋಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದರು. ಇದೀಗ ನಗರ ಠಾಣೆ PSI ರಾಘವೇಂದ್ರ ಕಾಂಡಿಕೆ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಗಾಯಗೊಂಡ ಧಾಮೋದರ್‌ನನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಕು ಇರಿದು ತಲೆ ಮರೆಸಿಕೊಂಡಿದ್ದ …

Read More »

ಬೆಂಗಳೂರು :ವಿಕ್ಟೊರಿಯಾ ಆಸ್ಪತ್ರೆಯಿಂದ ವಿಚಾರಣಾಧೀನ ಕೈದಿ ಪರಾರಿ!!

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಿಂದ ವಿಚಾರಣಾಧೀನ ಕೈದಿ ಪರಾರಿಯಾಗಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ ನಿಂದ ಚಂದ್ರಶೇಖರ್ ಎನ್ನುವ ಕೈದಿ ಪರಾರಿಯಾಗಿದ್ದಾನೆ ಎಂದು ವಿಕ್ಟೋರಿಯಾ ಆಸ್ಪತ್ರೆಯ ಆಡಳಿತ ಮಂಡಳಿ ಮತ್ತು ವೈದಾಧಿಕಾರಿಗಳಿಂದ ಮಾಹಿತಿ ತಿಳಿದು ಬಂದಿದೆ. ಈ ಕುರಿತು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ. ಮುಂಜಾನೆ 5:30 ರ ಸುಮಾರಿಗೆ ವಿಚಾರಣಾಧೀನ ಕೈದಿ ಚಂದ್ರಶೇಖರ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಪರಪ್ಪನ ಅಗ್ರಹಾರನಿಂದ ವಿಚಾರಣಾ ಪೊಲೀಸರು ಆಸ್ಪತ್ರೆಗೆ ಕರೆತಂದಿದ್ದರು. …

Read More »

ಗುಂಡ್ಲುಪೇಟೆ: ಗಂಡಾನೆ ಕಳೆಬರ ಕೊಳೆತ ಸ್ಥಿತಿಯಲ್ಲಿ ಪತ್ತೆ!!

ಮೃತ ಗಂಡಾನೆಗೆ ಅಂದಾಜು 35 ರಿಂದ 40 ವರ್ಷ ವಯಸ್ಸಾಗಿದ್ದು, ಅರಣ್ಯ ಸಿಬ್ಬಂದಿ ಜಿ.ಎಸ್.ಬೆಟ್ಟ ವಲಯದ ಹಂಗಳ ಸೌತ್ ಶಾಖೆಯ, ಸೋಮನಾಥಪುರ ಸ್ಯಾಂಡಲ್ ರಿಸರ್ವ್‍ನ ಹಿರಿಕೆರೆ ಅರಣ್ಯ ಪ್ರದೇಶದ ಬಳಿ ಗಸ್ತು ತಿರುಗುತ್ತಿದ್ದಾಗ ಕಂಡು ಬಂದಿದೆ. ಮರಣೋತ್ತರ ಪರೀಕ್ಷೆ ನಂತರ ಮೃತ ಕಾಡಾನೆ ಕಳೆಬರವನ್ನು ಅರಣ್ಯ ಇಲಾಖೆ ನಿಯಮಾನುಸಾರ ವಿಲೇ ಮಾಡಲಾಯಿತು. ಈ ಸಂದರ್ಭ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪ್ರಭಾಕರನ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನವೀನ್ ಕುಮಾರ್, ಜಿ.ಎಸ್.ಬೆಟ್ಟ ವಲಯ …

Read More »