Breaking News

Breaking News

ವಕೀಲರೊಬ್ಬರ ಮೃತದೇಹ ಅನುಮಾನಾಸ್ಪದವಾಗಿ ಪತ್ತೆ! ಕೊಲೆ ಅನುಮಾನ ಆರೋಪ…

ಕೆಂಗೇರಿಯ ಎಸ್‌ಎಂವಿ ಲೇಔಟ್ ನಿವಾಸಿ ಜಗದೀಶ್ ಅವರ ಮೃತದೇಹ ಶುಕ್ರವಾರ ರಾತ್ರಿ ವೇಳೆ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಜಗದೀಶ್ ಅವರು ಮಂಡ್ಯ ಜಿಲ್ಲೆಯ ಮಳವಳ್ಳಿ ಮೂಲದವರಾಗಿದ್ದು, ನಗರದಲ್ಲಿ ವಕೀಲರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ ಎಂದು ಶಂಕಿಸಿ ಅವರ ಸೋದರ ಸಂಬಂಧಿ ಡಾ.ಪ್ರಭಂಜನ್ ಎಂಬುವರು ದೂರು ನೀಡಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೆಂಗೇರಿ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಂಗೇರಿಯ ನೈಸ್ …

Read More »

ಪುತ್ರನ ಸಾವಿನಿಂದ ಖಿನ್ನಳಾಗಿದ್ದ ವೃದ್ಧೆ ಮಹಡಿಯಿಂದ ಹಾರಿ ಆತ್ಮಹತ್ಯೆ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಮನೆಯ ಮೂರನೇ ಮಹಡಿಯಿಂದ ಬಿದ್ದು ವೃದ್ಧೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ರಾಜೀವ್‌ ಗಾಂಧಿ ನಗರ ಚರ್ಚ್‌ ರೋಡ್‌ ನಲ್ಲಿ ಮನೆಯ ಮೂರನೇ ಮಹಡಿಯಿಂದ ಬಿದ್ದು ವೃದ್ಧೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವೃದ್ಧೆಯನ್ನು ವಿಜಯಲಕ್ಷ್ಮೀ (60) ಎಂದು ಗುರುತಿಸಲಾಗಿದೆ.ಕೋವಿಡ್‌ ಸಮಯದಲ್ಲಿ ಓರ್ವ ಪುತ್ರನನ್ನು ಕಳೆದುಕೊಂಡಿದ್ದ ವೃದ್ಧೆ. ಸೊಸೆ ಹಾಗೂ ಮೊಮ್ಮಕ್ಕಳ ಜೊತೆಗೆ ವಾಸವಾಗಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ಬೆಳಗಿನ ಜಾವ 4 ಗಂಟೆ …

Read More »

ಬೆಂಗಳೂರು: ಅನುಮಾನಾಸ್ಪದವಾಗಿ ಮಹಿಳೆಯ ಮೃತದೇಹ ಪತ್ತೆ!!

ಹೆಚ್ ಎಸ್ ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ರಾಜೀವ್ ಗಾಂಧಿ ಲೇ ಔಟ್ 7th ಸೆಕ್ಟರ್ ಬಳಿ ಮೃತದೇಹ ಪತ್ತೆಯಾಗಿದೆ.ವಿಜಯಲಕ್ಷ್ಮೀ (60) ಶವವಾಗಿ ಪತ್ತೆಯಾಗಿರುವ ಮಹಿಳೆ ಎನ್ನಲಾಗಿದೆ.ಇಂದು ಬೆಳಗಿನ ಜಾವ 4:30 ರ ಸುಮಾರಿಗೆ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಹೆಚ್ ಎಸ್ ಆರ್ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ಚಿಕ್ಕಬಳ್ಳಾಪುರ : ಜಮೀನು ವಿವಾದ, ಹಾಡಹಗಲೇ ವ್ಯಕ್ತಿಯ ಕೊಲೆ!!

ಜಮೀನು ವಿವಾದಕ್ಕಡ ಸಂಬಂಧಿಸಿದಂತೆ ಮನೆಗೆ ನುಗ್ಗಿ ಎಲೆಕ್ಟ್ರಿಕಲ್ ಕಾಂಟ್ರಾಕ್ಟರ್ 65 ವರ್ಷ ಪ್ರಾಯದ‌ ಲಕ್ಷ್ಮಿ ನರಸಪ್ಪ ಎಂಬುವವರನ್ನು ಹಾಡಹಗಲೇ ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ಲಕ್ಷ್ಮಿನರಸಪ್ಪನ ಸಂಬಂಧಿಕ ನಂದೀಶ ಎಂಬುವವನೇ ಆರೋಪಿತನಾಗಿದ್ದು,‌ ಘಟನೆಗೆ ಸಂಬಂಧಿಸಿದಂತೆ ನಂದೀಶನನ್ನು ಚಿಕ್ಕಬಳ್ಳಾಪುರ ಗ್ರಾಮದ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಚಿಕ್ಕಬಳ್ಳಾಪುರ ಗ್ರಾಮದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಮಡಿಕೇರಿ :ಕೊಡಗಿನಲ್ಲಿ ಕೇರಳದ ವ್ಯಕ್ತಿಯ ಕೊಲೆ; ಐವರು ಆರೋಪಿಗಳ ಬಂಧನ!

ಗ್ರಾಮದ ಕಾಫಿ ತೋಟದ‌ ಮನೆಯೊಂದರಲ್ಲಿ ಇತ್ತೀಚೆಗೆ ನಡೆದ ಕೇರಳದ ಕಣ್ಣೂರು ಜಿಲ್ಲೆಯ ಪ್ರದೀಪ್‌ ಕೊಯ್ಲಿ ಎಂಬುವವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರ ಬಳಿಯಿಂದ 13.03 ಲಕ್ಷ ರೂ. ನಗದು, ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನ, 2 ಮೊಬೈಲ್‌, ಮೃತ ವ್ಯಕ್ತಿಯ ಮೊಬೈಲ್‌ ಮತ್ತು ಮೃತ ವ್ಯಕ್ತಿಗೆ ಸೇರಿದ ಆಸ್ತಿ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಿ.ಶೆಟ್ಟಿಗೇರಿ ಗ್ರಾಮದ ಕಾಫಿ ತೋಟದ‌ ಮನೆಯಲ್ಲಿ ವಾಸವಿದ್ದ …

Read More »

ಬೆಳಗಾವಿ: ಗೋಕಾಕ್‌ನಲ್ಲಿ ಯುವಕನ ಭೀಕರ ಹತ್ಯೆ!!

ಮಂಗಳೂರಲ್ಲಿ ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಭೀಕರ ಹತ್ಯೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಂತ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಹಿಲ್ ಗಾರ್ಡ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಗೋಕಾಕ್ ಗೊಂದಳಿ ಗಲ್ಲಿ ನಿವಾಸಿ ಪರಶುರಾಮ್(26) ಎಂಬಾತನನ್ನು ಕಾರಿನಲ್ಲಿ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.ಸ್ಥಳಕ್ಕೆ ಗೋಕಾಕ್ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ …

Read More »

ದೆಹಲಿ : ಸೇನಾ ವಾಹನ ಬಿದ್ದು ಮೂವರು ಸೈನಿಕರು ಹುತಾತ್ಮ..!

ಜಮ್ಮು ಮತ್ತು ಕಾಶ್ಮೀರದ ರಂಬನ್ ನಲ್ಲಿ ಸೇನಾ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ ಮೂವರು ಯೋಧರು ಹುತಾತ್ಮರಾಗಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ.ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಬೆಂಗಾವಲು ಪಡೆಯ ಭಾಗವಾಗಿದ್ದ ಟ್ರಕ್ ಬೆಳಿಗ್ಗೆ 11.30 ರ ಸುಮಾರಿಗೆ ಬ್ಯಾಟರಿ ಚಶ್ಮಾ ಬಳಿ ಅಪಘಾತ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.700 ಅಡಿ ಆಳದ ಕಮರಿಗೆ ವಾಹನದ ಅವಶೇಷಗಳು, ಸೈನಿಕರ ಶವಗಳು, ಅವರ ವಸ್ತುಗಳು …

Read More »

ಕೇರಳ : ಆಟವಾಡುವಾಗ ತಲೆಯ ಮೇಲೆ ಹಲಸಿನ ಹಣ್ಣು ಬಿದ್ದು 9 ವರ್ಷದ ಬಾಲಕಿ ದುರಂತ ಸಾವು!

ಆಯೇಷಾ, ತನ್ನ ಮನೆಯ ಮುಂದೆ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ದೊಡ್ಡ ಗಾತ್ರದ ಹಲಸಿನ ಹಣ್ಣು ಆಕೆಯ ತಲೆಯ ಮೇಲೆ ಬಿದ್ದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಆಯೇಷಾಳನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಆಕೆಯ ಜೀವವನ್ನು ಉಳಿಸಲಾಗಲಿಲ್ಲ.ಆಯೇಷಾ ಶವವನ್ನು ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಕ್ಕೆ ಮೃತದೇಹವನ್ನು ಹಸ್ತಾಂತರಿಸಲಾಗಿದೆ.

Read More »

ಹಾಸನ : ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಪೊಲೀಸ್ ಕಾನ್ಸ್ಟೇಬಲ್ ಸ್ಥಳದಲ್ಲೇ ಸಾವು!!

ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಕಾನ್ಸ್‌ಟೇಬಲ್‌ ಪ್ರಕಾಶ್ ಅವರು ಹಾಸನ ನಗರದಿಂದ ಸರ್ಕಾರಿ ದ್ವಿಚಕ್ರ ವಾಹನದಲ್ಲಿ ಗಾಡೇನಹಳ್ಳಿಗೆ ಕರ್ತವ್ಯಕ್ಕೆ ತೆರಳುತ್ತಿದ್ದರು. ಈ ವೇಳೆ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Read More »

ದೇವನಹಳ್ಳಿ : ಡಿಲಿವರಿ ಬಾಯ್‌ ಯೊಬ್ಬರನ್ನು ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳು!!

ಎಂಬಿಬಿಎಸ್ ವ್ಯಾಸಂಗ ಮಾಡುತ್ತಿರುವ ತನಗಿಂತ 2 ವರ್ಷ ದೊಡ್ಡವಳಾದ ಯುವತಿಯೊಬ್ಬರನ್ನು ಈತ ಪ್ರೀತಿ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಇತ್ತೀಚೆಗೆ ಇವರ ಪ್ರೀತಿ ವಿಚಾರ ತಿಳಿದ ಯುವತಿಯ ಪೊಷಕರು ಹಾಗೂ ಸಂಬಂಧಿಕರು ಯುವತಿಯ ಸ್ನೇಹ ಬಿಡುವಂತೆ ಈತನಿಗೆ ಎಚ್ಚರಿಕೆ ನೀಡಿದ್ದರು ಆದರೂ ಈತ ಇದನ್ನು ನಿರ್ಲಕ್ಷ್ಯ ಮಾಡಿದ್ದ. ಯುವತಿಯ ಜೊತೆ ಮಾತನಾಡುತ್ತಿದ್ದ. ಇದರಿಂದ ಕೊಪಗೊಂಡ ದುಷ್ಕರ್ಮಿಗಳು ಶುಕ್ರವಾರ ರಾತ್ರಿ ಪ್ರೀತಂನನ್ನು ಕಾರಿನಲ್ಲಿ ಅಪಹರಿಸಿಕೊಂಡು ಹೋಗಿ ಕೋಡಿ ಮಂಜನಹಳ್ಳಿ ಸಮೀಪ ಹಲ್ಲೆ ನಡೆಸಿ …

Read More »