Breaking News

Breaking News

ಕಾರವಾರ: ಹೃದಯಾಘಾತದಿಂದ ಡಿಆರ್‌ಎಫ್‌ಒ ಸಾವು!!

ಅಂಕೋಲಾ ತಾಲ್ಲೂಕಿನ ಕುಂಬಾರಕೇರಿ ಮೂಲದವರಾಗಿದ್ದ ಅವರು ಅರಣ್ಯ ಇಲಾಖೆಯಲ್ಲಿ ಕಳೆದ ಎರಡೂವರೆ ದಶಕಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಅರಣ್ಯ ವ್ಯಾಪ್ತಿಯಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ (ಡಿಆರ್‌ಎಫ್‌ಒ) ಕಾರ್ಯನಿರ್ವಹಿಸುತ್ತಿದ್ದ ನವೀನ್ ಶೆಟ್ಟಿ (47) ಬುಧವಾರ ನಸುಕಿನ ಜಾವ ಹೃದಯಾಘಾತದಿಂದ ನಿಧನರಾದರು.ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.ಅಂತ್ಯಕ್ರಿಯೆ ಅಂಕೋಲಾ ಪಟ್ಟಣದ ರುದ್ರಭೂಮಿಯಲ್ಲಿ ನಡೆಯಿತು. ಇಲಾಖೆಯ ಸಿಬ್ಬಂದಿ ಸೇರಿದಂತೆ ನೂರಾರು ಜನರು ಅಂತಿಮ ದರ್ಶನ ಪಡೆದರು.

Read More »

ಹುಬ್ಬಳ್ಳಿ : ಮೊಬೈಲ್ ಕ್ರೇನ್ ಕಳ್ಳತನ ಮಾಡಿದ ಆರೋಪಿಗಳ ಬಂಧನ!

ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ತಾರಿಹಾಳ್ ವ್ಯಾಪ್ತಿಯ ಕೈಗಾರಿಕಾ ಪ್ರದೇಶ ಬ್ಯಾಂಕ್ ಸರ್ಕಲ್ ನ ಎಡಬದಿಯಲ್ಲಿ ನಿಲ್ಲಿಸಿದ್ದ ರಘುನಾಥ್ ಸುರೇಶ್ ಕದಂ ಅವರಿಗೆ ಸಂಬಂಧಿಸಿದ ಹೈಡ್ರೋಲಿಕ್ ಮೊಬೈಲ್ ಕ್ರೇನ್ 14 ಲಕ್ಷ ಮೌಲ್ಯದ ಕ್ರೇನನ್ನು ಕಳ್ಳತನ ಮಾಡಿದರ ಬಗ್ಗೆ ಪೊಲೀಸ್ ದಿನಾಂಕ.ಎ. 27 ರಂದು ದೂರು ದಾಖಲು ಮಾಡಿದ್ದರು. ಪೊಲೀಸ್ ತಂಡವು ಚುರುಕಿನ ಕಾರ್ಯಾಚರಣೆಯನ್ನು ನಡೆಸಿ 72 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದು, ಆರೋಪಿ ಸೈಫುಲ್ಲಾ ಕಮಲಾ ಸಾಹೇಬ್ ಬಂಧಿತ ವ್ಯಕ್ತಿ. …

Read More »

ಬೆಂಗಳೂರು :ವಿದೇಶಿ ಮಹಿಳೆಯ ಬರ್ಬರ ಹತ್ಯೆ!!

ನಗರದ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹಂತಕರು ಆಪ್ರಿಕನ್ ಮಹಿಳೆಯ ಹತ್ಯೆ ಮಾಡಿದ್ದಾರೆ. ಬೇರೆಡೆ ಹತ್ಯೆ ಮಾಡಿ ಚಿಕ್ಕಜಾಲ ವ್ಯಾಪ್ತಿಯಲ್ಲಿ ಮೃತದೇಹ ತಂದು ಬಿಸಾಡಿದ್ದಾರೆ ಎನ್ನಲಾಗಿದೆ. ಲೋವಿತ್ ಕೊಲೆಯಾಗಿರುವ ವಿದೇಶಿ ಮಹಿಳೆ ಎನ್ನಲಾಗಿದೆ. ಕೊಲೆಯಾಗಿರುವ ಲೋವಿತ್ ಅವರನ್ನು ಆಫ್ರಿಕಾದ ನೈಜೀರಿಯಾದ ಕ್ರಾಸ್ ರಿವರ್ ರಾಜ್ಯದ ಮಹಿಳೆ ಎಂದು ಗುರುತಿಸಲಾಗಿದೆ. ಪೊಲೀಸರು ಮಹಿಳೆಯ ಹಿನ್ನೆಲೆ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಬೆಟ್ಟಹಲಸೂರು ಮುಖ್ಯರಸ್ತೆ ಬಳಿ ಮೃತದೇಹ ಪತ್ತೆಯಾಗಿದೆ. ಮೃತದೇಹ …

Read More »

ಕಲಬುರಗಿ: ಕಾಂಗ್ರೆಸ್ ಮುಖಂಡ ಸೇರಿ ಮೂವರ ಮನೆ ಮೇಲೆ ಈಡಿ ದಾಳಿ!

ವೈದ್ಯಕೀಯ ವಿದ್ಯಾರ್ಥಿಗಳ ಸ್ಟೈಫಂಡ್ ದುರ್ಬಳಕೆ ಮಾಡಿಕೊಂಡ ಆರೋಪದಡಿ ಸಂಸ್ಥೆಯ ಮಾಜಿ ಅಧ್ಯಕ್ಷ ಭೀಮಾಶಂಕರ ಬಿಲಗುಂದಿ, ಎಂಆರ್‌ಎಂಸಿ ಕಾಲೇಜಿನ ಪ್ರಾಚಾರ್ಯ ಡಾ.ಎಸ್‌.ಎಂ.ಪಾಟೀಲ್‌, ಅಕೌಂಟೆಂಟ್ ಸುಭಾಷ ಜಗನ್ನಾಥ ಮತ್ತು ಕೆನರಾ ಬ್ಯಾಂಕ್ ಎಂಆರ್‌ಎಂಸಿ ಶಾಖೆಯ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಭೀಮಾಶಂಕರ ಬಿಲಗುಂದಿ, ಡಾ.ಎಸ್.ಎಂ.ಪಾಟೀಲ, ಸುಭಾಷ ಜಗನ್ನಾಥ ಅವರ ಮನೆಗಳಲ್ಲಿ ಶೋಧ ನಡೆಸಲಾಗಿದೆ ಎಂದು ತಿಳಿದುಬಂದಿದೆ.ಒಂಬತ್ತು ಇನ್ನೋವಾ ಕಾರುಗಳಲ್ಲಿ ನಾಲ್ಕು ತಂಡಗಳ 30ಕ್ಕೂ ಹೆಚ್ಚು ಈಡಿ ಅಧಿಕಾರಿಗಳು ಮೂವರ ಮನೆಗಳಿಗೆ …

Read More »

ದೆಹಲಿ : ಸೊಸೆ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಅತ್ತೆಗೆ ಜೈಲುಶಿಕ್ಷೆ!!

ಗರ್ಭಿಣಿ ಸೊಸೆ ಕುಸುಮ್‌ ಅವರ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಪ್ರಕರಣದಲ್ಲಿ ಅತ್ತೆ ಶಕುಂತಲಾ ದೇವಿ ಅವರಿಗೆ ಜೈಲುಶಿಕ್ಷೆ ವಿಧಿಸಿದ್ದ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ಎತ್ತಿಹಿಡಿದಿದೆ. ವರದಕ್ಷಿಣೆ ಪ್ರಕರಣವನ್ನು ಕೈಬಿಟ್ಟಿದ್ದ ಹೈಕೋರ್ಟ್‌, ಸೊಸೆಯ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ವಿಚಾರಕ್ಕೆ ಶಿಕ್ಷೆ ವಿಧಿಸಿತ್ತು. ಆಕೆಯ ವಯಸ್ಸನ್ನು ಗಮನದಲ್ಲಿ ಇರಿಸಿಕೊಂಡು ಶಕುಂತಲಾ ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ನ್ಯಾಯಮೂರ್ತಿಗಳಾದ ವಿಕ್ರಮ್‌ ನಾಥ್‌, ಸಂಜಯ್‌ ಕರೋಲ್‌ ಮತ್ತು ಸಂದೀಪ್‌ ಮೆಹ್ತಾ …

Read More »

ಕಾಡುಗೋಡಿ: ಮದ್ಯದ ಅಮಲಿನಲ್ಲಿ ಕಾರ್ಮಿನ ಕೊಲೆ!!

ಶೆಡ್‌ನಲ್ಲಿ ನಡೆದ ಗಲಾಟೆಯಲ್ಲಿ ಕಾರ್ಮಿಕನನ್ನು ಇರಿದು ಕೊಲೆ ಮಾಡಿರುವ ಘಟನೆ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಜಾರ್ಖಂಡ್‌ನ ಪವನ್ ಯಾದವ್ ಕೊಲೆಯಾದ ಕಾರ್ಮಿಕ. ಕೃತ್ಯ ಎಸಗಿದ ಆರೋಪದ ಅಡಿ ಗಣೇಶ್‌ ಧಾರ್ ಎಂಬಾತನನ್ನು ಬಂಧಿಸಲಾಗಿದೆ.ಆರೋಪಿ ಏಪ್ರಿಲ್‌ 28ರಂದು ಸಂಜೆ 4 ಗಂಟೆ ಸುಮಾರಿಗೆ ಪವನ್ ಯಾದವ್‌ನನ್ನು ಚಾಕುವಿನಿಂದು ಇರಿದು ಕೊಲೆ ಮಾಡಿದ್ದ. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.ಕಟ್ಟಡ ನಿರ್ಮಾಣ ಕಾಮಗಾರಿಯ ಗುತ್ತಿಗೆದಾರರೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ …

Read More »

ಹಾವೇರಿ : ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!

ಸಾರಿಗೆ ಬಸ್ ಚಾಲಕನೋಬ್ಬ ಬಸ್ ನಲ್ಲಿಸಿ ಮಾರ್ಗ ಮಧ್ಯದಲ್ಲಿ ನಮಾಜ್ ಮಾಡಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ. ಮಂಗಳವಾರ ಸಂಜೆ ಹುಬ್ಬಳ್ಳಿ ಮತ್ತು ಹಾವೇರಿ ಮಾರ್ಗ ಮಧ್ಯದಲ್ಲಿ ಈ ಘಠನೆ ನಡೆದಿದೆ. ಇದನ್ನು ಕಂಡು ಬಸ್ಸಿನಲ್ಲಿದ್ದ ಪ್ರಯಾಣಿಕರು ಒಂದು ಕ್ಷಣ ದಂಗಾಗಿದ್ದಾರೆ. ಪ್ರಯಾಣಿಕರೊಬ್ಬರು ಇದರ ವೀಡಿಯೋ ಮಾಡಿ ವೈರಲ್ ಮಾಡಿದ್ದಾರೆ. ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಯಾಣಿಕರು ಹಾಗೂ ಸಾರ್ವಜನಿಕರು ಮನವಿ ಮಾಡಿದ್ದಾರೆ.ಘಟನೆ ನಿನ್ನೆ ಸಂಜೆ ಹುಬ್ಬಳ್ಳಿ ಹಾಗೂ ಹಾವೇರಿ ಮಾರ್ಗದ …

Read More »

ಶೃಂಗೇರಿ: ಶಾರದಾಂಬೆ ಸನ್ನಿಧಿಯಲ್ಲಿ ಮಗನಿಗೆ ಅಕ್ಷರಾಭ್ಯಾಸ ಮಾಡಿಸಿದ ನಿಖಿಲ್‌ ಕುಮಾರಸ್ವಾಮಿ.

ಅಕ್ಷಯ ತೃತೀಯ ಈ ಶುಭ ದಿನದಂದು ಆರಂಭಿಸಿದ ಕೆಲಸ ಯಶಸ್ಸು ಪಡೆಯುತ್ತದೆ ಎಂದು ಹೇಳುತ್ತಾರೆ. ಈಗ ನಿಖಿಲ್‌ ಕುಮಾರಸ್ವಾಮಿ ಅವರು ಮಗನ ಅಕ್ಷರಾಭ್ಯಾಸ ಮಾಡಿಸಿದ್ದಾರೆ.ಶೃಂಗೇರಿ ಶಾರದಾಂಬೆ ವಿದ್ಯೆಗೆ ಅಧಿಪತಿ ಎನ್ನಬಹುದು. ಈ ಪವಿತ್ರ ಪುಣ್ಯ ಸ್ಥಳದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರು ಮಗ ಅವ್ಯಾನ್‌ ದೇವ್‌ ಅವರ ಅಕ್ಷರಾಭ್ಯಾಸ ಮಾಡಿಸಿದ್ದಾರೆ.ಶ್ರೀ ಕ್ಷೇತ್ರ ಶೃಂಗೇರಿಗೆ ಕುಟುಂಬ ಸಮೇತ ಭೇಟಿ ನೀಡಿ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿಗಳವರ ಆಶೀರ್ವಾದ ಪಡೆದುಕೊಂಡೆ. …

Read More »

ಪುತ್ತೂರು: ತಾಯಿ ಕೊಲೆ, ಪುತ್ರನಿಗೆ 5 ವರ್ಷ ಜೈಲು ಶಿಕ್ಷೆ!!

ಪುತ್ತೂರು ಕಾಮಣ ಗ್ರಾಮದಲ್ಲಿ 6 ವರ್ಷಗಳ ಹಿಂದೆ ಕ್ಷುಲ್ಲಕ ಕಾರಣಕ್ಕೆ ತಾಯಿಯನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿದ ಆರೋಪಿ ಪುತ್ರನಿಗೆ ಪುತ್ತೂರಿನ ಐದನೆಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಕಾಮಣ ಗ್ರಾಮದ ಅಂಕಜಾಲು ನವಗ್ರಾಮ ಕಾಲೋನಿಯ ನಿವಾಸಿ ನಾವೂರ ಎಂಬವರ ಪುತ್ರ ಗೋಪಾಲ ಯಾನೆ ಗೋಪ ಶಿಕ್ಷೆಗೊಳಗಾದ ಅಪರಾಧಿ. ನ್ಯಾಯಾಧೀಶೆ ಸರಿತಾ ಡಿ. ಅವರು, ಆರೋಪಿ ಕೃತ್ಯ ಎಸಗಿರುವುದು ಸಾಬೀತಾಗಿರುವುದರಿಂದ 5 …

Read More »

ಬೆಂಗಳೂರು :ಹಾಲಿನ ಲಾರಿಗೆ ಬೈಕ್ ಡಿಕ್ಕಿ, ಬೈಕ್ ಹಿಂಬದಿ ಸವಾರ ಬಲಿ!

ಬೆಂಗಳೂರಿನ ನೆಲಮಂಗಲ ರಸ್ತೆಯಲ್ಲಿನ ಟಾಟಾ ಇನ್ಸ್ಟಿಟ್ಯೂಟ್ ಮುಂಭಾಗದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನಲಾಗಿದೆ. ಲಾರಿ ಚಾಲಕ ಕುಡಿದು ಲಾರಿ ಓಡಿಸುತ್ತಿದ್ದರಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಲಾರಿ ಬೆಂಗಳೂರು ಡೈರಿಯಿಂದ ನೆಲಮಂಗಲಕ್ಕೆ ಹೊರಟಿತ್ತು ಎನ್ನಲಾಗಿದೆ. ಸದಾಶಿವನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.

Read More »