BigTv News
November 1, 2026
Breaking News
ನೆಲಮಂಗಲದಲ್ಲಿ ಬೈಕ್ ಸಾಲದ ಕಂತು ಪಾವತಿಸದ ಕಾರಣ ಮೈಕ್ರೋ ಫೈನಾನ್ಸ್ ಏಜೆಂಟರು ಬೈಕ್‌ಗೆ ಒದ್ದ ಪರಿಣಾಮ ರಸ್ತೆಗೆ ಬಿದ್ದು ಗಾಯಗೊಂಡಿದ್ದ ಮುರುಳಿ (39) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಎಲ್ ಅಂಡ್ ಟಿ ಮೈಕ್ರೋ ಫೈನಾನ್ಸ್‌ನ ಮೂವರು ಏಜೆಂಟರು ಬೈಕ್ ಅಡ್ಡಹಾಕಿ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಈಗಾಗಲೇ ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಮುರುಳಿ ನಿರಂತರ ಡಯಾಲಿಸಿಸ್ ಪಡೆಯುತ್ತಿದ್ದರು. ಗಾಯಗೊಂಡ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ …
Read More »
BigTv News
November 1, 2026
Breaking News
ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಿಮಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಸಕಲೇಶಪುರ ತಾಲೂಕಿನ ಬಾಳಗೋಡು ಗ್ರಾಮದಲ್ಲಿ ನಡೆದಿದೆ. ಮಂಗಳೂರಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಹಿಮಾಳಿಗೆ ನೌಶಾದ್ ಎಂಬಾತ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಅಲ್ಲದೆ, ಇಬ್ಬರೂ ಜೊತೆಯಾಗಿ ತೆಗೆಸಿಕೊಂಡ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. …
Read More »
BigTv News
November 1, 2026
Breaking News
ಹಾಸನ: ಖಾಸಗಿ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಪ್ರಕಟಿಸಿ ಬೆದರಿಕೆ ಹಾಕಿದ್ದರಿಂದ ಮನನೊಂದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಕಲೇಶಪುರ ತಾಲೂಕಿನ ಬೆಳಗೋಡು ಗ್ರಾಮದಲ್ಲಿ ನಡೆದಿದೆ. ಮೃತ ಹಿಮಾ ಮಂಗಳೂರಿನ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ 3ನೇ ವರ್ಷದ ಬಿ.ಇ ವ್ಯಾಸಂಗ ಮಾಡುತ್ತಿದ್ದಳು. ನೌಶಾದ್ ಎಂಬಾತನೊಂದಿಗೆ ಪ್ರೀತಿಯಲ್ಲಿದ್ದ ಆಕೆ, ಕುಟುಂಬದವರ ಸಲಹೆಯಂತೆ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ್ದಳು. ಇದರಿಂದ ಇಬ್ಬರ ನಡುವೆ ಜಗಳವಾಗಿದ್ದು, ಆತ ಇಬ್ಬರೂ ಜೊತೆಯಾಗಿ ತೆಗೆಸಿಕೊಂಡಿದ್ದ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ …
Read More »
BigTv News
November 1, 2026
Breaking News
ದೊಡ್ಡಬಳ್ಳಾಪುರ: ಛಲವಾದಿ ಮಹಾಸಭಾ ತಾಲೂಕು ಘಟಕದ ಮಾಜಿ ಅಧ್ಯಕ್ಷ ಹಾಗೂ ದಲಿತ ಮುಖಂಡ ಸಿ. ಗುರುರಾಜಪ್ಪ ಅವರ ಮೃತದೇಹ ಧರ್ಮಸ್ಥಳದ ಶ್ರೀಮುಡಿ ಭವನದ ಆವರಣದಲ್ಲಿ ಪತ್ತೆಯಾಗಿದೆ. ದೊಡ್ಡಬಳ್ಳಾಪುರದ ಕಛೇರಿಪಾಳ್ಯ ನಿವಾಸಿಯಾಗಿದ್ದ ಗುರುರಾಜಪ್ಪ ಅವರು ಗುರುವಾರ ಬೈಕ್‌ನಲ್ಲಿ ತೆರಳಿದ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದರು. ಕುಟುಂಬಸ್ಥರು ನಾಪತ್ತೆ ಪ್ರಕರಣ ದಾಖಲಿಸಲು ಪೊಲೀಸ್ ಠಾಣೆಗೆ ತೆರಳಿದಾಗ ಧರ್ಮಸ್ಥಳದಲ್ಲಿ ಅಪರಿಚಿತ ಶವ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಮೃತದೇಹದ ಭಾವಚಿತ್ರದ ಆಧಾರದ ಮೇಲೆ …
Read More »
BigTv News
November 1, 2026
Breaking News
ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ರಾಯಚೂರಿನ ಜಲಾಲನಗರದಲ್ಲಿ ನಡೆದಿದೆ. ಮೃತರನ್ನು ವಿಷ್ಣು (45), ಪತ್ನಿ ಅರುಣಾ (36), ಮಗ ಶ್ಲೋಕ (10) ಹಾಗೂ ಮಗಳು ಖುಷಿ (7) ಎಂದು ಗುರುತಿಸಲಾಗಿದೆ. ಮನೆಯವರು ಮಲಗಿದ್ದಾಗ ವಿಷ್ಣು ಈ ಕೃತ್ಯ ಎಸಗಿ, ಬಳಿಕ ಚಿಕ್ಕಸುಗೂರು ಗ್ರಾಮದ …
Read More »
BigTv News
November 1, 2026
Breaking News
ಕಲಬುರಗಿ: ಜೇವರ್ಗಿ ತಾಲೂಕಿನಲ್ಲಿ ಪ್ರಾಪ್ತ ವಯಸ್ಕಳಲ್ಲದ ಬಾಲಕಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಇಸ್ಮಾಯಿಲ್ ಎಂಬಾತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಯುಗಾದಿ ಹಬ್ಬದ ವೇಳೆ ಬಾಲಕಿಗೆ ಪರಿಚಯವಾಗಿದ್ದ ಆರೋಪಿ, ಬಳಿಕ ಪ್ರೀತಿಸುವಂತೆ ಹಾಗೂ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಕುಟುಂಬದವರು ಎಚ್ಚರಿಕೆ ನೀಡಿದ್ದರೂ ಆತನ ವರ್ತನೆ ಬದಲಾಗಿರಲಿಲ್ಲ. ಅಕ್ಟೋಬರ್ 29ರಂದು ರಾತ್ರಿ ಮನೆಯವರು ಇಲ್ಲದ ಸಮಯದಲ್ಲಿ ಬಾಲಕಿಯನ್ನು ಕರೆದೊಯ್ದು ಲೈಂಗಿಕ …
Read More »
BigTv News
November 1, 2026
Breaking News
ಹಾವೇರಿ: ವಿಎಒ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಆಗಿದ್ದ ಹಾನಗಲ್ಲ ಮೂಲದ ಶಂಕರ ಬನ್ನೂರು ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ಬಳಸಿ ಉತ್ತರ ಹುಡುಕಿರುವುದು ತನಿಖೆಯಲ್ಲಿ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಕೆಇಎ ನಡೆಸಿದ ವಿಎಒ ಪರೀಕ್ಷೆಯಲ್ಲಿ ಶಂಕರ 151.25 ಅಂಕ ಗಳಿಸಿದ್ದರೆ, ಅದಕ್ಕೂ 15 ದಿನಗಳ ಹಿಂದೆ ನಡೆದ ಕೆಎಸ್‌ಆರ್‌ಪಿ ಕಾನ್‌ಸ್ಟೆಬಲ್ ಪರೀಕ್ಷೆಯಲ್ಲಿ ಕೇವಲ 25 ಅಂಕ ಪಡೆದಿದ್ದ. ಈ ಅಂಕಗಳ ವ್ಯತ್ಯಾಸ ಅನುಮಾನಕ್ಕೆ ಕಾರಣವಾಗಿತ್ತು. ತನಿಖೆಯಲ್ಲಿ ಶಿಗ್ಗಾಂವ …
Read More »
BigTv News
November 1, 2026
Breaking News
ಉಡುಪಿ: ಪ್ರೇಮ ಪ್ರಕರಣದ ಹಿನ್ನೆಲೆಯಲ್ಲಿ ಹಲ್ಲೆಗೊಳಗಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 27 ವರ್ಷದ ಪ್ರದೀಪ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಅ.30ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಎಂಟು ವರ್ಷಗಳಿಂದ ಯುವತಿಯನ್ನು ಪ್ರೀತಿಸುತ್ತಿದ್ದ ಪ್ರದೀಪ್ ಮೇಲೆ ಅ.27ರಂದು ಯುವತಿಯ ಸಹೋದರರು ಹಾಗೂ ಇತರರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಗೊಂಡಿದ್ದ ಅವರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಹಲ್ಲೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ಸಹೋದರ ದೂರು …
Read More »
BigTv News
October 31, 2026
Breaking News
ಬೆಂಗಳೂರು: ಪ್ರತಿ ಟನ್ ಕಬ್ಬಿಗೆ ₹5,500 ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್ ತೀವ್ರಗೊಂಡಿದ್ದು, ರಾಜ್ಯದ ವಿವಿಧೆಡೆ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಪುಣೆ-ಬೆಂಗಳೂರು, ಹುಕ್ಕೇರಿ-ಬೆಳಗಾವಿ ಹೆದ್ದಾರಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಟ್ರ್ಯಾಕ್ಟರ್‌ಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಿದ್ದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಹೋರಾಟ ತೀವ್ರಗೊಳಿಸಿರುವ ರೈತರು, ನಾಳೆ ‘ಜೈಲು ಭರೋ’ ಚಳವಳಿ ನಡೆಸಲು ನಿರ್ಧರಿಸಿದ್ದಾರೆ.
Read More »
BigTv News
October 31, 2026
Breaking News
ಬೆಂಗಳೂರು: ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಹೂಡಿಕೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ₹427 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ್ದಾರೆ. ಸಂಸ್ಥೆಯು ಅಧಿಕ ಬಡ್ಡಿ ಆಮಿಷವೊಡ್ಡಿ 35 ಸಾವಿರಕ್ಕೂ ಹೆಚ್ಚು ಹೂಡಿಕೆದಾರರಿಂದ ₹2,459 ಕೋಟಿ ಸಂಗ್ರಹಿಸಿ ವಂಚಿಸಿರುವ ಆರೋಪ ಕೇಳಿಬಂದಿದೆ. ಪ್ರಕರಣದ ಪ್ರಮುಖ ಆರೋಪಿ ಶಿವಾನಂದ ನೀಲಣ್ಣನವರ್ ಅವರನ್ನು ಬಂಧಿಸಲಾಗಿದ್ದು, ಐವರು ಆರೋಪಿಗಳ ವಿರುದ್ಧ ಮಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಗಿದೆ.
Read More »