BigTv News
April 26, 2025
Breaking News, Crime
ಮನೆಯಲ್ಲಿ ರೂಂ ಬಾಗಿಲು ಹಾಕಿಕೊಂಡು ಸ್ಪಂದನಾ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪಕ್ಕದ ಮನೆಯ ಸ್ನೇಹಿತೆ ಜತೆ ಬಾಲಕಿ ನಿತ್ಯ ಸೈಕಲ್ ಆಡುತ್ತಿದ್ದಳು.ಇಂದು ಆಕೆ ಸೈಕಲ್ ಕೊಟ್ಟಿಲ್ಲವೆಂದು ನೊಂದ ಬಾಲಕಿ ಈ ನಿರ್ಧಾರ ತೆಗೆದುಕೊಂಡಿದ್ದಾಳೆ ಎನ್ನಲಾಗಿದೆ. ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ ಬಾಲಕಿಯೊಬ್ಬಳು ನೇಣಿಗೆ ಶರಣಾದ ಆಘಾತಕಾರಿ ಘಟನೆ ನಡೆದಿದೆ. ಸ್ಪಂದನಾ (11) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.
Read More »
BigTv News
April 26, 2025
Breaking News
ಮಾಜಿ ಸಚಿವ ಬೇಗಾನೆ ರಾಮಯ್ಯನವರ ಹೊಸಹಳ್ಳಿಯ ಸೀತಾ ಫಾರಂಗೆ ಭೇಟಿ ನೀಡಿ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿ, ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.ಬೇಗಾನೆ ರಾಮಯ್ಯನವರ ನಿಧನವು ಮಲೆನಾಡಿನ ರಾಜಕೀಯ ರಂಗಕ್ಕೆ ತುಂಬಲಾರದ ನಷ್ಟ. ಅವರ ಸರಳತೆ, ಪ್ರಾಮಾಣಿಕತೆ ಮತ್ತು ಜನಪರ ಕಾಳಜಿ ಸದಾ ಸ್ಮರಣೀಯ. ‘ಬೋರ್ವೆಲ್ ರಾಮಯ್ಯ’ ಎಂದೇ ಖ್ಯಾತಿ ಪಡೆದಿದ್ದ ಅವರು ಮಲೆನಾಡಿನ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಶ್ರಮಿಸಿದವರು. ಅವರ …
Read More »
BigTv News
April 26, 2025
Breaking News, Crime
ಕಲಬುರ್ಗಿ ಜಿಲ್ಲೆಯ ಅಳಂದ ತಾಲ್ಲೂಕಿನ ನರೋಣ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದಂತ ಚನ್ನವೀರ ಹೀರಾ ಎಂಬಾತನನ್ನು ತಲ್ವಾರ್ ನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.ವಿಷಯ ತಿಳಿದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ನರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Read More »
BigTv News
April 26, 2025
Breaking News, Crime
ಶಿವನಾಗಪ್ಪ ಹಾಗೂ ಸುದರ್ಶನ್ ಅವರನ್ನು ಪ್ರವಾಸದ ನೆಪದಲ್ಲಿ ಬೆಂಗಳೂರಿಗೆ ಕರೆತಂದಿದ್ದ ಶಿವಕುಮಾರ್ ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳ್ಳತನ ಮಾಡಿದ್ದಾರೆ.ಶಿವಕುಮಾರ್ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಯಲ್ಲಿ 16 ಕಳ್ಳತನ ಪ್ರಕರಣಗಳು ದಾಖಲಾಗಿವೆ.ಕದ್ದ ಚಿನ್ನಾಭರಣವನ್ನು ಸ್ನೇಹಿತರ ಮೂಲಕ ಗಂಗಾವತಿ ಹಾಗೂ ಹಗರಿಬೊಮ್ಮನಹಳ್ಳಿಯ ಚಿನ್ನದ ಅಂಗಡಿಯಲ್ಲಿ ಅಡಮಾನ ಇಟ್ಟಿದ್ದರು. ಮೂವರು ಗೋವಾಕ್ಕೆ ಹೋಗಿ ಕಳ್ಳತನ ಮಾಡಿದ್ದ ₹6 ಲಕ್ಷ ಹಣ ಉಪಯೋಗಿಸಿಕೊಂಡು ಮೋಜು-ಮಸ್ತಿ ಮಾಡಿದ್ದರು.ಹಗರಿಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯ ದುರ್ಗಮ್ಮ ದೇವಸ್ಥಾನದ ಬಳಿ …
Read More »
BigTv News
April 26, 2025
Breaking News, Crime, ರಾಯಚೂರು
ತುಂಬು ಗರ್ಭಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಬೂದಿವಾಳ ಗ್ರಾಮದಲ್ಲಿ ಬೆಳಗಿನ ಜಾವ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅನುಪಮಾ ಮೃತ ಗೃಹಿಣಿ. ವರದಕ್ಷಿಣೆ ಕಿರುಕುಳದಿಂದ ಗಂಡನ ಮನೆಯವರೇ ಕೊಲೆ ಮಾಡಿರು ಆರೋಪ ಕೇಳಿಬಂದಿದೆ. ಸದ್ಯ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
April 26, 2025
Breaking News, Crime
ಡೆತ್ನೋಟ್ ಬರೆದಿಟ್ಟು ಗಂಡನ ಮನೆಯಲ್ಲಿ ರಶ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ದಿನೇಶ್ ಗೌಡ, ಮಾವ ಅಪ್ಪಾಜಿ ಗೌಡ, ಅತ್ತೆ ಸರೋಜಮ್ಮ ಮತ್ತು ದೊಡ್ಡತ್ತೆ ರತ್ನಮ್ಮ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ.ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಹಿಳೆ ನೇಣಿಗೆ ಶರಣಾಗಿರುವಂತಹ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಕಾಡದೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪತಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದು, ಮಾಲೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Read More »
BigTv News
April 26, 2025
Breaking News, Crime
ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಪ್ರಕಾಶ್ ಮಿರ್ಜಿ ಅವರ ಮಗನಾಗಿದ್ದು, ತಂದೆಯ ಹೆಸರಿನಲ್ಲಿದ್ದ ಪರವಾನಿಗೆ ಹೊಂದಿದ ಪಿಸ್ತೂಲ್‌ನಿಂದ ಮನೆಯ ಬೆಡ್ ರೂಂನಲ್ಲಿ ತಲೆಗೆ ಗುಂಡು ಹಾರಿಸಿಕೊಂಡಿದ್ದಾನೆ.ಮನೆಯಲ್ಲೇ ಇದ್ದ ತಂದೆ, ತಾಯಿ ಹಾಗೂ ಕುಟುಂಬಸ್ಥರು ಗುಂಡಿನ ಶಬ್ದ ಕೇಳುತ್ತಲೇ ಕೊಠಡಿಯ ಬಾಗಿಲು ತೆರೆದು ನೋಡಿದ್ದಾರೆ. ತಕ್ಷಣವೇ ಬಿಎಲ್‌ಡಿಇ ಆಸ್ಪತ್ರೆಗೆ ಮಗನನ್ನು ಸಾಗಿಸಿದ್ದಾರೆ. ಆದರೆ, ಅಷ್ಟರಲ್ಲೇ ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಬಸವರಾಜ ಯಲಿಗಾರ್, ಸಿಪಿಐ ಮಲ್ಲಯ್ಯ ಮಠಪತಿ ಹಾಗೂ …
Read More »
BigTv News
April 26, 2025
Breaking News, Crime
ಫಾರ್ಮ್ಹೌಸ್ನಲ್ಲಿ ಮಗಳ ಎದುರೇ ತಾಯಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ದೆಹಲಿಯ ಸ್ವರೂಪ್ ನಗರದಲ್ಲಿ ನಡೆದಿದೆ.ಘಟನೆ ಸಂಬಂಧ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದು. ದೂರಿನಲ್ಲಿ ಕಾದಿಪುರದ ತೋಟದ ಮನೆಯ ವರಾಂಡಾದಲ್ಲಿ ತಾನು ಮತ್ತು ತನ್ನ 11 ವರ್ಷದ ಮಗಳು ಮಲಗಿದ್ದಾಗ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ. ಅದೇ ಪ್ರದೇಶದಲ್ಲಿ ವಾಸಿಸುತಿದ್ದ ಆರೋಪಿ ಧರ್ಮಿಂದರ್, ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಮಲಗಿದ್ದ ನಮ್ಮ ಕೈ ಕಾಲುಗಳನ್ನು ಕಟ್ಟಿ ಹಾಕಿ ಅತ್ಯಾಚಾರ ಎಸಗಿದ್ದಾನೆ.ಘಟನೆ …
Read More »
BigTv News
April 26, 2025
Breaking News
ಸಿಐಡಿ ತನಿಖೆ ವೇಳೆ ನಾನು ತಪ್ಪು ಮಾಡಿಲ್ಲ. ನನಗೆ ಸಾಲದ ವಿಚಾರ ಗೊತ್ತಿಲ್ಲ ಎಂದು ಹೇಳುತ್ತಿದ್ದ ರಮೇಶ್ ಜಾರಕಿಹೊಳಿ ಅವರು, ಇದೀಗ ದಿಢೀರ್ ಆಗಿ ಬ್ಯಾಂಕ್‌ಗೆ ಸ್ಪಲ್ಪ ಪ್ರಮಾಣದ ಸಾಲ ಮರಳಿಸಿರುವುದು ಕುತೂಹಲ ಮೂಡಿಸಿದೆ. ಈ ಸಾಲ ಪಾವತಿ ಹಿನ್ನೆಲೆಯಲ್ಲಿ ಮಾಜಿ ಸಚಿವರ ನಡೆ ಕುರಿತು ವಿಶ್ಲೇಷಣೆ ನಡೆದಿದೆ. ವಂಚನೆ ಕೃತ್ಯದಲ್ಲಿ ತಾವು ದೋಷ ಮುಕ್ತರಾಗುವ ವಿಶ್ವಾಸದಲ್ಲಿದ್ದ ಅವರಿಗೆ ಸಿಐಡಿ ಅಧಿಕಾರಿಗಳು ಆರೋಪಪಟ್ಟಿ ಸಲ್ಲಿಕೆಗೆ ಮುಂದಾಗಿದ್ದು ಮುಂದಿನ ಕಾನೂನು ಕ್ರಮದ …
Read More »
BigTv News
April 26, 2025
Breaking News, Crime, ಬೆಂಗಳೂರು
ಅಬ್ಬಾಸ್, ಗೆಳೆಯನ ಮೇಲೆ ಪ್ರತೀಕಾರ ತೀರಿಸಲು ತನ್ನ ಮೂವರು ಸ್ನೇಹಿತರಿಗೆ ಹತ್ಯೆಗೆ ಸೂಚಿಸಿದ್ದ. ಆದರೆ ಅಬ್ಬಾಸ್ ಪತ್ನಿ ಜತೆ ಇರ್ಫಾನ್ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಸುದ್ದಿ ಆರೋಪಿಗಳಿಗೆ ತಿಳಿದಿತ್ತು. ಮೊದಲು ಸುಮ್ಮನಿದ್ದ ಅವರು, ಇತ್ತೀಚೆಗೆ ಬಹಿರಂಗವಾಗಿಯೇ ಆಕೆಯ ಜತೆ ಇರ್ಫಾನ್ ಓಡಾಟ ಸಹಿಸದಾದರು. ಆದರೆ ತನ್ನ ಸ್ನೇಹಿತರಿಗೆ ತಿಳಿಯದಂತೆ ಆಕೆ ಜತೆ ಇರ್ಫಾನ್ ಮದುವೆಯಾಗಿದ್ದ. ಕೊನೆಗೆ ಏ.21ರಂದು ರಾತ್ರಿ ಮೂವರು ಆರೋಪಿಗಳು ಇರ್ಫಾನ್ ಮೇಲೆ ಹಲ್ಲೆ ನಡೆಸಿ ಭೀಕರವಾಗಿ …
Read More »