Breaking News

Breaking News

ಅಸ್ವಸ್ಥನನ್ನು ಬೆತ್ತಲೆಗೊಳಿಸಿ ಥಳಿತ: ಎಲ್ಲ ಹಲ್ಲೆಕೋರರ ವಿರುದ್ಧ ಕೇಸು -ಹೈಕೋರ್ಟ್

ಬೆಂಗಳೂರು: ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರದ ಮಸಣಾಪುರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮಾನಸಿಕ ಅಸ್ವಸ್ಥ ಯುವಕನನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿದ ಪ್ರಕರಣದಲ್ಲಿ, ಹಲ್ಲೆ ನಡೆಸಿದ ಪ್ರತಿಯೊಬ್ಬರನ್ನೂ ಗುರುತಿಸಿ ಪ್ರಕರಣ ದಾಖಲಿಸುವಂತೆ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ. ಹಲ್ಲೆಯ ವಿಡಿಯೋ ಲಭ್ಯವಿದ್ದು, ಅದರ ಆಧಾರದಲ್ಲಿ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಬೇಕು. ತನಿಖೆ ನಿಧಾನಗತಿಯಲ್ಲಿ ನಡೆಯಬಾರದು ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಸೂಚಿಸಿದೆ. ಈವರೆಗೆ ನಡೆದ …

Read More »

ಆತ್ಮಹತ್ಯೆ ಕೇಸ್, ಪಿಐ-ಮುಖ್ಯಪೇದೆ ಅಮಾನತು

ಕನಕಗಿರಿ: ಬಸವರಾಜರೆಡ್ಡಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪಟ್ಟಣ ಠಾಣೆಯ ಪಿಐ ವಿ.ನಾರಾಯಣ ಹಾಗೂ ಮುಖ್ಯಪೇದೆ ಲಕ್ಷ್ಮಣ ಅವರನ್ನು ಕರ್ತವ್ಯ ನಿರ್ಲಕ್ಷ್ಯದ ಆರೋಪದಡಿ ಎಸ್ಪಿ ಡಾ. ರಾಮ್ ಎಲ್. ಅರಸಿದ್ದಿ ಅಮಾನತುಗೊಳಿಸಿದ್ದಾರೆ. ಜಮೀನು ಒತ್ತುವರಿ ಕುರಿತು ಬಸವರಾಜರೆಡ್ಡಿ ಆ.12ರಂದು ಪಪಂಗೆ ದೂರು ನೀಡಿದ್ದರು. ಬಳಿಕ ಆ.13ರಂದು ಠಾಣೆಗೆ ತೆರಳಿ ದೂರು ನೀಡಲು ಮುಂದಾದರೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರಲಿಲ್ಲ ಎನ್ನಲಾಗಿದೆ. ಇದರಿಂದ ಬೇಸತ್ತು ಆ.15ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅವರು, ಚಿಕಿತ್ಸೆ …

Read More »

ಜಿಲ್ಲೆಯಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ: ವಶಕ್ಕೆ ಪಡೆದ ಪೊಲೀಸರು

ಗದಗ: ತಾಲೂಕಿನ ಹರ್ತಿ ಗ್ರಾಮದ ಬಳಿ ಸರ್ಕಾರಿ ಕಟ್ಟಡ ಕಾಮಗಾರಿಯಲ್ಲಿ ತೊಡಗಿದ್ದ ಇಬ್ಬರು ಬಾಂಗ್ಲಾದೇಶಿ ವಲಸಿಗರನ್ನು ಗದಗ ಗ್ರಾಮೀಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊಹಮ್ಮದ್ ಸಾಕೀಬ್ (26) ಹಾಗೂ ಮೊಹಮ್ಮದ್ ಡಿಲ್ವರ್ ಹುಸೇನ್ (22) ಪಾಸ್‌ಪೋರ್ಟ್, ವೀಸಾ ಇಲ್ಲದೆ ಭಾರತಕ್ಕೆ ಬಂದಿರುವುದು ವಿಚಾರಣೆ ವೇಳೆ ತಿಳಿದುಬಂದಿದೆ. ಆರೋಪಿಗಳು ಕೊಲ್ಕತ್ತಾದಲ್ಲಿ ಏಜೆಂಟರ ಮೂಲಕ ಆಧಾರ್ ಹಾಗೂ ಪಾನ್ ಕಾರ್ಡ್ ಸೇರಿದಂತೆ ನಕಲಿ ದಾಖಲೆಗಳನ್ನು ಮಾಡಿಸಿಕೊಂಡಿದ್ದರು ಎನ್ನಲಾಗಿದೆ. ಇಬ್ಬರೂ ಬೆಂಗಳೂರು, ಮಂಗಳೂರು, ಕೊಪ್ಪಳ, …

Read More »

ಬೆಳ್ತಂಗಡಿ | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿ ಸೆರೆ

ಬೆಳ್ತಂಗಡಿ: ಶಾಲೆಗೆ ರಿಕ್ಷಾದಲ್ಲಿ ತೆರಳುತ್ತಿದ್ದ 14 ವರ್ಷದ ಬಾಲಕಿಗೆ ಅನುಚಿತವಾಗಿ ವರ್ತಿಸಿ, ಜೀವ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ವೇಣೂರು ಪೊಲೀಸರು ರಿಕ್ಷಾ ಚಾಲಕ ಜಮಾಲುದ್ದೀನ್‌ನನ್ನು ಬಂಧಿಸಿದ್ದಾರೆ. ಕೆಲವು ತಿಂಗಳಿಂದ ಬಾಲಕಿ ಆರೋಪಿಯ ರಿಕ್ಷಾದಲ್ಲಿ ಶಾಲೆಗೆ ತೆರಳುತ್ತಿದ್ದು, ಈ ವೇಳೆ ಆರೋಪಿ ಅನುಚಿತವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ. ಬಾಲಕಿ ವಿರೋಧಿಸಿದಾಗ ಜೀವ ಬೆದರಿಕೆ ಹಾಕಿದ್ದರಿಂದ ಭಯಗೊಂಡು ಯಾರಿಗೂ ವಿಷಯ ತಿಳಿಸಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆ.13ರಂದು ಬಾಲಕಿ ಮನೆಯಲ್ಲಿ …

Read More »

ಕ್ರೆಟಾ ಕಾರಿನಲ್ಲಿತ್ತು 9 ಕೋಟಿ, ಮನೆಯಲ್ಲಿತ್ತು1.3 ಕೋಟಿ: ಹಣದ ಮೂಲ ಹುಡುಕುತ್ತಿರುವ ಐಟಿ ಅಧಿಕಾರಿಗಳು

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯ ವೀರಸಂದ್ರ ಸಿಗ್ನಲ್ ಬಳಿ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ ₹9 ಕೋಟಿ ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಗಸ್ಟ್ 18ರಂದು ಕ್ರೆಟಾ ಕಾರನ್ನು ತಡೆದು ಪರಿಶೀಲಿಸಿದಾಗ ಕಂತೆ ಕಂತೆ ಹಣ ಪತ್ತೆಯಾಗಿದ್ದು, ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ಪ್ರಾಥಮಿಕ ವಿಚಾರಣೆಯಲ್ಲಿ ಹಣ ತಮಿಳುನಾಡಿನ ತೂತುಕುಡಿಯ ಸಿಂಧು ಜ್ಯುವೆಲ್ಲರ್ಸ್ ಮಾಲೀಕ ಸಚಿನ್‌ಗೆ ಸೇರಿದ್ದು ಎನ್ನಲಾಗಿದೆ. ಬಳಿಕ ಅವರ ನಿವಾಸದಲ್ಲಿ ಐಟಿ ಅಧಿಕಾರಿಗಳು ನಡೆಸಿದ ಪರಿಶೀಲನೆಯಲ್ಲಿ ಹೆಚ್ಚುವರಿಯಾಗಿ ₹1.3 …

Read More »

ಚಿಕ್ಕಮಗಳೂರಲ್ಲಿ ‌ನಕಲಿ ನಾಟಿ ತುಪ್ಪ ತಯಾರಿ ಜಾಲ ಪತ್ತೆ: ರಾಶಿ ರಾಶಿ ರಾಸಾಯನಿಕ ಕಂಡು ಅಧಿಕಾರಿಗಳೇ ದಂಗು!

ಚಿಕ್ಕಮಗಳೂರು: ನಾಟಿ ತುಪ್ಪದ ಹೆಸರಿನಲ್ಲಿ ಕಲಬೆರಕೆ ತುಪ್ಪ ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಮಾರ್ಕೆಟ್ ರಸ್ತೆಯ ಪಾಳುಬಿದ್ದ ಮನೆಯೊಂದರಲ್ಲಿ ಡಾಲ್ಡಾ, ವನಸ್ಪತಿ, ಪಾಮ್ ಆಯಿಲ್ ಸೇರಿದಂತೆ ವಿವಿಧ ಪದಾರ್ಥಗಳು ಪತ್ತೆಯಾಗಿವೆ. ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ಪೊಲೀಸರ ನೆರವಿನಿಂದ ಬೀಗ ಮುರಿದು ಮನೆಗೆ ಪ್ರವೇಶಿಸಿ ಪರಿಶೀಲನೆ ನಡೆಸಿದ್ದಾರೆ. ಆದರೆ ದಂಧೆಯಲ್ಲಿ ತೊಡಗಿದ್ದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಆರೋಪಿಗಳು ಬಳ್ಳಾರಿಯಿಂದ ಬಂದವರಾಗಿದ್ದು, …

Read More »

ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್

ಯಾದಗಿರಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಠದಲ್ಲಿ ಸ್ವಾಮೀಜಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಅಣ್ಣಪ್ಪ ಸ್ವಾಮಿ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಭಾಗ್ಯವಂತಿ ದೇವರ ಹೆಸರಲ್ಲಿ ಮಠ ಮಾಡಿಕೊಂಡಿದ್ದಾನೆ. ಕಳೆದ ಆರೇಳು ವರ್ಷಗಳಿಂದ ಮಠ ಮಾಡಿಕೊಂಡು ಸಾವಿರಾರು ಭಕ್ತರಿಗೆ ತನ್ನಲ್ಲಿ ದೈವ ಶಕ್ತಿಯಿದೆ ಅಂತ ಸೆಳೆದಿದ್ದಾನೆ. ಇದೆ ಕಾರಣಕ್ಕೆ ಮಠಕ್ಕೆ ಮಂಗಳವಾರ ಹಾಗೂ ಶುಕ್ರವಾರ ನೂರಾರು ಜನ ಭಕ್ತರು ಬಂದು ಹೋಗ್ತಾಯಿದ್ರು. ಆದ್ರೆ …

Read More »

ಬಿಡದಿ ಬಳಿ ಪತ್ತೆಯಾದ ನಕಲಿ ಔಷಧಿ ಜಾಲ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಐದು ರಾಜ್ಯಗಳ ನಂಟು!

ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಫಾರ್ಮ್‌ಹೌಸ್‌ನಲ್ಲಿ ₹5 ಕೋಟಿ ಮೌಲ್ಯದ ಶಂಕಿತ ನಕಲಿ ಔಷಧಿಗಳನ್ನು ವಶಪಡಿಸಿಕೊಂಡ ಪ್ರಕರಣದ ತನಿಖೆ ವಿಸ್ತರಿಸಿದ್ದು, ಅಂತಾರಾಜ್ಯ ನಂಟಿನ ಶಂಕೆ ವ್ಯಕ್ತವಾಗಿದೆ. ಔಷಧಿಗಳನ್ನು ಮರುಪ್ಯಾಕ್ ಮಾಡಿ ಪ್ರತಿಷ್ಠಿತ ಕಂಪನಿಗಳ ಹೆಸರಿನ ಲೇಬಲ್ ಅಂಟಿಸಿ ಮಾರುಕಟ್ಟೆ ಹಾಗೂ ಆಸ್ಪತ್ರೆಗಳಿಗೆ ಪೂರೈಸಲಾಗುತ್ತಿತ್ತು ಎನ್ನಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಹಿಮಾಚಲ ಪ್ರದೇಶ, ತೆಲಂಗಾಣ, ದೆಹಲಿ, ತಮಿಳುನಾಡು ಹಾಗೂ ಆಂಧ್ರಪ್ರದೇಶದ ಸಂಪರ್ಕದ ಬಗ್ಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿದ್ದು, ಈ ರಾಜ್ಯಗಳ ಡ್ರಗ್ …

Read More »

ಬೆಂಗಳೂರಲ್ಲಿ ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ಹಣ ಜಪ್ತಿ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ಕಾರನ್ನು ತಡೆದು ಪರಿಶೀಲಿಸಿದಾಗ ಸುಮಾರು ₹9 ಕೋಟಿ ನಗದು ಪತ್ತೆಯಾಗಿದ್ದು, ಪೊಲೀಸರು ಹಣವನ್ನು ಜಪ್ತಿ ಮಾಡಿದ್ದಾರೆ. ಕಾರಿನಲ್ಲಿ ಭಾರೀ ಪ್ರಮಾಣದ ಹಣ ಸಾಗಿಸಲಾಗುತ್ತಿದೆ ಎಂಬ ಐಟಿ ಅಧಿಕಾರಿಗಳ ಮಾಹಿತಿಯ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಪತ್ತೆಯಾದ ಹಣ ತಮಿಳುನಾಡಿನ ತೂತುಕುಡಿಗೆ ಸೇರಿದ ವ್ಯಕ್ತಿಯದ್ದು ಎಂದು ತಿಳಿದುಬಂದಿದೆ. ಹಣದ ಮೂಲ ಹಾಗೂ ಯಾವ ಉದ್ದೇಶಕ್ಕಾಗಿ ಸಾಗಿಸಲಾಗುತ್ತಿತ್ತು ಎಂಬುದರ ಕುರಿತು ಪೊಲೀಸರು ಮತ್ತು …

Read More »

ಸಾಲಗಾರರ ಕಾಟಕ್ಕೆ ಸಾವಿನ ಪ್ಲಾನ್ – 11 ವರ್ಷದ ಹಿಂದೆ ಸತ್ತವನು ಸಿಕ್ಕಿಬಿದ್ದ!

ಕೋಲಾರ: ಸಾಲಗಾರರ ಕಾಟದಿಂದ ತಪ್ಪಿಸಿಕೊಳ್ಳಲು ತನ್ನದೇ ಸಾವಿನ ನಾಟಕವಾಡಿ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅರುಣ್ ಕುಮಾರ್ ರೆಡ್ಡಿಯನ್ನು ಕ್ಯಾಸಂಬಳ್ಳಿ ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದಾರೆ. 2015ರಲ್ಲಿ ಕ್ಯಾಸಂಬಳ್ಳಿ ಬಳಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ಶವವನ್ನು ತನ್ನದೇ ಶವವೆಂದು ನಂಬಿಸುವಂತೆ ಮಾಡಿ ಆತ ಪರಾರಿಯಾಗಿದ್ದ. ಸಾಲಗಾರರಿಂದ ತಪ್ಪಿಸಿಕೊಳ್ಳುವುದರ ಜೊತೆಗೆ ವಿಮೆ ಹಣ ಪಡೆಯುವ ಉದ್ದೇಶದಿಂದ ಸ್ಮಶಾನದಿಂದ ಮತ್ತೊಂದು ಮೃತದೇಹ ತಂದು ಸುಟ್ಟು, ತನ್ನ ಬೈಕ್ ಹಾಗೂ ಗುರುತಿನ ಚೀಟಿ ಸ್ಥಳದಲ್ಲಿಟ್ಟು ನಾಪತ್ತೆಯಾಗಿದ್ದ …

Read More »