Breaking News

Breaking News

ನಾಲ್ವರು ನಾಪತ್ತೆ ಕೇಸ್​ಗೆ ತಿರುವು: ಕೋಟ್ಯಂತರ ರೂ ವಂಚಿಸಿ ನಾಪತ್ತೆಯಾಗಿರುವ ಸ್ನೇಹಿತನ ಹಾದಿ ಹಿಡಿದ್ರಾ ದಂಪತಿ?

ದಾವಣಗೆರೆ: ನಗರದ ಬನಶಂಕರಿ ಬಡಾವಣೆಯ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ರಮೇಶಕುಮಾರ್–ಜಯಶೀಲಾ ದಂಪತಿ ಇಬ್ಬರು ಮಕ್ಕಳೊಂದಿಗೆ ಆ.14ರಂದು ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದು, ಕೋಟ್ಯಂತರ ರೂ. ಹಣದ ಅವ್ಯವಹಾರದ ಹಿನ್ನೆಲೆಯಲ್ಲಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ರಮೇಶಕುಮಾರ್ ಅವರ ಸ್ನೇಹಿತ ರಮೇಶ್ ‘ಈಶ್ವರಿ ಎಂಟರ್‌ಪ್ರೈಸಸ್’ ಹೆಸರಿನಲ್ಲಿ ಹೂಡಿಕೆದಾರರಿಗೆ ಶೇ.4ರಿಂದ 6ರಷ್ಟು ಲಾಭ ನೀಡುವುದಾಗಿ ನಂಬಿಸಿ 100ಕ್ಕೂ ಹೆಚ್ಚು ಜನರಿಂದ ₹7.27 ಕೋಟಿ ಸಂಗ್ರಹಿಸಿ 2023ರಲ್ಲಿ ನಾಪತ್ತೆಯಾಗಿದ್ದ. …

Read More »

ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದ ಯುವಕ

ಹಾವೇರಿ: ಶಿಗ್ಗಾವಿ ಪಟ್ಟಣದ ಆಂಜನೇಯ ಮತ್ತು ಬನ್ನಿ ಮಹಾಕಾಳಿ ದೇವಾಲಯದ ಆವರಣದಲ್ಲಿ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿದ ಆರೋಪ ಕೇಳಿಬಂದಿದೆ. ಜಾಫರ್ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಕೃತ್ಯ ಗಮನಿಸಿದ ಸ್ಥಳೀಯರು ಯುವಕನನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಆತ ಸ್ಥಳೀಯರೊಂದಿಗೆ ಅವಾಚ್ಯವಾಗಿ ಮಾತನಾಡಿದ್ದಾನೆ ಎನ್ನಲಾಗಿದ್ದು, ಇದರಿಂದ ಆಕ್ರೋಶಗೊಂಡ ಜನರು ಆತನ ಮೇಲೆ ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ …

Read More »

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಖಾಸಗಿ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಸಾವು, 20 ಮಂದಿಗೆ ಗಾಯ

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿ ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌ ರಸ್ತೆ ಬದಿಯ ಟ್ರೆಂಚ್‌ಗೆ ಬಿದ್ದ ಪರಿಣಾಮ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್‌ನಲ್ಲಿ ಒಟ್ಟು 53 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗಾಯಗೊಂಡ 20 ಮಂದಿಯನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ …

Read More »

ಪಾಗಲ್ ಪ್ರೇಮಿಯ ಕಾಟಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ

ಬೆಂಗಳೂರಿನ ಇಂದಿರಾನಗರದ ಲಕ್ಷ್ಮಿಪುರಂ ಬಡಾವಣೆಯಲ್ಲಿ ಪಾಗಲ್ ಪ್ರೇಮಿಯ ಕಾಟಕ್ಕೆ ಬೇಸತ್ತು 21 ವರ್ಷದ ಕವಿತಾ ಎಂಬ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಗಸ್ಟ್ 6ರಂದು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣದ ತನಿಖೆ ವೇಳೆ ಕಿರಣ್ ಎಂಬಾತನ ಕಿರುಕುಳ ಬೆಳಕಿಗೆ ಬಂದಿದೆ. 2024ರ ಮೇ ತಿಂಗಳಲ್ಲಿ ಸಂಬಂಧಿಕ ರಾಜು ಅವರನ್ನು ಕವಿತಾ ವಿವಾಹವಾಗಿದ್ದರು. ದಂಪತಿಗೆ ಒಂದೂವರೆ ವರ್ಷದ ಮಗುವಿದೆ. ಮೂರು ವರ್ಷಗಳಿಂದ ಕವಿತಾ ಹಿಂದೆ ಬಿದ್ದಿದ್ದ ಕಿರಣ್, ಮದುವೆಯ …

Read More »

ಸಿರವಾರ | ಅತ್ಯಾಚಾರವೆಸಗಿ ಯುವತಿ ಕೊಲೆ: ಮೂವರ ಬಂಧನ

ರಾಯಚೂರು: ಸಿರವಾರ ತಾಲ್ಲೂಕಿನ ಹೊಕ್ರಾಣಿಯಲ್ಲಿ ಅಶ್ವಿನಿ ತಿಮ್ಮಾರೆಡ್ಡಿ (22) ಎಂಬ ಯುವತಿಯನ್ನು ಕೊಲೆ ಮಾಡಲಾಗಿದ್ದು, ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿರವಾರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ಬುಧವಾರ ಸಂಜೆ ಶೌಚಕ್ಕೆಂದು ಮನೆಯಿಂದ ಹೊರಗೆ ಹೋದ ಅಶ್ವಿನಿ ರಾತ್ರಿಯಾದರೂ ವಾಪಸ್‌ ಬಂದಿರಲಿಲ್ಲ. ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಗುರುವಾರ ಬೆಳಿಗ್ಗೆ ಬಾವಿಯಲ್ಲಿ ನಗ್ನ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ. …

Read More »

ಹಸು ಕಟ್ಟುವ ವಿಚಾರಕ್ಕೆ ಅಪ್ಪನ ಹಿಡಿದು ಹಿಗ್ಗಾಮುಗ್ಗಾ ಥಳಿಸಿದ ದುಷ್ಟರು.. ಹೆದರಿದ ಅಪ್ರಾಪ್ತ ಪುತ್ರ, ದುರಂತ ಅಂತ್ಯ

ಮೈಸೂರು: ಮನೆ ಮುಂದೆ ಹಸು ಕಟ್ಟುವ ವಿಚಾರಕ್ಕೆ ಆರಂಭವಾದ ಕ್ಷುಲ್ಲಕ ಜಗಳ ವಿಕೋಪಕ್ಕೆ ತಿರುಗಿ, ನಂಜನಗೂಡು ತಾಲ್ಲೂಕಿನ ಸಿಂಗಾರಿಪುರದಲ್ಲಿ ದಾರುಣ ಘಟನೆ ನಡೆದಿದೆ. ಶಂಕರ್ (49) ಎಂಬವರ ಮೇಲೆ ಒಂಬತ್ತು ಮಂದಿ ಕಲ್ಲು ಹಾಗೂ ದೊಣ್ಣೆಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ವೇಳೆ ಶಂಕರ್ ಅವರ ಅಪ್ರಾಪ್ತ ಪುತ್ರ ನಾಗೇಂದ್ರನಿಗೂ ಆರೋಪಿಗಳು ಅವಾಚ್ಯವಾಗಿ ನಿಂದಿಸಿ, ಪ್ರಾಣ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ತಂದೆಯ …

Read More »

ಬಂಟ್ವಾಳದಲ್ಲಿ ಸಿನಿಮೀಯ ಮಾದರಿ ದರೋಡೆ: ತಲವಾರು ತೋರಿಸಿ 8.35 ಲಕ್ಷ ರೂ. ನಗದು ಲೂಟಿ

ದಕ್ಷಿಣ ಕನ್ನಡ: ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಡದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ತಲವಾರು ತೋರಿಸಿ ಬೆದರಿಸಿ ₹8.35 ಲಕ್ಷ ನಗದು ಸುಲಿಗೆ ಮಾಡಿ ಪರಾರಿಯಾಗಿದ್ದಾರೆ. ಘಟನೆ ಗುರುವಾರ ಮಧ್ಯಾಹ್ನ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸುರತ್ಕಲ್‌ ಚೊಕ್ಕಬೆಟ್ಟು ನಿವಾಸಿ ಮಯ್ಯದಿ (61) ಅವರು ಮಂಗಳೂರಿನ ಕಣ್ಣೂರಿನ ಸಿಮೆಂಟ್ ಹಾಗೂ ಕಬ್ಬಿಣದ ಸಗಟು ಮಾರಾಟ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾರೆ. ವಿವಿಧ ಅಂಗಡಿಗಳಿಂದ ಹಣ ಸಂಗ್ರಹಿಸಿಕೊಂಡು …

Read More »

ಚಿನ್ನಾಭರಣ ಕಳವು ಮಾಡಿದ್ದ ಅಪ್ರಾಪ್ತರಿಬ್ಬರ ಬಂಧನ

ಶಿವಮೊಗ್ಗ: ಭದ್ರಾವತಿ ತಾಲೂಕಿನ ತಡಸ ಗ್ರಾಮದಲ್ಲಿ ಮನೆಯ ಅಡುಗೆ ಕೋಣೆಯ ವೆಂಟಿಲೇಟರ್ ಮೂಲಕ ನುಗ್ಗಿ ₹6.39 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಇಬ್ಬರು ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರಿಂದ ಒಟ್ಟು ₹6,89,965 ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಲಾಗಿದೆ. ಆ.17ರಂದು ಕಲೀಂ ಉಲ್ಲಾ ಅವರ ಮನೆಯಲ್ಲಿ ಕಳ್ಳತನ ನಡೆದಿತ್ತು. 18 ಗ್ರಾಂ ಕಿವಿಯೋಲೆ, 22 ಗ್ರಾಂ ಚಿನ್ನದ ನಕ್ಲೇಸ್ ಹಾಗೂ 20 ಗ್ರಾಂ ಮಾಂಗಲ್ಯ …

Read More »

ಅರೆನಗ್ನ ಸ್ಥಿತಿಯಲ್ಲಿ ದಲಿತ ಯುವತಿಯ ಮೃತದೇಹ ಪತ್ತೆ; ಅತ್ಯಾಚಾರ ಶಂಕೆ

ರಾಯಚೂರು: ಸಿರವಾರ ತಾಲೂಕಿನ ಹೊಕ್ರಾಣಿ ಬಳಿ ದಲಿತ ಸಮುದಾಯದ ಯುವತಿ ಅಶ್ವಿನಿ ಛಲವಾದಿ (22) ಅವರ ಮೃತದೇಹ ಬಾವಿಯ ಮೆಟ್ಟಿಲ ಬಳಿ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕುಟುಂಬಸ್ಥರು ಆರೋಪಿಸಿದ್ದಾರೆ. ಬುಧವಾರ ರಾತ್ರಿ 7 ಗಂಟೆಗೆ ಬಯಲು ಬಹಿರ್ದೆಸೆಗೆ ತೆರಳಿದ್ದ ಅಶ್ವಿನಿ ಮನೆಗೆ ಮರಳಿರಲಿಲ್ಲ. ರಾತ್ರಿಯಿಡೀ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಗುರುವಾರ ಬೆಳಿಗ್ಗೆ ಬಾವಿಯ ಬಳಿ ಆಕೆಯ ಬಟ್ಟೆ, ಚಪ್ಪಲಿ ಹಾಗೂ ಕೆಲವು …

Read More »

ಡಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಹಾಕಿದವರಿಗೆ ಮೊದಲು ಒಂದು ವಾರ್ಡ್ ಗೆಲ್ಲುವ ತಾಕತ್ತು ಇದೆಯಾ..?

ಜನರ ನಾಲ್ಕು ಮತ ಪಡೆಯಲು ಕಷ್ಟ… ಇಡೀ ಜಿಲ್ಲೆ ಕಾಂಗ್ರೆಸ್ ಮುನ್ನಡೆಸುವ ಆಸೆ! ಅಯ್ಯೋ ದುರಂತ.! ಹುಬ್ಬಳ್ಳಿ–ಧಾರವಾಡದಲ್ಲಿ ಡಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಅರ್ಜಿ ಹಾಕಿದವರ ಸಂಖ್ಯೆ ಹೆಚ್ಚಾಗಿದೆ. ಅರ್ಜಿ ಹಾಕುವುದಕ್ಕೆ ಯಾರಿಗೂ ತಡೆ ಇಲ್ಲ. ಆದರೆ ಅರ್ಜಿ ಹಾಕುವ ಮುನ್ನ ಒಂದು ಪ್ರಶ್ನೆಗೆ ಉತ್ತರ ಕೊಡಲೇಬೇಕು.! ಒಂದು ವಾರ್ಡ್‌ನಲ್ಲಿ ಕಾರ್ಪೊರೇಟರ್ ಆಗಿ ಗೆದ್ದು ಬರುವಷ್ಟು ಜನಬೆಂಬಲ ಇಲ್ಲದವರು, ಇಡೀ ಜಿಲ್ಲೆಯ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವ ಅಧ್ಯಕ್ಷ ಸ್ಥಾನ ಕೇಳುವುದು ಸರೀನಾ.? …

Read More »