Breaking News

Breaking News

ಬಸವರಾಜರೆಡ್ಡಿ ಆತ್ಮಹತ್ಯೆ ಪ್ರಕರಣ: ಇಬ್ಬರು ಪೊಲೀಸರು ಅಮಾನತು

ಕೊಪ್ಪಳ: ನಿವೇಶನ ವಿವಾದದಿಂದ ಬೇಸತ್ತು ಬಸವರಾಜರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್‌ಸ್ಪೆಕ್ಟರ್ ವಿ. ನಾರಾಯಣ ಹಾಗೂ ಹೆಡ್ ಕಾನ್‌ಸ್ಟೆಬಲ್ ಲಕ್ಷ್ಮಣ ಅವರನ್ನು ಅಮಾನತು ಮಾಡಲಾಗಿದೆ. ನಿವೇಶನ ವಿವಾದದ ಕುರಿತು ಬಸವರಾಜರೆಡ್ಡಿ ಠಾಣೆಗೆ ದೂರು ನೀಡಿದ್ದರೂ, ಆರೋಪಿಗಳನ್ನು ಕರೆಸಿ ಸಮಸ್ಯೆ ಬಗೆಹರಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರು ಎನ್ನಲಾಗಿದೆ. ಆ.15ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೆಡ್ಡಿ, ಚಿಕಿತ್ಸೆ ಫಲಿಸದೆ ಮರುದಿನ ಮೃತಪಟ್ಟಿದ್ದರು. ಬಳಿಕ ಕುಟುಂಬಸ್ಥರು ಠಾಣೆಗೆ ಮುತ್ತಿಗೆ ಹಾಕಿ …

Read More »

ರ್‍ಯಾಪಿಡೋದಿಂದ ಸಿಕ್ಕಿದ್ದು ಕೇವಲ ಸುಳ್ಳು ಭರವಸೆ, ಬೈಕ್ ಟ್ಯಾಕ್ಸಿ ಕಂಪನಿಯ ಬಣ್ಣ ಬಯಲು ಮಾಡಿದ ಸಂತ್ರಸ್ತೆ-

ಬೆಂಗಳೂರು: ರ್‍ಯಾಪಿಡೋ ಬೈಕ್ ಟ್ಯಾಕ್ಸಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಂಟೀರಿಯರ್ ಡಿಸೈನರ್ ಸನಿ ಕೃಷ್ಣ (32), ಸಂಸ್ಥೆ ವೈದ್ಯಕೀಯ ವೆಚ್ಚ ಭರಿಸುವುದಾಗಿ ಹೇಳಿದ್ದರೂ ಈವರೆಗೆ ಯಾವುದೇ ಹಣ ನೀಡಿಲ್ಲ ಎಂದು ಆರೋಪಿಸಿದ್ದಾರೆ. ಜೂನ್ 17ರಂದು ನಡೆದ ಅಪಘಾತದಲ್ಲಿ ರ್‍ಯಾಪಿಡೋ ಚಾಲಕನ ನಿರ್ಲಕ್ಷ್ಯದಿಂದ ಟ್ರಾಕ್ಟರ್‌ಗೆ ಡಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದಾಗಿ ಅವರು ತಿಳಿಸಿದ್ದಾರೆ. ಅಪಘಾತದಲ್ಲಿ ಸನಿ ಅವರ 7 ಪಕ್ಕೆಲುಬುಗಳು ಮುರಿದಿದ್ದು, ಗುಲ್ಮವನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆದುಹಾಕಲಾಗಿದೆ. ಮುಖದ ಮೂಳೆಗಳು ಜಜ್ಜಿದ್ದರಿಂದ ಪ್ಲಾಸ್ಟಿಕ್ …

Read More »

ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್: ಇದರ ಹಿಂದಿನ ಸೂತ್ರಧಾರಿಗಳ ಹೆಸರು ಬಹಿರಂಗ

ಬೆಂಗಳೂರು: ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಜೈಲಿನಲ್ಲಿದ್ದ ಕೈದಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸ್ ಇಲಾಖೆಯಲ್ಲಿ ಮುಜುಗರಕ್ಕೆ ಕಾರಣವಾಗಿದೆ. ವಿಡಿಯೋ ವೈರಲ್ ಮಾಡಿದ ಆರೋಪದಡಿ ರೌಡಿಶೀಟರ್‌ಗಳಾದ ಧರ್ಮ ಹಾಗೂ ಸಾಯಿಕುಮಾರ್ ವಿರುದ್ಧ ಮಹಿಳಾ ಅಧಿಕಾರಿ ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದ್ದಾರೆ. ವಿಡಿಯೋ ಕಾಲ್ ವೇಳೆ ಧರ್ಮ ವಿಡಿಯೋವನ್ನು ರೆಕಾರ್ಡ್ ಮಾಡಿಕೊಂಡು ಬಳಿಕ ಸಾಯಿಕುಮಾರ್ ಮೂಲಕ ವೈರಲ್ ಮಾಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ವಿಡಿಯೋ …

Read More »

ಧಾರವಾಡದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಮರ್ಡರ್ : ಕತ್ತು ಸೀಳಿ ಯುವಕನ ಬರ್ಬರ ಹತ್ಯೆ, ಬೆಚ್ಚಿ ಬಿದ್ದ ಜನತೆ!

ಧಾರವಾಡ: ನಗರದ ಐನಾಕ್ಸ್ ಚಿತ್ರಮಂದಿರದ ಬಳಿ ಬೆಳ್ಳಂಬೆಳಿಗ್ಗೆ ಯುವಕನೋರ್ವನನ್ನು ದುಷ್ಕರ್ಮಿಗಳು ಕತ್ತು ಕೊಯ್ದು ಭೀಕರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಮೃತರನ್ನು ಲಕ್ಷ್ಮಿ ಸಿಂಗನಕೇರಿ ಬಡಾವಣೆಯ ನಿವಾಸಿ ಹನುಮಂತ ಅಣ್ಣಿಗೇರಿ (25) ಎಂದು ಗುರುತಿಸಲಾಗಿದೆ. ಹಂತಕರು ಕೃತ್ಯ ಎಸಗಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದು, ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಾಹಿತಿ ತಿಳಿದು ವಿದ್ಯಾಗಿರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. …

Read More »

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ – ಏಳು ಪ್ರಯಾಣಿಕರು ಜಸ್ಟ್ ಮಿಸ್!

ಉಡುಪಿ: ಉಡುಪಿಯಿಂದ ಸಾಗರದತ್ತ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬಸ್‌ನಲ್ಲಿದ್ದ ಏಳು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಸಂಚರಿಸುತ್ತಿದ್ದ ವೇಳೆ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಎಲೆಕ್ಟ್ರಿಕಲ್ ಬಾಕ್ಸ್ ಭಾಗದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಬಸ್‌ಗೆ ವ್ಯಾಪಿಸಿದ ಹಿನ್ನೆಲೆಯಲ್ಲಿ ನಿರ್ವಾಹಕ ಸಮಯಪ್ರಜ್ಞೆ ಮೆರೆದು ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ …

Read More »

ಜೈಲಲ್ಲಿ ಪೊಲೀಸರಿಂದಲೇ ವೇಶ್ಯಾವಾಟಿಕೆ ದಂಧೆ : ಆರೋಪಿಯಿಂದ ಸ್ಪೋಟಕ ವಿಡಿಯೋ ವೈರಲ್!

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಅಧಿಕಾರಿಗಳೇ ಅಕ್ರಮ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿರುವ ರೌಡಿಶೀಟರ್ ಸುರೇಶ್ ಅಲಿಯಾಸ್ ಸಾಯಿ ಕುಮಾರ್ ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೈಲಿನೊಳಗೆ ಹಣ ನೀಡಿದರೆ ಕೈದಿಗಳಿಗೆ ಮೊಬೈಲ್, ಮದ್ಯ ಸೇರಿದಂತೆ ವಿವಿಧ ವಸ್ತುಗಳು ಲಭ್ಯವಾಗುತ್ತವೆ ಎಂದು ಅವರು ಆರೋಪಿಸಿದ್ದಾರೆ. ಜೈಲಾಧಿಕಾರಿಗಳ ಕುಮ್ಮಕ್ಕಿನಿಂದಲೇ ಜೈಲಿನೊಳಗೆ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಸುರೇಶ್ ಗಂಭೀರ ಆರೋಪ ಮಾಡಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಕ್ಷ್ಯಗಳು ತಮ್ಮ ಬಳಿ …

Read More »

ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಆತ್ಮಹತ್ಯೆ, ಡೆತ್​ನೋಟ್​​ ಪತ್ತೆ, ಆದ್ರೆ ಹೆಂಡತಿ ಹೇಳಿದ್ದೇ ಬೇರೆ!

ನೆಲಮಂಗಲ: ಪತ್ನಿಯ ಅನೈತಿಕ ಸಂಬಂಧದಿಂದ ಮನನೊಂದು ಮುಖ್ಯೋಪಾಧ್ಯಾಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ತಾಲ್ಲೂಕಿನ ಮಣ್ಣೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು 53 ವರ್ಷದ ಲಕ್ಷ್ಮೀಪ್ರಸಾದ್ ಎಂದು ಗುರುತಿಸಲಾಗಿದ್ದು, ಮಧುಗಿರಿ ಬಳಿಯ ಶಾಲೆಯೊಂದರಲ್ಲಿ ಮುಖ್ಯೋಪಾಧ್ಯಾಯರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೂ ಮುನ್ನ ಲಕ್ಷ್ಮೀಪ್ರಸಾದ್ ಡೆತ್‌ನೋಟ್ ಬರೆದಿಟ್ಟಿದ್ದು, ತಮ್ಮ ಸಾವಿಗೆ ಪತ್ನಿಯ ಅನೈತಿಕ ಸಂಬಂಧವೇ ಕಾರಣ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡೆತ್‌ನೋಟ್‌ನಲ್ಲಿನ ಆರೋಪಗಳ ಆಧಾರದಲ್ಲಿ ಪೊಲೀಸರು …

Read More »

‘ನಾವು ಅಕ್ಕ-ತಮ್ಮ, ನಮ್ಮ ಸಂಬಂಧಕ್ಕೆ ಕಳಂಕ ಹಚ್ಚಬೇಡಿ’; ರೈಲಿಗೆ ತಲೆಕೊಟ್ಟ ಯುವಕ-ಯುವತಿ

ಚಿಕ್ಕಮಗಳೂರು: ಜಿಲ್ಲೆಯ ಕಡೂರು ಬಳಿ ಯುವಕ-ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಕುಣಿಗಲ್‌ ಮೂಲದ ರೋಹಿಣಿ ಹಾಗೂ ಬೆಂಗಳೂರು ಮೂಲದ ನವೀನ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಇಬ್ಬರೂ ಡೆತ್‌ನೋಟ್ ಬರೆದಿಟ್ಟಿರುವುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಡೆತ್‌ನೋಟ್‌ನಲ್ಲಿ ತಮ್ಮ ಸಂಬಂಧಕ್ಕೆ ಕಳಂಕ ಹಚ್ಚಬಾರದು ಎಂದು ಮನವಿ ಮಾಡಿದ್ದಾರೆ. ತಾವು ರಕ್ತ ಸಂಬಂಧಿಕರಲ್ಲದಿದ್ದರೂ ಸಹೋದರ-ಸಹೋದರಿಯಂತೆ ಅನ್ಯೋನ್ಯವಾಗಿದ್ದೆವು. ಆದರೆ ಸಂಬಂಧಿಕರು ತಮ್ಮ ಸಂಬಂಧಕ್ಕೆ ಪ್ರೀತಿಯ ಬಣ್ಣ ನೀಡಿದ್ದರಿಂದ …

Read More »

ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: ಡೂಪ್ಲಿಕೇಟ್ ಕೀ ಬಳಸಿ ಕೋಟಿ ಮೌಲ್ಯದ ಐಷಾರಾಮಿ ಕಾರುಗಳ ಕಳ್ಳತನ ಮಾಡ್ತಿದ್ದ ಮಹಿಳೆ ಸೇರಿ ಇಬ್ಬರು ಖದೀಮರ ಬಂಧನ!

ಬೆಂಗಳೂರು: ನಕಲಿ ಕೀ ಹಾಗೂ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಐಷಾರಾಮಿ ಕಾರುಗಳನ್ನು ಕದ್ದು ರಾಜಸ್ಥಾನದಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ಓರ್ವ ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿ, ₹35 ಲಕ್ಷ ಮೌಲ್ಯದ ಟೊಯೋಟಾ ಫಾರ್ಚೂನರ್ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಕಾರಿನ ಸಿಸ್ಟಮ್ ಡಿಕೋಡ್ ಮಾಡಿ ನಕಲಿ ಕೀ ತಯಾರಿಸಿ ಕಳ್ಳತನ ಮಾಡುತ್ತಿದ್ದರು. ಬಳಿಕ ರಾಜಸ್ಥಾನದ ಬಾರ್ಮರ್, ಬಾಲೋತ್ರಾ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕಾರುಗಳನ್ನು ಮಾರಾಟ ಮಾಡುತ್ತಿದ್ದರು ಎಂದು …

Read More »

ಮದ್ದೂರಿನ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ : ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟುಭಸ್ಮ |

ಮಂಡ್ಯ: ಮದ್ದೂರು ನಗರದ ಮಳವಳ್ಳಿ ರಸ್ತೆಯಲ್ಲಿರುವ ಗಿಲ್ ವುಡ್ ಫ್ಯಾಷನ್ ಪ್ರೈವೇಟ್ ಲಿಮಿಟೆಡ್ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಗುರುವಾರ ಬೆಳಗಿನ ಜಾವ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಸುಮಾರು ₹5ರಿಂದ ₹6 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ಅಂದಾಜಿಸಲಾಗಿದೆ. ಸೋಮನಹಳ್ಳಿಯಿಂದ ಇತ್ತೀಚೆಗೆ ಮದ್ದೂರು ನಗರಕ್ಕೆ ಸ್ಥಳಾಂತರಗೊಂಡಿದ್ದ ಕಾರ್ಖಾನೆಯಲ್ಲಿ ಬೆಳಗ್ಗೆ ಕಾರ್ಮಿಕರು ಕೆಲಸಕ್ಕೆ ಬಂದಾಗ ಬೆಂಕಿ ಹೊತ್ತಿಕೊಂಡಿರುವುದು ಗಮನಕ್ಕೆ ಬಂದಿದೆ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ …

Read More »