BigTv News
August 20, 2026
Breaking News
ರಾಯಚೂರು: ಐದು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು, ಇಬ್ಬರು ಮಕ್ಕಳಾದ ಬಳಿಕ ಪತಿ ತಮ್ಮನ್ನು ಹಾಗೂ ಮಕ್ಕಳನ್ನು ದೂರ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಪತಿ ಮನೆ ಮುಂದೆ ಅಹೋರಾತ್ರಿ ಧರಣಿ ನಡೆಸುತ್ತಿರುವ ಘಟನೆ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದೆ. ಅಮೃತಾ ಹಾಗೂ ದರ್ಶನ್ ಮೆಹ್ತಾ ಐದು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಜಾತಿ ವಿಚಾರ ಮುಂದಿಟ್ಟು ಪತಿಯ ಕುಟುಂಬದವರು ತಮ್ಮನ್ನು ಮನೆಗೆ ಸೇರಿಸಿಕೊಳ್ಳುತ್ತಿಲ್ಲ ಎಂದು ಅಮೃತಾ …
Read More »
BigTv News
August 20, 2026
Breaking News
ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ರಾಣೇಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿ ನಡೆದಿದೆ. ಮೃತರನ್ನು ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡಾವಣೆಯ ಸಿದ್ದಾರ್ಥ (27), ಹಸನ್ಮುಖಿ (29) ಹಾಗೂ ಯಶೋಧಾ ಬಾಯಿ (51) ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ಸೌಂದರ್ಯ (26), ಸಿಂಧು (24) ಹಾಗೂ ಒಂದು ವರ್ಷದ ಕಶ್ವಶ್ರೀ ಅವರನ್ನು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ …
Read More »
BigTv News
August 20, 2026
Breaking News
ಬೆಂಗಳೂರು: ಆದಾಯಕ್ಕಿಂತ ಅಧಿಕ ಮೌಲ್ಯದ ಆಸ್ತಿ ಗಳಿಸಿರುವ ಆರೋಪದ ಮೇಲೆ ಬೆಂಗಳೂರಿನ ವಿಶೇಷ ಭೂಸ್ವಾಧೀನಾಧಿಕಾರಿ ಮಲ್ಲಿಕಾರ್ಜುನ ಬಿ. ಅವರಿಗೆ ಸೇರಿದ 11 ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಒಟ್ಟು ₹18.33 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದ್ದು, ಇದರಲ್ಲಿ ಸುಮಾರು ₹12.95 ಕೋಟಿ ಅಕ್ರಮ ಆಸ್ತಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಯು 100 ಎಕರೆ 5 ಗುಂಟೆ ಕೃಷಿ ಜಮೀನು ಹೊಂದಿರುವುದು ಪತ್ತೆಯಾಗಿದ್ದು, ಇದರ …
Read More »
BigTv News
August 19, 2026
Breaking News
ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಿಷೇಧಿತ ಮಾದಕವಸ್ತು ಎಂಡಿಎಂಎ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ವರ್ಕಾಡಿಯ ಮೊಹಮ್ಮದ್ ಇರ್ಷಾದ್ (30) ಹಾಗೂ ಕಣ್ಣೂರಿನ ನಿತಿನ್ ಕೃಷ್ಣನ್ (27) ಬಂಧಿತರು. ಆರೋಪಿಗಳಿಂದ ₹1.36 ಲಕ್ಷ ಮೌಲ್ಯದ 13.69 ಗ್ರಾಂ ಎಂಡಿಎಂಎ ಹಾಗೂ ₹60 ಸಾವಿರ ಮೌಲ್ಯದ 1.206 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಪಂಪ್‌ವೆಲ್–ನಂತೂರು ಸರ್ವಿಸ್ ರಸ್ತೆಯಲ್ಲಿ ಆಟೋರಿಕ್ಷಾದಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇರ್ಷಾದ್‌ನನ್ನು ಪೊಲೀಸರು ಬಂಧಿಸಿದ್ದಾರೆ. …
Read More »
BigTv News
August 19, 2026
Breaking News
ಕಾಸರಗೋಡು: ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಮನೆ ಅಡುಗೆ ಕೊಠಡಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾಶಿಮಠ ಗುಡ್ಡೆಯ ಡಿ.ಯೋಗೀಶ್ ಪ್ರಭು ಅವರ ಪತ್ನಿ ಸಾವಿತ್ರಿ ಪ್ರಭು (65) ಮೃತರು. ಮಂಗಳವಾರ ರಾತ್ರಿ ಎಂದಿನಂತೆ ಊಟ ಮಾಡಿ ಮಲಗಿದ್ದರು. ಬುಧವಾರ ಎದ್ದು ನೋಡಿದಾಗ ಅಡುಗೆ ಮನೆಯಲ್ಲಿ ಸಾವಿತ್ರಿ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಡುಗೆ ಮನೆಯಲ್ಲಿದ್ದ ಫೈಬರ್ ಕುರ್ಚಿ ಮೇಲೆ ಕುಳಿತುಕೊಂಡು ಸೀಮೆ ಎಣ್ಣೆ ಸುರಿದು ಬೆಂಕಿ …
Read More »
BigTv News
August 19, 2026
Breaking News
ಬೆಂಗಳೂರು: ನಿತ್ಯ ಮದ್ಯಪಾನ ಮಾಡಿ ತಾಯಿಗೆ ಕಿರುಕುಳ ನೀಡುತ್ತಿದ್ದ ತಂದೆಯನ್ನು ಮಗನೇ ಹತ್ಯೆ ಮಾಡಿದ ಘಟನೆ ಶಿವಪುರದಲ್ಲಿ ನಡೆದಿದೆ. ಶ್ರೀಧರ್ ಮೂರ್ತಿ ಅವರು ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ. ಮಂಗಳವಾರ ಮದ್ಯದ ಅಮಲಿನಲ್ಲಿ ಪತ್ನಿಯೊಂದಿಗೆ ಗಲಾಟೆ ಮಾಡಿ ಕತ್ತರಿಯಿಂದ ಹಲ್ಲೆ ಮಾಡಲು ಮುಂದಾಗಿದ್ದ ವೇಳೆ, ತಾಯಿಯ ರಕ್ಷಣೆಗೆ ಬಂದ ಎರಡನೇ ಮಗ ಉದಯ್ ತಂದೆಯ ಮೇಲೆ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡ ಶ್ರೀಧರ್ ಮೂರ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. …
Read More »
BigTv News
August 19, 2026
Breaking News
ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ವ್ಯಾಪ್ತಿಯ ಎನ್.ಮಹದೇವಪುರ ಗ್ರಾಮದ ಬಾವಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಯಕನಹಟ್ಟಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಚಿಕ್ಕಉಳ್ಳಾರ್ತಿ ಗ್ರಾಮದ ಬೋರಯ್ಯ ಹಾಗೂ ಕಾರಯ್ಯ ಬಂಧಿತರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮೃತ ಸುಮಲತಾಳನ್ನು ಬೋರಯ್ಯ ಅತ್ಯಾಚಾರ ಮಾಡಿ, ಬಳಿಕ ತನ್ನ ಸಹೋದರ ಕಾರಯ್ಯನನ್ನು ಕರೆಸಿಕೊಂಡು ಇಬ್ಬರೂ ಸೇರಿ ಆಕೆಯ ಮುಖಕ್ಕೆ ಹೊಡೆದು ಟವಲ್‌ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಳಿಕ ಶವವನ್ನು ಬಾವಿಗೆ …
Read More »
BigTv News
August 19, 2026
Breaking News
ಹುಣಸೂರು: ಮೈಸೂರು–ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯ ಕೋರ್ಟ್ ಸರ್ಕಲ್ ಸಮೀಪ ಬುಧವಾರ ಮಧ್ಯಾಹ್ನ ಚಲಿಸುತ್ತಿದ್ದ ಮಾರುತಿ ವ್ಯಾನ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಕೊಡಗು ಜಿಲ್ಲೆಯ ಕುಟ್ಟ ಗ್ರಾಮದ ಮಹಾಲಿಂಗು ಅವರಿಗೆ ಸೇರಿದ ವ್ಯಾನ್ ಇದಾಗಿದ್ದು, ಸರ್ವಿಸ್ ಮಾಡಿಸಲು ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ವ್ಯಾನ್‌ನಲ್ಲಿ ಮಹಾಲಿಂಗು ಒಬ್ಬರೇ ಇದ್ದು, ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ತಕ್ಷಣ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳದ ಸಮೀಪವೇ ಪೆಟ್ರೋಲ್ ಬಂಕ್ ಇದ್ದಿದ್ದರಿಂದ ಆತಂಕ ಉಂಟಾಗಿತ್ತು. …
Read More »
BigTv News
August 19, 2026
Breaking News
ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕಿನ ಕೊಣಾಲು ಗ್ರಾಮದ ಪಾಂಡಿಬೆಟ್ಟುವಿನಲ್ಲಿ ರಬ್ಬರ್ ತೋಟದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ ಕೋಳಿ ಅಂಕದಲ್ಲಿ ನಿರತರಾಗಿದ್ದ ಇಬ್ಬರು ಆರೋಪಿಗಳು ಹಾಗೂ 7 ಹುಂಜ ಮತ್ತು ಇತರೆ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರೌಂಡ್ಸ್ ಕರ್ತವ್ಯದಲ್ಲಿದ್ದ ಉಪ್ಪಿನಂಗಡಿ ಠಾಣೆ ಪಿಎಸ್‌ಐ ಕೌಶಿಕ್ ಬಿ.ಸಿ. ಹಾಗೂ ಸಿಬ್ಬಂದಿ ಖಚಿತ ಮಾಹಿತಿ ಮೇರೆಗೆ ಪಾಂಡಿಬೆಟ್ಟು ಸಮೀಪದ ರಬ್ಬರ್ ತೋಟದಲ್ಲಿ …
Read More »
BigTv News
August 19, 2026
Breaking News
ಹನಗೋಡು ತಾಲೂಕಿನ ಹೆಬ್ಬಾಳ ಹಾಗೂ ನೇರಳಕುಪ್ಪೆ ಗ್ರಾಮಗಳ ದೇವಾಲಯಗಳಲ್ಲಿ ಮಧ್ಯರಾತ್ರಿ ಕಳ್ಳತನಕ್ಕೆ ಯತ್ನಿಸಿದ ನಾಲ್ವರು ಆರೋಪಿಗಳ ಪೈಕಿ ಇಬ್ಬರನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮೈಸೂರಿನ ಕೆಸರೆ ಬಡಾವಣೆಯ ಮಹಮ್ಮದ್ ಅನಾಸ್ ಅದಿಲ್ ಹಾಗೂ ಡೇನಿಯಲ್ ಬಂಧಿತರು. ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಆರೋಪಿಗಳು ಹೆಬ್ಬಾಳ ಗ್ರಾಮದ ಓಂಕಾರೇಶ್ವರ ದೇವಾಲಯದ ಬೀಗ ಒಡೆದು ಹುಂಡಿಯ ಹಣ ಹಾಗೂ ಪೂಜಾ ಸಾಮಗ್ರಿಗಳನ್ನು ಕದ್ದಿದ್ದರು. ಬಳಿಕ ನೇರಳಕುಪ್ಪೆ ಗ್ರಾಮದ ಮಹಾಲಕ್ಷ್ಮೀ ದೇವಾಲಯದ ಬೀಗ ಒಡೆಯಲು …
Read More »