Breaking News

Breaking News

ಹಣ ಅಡ್ವಾನ್ಸ್ ಕೊಟ್ಟಿದ್ದ ಮಾಲೀಕನನ್ನೇ ಹತ್ಯೆಗೈದ ತಂದೆ-ಮಗ

ರಮೇಶ್ ಬಳಿ ಇಬ್ಬರು ಕೆಲಸಗಾರರು 6 ಲಕ್ಷ ರೂ ಅಡ್ವಾನ್ಸ್ ಪಡೆದಿದ್ದರು. ಆದರೆ ಸರಿಯಾಗಿ ಕೆಲಸಕ್ಕೆ ಬಾರದೆ ಸತಾಯಿಸುತ್ತಿದ್ದರು. ಇಬ್ಬರು ಕೂಡ ಕೆಲಸ ಮಾಡದೆ ರಮೇಶ್​ನಿಗೆ ಬೆದರಿಕೆ ಹಾಕುತ್ತಿದ್ದರು. ಇಂದು ಮಧ್ಯಾಹ್ನ ಮಾಲೀಕ ರಮೇಶ್ ಜೊತೆಗೆ ಗಲಾಟೆಯಾಗಿದೆ. ಈ ವೇಳೆ ತಂದೆ-ಮಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ.ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಹೆಣ್ಣಿನ ವಿಚಾರಕ್ಕೆ ಶುರುವಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯ

ಸಾದ್ಯಾಪುರ ಗ್ರಾಮದ ಬಳಿ ಎರಡು ಪ್ರತ್ಯೇಕ ಗ್ಯಾಂಗ್​ನಿಂದ ದಲಿತ ಮುಖಂಡ ಹಾಗೂ ಆತನ ಸಹಚರನನ್ನು ಹತ್ಯೆ ಮಾಡಲಾಗಿತ್ತು. 11 ವರ್ಷಗಳ ಹಿಂದೆ ಹೆಣ್ಣಿನ ವಿಚಾರಕ್ಕೆ ಶುರುವಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ.ಮಾರ್ಚ್ 16 ರಂದು ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಾಪುರ ಕ್ರಾಸ್ ಬಳಿ ಡಬಲ್ ಮರ್ಡರ್ ನಡೆದಿತ್ತು. ಕಟಿಂಗ್ ಮಾಡಿಸಿಕೊಂಡು ಹೋಗ್ತಿದ್ದಾಗ ಮಾಪಣ್ಣನನ್ನು ಸುಪಾರಿ ಪಡೆದಿದ್ದ ಗ್ಯಾಂಗ್​ನಿಂದ ಬರ್ಬರವಾಗಿ ಕೊಲೆ ಮಾಡಲಾಗಿತ್ತು.ಗೌರಿಬಿದನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More »

ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ಈಜುಕೊಳದಲ್ಲಿ ಬಿದ್ದು ದುರ್ಮರಣ

ಮಡಿಕೇರಿ ಕುಶಾಲನಗರ ಮೂಲದ ಪ್ರವಾಸಿ ನಿಶಾಂತ್ ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ಈಜುಕೊಳದಲ್ಲಿ ಬಿದ್ದು ದುರ್ಮರಣ ಹೊಂದಿದ್ದಾರೆ. ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭ ತಲೆ ಟ್ವಿಸ್ಟ್ ಆಗಿ ಈಜುಕೊಳದಲ್ಲೇ ಅವರು ಸಾವಿಗೀಡಾಗಿದ್ದಾರೆ.ನೀರಿಗೆ ಹಾರಿದ ನಂತರ ನಿಶಾಂತ್ ಕೈ ಕಾಲು ಆಡಿಸದ ಕಾರಣ ಸ್ನೇಹಿತ ಹಾಗೂ ಇತರರು ಮೇಲಕ್ಕೆತ್ತಿದ್ದರು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ

Read More »

ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿಗೆ ಸರ್ಕಾರದಿಂದ ಬಿಗ್‌ ಶಾಕ್‌,ಅಧಿಕಾರಿಗಳು ಫೀಲ್ಡಿಗಿಳಿದಿದ್ದಾರೆ.

ಕಂದಾಯ ಇಲಾಖೆ ಅಧಿಕಾರಿಗಳು ಜೆಸಿಬಿ ಸಮೇತ ಕೇತಗಾನಹಳ್ಳಿ ಬಳಿ ಆಗಿದೆ ಎನ್ನಲಾದ ಜಮೀನಿನ ಒತ್ತುವರಿ ತೆರವು ಕಾರ್ಯಾಚರಣೆಗೆ ಇಳಿದಿದ್ದಾರೆ. ಕುಮಾರಸ್ವಾಮಿ ಕುಟುಂಬಸ್ಥರ ವಿರುದ್ಧ ಈ ಒತ್ತುವರಿ ಆರೋಪ ಕೇಳಿಬಂದಿತ್ತು. ಬಳಿಕ ಭೂಒತ್ತುವರಿ ಆರೋಪ ಸಂಬಂಧದ ತನಿಖೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್ಐಟಿ ತಂಡವನ್ನು ಕೂಡ ರಚಿಸಿದ್ದರು.ರಾಮನಗರ ಜಿಲ್ಲೆಯ ಬಿಡದಿ ಬಳಿಯ ಕೇತಗಾನಹಳ್ಳಿ ಬಳಿ ಕುಮಾರಸ್ವಾಮಿ ಅವರ ತೋಟದ ಮನೆ ಇದೆ. ಆದರೆ ಈ ಭಾಗದಲ್ಲಿರುವ ಜಮೀನನ್ನು ಒತ್ತುವರಿ ಮಾಡಿಕೊಂಡಿರುವ …

Read More »

ಬೆಂಗಳೂರು-ಹುಬ್ಬಳ್ಳಿ ನಡುವೆ ಮತ್ತೊಂದು ವಿಮಾನ ಬೇಡಿಕೆಗೆ ಒಪ್ಪಿಗೆ ಸಿಕ್ಕಿದೆ.

ಹುಬ್ಬಳ್ಳಿ ನಡುವೆ ಪ್ರತಿದಿನ ಸಂಚಾರ ನಡೆಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈಗ ಉಭಯ ನಗರಗಳ ನಡುವೆ ಮತ್ತೊಂದು ವಿಮಾನ ಸಂಚಾರ ಆರಂಭವಾಗುತ್ತಿದ್ದು, ಉತ್ತರ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗಲಿದೆ.ರಾಜಧಾನಿ ಬೆಂಗಳೂರು ಮತ್ತು ಉತ್ತರ ಕರ್ನಾಟಕದ ನಡುವೆ ಸಂಚಾರ ಇನ್ನಷ್ಟು ಸುಲಭವಾಗಲಿದೆ. ಬೆಂಗಳೂರು-ಹುಬ್ಬಳ್ಳಿ ನಡುವೆ ಮಧ್ಯಾಹ್ನ ವಿಮಾನ ಬೇಕು ಎಂಬ ಬೇಡಿಕೆಗೆ ಒಪ್ಪಿಗೆ ಸಿಕ್ಕಿದೆ. ಇಂಡಿಗೋ ವಿಮಾನಯಾನ ಸಂಸ್ಥೆ ಮಾರ್ಚ್‌ 30ರಿಂದಲೇ ಹುಬ್ಬಳ್ಳಿ-ಬೆಂಗಳೂರು ನಗರದ ನಡುವೆ 3ನೇ ವಿಮಾನ ಹಾರಾಟವನ್ನು …

Read More »

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಪ್ರಕರಣ ದಾಖಲು

ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಂದು ಮಲ್ಪೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ದೊಂಬಿ ನಡೆಯುವ ಸಂಭವ ಇದೆ ಎಂದು ಗೊತ್ತಿದ್ದೂ ಅಲ್ಲಿದ್ದವರನ್ನು ಪ್ರಚೋದಿಸುತ್ತಾ ಉದ್ರೇಕಕಾರಿ ಭಾಷಣ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ರಂತೆ …

Read More »

ಬಸ್ ಪಲ್ಟಿಯಾಗಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು; 25 ಜನರಿಗೆ ಗಾಯ

ಬಸ್ ನಾಗ್ಪುರಕ್ಕೆ ತೆರಳುತ್ತಿತ್ತು. ಜಬಲ್ಪುರದ ರಾಮನ್ ಘಾಟಿ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಬಿದ್ದಿದೆ.ಸ್ಥಳದಲ್ಲೇ ಮೂವರು ಸಾವನ್ನಪಿದ್ದಾರೆ. ಮೃತರನ್ನು ಹೈದರಾಬಾದ್ ಮೂಲದ ಮಾಲ್ಮಾ ಶುಭಂ ಮೆಶ್ರಮ್ ಹಾಗೂ ಅಮೋಲ್ ಖೋಡೆ ಎಂದು ಗುರುತಿಸಲಾಗಿದೆ.ಗಾಯಾಳುಗಳನ್ನು ಲಖ್ನಾದಾನ್ ಪಟ್ಟಣ ಹಾಗೂ ಜಬಲ್ಪುರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ.

Read More »

ವಿಶೇಷ ಚೇತನ, ಬಡ ಮಕ್ಕಳ ಬಾಳಿಗೆ ಬೆಳಕಾದ ರಾಯಚೂರಿನ ಶಿಕ್ಷಕ ದಂಪತಿ

ಮಸ್ಕಿ ಪಟ್ಟಣದ ರಾಮಣ್ಣ ಹಾಗೂ ಶೃತಿ ದಂಪತಿಯ ವಿವಾಹವಾಗಿ 15 ವರ್ಷ ಕಳೆದರೂ ಇನ್ನೂ ಮಕ್ಕಳಾಗಿಲ್ಲ. ರಾಮಣ್ಣ ಅವರು ಮಸ್ಕಿ ಪಟ್ಟಣದ ಕಾಲೇಜುವೊಂದರಲ್ಲಿ ಉಪನ್ಯಾಸರಾಗಿ ಕೆಲಸ ಮಾಡುತ್ತಿದ್ದರೇ, ಶೃತಿ ಕಂಪ್ಯೂಟರ್ ಶಿಕ್ಷಕಿಯಾಗಿದ್ದಾರೆ.ವಿವಾಹವಾಗಿ 15 ವರ್ಷ ಕಳೆದರೂ ಮಕ್ಕಳಾಗಿಲ್ಲ ಎಂಬ ಚಿಂತೆಯಲ್ಲಿ ದಂಪತಿ ಅದೆಷ್ಟೋ ದೇವರಿಗೆ ಹರಕೆ ಹೊತ್ತಿದರೂ, ಅದೆಷ್ಟೋ ವೈದ್ಯರಲ್ಲಿ ಚಿಕಿತ್ಸೆ ಪಡೆದಿದರೂ ಸಂತಾನ ಭಾಗ್ಯ ಮಾತ್ರ ಪ್ರಾಪ್ತಿಯಾಗಿಲ್ಲ.ದಂಪತಿ ತಮ್ಮ ಸ್ವಂತ ದುಡಿಮೆಯಲ್ಲಿನ ಹಣವನ್ನೇ ಈ ಮಕ್ಕಳಿಗಾಗಿ ಬಳಕೆ ಮಾಡುತ್ತಿದ್ದಾರೆ. …

Read More »

ಬೆಂಗಳೂರು ಅಕಾಲಿಕ ಮಳೆಗೆ ಮರಬಿದ್ದು ಪ್ರಾಣ ಬಿಟ್ಟ 3 ವರ್ಷದ ಬಾಲಕಿ

ನಿನ್ನೆ ರಾತ್ರಿ ಜೀವನ್ ಭೀಮಾನಗರದಲ್ಲಿ ಬೈಕ್ನಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ತಡರಾತ್ರಿ ಸುರಿದ ಭಾರೀ ಮಳೆಗೆ ಮರಬಿದ್ದು 3 ವರ್ಷದ ಬಾಲಕಿ ರಕ್ಷಾ ಮೃತಪಟ್ಟಿದ್ದಾಳೆ.ಈ ಘಟನೆ ಬಗ್ಗೆ ಮಾತಾಡಿದ ಮೃತ ಮಗುವಿನ ಮಾವ ವಿಜಯ್, ರಾತ್ರಿ 8.30ರ ಸುಮಾರಿಗೆ ಮರ ಬಿದ್ದ ವಿಷಯ ತಿಳಿತು. ಆಸ್ಪತ್ರೆಯಲ್ಲಿ ಎಷ್ಟೇ ಪ್ರಯತ್ನ ಪಟ್ಟರೂ ಮಗು ಉಳಿಯಲಿಲ್ಲ. ತಲೆಗೆ ಪೆಟ್ಟು ಬಿದ್ದಿದ್ದರಿಂದ ಮಗು ರಕ್ತಸ್ರಾವ ಆಗಿ ಮೃತಪಟ್ಟಿದೆ. ಮಳೆ ಬಂದಾಗ ಪದೇ ಪದೇ …

Read More »

ಉತ್ತರ ಪ್ರದೇಶ:ಹಾಡಹಗಲೇ ಡಾಕ್ಟರ್ ಸರ ಕಳ್ಳತನ.!

ಡಾ.ತೋಮರ್ ಅವರು ತಮ್ಮ ನಾಯಿಯನ್ನು ವಾಕಿಂಗ್‌ಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.ಕಳ್ಳ ಸರ ಕಿತ್ತುಕೊಂಡು ವೇಗವಾಗಿ ಪರಾರಿಯಾಗುತ್ತಿದ್ದಂತೆ ಡಾಕ್ಟರ್ ಕುಸಿದು ಬೀಳುವುದು ವಿಡಿಯೋದಲ್ಲಿ ಕಂಡುಬಂದಿದೆ. ಸ್ಥಳೀಯರು ಕೂಡಲೇ ಅವರಿಗೆ ನೆರವಾದರು. ಹಗಲು ಹೊತ್ತಿನಲ್ಲಿ ನಡೆದ ಈ ದರೋಡೆಯಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿದೆ. ಪೊಲೀಸರು ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Read More »