Breaking News

ಕರ್ನಾಟಕ

Featured Video Play Icon

ಬಸವಣ್ಣ, ಅಂಬಿಗರ ಚೌಡಯ್ಯನವರ ನಾಡಿನಲ್ಲಿ ನಡೆದ ಅಮಾನವೀಯ ಕೃತ್ಯಕ್ಕೆ ಪೊಲೀಸ್ ನಿರ್ಲಕ್ಷ್ಯ ಕಾರಣ..!

ಹುಬ್ಬಳ್ಳಿ: ಬಸವಣ್ಣನವರ, ಅಂಬಿಗರ ಚೌಡಯ್ಯನ ಈ‌ ನಾಡಿನಲ್ಲಿ ಇಂತಹ ಕೃತ್ಯ ನಡೆದಿದೆ. ನೇಹಾ ಹತ್ಯೆ ಬಳಿಕ‌ ಸರ್ಕಾರ ಎಚ್ಚೆತ್ತುಕೊಳ್ಳಬೇಕಾಗಿತ್ತು. ಈ‌ ಕೃತ್ಯ ನಡೆಯುವ ಮುಂಚೆಯೇ ಆತನಿಂದ ಬೆದರಿಕೆ‌ ಬಂದಿತ್ತು. ಆದ್ರೆ ಈ ವಿಚಾರದಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ. ಇದಕ್ಕೆ ನೇರವಾಗಿ ಪೊಲೀಸ್ ಇಲಾಖೆಯೇ ಕಾರಣ ಎಂದು ಅಂಬಿಗರ ಚೌಡಯ್ಯನ ಗುರುಪೀಠದ ಶಾಂತ ಭೀಷ್ಮ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.ಅಂಜಲಿ ನಿವಾಸದ ಮುಂದೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನೇಹಾ …

Read More »
Featured Video Play Icon

ಈ ನೆಲದ ಕಾನೂನಿನ ಬಗ್ಗೆ ಭಯವೇ ಇಲ್ಲದಂತಾಗಿದೆ:ಮೂಜಗು ಸ್ವಾಮೀಜಿ ಬೇಸರ…

ಹುಬ್ಬಳ್ಳಿ: ಈ ನೆಲದ ಕಾನೂನಿನ ಬಗ್ಗೆ ಯಾವ ಭಯನೇ ಉಳಿಯದಂತಾಗಿದೆ. ಈ ನೆಲದ ಕಾನೂನು ಉಳಿಸಿಕೊಳ್ಳಬೇಕಾದ್ರೆ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಮೂರುಸಾವಿರ ಮಠದ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ಹೇಳಿದರು. ಮೃತ ಅಂಜಲಿ ಮನೆಗೆ ಭೇಟಿ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಅವರು, ನೇಹಾ ಹತ್ಯೆ ನಂತರ ಮತ್ತೊಂದು ಅಮಾನುಷ ಘಟನೆ ನಡೆದಿದೆ.ಒಬ್ಬ ಯುವಕ ಮನೆಗೆ ನುಗ್ಗಿ ನಿರ್ದಾಕ್ಷೀಣ್ಯವಾಗಿ ನಿರ್ಭಯವಾಗಿ ಕೊಲೆ ಮಾಡಿದ್ದಾನೆ.ಈ ನೆಲದ ಕಾನೂನಿನ ಬಗ್ಗೆ ಯಾವ ಭಯನೇ …

Read More »
Featured Video Play Icon

ಅಂಜಲಿ ಮನೆಗೆ ದಿಂಗಾಲೇಶ್ವರ ಸ್ವಾಮೀಜಿ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ..

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಅವರ ಮನೆಗೆ ಶಿರಹಟ್ಟಿ ಮಠದ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ಅವರ ಮನೆಗೆ ಆಗಮಿಸಿದ ಸ್ವಾಮೀಜಿಗಳು ಕುಟುಂಬಸ್ಥರ ಜೊತೆಗೆ ಮಾತನಾಡಿ ಕುಟುಂಬಸ್ಥರಿಗೆ ಹಾಗೂ ಅಂಜಲಿ ಸಹೋದರಿಯರಿಗೆ ಧೈರ್ಯ ತುಂಬಿದರು. ಇದೇ ವೇಳೆ ಗಂಗಾಮತ ಸಮಾಜದ ಮುಖಂಡರು ಕೂಡ ಉಪಸ್ಥಿತರಿದ್ದು, ಕೊಲೆಯ ಬಗ್ಗೆ ಮಾಹಿತಿ ಪಡೆದುಕೊಂಡರು.ಇನ್ನೂ ನೇಹಾಳ ಕೊಲೆಯ …

Read More »
Featured Video Play Icon

ಅಂಜಲಿ ಅಂಬಿಗೇರ ಮನೆಗೆ ಮೂಜಗು ಸ್ವಾಮೀಜಿ, ಶಾಸಕ ಟೆಂಗಿನಕಾಯಿ ಭೇಟಿ…

ಹುಬ್ಬಳ್ಳಿ: ನಿನ್ನೆ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಅವರ ಮನೆಗೆ ಮೂರುಸಾವಿರ ಮಠದ ಸ್ವಾಮಿಜಿ, ರುದ್ರಾಕ್ಷಿಮಠದ ಸ್ವಾಮೀಜಿ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ಭೇಟಿ ನೀಡಿ ಸಾಂತ್ವನ ಹೇಳಿದರು… ವೀರಾಪೂರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಧೈರ್ಯ ಹೇಳಿದರು. ಕುಟುಂಬಸ್ಥರ ಜೊತೆಗೆ ಸಮಾಲೋಚನೆ ನಡೆಸಿದರು.

Read More »
Featured Video Play Icon

ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ…

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಖಂಡಿಸಿ ಭಾರತೀಯ ಜನತಾ ಪಕ್ಷದಿಂದ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಹೌದು.. ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ನೇಹಾ ಹಿರೇಮಠ ಕೊಲೆ ಪ್ರಕರಣದ ಬೆನ್ನಲ್ಲೇ ಮತ್ತೊಂದು ಯುವತಿಯ ಕೊಲೆ ಮಾಡಿರುವುದು ನಿಜಕ್ಕೂ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಹೆಣ್ಣುಮಕ್ಕಳಿಗೆ ಭದ್ರತೆಯೇ ಇಲ್ಲವಾಗಿದೆ. ಈ ಕೂಡಲೇ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಬೇಕು‌. ಅಲ್ಲದೇ ಕೊಲೆಯ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವ …

Read More »
Featured Video Play Icon

BIG TV EXCLUSIVE: ಸಾವಜಿ ಹೋಟೆಲ್ ನಲ್ಲಿ ಅಕ್ರಮ ಸಾರಾಯಿ ಮಾರಾಟ..!

ಹುಬ್ಬಳ್ಳಿಯ ಸಾವಜಿ ಹೋಟೆಲ್ ನಲ್ಲಿ ಅಕ್ರಮ ಸರಾಯಿ ಮಾರಾಟ ಮಧ್ಯರಾತ್ರಿ 3 ಗಂಟೆಗೂ ಸಿಗುತ್ತೇ ಡ್ರಿಂಕ್ಸ್..! ವಿದ್ಯಾನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ ಅಂಧ ದರ್ಬಾರ್ ಹುಬ್ಬಳ್ಳಿ ಸಂಪೂರ್ಣ ಮಲಗಿದ ಮೇಲೆ ನಡೆಯುತ್ತಿದೆ ಅಕ್ರಮ ಸರಾಯಿ ಮಾರಾಟ ಗೊತ್ತಿದ್ದರೂ ಸುಮ್ಮನೆ ಕುಳಿತ ಖಾಕಿ ಪಡೆ..!.? ಹಾಸ್ಟೆಲ್, ಕಾಲೇಜಿನ ಅಕ್ಕಪಕ್ಕದಲ್ಲಿರುವ ಸಾವಜಿ ಹೋಟೆಲ್ ಬಿಗ್ ಟಿವಿ ನ್ಯೂಸ್ ಎಕ್ಸಕ್ಲೂಸಿವ್ ಕಾರ್ಯಾಚರಣೆಯಲ್ಲಿ ಬಯಲಾಗುತ್ತದೆ ಸ್ಫೋಟಕ ಮಾಹಿತಿ..!

Read More »

ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ದಿನಗಣನೆ: ಅವಳಿನಗರದಲ್ಲಿ ಹೆಚ್ಚಿದ ಬೆಟ್ಟಿಂಗ್ ಭರಾಟೆ

ಹುಬ್ಬಳ್ಳಿ: ಲೋಕ ಚುನಾವಣೆ ಫಲಿತಾಂಶದ ಮೇಲೆ ಬೆಟ್ಟಿಂಗ್ ಜೋರಾಗಿದೆ. ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಕಾಂಚಾಣ ಕುಣಿಯುತ್ತಿದೆ. ಐಪಿಎಲ್ ಕ್ರಿಕೆಟ್ ಮ್ಯಾಚ್‌ಗಳ ಮೇಲೆ ನಡೆಯುತ್ತಿರುವ ಬೆಟ್ಟಿಂಗ್ ಅನ್ನು ಮೀರಿಸುವಂತೆ ರಾಜಕೀಯ ಬೆಟ್ಟಿಂಗ್ ಕಾವು ಪಡೆದುಕೊಂಡಿದೆ. ಧಾರವಾಡ ಲೋಕಸಭಾ ಅಖಾಡದಲ್ಲಿರುವ ತಮ್ಮ ನೆಚ್ಚಿನ ಅಭ್ಯರ್ಥಿಗಳ ಪರ ಲಕ್ಷ ಲಕ್ಷ ಹಣ, ಬಾಡೂಟ ಸೇರಿದಂತೆ ಇನ್ನೂ ಅನೇಕ ಬೆಲೆಬಾಳುವ ವಸ್ತುಗಳನ್ನು ಪಣಕ್ಕಿಟ್ಟಿರುವುದು ಅಚ್ಚರಿ‌ ಮೂಡಿಸಿದೆ.. ಧರ್ಮದ ಸಂಘರ್ಷ, ಸ್ವಾಮೀಜಿಗಳ ಸ್ಪರ್ಧೆ ವಿಚಾರದಿಂದ ಭಾರೀ ಕುತೂಹಲ …

Read More »
Featured Video Play Icon

ಸ್ಮಾರ್ಟ್ ಸಿಟಿ ಅವ್ಯವಸ್ಥೆ ಅನಾವರಣ ಮಾಡಿದ ವರುಣ: ಲ್ಯಾಮಿಂಗ್ಟನ್ ರಸ್ತೆಗೆ ಬಂದರೇ ಹುಷಾರ..!

ಹುಬ್ಬಳ್ಳಿ: ಸಣ್ಣದೊಂದು ಮಳೆಗೆ ಹುಬ್ಬಳ್ಳಿಯ ಸ್ಮಾರ್ಟ್ ಸಿಟಿಯ ಬಣ್ಣ ಬಯಲಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಿಂದ ಸಾಕಷ್ಟು ಭರವಸೆ ಇಟ್ಟುಕೊಂಡ ಜನರು ಒಂದು ಗಂಟೆ ಸುರಿದ ಮಳೆಯಲ್ಲಿ ವಾಹನ ಚಾಲನೆಗೆ ಸರ್ಕಸ್ ಮಾಡಿರುವುದನ್ನು ನೋಡಿದರೇ ನಿಜಕ್ಕೂ ಅರ್ಥವಾಗುತ್ತದೆ.. ಬಿರು ಬೇಸಿಗೆಯಿಂದ ತತ್ತರಿಸಿ ಹೋಗಿದ್ದ ವಾಣಿಜ್ಯ ನಗರೀ ಹುಬ್ಬಳ್ಳಿಯಲ್ಲಿ ಗುಡುಗು, ಬಿರುಗಾಳಿ ಸಹಿತ ಬಾರೀ ಆಲಿಕಲ್ಲು ಮಳೆ ಸುರಿಯಿತು. ಆದರೆ ಒಂದು ಗಂಟೆ ಸುರಿದ ಮಳೆ ಹುಬ್ಬಳ್ಳಿಯ ಲ್ಯಾಮಿಂಗ್ಟನ್ ರಸ್ತೆಯನ್ನು ಸಂಪೂರ್ಣ ಜಲಾವೃತ …

Read More »

ರಥದ ಚಕ್ರಕ್ಕೆ ಸಿಲುಕಿ ಓರ್ವ ಸಾವು: ಇನ್ನಿಬ್ಬರು ಪ್ರಾಣಾಪಾಯದಿಂದ ಪಾರು…!

ಹುಬ್ಬಳ್ಳಿ; ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿ, ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾದ ಘಟನೆ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ನಡೆದಿದೆ.ಬಸವ ಜಯಂತಿ ಅಂಗವಾಗಿ ನಡೆದ ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ರಥದ ಚಕ್ರಕ್ಕೆ ಮಹಮ್ಮದಸಾಬ ಹಸನಸಾಬ ಮೊಕಾಶಿ (60) ಎಂಬಾತನ ಸಿಲುಕಿ ಮೃತಪಟ್ಟಿದ್ದಾನೆ..ಬಸವೇಶ್ವರ ಜಯಂತಿ ಅಂಗವಾಗಿಮಜ್ಜಿಗುಡ್ಡದಲ್ಲಿ ರಥೋತ್ಸವ ನಡೆಯುತ್ತದೆ. ಈ ವೇಳೆ ಭಕ್ತಾಧಿಗಳ ಸಂಖ್ಯೆ ಅಪಾರವಾಗಿತ್ತು. ಅತ್ತ ರಥವೂ ಸಾಗುತ್ತಿತ್ತು. ಇತ್ತ ಜನಜಂಗುಳಿಯೂ ವಿಪರೀತವಾಗಿ ತಳ್ಳಾಟ, ನೂಕಾಟ ಎಲ್ಲವೂ ನಡೆದಿತ್ತು. ಈ …

Read More »
Featured Video Play Icon

ಮೋದಿ ಘೋಷಣೆ ವೀರ, ಸುಳ್ಳಿನ ಸರದಾರ: ಬಿಜೆಪಿ ವಿರುದ್ಧ ಬಿ.ಕೆ.ಹರಿಪ್ರಸಾದ ಕಿಡಿ…

ಹುಬ್ಬಳ್ಳಿ: ಸಂವಿಧಾನದ ಬಗ್ಗೆ ಗೊತ್ತಿಲ್ಲದ, ಸಂವಿಧಾನ ಓದಿರದ ನರೇಂದ್ರ ಮೋದಿ ಪ್ರಚಾರಕ್ಕಾಗಿ ಸಂವಿಧಾನ ನಮ್ಮ ಧರ್ಮಗ್ರಂಥ ಎನ್ನುತ್ತಿದ್ದಾರೆ. ನರೇಂದ್ರ ಮೋದಿ ಸಾಧನೆಯ ವೀರ ಅಲ್ಲ, ಘೋಷಣಾ ವೀರ ಎಂದು ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ ಆಕ್ರೋಶ ವ್ಯಕ್ತಪಡಿಸಿದರು.ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಚುನಾವಣೆ ಪೂರ್ವದಲ್ಲಿ ಪ್ರಣಾಳಿಕೆಯನ್ನು ತರುವುದು ವಾಡಿಕೆ. ಇದರಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ, ಮುಂದಿನ ದಿನಗಳಲ್ಲಿ ಮಾಡುವ ಯೋಜನೆ ಬಗ್ಗೆ ಹೇಳಬೇಕು. …

Read More »

You cannot copy content of this page