BigTv News
June 23, 2023
News, ಕರ್ನಾಟಕ, ಹುಬ್ಬಳ್ಳಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ 110 ಕೆ.ವಿ ವಿದ್ಯುತ್ ಉಪಕೇಂದ್ರ ತಾರಿಹಾಳ ಮತ್ತು 110 ಕೆ.ವಿ. ಗಾಮನಗಟ್ಟಿಯಲ್ಲಿ 1ನೇ ತ್ರೈಮಾಸಿಕ ನಿರ್ವಾಹಣಾ ಕಾರ್ಯವನ್ನು ಕೈಗೊಳ್ಳುವುದರಿಂದ ಜೂನ್ 25ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಈ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಎಲ್ಲಾ 33 ಕೆ.ವಿ ಹಾಗೂ 11 ಕೆ.ವಿ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಹೆಸ್ಕಾಂನೊಂದಿಗೆ ಸಹಕರಿಸುವಂತೆ ಹೆಸ್ಕಾಂ ಪ್ರಕಟಣೆ ತಿಳಿಸಿದೆ. ತಾರಿಹಾಳ ಕೈಗಾರಿಕಾ ಪ್ರದೇಶ ಸ್ಟೇಜ್-1 …
Read More »
BigTv News
June 22, 2023
ಅಪರಾಧ, ಕರ್ನಾಟಕ, ಗದಗ
ಗದಗ ಜಿಲ್ಲೆಯ ಮುಡರಗಿ ತಾಲ್ಲಿನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸದ್ಯ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಕ್ಷೇತ್ರ ಶಿಕ್ಷಣಾಧಿಕಾರಿಗೆ (ಬಿಇಒ) 5 ವರ್ಷ ಜೈಲು ಹಾಗೂ 25 ಸಾವಿರ ರೂ. ದಂಡ ವಿಧಿಸಿ ಗದಗ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ. ಗದಗ ಜಿಲ್ಲೆಯ ಮುಂಡರಗಿಯ ಪಟ್ಟಣದಲ್ಲಿ 2020 ರಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಶಂಕ್ರಪ್ಪ ನಿಂಗಪ್ಪ …
Read More »
BigTv News
June 21, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಇಂದು ಬೆಳಿಗ್ಗೆ ನಗರದ ನ್ಯಾಯಾಲಯಗಳ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಬಿ. ಹಂದ್ರಾಳ ಅವರು ಉದ್ಘಾಟಿಸಿದರು. ವಕೀಲರಾದ ಆರ್. ಜಿ. ಮಟ್ಟಿ ಅವರು ವಿವಿಧ ಯೋಗಾಸನಗಳನ್ನು ಹೇಳಿಕೊಟ್ಟರು. ಕಾರ್ಯಕ್ರಮದಲ್ಲಿ ನಗರದ ಎಲ್ಲ ಗೌರವಾನ್ವಿತ ನ್ಯಾಯಾಧೀಶರು, ವಕೀಲರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
Read More »
BigTv News
June 21, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಅನಾರೋಗ್ಯದ ಕಾರಣದಿಂದ ಮಹಿಳೆಯೊಬ್ಬಳು ಮನನೊಂದು ಕೆರೆಗೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿಯಲ್ಲಿ ನಡೆದಿದೆ. ಬಸವ್ವ ಚಿಕ್ಕನೇರ್ತಿ ಎಂಬುವ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ನೆರೆಗಲ್ಲನಿಂದ ತವರು ಮನೆಯಾಗಿರುವ ಶಿರಗುಪ್ಪಿಗೆ ಬಂದಿದ್ದ ಬಸವ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸ್ ತನಿಖೆಯ ನಂತರವೇ …
Read More »
BigTv News
June 20, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪೂರ್ಣಗೊಂಡಿದ್ದು, ಕೊನೆಗೂ ಎರಡನೇ ಬಾರಿಗೆ ಬಿಜೆಪಿಯೇ ಆಡಳಿತದ ಚುಕ್ಕಾಣಿ ಹಿಡಿದಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರಿಗೆ ಕೊಟ್ಟಿದ್ದ ಟಾಸ್ಕ್‌ನಲ್ಲಿ ಶೆಟ್ಟರ್ ತೀವ್ರ ಮುಖಭಂಗ ಎದುರಿಸಿದಂತಾಗಿದೆ. ಬಿಜೆಪಿಯಿಂದ ವೀಣಾ ಭರದ್ವಾಡ ಮೇಯರ್ ಆಗಿ ಹಾಗೂ ಉಪಮೇಯರ್ ಆಗಿ ಸತೀಶ ಹಾನಗಲ್ ಅವರು ಆಯ್ಕೆಯಾಗಿದ್ದಾರೆ. ಬಿಜೆಪಿ ಪಾಲಿಕೆಯಲ್ಲಿ ಮತ್ತೆ ತನ್ನ …
Read More »
BigTv News
June 20, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ರಾಜಕೀಯ ಸುದ್ದಿ, ಸುದ್ದಿ
ಧಾರವಾಡ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳ ಮೇಲಾಯ್ತು. ಇದುವರೆಗೂ ರಾಜ್ಯದ ಜನತೆಗೆ ಈ ಸರ್ಕಾರ ಒಂದು ಕೆಜಿ ಅಕ್ಕಿಯನ್ನೂ ಕೊಟ್ಟಿಲ್ಲ. ಈಗ ಕೊಡುತ್ತಿರುವ ಐದು ಕೆಜಿ ಅಕ್ಕಿ ಕೇಂದ್ರದ್ದು. ಕೇಂದ್ರ ಕೊಡುವ 5 ಕೆಜಿ ಅಕ್ಕಿ ಬಿಟ್ಟು 10 ಕೆಜಿ ಅಕ್ಕಿಯನ್ನು ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು ಧಾರವಾಡದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ 5 …
Read More »
Shaikh BigTv
June 20, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಬ್ರೇಕಿಂಗ್ಪಡ್ಡು ತಿನ್ನಲು ಅಂಗಡಿಗೆ ಹೋಗಿ , ಅಂಗಡಿಯ ಮಹಿಳೆಗೆ ಚಳ್ಳೆ ಹಣ್ಣು ತಿನಿಸಿದ ಕಾನ್ಸಾಟೇಬಲ್ಎರಡು ವರ್ಷಗಳಕಾಲ ನಂಬಿಸಿ ಚಲ್ಲಾಟವಾಡಿ, ಮೋಸ ಮಾಡಿದ ಕಾಮುಖಪೇದೆಹೆಣ್ಣು ಮಗಳ ಜೀವನದಲ್ಲಿ ಆಟವಾಡಿ ,ಅಕ್ಕನ ಮಗಳ ಕೈ ಹಿಡಿಯಲು ಹೋರಟ ಪೋಲಿಸ್ಇಬ್ಬರ ಸಂಸಾರದಲ್ಲಿ ಪೋಲಿಸಪ್ಪನ ಕೆಟ್ಟ್ ಕಣ್ಣಿಗೆ ಹಣ್ಣುಮಗಳ ಜೀವನ ಹಾಳುಚಲ್ಲಾಟವಾಡಿ , ಪಲ್ಲಂಗದಾಟದಲ್ಲಿ ತೊಡಗಿಸಿಕೊಂಡು , ಕೈ ಬಿಟ್ಟ ಪೋಲಿಸಪ್ಪ ,ಆ ನೊಂದ ಹೆಣ್ಣು ಮಗಳಿಗೆ ನ್ಯಾಯ ನೀಡುವವರು ಯಾರು.. ?ಹುಬ್ಬಳ್ಳಿಯ ವಿಧ್ಯಾನಗರದಲ್ಲಿ ನಡೆದ …
Read More »
BigTv News
June 20, 2023
News, ಕರ್ನಾಟಕ, ಜಿಲ್ಲೆ, ಬೆಳಗಾವಿ
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಹಾರೂಗೊಪ್ಪ ಗ್ರಾಮದ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಹಲ್ಲಿ ಬಿದ್ದ ಸಾರು ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ವಿದ್ಯಾರ್ಥಿಗಳು ಸೋಮವಾರ (ದಿ.19) ಬೆಳಗ್ಗೆ ವಿದ್ಯಾರ್ಥಿಗಳು ಉಪಹಾರ ಸೇವಿಸಿದ್ದು, ಈ ವೇಳೆ ಚಪಾತಿ, ಅನ್ನ ಸಾರು ನೀಡಲಾಗಿತ್ತು. ಆದರೆ ಸಾರಿನಲ್ಲಿ ಹಲ್ಲಿ ಬಿದ್ದಿದೆ. ಅದೇ ಸಾರನ್ನು ವಿದ್ಯಾರ್ಥಿಗಳು ಸೇವಿಸಿದ್ದ ಹಿನ್ನಲೆಯಲ್ಲಿ ಕೆಲ ಸಮಯದ ನಂತರ ಹೊಟ್ಟೆ ನೋವು ಕಾಣಿಸಿಕೊಂಡಿದೆ. …
Read More »
Shaikh BigTv
June 19, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹೌದು ಹುಬ್ಬಳ್ಳಿ- ಧಾರವಾಡ ಪೋಲಿಸ್ ಕಮೀಷನರ ಆದೇಶದಂತೆ ಹಳೇ ಹುಬ್ಬಳ್ಳಿ ಪೋಲಿಸ್ ಠಾಣೆ ಜನಸ್ನೇಹಿ ಬಿಟ್ ನಂ52 ರಲ್ಲಿ ಇಂದು ಗಾಂಜಾ ಹಾಗೂ ಇನ್ನಿತರ ಮಾದಕ ವಸ್ತುಗಳ ಸೇವನೆ ವಿರುದ್ಧ ಜನಜಾಗೃತಿ ಅಭಿಯಾನ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ನವ ಆನಂದ ನಗರದ ಸರಕಾರಿ ಶಾಲೆಯ ಮಕ್ಕಳು ಭಾಗವಹಿಸಿದ್ದರು, ಈ ಕಾರ್ಯಕ್ರಮಕ್ಕೆ ಹಳೇ ಹುಬ್ಬಳ್ಳಿ ಪೋಲಿಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಅವರು ಚಾಲನೆ ನೀಡಿದರು ಅಲ್ಲದೆ ಕಾರ್ಯಕ್ರಮದಲ್ಲಿ ಇತರೆ ಪೋಲಿಸ್ ಅಧಿಕಾರಿಗಳು …
Read More »
BigTv News
June 19, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಗೆ ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ತರಾಟೆ ತಗೆದುಕೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಿ ಎಂದು ಖಡಕ್ ಎಚ್ಚರಿಕೆ ನೀಡಿದರು. ಇದೇ ವೇಳೆ ಲಾಡ್ ರೋಗಿಗಳ ಬಳಿ ತೆರಳಿ ಆರೋಗ್ಯ ವಿಚಾರಿಸಿದ ಅವರು, ಆಸ್ಪತ್ರೆಯಲ್ಲಿ ಹೇಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿಯನ್ನು ರೋಗಿಗಳ ಬಳಿ ಪಡೆದುಕೊಂಡರು. ಈ ವೇಳೆ ಶಾಸಕರಾದ ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ …
Read More »